Site icon Vistara News

Pramod Shetty: ʻಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಸಿನಿಮಾ ಫಸ್ಟ್ ಲುಕ್ ಔಟ್‌!

Pramod Shetty Karikanu Guddadamelondu Cinema First Look

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಪ್ರಮೋದ್ ಶೆಟ್ಟಿ (Pramod Shetty) ಉಳಿದವರು ಕಂಡಂತೆ, ಕಿರಿಕ್ ಪಾರ್ಟಿ, ರಿಕ್ಕಿ, ಬೆಲ್ ಬಾಟಂ, ಅವನೇ ಶ್ರೀಮನ್ನಾರಾಯಣ, ತೂತುಮಡಿಕೆ, ಕಾಂತಾರ ಹೀಗೆ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾದಲ್ಲಿ ಹೀರೊ ಆಗಿಯೂ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಪ್ರಮೋದ್ ಶೆಟ್ಟಿ ಹೊಸದೊಂದು ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಎಂಬ ಶೀರ್ಷಿಕೆ ಇಡಲಾಗಿದೆ. ʻ ‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ (Pramod Shetty) ಚಿತ್ರತಂಡ ಫಸ್ಟ್ ಲುಕ್ ರಿಲೀಸ್ ಮಾಡಿದೆ.

‘ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರವು ಒಂದು ಊರಿನಲ್ಲಿ ಆದ ಅಪಾರ್ಥವೂ ಅನಾಹುತವಾಗಿ, ಅನಾಹುತವು ಅಧಿಕ ಪ್ರಸಂಗವಾಗಿ ನಡೆಯುವ ಘಟನೆಗಳ ಸುತ್ತ ಸಿನಿಮಾ ಸಾಗುತ್ತದೆ. ವಡ್ಡಾರಾಧಕ ಹಾಗೂ ಶಬರಿ ಎನ್ನುವ ಎರಡು ಕಿರು ಚಿತ್ರಗಳನ್ನು ನಿರ್ದೇಶಿಸಿದ್ದ ಯುವ ಪ್ರತಿಭೆ ಅನೀಶ್ ಶರ್ಮ ಆಕ್ಷನ್ ಕಟ್ ಹೇಳಿದ್ದಾರೆ. ರಾಘು ಶಿವಮೊಗ್ಗ, ಕಿರಣ್ ನಾಯಕ್, ಮಂಜುನಾಥ್ ಹೆಗಡೆ, ಕೆಜಿ ಕೃಷ್ಣಮೂರ್ತಿ ಚಂದ್ರಕಲಾ ಚಿತ್ರದ ಭಾಗವಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಇಡುವಾಣಿ ಎನ್ನುವ ಒಂದು ಹಳ್ಳಿಯಲ್ಲಿ ಚಿತ್ರವನ್ನು ಚಿತ್ತರಿಸಿದ್ದು ಇಡೀ ಊರಿಗೆ ಊರನ್ನೇ ಸಿನಿಮಾ ಸೆಟ್ಟನ್ನಾಗಿಸಿಕೊಂಡು ಊರು ಜನಗಳನ್ನೇ ಉಪಯೋಗಿಸಿಕೊಂಡು ಚಿತ್ರವನ್ನು ಚಿತ್ರೀಕರಿಸಲಾಗಿದೆ. ಸುಮತ್ ಶರ್ಮಾ ಛಾಯಾಗ್ರಹಣ, ಸಂಜೀವ್ ಜಾಗೀರ್ದಾರ್ ಸಂಕಲನ, ಚೇತನ್ ಕುಮಾರ್ ಸಂಗೀತ ಕರಿಕಾನು ಗುಡ್ಡದ ಮೇಲೊಂದು ಅಧಿಕ ಪ್ರಸಂಗ’ ಚಿತ್ರಕ್ಕಿದೆ.

ಇದನ್ನೂ ಓದಿ: Pramod Shetty: ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ಶೂಟಿಂಗ್ ಕಂಪ್ಲೀಟ್‌

ಗನ್ನಿ ಬ್ಯಾಗ್ ಸ್ಟುಡಿಯೊ ಪ್ರೊಡಕ್ಷನ್‌ನಡಿ ಚಿತ್ತರಂಜನ್ ಕಶ್ಯಪ್, ವಲ್ಲಭ್ ಸೂರಿ, ಸುನಿತ್ ಹಲಗೇರಿ ನಿರ್ಮಾಣ ಮಾಡಿದ್ದು, ಊರ್ ಮನೆ ಪ್ರೊಡಕ್ಷನ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.

Exit mobile version