Site icon Vistara News

Prajwal Devaraj: ಪ್ರಜ್ವಲ್‌ ದೇವರಾಜ್‌ ಸಿನಿಮಾ ನಾಯಕಿ ಆಸ್ಪತ್ರೆಗೆ ದಾಖಲು

Sunainaa Yeellaa hospitalized

ಪ್ರಜ್ವಲ್‌ ದೇವರಾಜ್‌ (Prajwal Devaraj) ನಟನೆಯ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾ ನಟಿ ಸುನೈನಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಅವರ ಫ್ಯಾನ್ಸ್‌ಗೆ ಆತಂಕ ಹೆಚ್ಚಿದೆ.

ಸುನೈನಾ ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ‘ರೆಜಿನಾ’ ಅನ್ನೋ ತಮಿಳು ಸಿನಿಮಾದಲ್ಲಿ ನಟಿಸಿದ್ದರು. ‘ಕುಮಾರ್ Vs ಕುಮಾರಿ’ ಅನ್ನೋ ತೆಲುಗು ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು.

ಇದೀಗ ನಟಿ ಆಸ್ಪತ್ರೆಗೆ ದಾಖಲಾಗಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಯಾವ ಆರೋಗ್ಯ ಸಮಸ್ಯೆಯಿದೆ ಎಂದು ನಟಿ ಎಲ್ಲಿಯೂ ಹೇಳಿಕೊಂಡಿಲ್ಲ.

ಇದನ್ನೂ ಓದಿ: Prajwal Devaraj: ಪ್ರಜ್ವಲ್‌ 40ನೇ ಸಿನಿಮಾಗೆ ಗುರುದತ್ ಗಾಣಿಗ ನಿರ್ದೇಶನ!

“ಸ್ವಲ್ಪ ಸಮಯ ಕೊಡಿ.. ಶೀಘ್ರದಲ್ಲಿಯೇ ಮರಳಿ ಬರುತ್ತೇನೆ” ಎಂದು ಫೋಟೊ ಹಂಚಿಕೊಂಡು ಬರೆದುಕೊಂಡಿದ್ದಾರೆ.

2008ರಲ್ಲಿ ಪ್ರಜ್ವಲ್ ದೇವರಾಜ್ ನಟಿಸಿದ್ದ ‘ಗಂಗೆ ಬಾರೆ ತುಂಗೆ ಬಾರೆ’ ಸಿನಿಮಾದಲ್ಲಿ ಗಂಗೆಯ ಪಾತ್ರದಲ್ಲಿ ಮಿಂಚಿದ್ದರು. ಇದೇ ಅವರ ಕೊನೆಯ ಕನ್ನಡ ಸಿನಿಮಾ.

ಸುನೈನಾ ಇತ್ತೀಚೆಗೆ ನಟಿಸಿದ ‘ರೆಜಿನಾ’ ಸಿನಿಮಾ ಬಾಕ್ಸಾಫೀಸ್‌ನಲ್ಲಿ ಸದ್ದು ಮಾಡಲಿಲ್ಲ.

Exit mobile version