Site icon Vistara News

Pramod Shetty: ರಿಷಬ್ ಶೆಟ್ಟಿ ನಿರ್ಮಾಣದ ‘ಲಾಫಿಂಗ್ ಬುದ್ಧ’ ಸಿನಿಮಾ ಶೂಟಿಂಗ್ ಕಂಪ್ಲೀಟ್‌

Pramod Shetty Laughing Buddha Shooting

ಬೆಂಗಳೂರು: ಪ್ರಮೋದ್ ಶೆಟ್ಟಿ (Pramod Shetty) ಅವರು ‘ಲಾಫಿಂಗ್ ಬುದ್ಧ’ ಜತೆಗೆ ಪ್ಯಾನ್ ಇಂಡಿಯಾ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಇದೀಗ ರಿಷಬ್ ಶೆಟ್ಟಿ ತಮ್ಮ ರಿಷಬ್ ಶೆಟ್ಟಿ ಫಿಲ್ಮ್ಸ್‌ ಲಾಂಛನದಲ್ಲಿ ನಿರ್ಮಿಸುತ್ತಿರುವ ‘ಲಾಫಿಂಗ್ ಬುದ್ಧ’ (Laughing Buddha) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಒಂದು ಕಡೆ ರಿಷಬ್ ಶೆಟ್ಟಿ ತಮ್ಮ ನಿರ್ದೇಶನದ ಕಾಂತಾರ 2 ಸಿನಿಮಾದ ಚಿತ್ರೀಕರಣಕ್ಕೆ ರೆಡಿ ಆಗುತ್ತಿದ್ದರೆ, ಮತ್ತೊಂದು ಕಡೆ ತಮ್ಮದೇ ನಿರ್ಮಾಣದ ಲಾಫಿಂಗ್ ಬುದ್ಧ ಚಿತ್ರೀಕರಣ ಕಂಪ್ಲೀಟ್ ಮಾಡಿದ್ದಾರೆ.

‘ಲಾಫಿಂಗ್ ಬುದ್ಧ’ ಸಿನಿಮಾ ಭದ್ರಾವತಿ, ಕಾರ್ಗಲ್ ಹಾಗೂ ಬೆಂಗಳೂರಿನಲ್ಲಿ ಶೂಟಿಂಗ್ ಆಗಿದೆ. ಭದ್ರಾವತಿಯ ಚಂಡಿಕಾ ದುರ್ಗಾ ದೇವಸ್ಥಾನದಲ್ಲಿ ಶುರುವಾಗಿದ್ದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯಗೊಂಡಿದೆ. ಶೂಟಿಂಗ್ ಮುಗಿಸಿದ ಕೂಡಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಬ್ಯುಸಿಯಾಗಿದೆ ತಂಡ. ‘ಲಾಫಿಂಗ್ ಬುದ್ಧ’ ಸಿನಿಮಾದ ಪ್ರಮುಖ ಪಾತ್ರದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ತೇಜು ಬೆಳವಾಡಿ ನಟಿಸುತ್ತಾರೆ. ಇದೊಂದು ಕಾಮಿಡಿ ಹಾಗೂ ಡ್ರಾಮಾ ಶೈಲಿಯ ಸಿನಿಮಾವಾಗಿದ್ದು, ಎಂ. ಭರತ್ ರಾಜ್ ನಿರ್ದೇಶಿಸಿದ್ದಾರೆ. ಪ್ರಮೋದ್ ಶೆಟ್ಟಿ ಬಹಳ ದಿನಗಳ ಬಳಿಕ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಚಂದ್ರಶೇಖರ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ‘ಲಾಫಿಂಗ್ ಬುದ್ಧ’ ಚಿತ್ರಕ್ಕಿದೆ. ಇದೊಂದು ಹೊಸ ಬಗೆಯ ಕಥೆಯನ್ನು ಹೊಂದಿರುವ ಸಿನಿಮಾವಾಗಿದ್ದು, ಇದೇ ಮೊದಲ ಬಾರಿಗೆ ಪ್ರಮೋದ್ ಈ ಸಿನಿಮಾದ ಮೂಲಕ ನಾಯಕರಾಗುತ್ತಿದ್ದಾರೆ.

ಇದನ್ನೂ ಓದಿ: Yogi Babu | ಪ್ಯಾನ್‌ ಇಂಡಿಯಾ ಸಿನಿಮಾಗೆ ತಮಿಳು ನಟ ಯೋಗಿ ಬಾಬು ಜತೆ ಕನ್ನಡಿಗ ಪ್ರಮೋದ್ ಶೆಟ್ಟಿ

ಕನ್ನಡದಲ್ಲಿ ‘ತೂತು ಮಡಿಕೆ’ ಸಿನಿಮಾ ನಿರ್ಮಾಣ ಮಾಡಿ ಮೆಚ್ಚುಗೆ ಗಳಿಸಿದ್ದ ನಿರ್ಮಾಪಕ ಮಧುಸೂಧನ್ ರಾವ್ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡುವುದಕ್ಕೆ ರೆಡಿಯಾಗಿದ್ದಾಗಿ ಸುದ್ದಿಯಾಗಿತ್ತು.

Exit mobile version