ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್ ಪ್ರಕರಣವು (Hassan Pen Drive Case) ದಿನೇ ದಿನೆ ಜಟಿಲವಾಗುತ್ತಾ ಸಾಗಿದೆ. ಈ ನಡುವೆ ಅವರ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸಿನಿಮಾ ತಾರೆಯರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟಿ ಹರ್ಷಿಕಾ ಪೂಣಚ್ಚ ಎಕ್ಸ್‌ನಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.”ದುರದೃಷ್ಟವಶಾತ್ ವೈರಲ್ ಆಗುತ್ತಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆʼʼಎಂದು ಬರೆದುಕೊಂಡಿದ್ದಾರೆ.
ಹರ್ಷಿಕಾ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದುರದೃಷ್ಟವಶಾತ್ ವೈರಲ್ ಆಗುತ್ತಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ. ಅದನ್ನು ನೋಡುವುದು ನಿಜಕ್ಕೂ ನೋವಿನ ಸಂಗತಿ. ವಿಡಿಯೊಗಳು ಕಾನೂನುಬದ್ಧ ಮತ್ತು ನೈಜವಾಗಿದ್ದರೆ, ಅಂತಹ ಕೃತ್ಯಗಳನ್ನು ಸೃಷ್ಟಿಸಿದವರು ಖಂಡಿತವಾಗಿಯೂ ದೇಶದ ಕಾನೂನಿನ ಪ್ರಕಾರ ಪರಿಗಣನೆಗೆ ತೆಗೆದುಕೊಳ್ಳಬೇಕು” ಎಂದು ಹರ್ಷಿಕಾ ಆಗ್ರಹಿಸಿದ್ದಾರೆ.
ಇದನ್ನೂ ಓದಿ: Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!
ಮತ್ತೊಂದು ಎಕ್ಸ್‌ನಲ್ಲಿ ʻʻಈ ವಿಡಿಯೊಗಳಲ್ಲಿ ಕಾಣಿಸಿಕೊಂಡಿರುವ ಅಸಂಖ್ಯಾತ ಮಹಿಳೆಯರನ್ನು ನೋಡಿ ನೋವಾಗುತ್ತಿದೆ. ಅವರೆಲ್ಲರೂ ಸಭ್ಯ ಮತ್ತು ಸರಳ ಕುಟುಂಬದಿಂದ ಬಂದವರ ಎಂದು ಕಾಣುತ್ತಾರೆ. ಈ ಸಂತ್ರಸ್ತರ ಮುಖಗಳನ್ನು ವಿವಿಧ ಗುಂಪುಗಳು ರಾಜಕೀಯ ಚರ್ಚೆಗೆ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರʼʼಎಂದು ಬರೆದುಕೊಂಡಿದ್ದಾರೆ.
ʻʻಕೊನೆಪಕ್ಷ ಅಲ್ಲಿರುವ ಮಹಿಳೆಯರ ಮುಖವನ್ನು ಬ್ಲರ್ ಮಾಡಬಹುದಿತ್ತು. ಭವಿಷ್ಯದಲ್ಲಿ ಅವರು ಸಮಾಜವನ್ನು ಹೇಗೆ ಎದುರಿಸುತ್ತಾರೆ? ಇನ್ನು ಮುಂದೆ ಅವರನ್ನು ಯಾವ ದೃಷಿಯಲ್ಲಿ ಜನ ನೋಡಲಿದ್ದಾರೆ? ಅವರ ಕುಟುಂಬ ಮತ್ತು ಮಕ್ಕಳ ಗತಿ ಏನು? ಎಂದು ಹರ್ಷಿಕಾ ಕಳವಳ ವ್ಯಕ್ತಪಡಿಸಿದ್ದಾರೆ.
ತಮಿಳು ನಟಿ ಕಸ್ತೂರಿ, ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಆರೋಪ ಪ್ರಕರಣದ ಬಗ್ಗೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೆಲುಗು ನಟಿ, ನಿರೂಪಕ ಪರೋಕ್ಷವಾಗಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದರು.
ಈ ನಡುವೆ ಪ್ರಜ್ವಲ್ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.
ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು
ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.
ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.