South Cinema
Vinay Rajkumar: ‘ಪೆಪೆ’ ಟೀಸರ್ ಔಟ್: ಮಾಸ್ ಅವತಾರದಲ್ಲಿ ವಿನಯ್ ರಾಜ್‌ಕುಮಾರ್
ಸಿನಿಮಾ ಬಳಗದ ಕಡೆಯಿಂದ ಸ್ಪೆಷಲ್ ಗಿಫ್ಟ್ ವಿನಯ್ ರಾಜ್ ಕುಮಾರ್ (Vinay Rajkumar) ಅವರಿಗೆ ಸಿಕ್ಕಿದೆ. ವಿನಯ್ ಅವರ ಜನುಮದಿನದ ವಿಶೇಷವಾಗಿ ಪೆಪೆ ಟೀಸರ್ ರಿಲೀಸ್ ಮಾಡಲಾಗಿದೆ.
ಬೆಂಗಳೂರು: ರಾಘವೇಂದ್ರ ರಾಜ್ ಕುಮಾರ್ ಮಗ ವಿನಯ್ ರಾಜ್‌ಕುಮಾರ್ (Vinay Rajkumar) ಮೇ 7ರಂದು ಜನುಮದಿನವನ್ನು ಅವರ ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು. ಈ ಶುಭದಿನದಂದು ಪೆಪೆ ಸಿನಿಮಾ ಬಳಗದ ಕಡೆಯಿಂದ ಸ್ಪೆಷಲ್ ಗಿಫ್ಟ್ ವಿನಯ್ ರಾಜ್ ಕುಮಾರ್ ಅವರಿಗೆ ಸಿಕ್ಕಿದೆ. ವಿನಯ್ ಅವರ ಜನುಮದಿನದ ವಿಶೇಷವಾಗಿ ಪೆಪೆ ಟೀಸರ್ ರಿಲೀಸ್ ಮಾಡಲಾಗಿದೆ.
ಹಳ್ಳಿ ಬ್ಯಾಕ್ ಡ್ರಾಪ್‌ನಲ್ಲಿ ಮೂಡಿಬಂದಿರುವ ಟೀಸರ್ ಝಲಕ್‌ನಲ್ಲಿ ವಿನಯ್ ರಾಜ್ ಕುಮಾರ್, ರಗಡ್ ಲುಕ್‌ನಲ್ಲಿ ಮಿಂಚಿದ್ದಾರೆ. ಅಂದಹಾಗೇ ಪೆಪೆ ಗ್ಯಾಂಗ್ ಸ್ಟಾರ್ ಸಿನಿಮಾ ಇದಾಗಿದ್ದು, ವಿನಯ್ ರಾಜ್ ಕುಮಾರ್ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ಇಲ್ಲಿ ವಿಭಿನ್ನ ಅವತಾರ ತಾಳಿದ್ದಾರೆ.
ಶ್ರೀಲೇಶ್ ಎಸ್ ನಾಯರ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ನಾಯಕಿಯಾಗಿ ಕಾಜಲ್ ಕುಂದರ್ ನಟಿಸಿದ್ದಾರೆ. ಮಯೂರ್ ಪಟೇಲ್, ಯಶ್ ಶೆಟ್ಟಿ, ಬಾಲ ರಾಜ್ ವಾಡಿ, ಮೆದಿನಿ ಕೆಳಮನೆ, ಅರುಣಾ ಬಾಲರಾಜ್, ನವೀನ್ ಡಿ ಪಡಿಲ್ ಒಳಗೊಂಡ ತಾರಾಬಳಗವಿದೆ. ‘ಪೆಪೆ’ ಚಿತ್ರಕ್ಕೆ ಅಭಿಷೇಕ್ ಜಿ ಕಾಸರಗೋಡು ಕ್ಯಾಮೆರಾ ವರ್ಕ್, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನವಿದೆ.
ಇದನ್ನೂ ಓದಿ: Vinay Rajkumar | ಸಿಂಪಲ್ ಸುನಿ ಚಿತ್ರಕ್ಕೆ ದೊಡ್ಮನೆ ಹುಡುಗ ವಿನಯ್ ರಾಜ್‌ಕುಮಾರ್ ನಾಯಕ!
ಡಾ. ರವಿವರ್ಮಾ, ಚೇತನ್ ಡಿಸೋಜಾ, ಡಿಫ್ರೆಂಟ್ ಡ್ಯಾನಿ, ನರಸಿಂಹ ಚಿತ್ರದ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ. ಬೆಂಗಳೂರು, ಮೈಸೂರು, ಕೊಡಗು, ಸಕಲೇಶಪುರದಲ್ಲಿ ‘ಪೆಪೆ’ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ಉದಯ್ ಸಿನಿ ವೆಂಚರ್, ದೀಪ ಫಿಲಂಸ್ ಬ್ಯಾನರ್ ನಡಿ ಉದಯ್ ಶಂಕರ್ ಮತ್ತು ಶ್ರೀರಾಮ್ ಬಿ ಎಮ್ ಕೋಲಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
South Cinema
Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
Kiccha Sudeep: ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
ಬೆಂಗಳೂರು; ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಿಚ್ಚ ಸುದೀಪ್ (Kiccha Sudeep) ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿತ್ತು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅಭಿಷೇಕ್ ಮದುವೆಗೆ ಸುದೀಪ್ ಗ್ರ್ಯಾಂಡ್ ಆಗಿಯೇ ಎಂಟ್ರಿ ಕೊಟ್ಟರು. ಸುದೀಪ್ ಜತೆ ಪತ್ನಿ ಪ್ರಿಯಾ ಸುದೀಪ್ ಹಾಗೂ ಸಾನ್ವಿ ಸುದೀಪ್ ಕೂಡ ಆಗಮಿಸಿ ಅಭಿ-ಅವಿವಾಗೆ ಶುಭಕೋರಿದರು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಇದನ್ನೂ ಓದಿ: Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
South Cinema
Actor Yash: ಅಭಿಷೇಕ್ ದಂಪತಿಗೆ ವಿಶ್ ಮಾಡಿದ ಯಶ್ -ರಾಧಿಕಾ; ಸೈಲಿಶ್ ಆಗಿ ಕಂಡ ರಾಕಿ ಭಾಯ್!
Actor Yash : ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
South Cinema
Abhishek Ambareesh Wedding: ಅಭಿಷೇಕ್ ಅಂಬರೀಶ್- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್!
Abhishek Ambareesh Wedding: ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
South Cinema
Kannada New Movie: ಮೊದಲ ಬಾರಿಗೆ ಗುಜರಾತಿ ಸಿನಿಮಾ ಕನ್ನಡದಲ್ಲಿ!
Kannada New Movie: ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು.
ಬೆಂಗಳೂರು: ‘ರಾಯರು ಬಂದರು ಮಾವನ ಮನೆಗೆ’..ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಅತ್ಯುತ್ತಮ ಗೀತೆ. ಇದೇ ರಾಯರು ಬಂದರು ಮಾವನ ಮನೆಗೆ ಎಂಬ ಶೀರ್ಷಿಕೆಯಡಿ (Kannada New Movie) ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ವಿಶೇಷ ಏನಂದರೆ ಇದು ಗುಜರಾತಿ ಸಿನಿಮಾ.
`ವರ ಪಧಾರವೋ ಸಾವಧಾನ; ಎಂಬ ಟೈಟಲ್ ನಡಿ ಬಿಡುಗಡೆಯಾಗಲಿರುವ ಈ ಚಿತ್ರ ಕನ್ನಡದಲ್ಲಿಯೂ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು. ಸುದೀಪ್ ಆಪ್ತರಾಗಿರುವ ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಕನ್ನಡ ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ.
ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್ ಚಿತ್ರ ಕೊಟ್ಟಿರುವ ವಿಫುಲ್ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ಶೈಲೇಶ್ ಧಮೇಲಿಯಾ, ಅನಿಲ್ ಸಂಘವಿ, ಭರತ್ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧುತುಷಾರ್, ಕಿಂಜಲ್ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್ ಬರೋಟ್, ಜಯ್ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: Kannada New Movie: ‘ಹಿರಣ್ಯ’ನ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ
ಜುಲೈ 7ಕ್ಕೆ ಕನ್ನಡದಲ್ಲಿ ರಾಯರು ಬಂದರು ಮಾವನ ಮನೆಗೆ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ನಿಟ್ಟಿಯಲ್ಲಿ ಇಡೀ ಚಿತ್ರತಂಡ ಬೆಂಗಳೂರಿನಲ್ಲಿಯೂ ಪ್ರಚಾರ ಕಾರ್ಯ ನಡೆಸಲಿದೆ. ಇದೇ 9ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿದ್ದು, ಇಡೀ ತಂಡ ಭಾಗಿಯಾಗಲಿದೆ. ಅಂದಹಾಗೇ ರಾಯರು ಬಂದರು ಮಾವನ ಮನೆಗೆ ಸಿನಿಮಾ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ. ಕುಟುಂಬ, ಸಂಬಂಧಗಳ ಸುತ್ತಾ ಇಡೀ ಸಿನಿಮಾ ಸಾಗಲಿದೆ.
-
ಸುವಚನ18 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ24 hours ago
Odisha Train Accident: ಅಪಘಾತ ನಡೆದು 51 ಗಂಟೆಯಲ್ಲೇ ಹಳಿ ಸಿದ್ಧ, ರೈಲು ಸಂಚಾರ; 36 ತಾಸು ಸ್ಥಳದಲ್ಲೇ ಇದ್ದ ಸಚಿವ
-
ಕರ್ನಾಟಕ16 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ24 hours ago
Shivamogga News: ಶಿಕಾರಿಪುರದಲ್ಲಿ ರಾಷ್ಟ್ರಕೂಟರ ಕಾಲದ ಪ್ರಾಚ್ಯಾವಶೇಷಗಳು ಪತ್ತೆ
-
ಕರ್ನಾಟಕ14 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ7 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ12 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ15 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ