Pranitha Subhash: 2ನೇ ಮಗುವಿನ ನಿರೀಕ್ಷೆಯಲ್ಲಿರೋ ನಟಿ ಪ್ರಣೀತಾ ಸುಭಾಷ್; ಮತ್ತೆ ಬೇಬಿ ಬಂಪ್ ಫೋಟೋಶೂಟ್ - Vistara News

ಸಿನಿಮಾ

Pranitha Subhash: 2ನೇ ಮಗುವಿನ ನಿರೀಕ್ಷೆಯಲ್ಲಿರೋ ನಟಿ ಪ್ರಣೀತಾ ಸುಭಾಷ್; ಮತ್ತೆ ಬೇಬಿ ಬಂಪ್ ಫೋಟೋಶೂಟ್

Pranitha Subhash: ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸುತ್ತಿದ್ದು, ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ಬೇಬಿ ಶಾವರ್ ಪಾರ್ಟಿ ಆಯೋಜಿಸಿದ್ದು, ಅದರ ಫೋಟೋಗಳನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

VISTARANEWS.COM


on

Pranitha Subhash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹುಭಾಷಾ ನಟಿ ಪ್ರಣೀತಾ ಸುಭಾಷ್ (Pranitha Subhash) 2ನೇ ಮಗುವಿನ ನಿರೀಕ್ಷೆಯಲ್ಲಿದ್ದು, ಈ ಬೇಬಿ ಬಂಪ್ (Baby Bump) ಫೋಟೋಶೂಟ್‌ವೊಂದನ್ನು ಮಾಡಿಸಿಕೊಂಡಿದ್ದಾರೆ. ಭರ್ಜರಿಯಾಗಿ ಬೇಬಿ ಶವರ್‌ ಮಾಡಿಸಿಕೊಂಡಿರುವ ಪ್ರಣೀತಾ, ಇದೀಗ ಇನ್‌ಸ್ಟಾಗ್ರಾಂನಲ್ಲಿ ಈ ಫೊಟೋಗಳನ್ನು ಹಂಚಿಕೊಂಡಿದ್ದು, ಮತ್ತೆ ತಾಯಿಯಾಗ್ತಿರುವ ಬಗ್ಗೆ ಖುಷಿ ಶೇರ್‌ ಮಾಡಿಕೊಂಡಿದ್ದಾರೆ. ಇನ್ನು ಫೋಟೋಶೂಟ್‌ನಲ್ಲಿ ನಟಿ ಸಖತ್‌ ಗ್ಲ್ಯಾಮರಸ್‌ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನು ನಟಿಯ ಫೊಟೋ ನೋಡಿದ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ.

ಲೈಟ್ ಬಣ್ಣದ ಸ್ಲಿವ್‌ಲೆಸ್ ಗೌನ್‌ನಲ್ಲಿ ಪ್ರಣೀತಾ ಕಂಗೊಳಿಸುತ್ತಿದ್ದು, ಮುಖದ ಗ್ಲೋ ಮತ್ತು ನಟಿಯ ಹಾಟ್‌ & ಗ್ಲ್ಯಾಮರಸ್‌ ಲುಕ್ ನೋಡಿ ನೆಟ್ಟಿಗರು ಸಂತೂರ್ ಮಮ್ಮಿ ಎಂದು ಹಾಡಿಹೊಗಳಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ಬೇಬಿ ಶಾವರ್ ಪಾರ್ಟಿ ಆಯೋಜಿಸಿದ್ದು, ಅದರ ಫೋಟೋಗಳನ್ನ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದು ಪಕ್ಕಾ ವೆಸ್ಟರ್ನ್ ಸ್ಟೈಲ್ ಬೇಬಿ ಶವರ್ ಪಾರ್ಟಿಯಾಗಿದ್ದು ಪ್ರಣಿತಾ ಕುಟುಂಬ ವೈಟ್ ಅಂಡ್ ವೈಟ್ ಥೀಮ್ ಉಡುಗೆಯಲ್ಲಿ ಮಿಂಚಿದೆ.

ಇನ್ನು ಪತಿ ನಿತಿನ್‌ ರಾಜು ಮತ್ತು 2ವರ್ಷದ ಮಗಳು ಆರ್ನಾ ಜೊತೆ ಕೇಕ್‌ ಕಟ್‌ ಮಾಡಿ ಸಂಭ್ರಮಿಸಿದ್ದಾರೆ. 2021ರಲ್ಲಿ ಉದ್ಯಮಿ ನಿತಿನ್‌ ರಾಜು ಅವರನ್ನು ವರಿಸಿದ್ದ ಪ್ರಣೀತಾ, 2022ರಲ್ಲಿ ಮೊದಲ ಮಗಳಾಗಿ ಆರ್ನಾ ಆಗಮಿಸಿದ್ದಳು. ಈ ವಿಶೇಷ ಬೇಬಿ ಶವರ್‌ ಕಾರ್ಯಕ್ರಮದ ಫೋಟೋಗಳನ್ನು ನಟಿ ಪ್ರಣೀತಾ ಸುಭಾಷ್‌ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿದ್ದಾರೆ.

ಪ್ರಣಿತಾ ಸುಭಾಷ್ 2022ರಲ್ಲಿ ಹೆಣ್ಣು ಮಗವಿಗೆ ಜನ್ಮ ನೀಡಿದ್ದರು. ಅದಾದ ಬಳಿಕ ಚಿತ್ರರಂಗದಿಂದ ಕೊಂಚ ಬಿಡುವು ಪಡೆದಿದ್ದರು. ಇತ್ತೀಚೆಗೆ ಮತ್ತೆ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದರು. ಇದೀಗ ಮತ್ತೊಮ್ಮೆ ಸಿಹಿ ಸುದ್ದಿ ಹಂಚಿಕೊಂಡಿದ್ದು, ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

2021ರಲ್ಲಿ ವಿವಾಹ

ಪ್ರಣಿತಾ 2021ರ ಮೇ ತಿಂಗಳಲ್ಲಿ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜು ಅವರನ್ನು ಮದುವೆಯಾಗಿದ್ದರು. 2010ರಲ್ಲಿ ದರ್ಶನ್‌ ಅಭಿನಯದ ‘ಪೊರ್ಕಿ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಪ್ರಣಿತಾ ಕಡಿಮೆ ಸಮಯದಲ್ಲೇ ಸ್ಟಾರ್ ನಟರಾದ ಶಿವರಾಜ್ ಕುಮಾರ್, ಗಣೇಶ್, ತೆಲುಗು ನಟ ಪವನ್ ಕಲ್ಯಾಣ್, ಸಿದ್ದಾರ್ಥ್ ಹಾಗೂ ತಮಿಳು ನಟ ಸೂರ್ಯ, ಬಾಲಿವುಡ್ ನಟ ಅಜಯ್ ದೇವಗನ್, ಮಲಯಾಳಂ ನಟ ದಿಲೀಪ್‌ ಜತೆ ನಟಿಸಿ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿದ್ದರು. ಜನಪ್ರಿಯತೆಯ ತುತ್ತ ತುದಿಯಲ್ಲಿರುವಾಗಲೇ ವೈವಾಹಿಕ ಜೋವನಕ್ಕೆ ಕಾಲಿಟ್ಟಿದ್ದರು. ಬಳಿಕ ಮಗುವಿನ ಲಾಲನೆ-ಪಾಲನೆಗಾಗಿ ಕೊಂಚ್‌ ಬ್ರೇಕ್‌ ಪಡೆದುಕೊಂಡಿದ್ದರು. ಮಗುವಾದ ಬಳಿಕವೂ ಫಿಟ್‌ ಆಗಿದ್ದ ಅವರನ್ನು ಅಭಿಮಾನಿಗಳು ಸಂತೂರ್‌ ಮಮ್ಮಿ ಎಂದೇ ಕರೆಯುತ್ತಿದ್ದರು.

ಮಾಲಿವುಡ್‌ ಚಿತ್ರದ ಮೂಲಕ ಕಂಬ್ಯಾಕ್‌

‘ಪೊರ್ಕಿ’ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ ಅವರು ಬಳಿಕ ತೆಲುಗು, ತಮಿಳು ಮತ್ತು ಹಿಂದಿ ಸಿನಿಮಾಗಳಲ್ಲಿಯೂ ಅಭಿನಯಿಸಿ ಈ ವರ್ಷ ಮಲಯಾಳಂ ಚಿತ್ರರಂಗಕ್ಕೂ ಕಾಲಿಟ್ಟಿದ್ದರು. ಆ ಮೂಲಕ ಮಾಲಿವುಡ್‌ನಿಂದ ಕಂಬ್ಯಾಕ್‌ ಮಾಡಿದ್ದರು. ಮಾಲಿವುಡ್‌ನ ಜನಪ್ರಿಯ ನಾಯಕ ದಿಲೀಪ್‌ (Dileep) ಅಭಿನಯದ ʼತಂಕಮಣಿʼ (Thankamani) ಚಿತ್ರದಲ್ಲಿ ಪ್ರಣಿತಾ ನಾಯಕಿಯಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರ 2024ರ ಮಾರ್ಚ್‌ನಲ್ಲಿ ತೆರೆಕಂಡಿತ್ತು. ಮೇಯಲ್ಲಿ ರಿಷಿ ಜತೆ ಪ್ರಣಿತಾ ಮೊದಲ ಬಾರಿ ಅಭಿನಯಿಸಿದ ʼರಾಮನ ಅವತಾರʼ ಕನ್ನಡ ಚಿತ್ರ ಬಿಡುಗಡೆಯಾಗಿತ್ತು.

ಮೊದಲ ಬಾರಿ ಮಲಯಾಳಂ ಚಿತ್ರದಲ್ಲಿ ಕಾಣಿಸಿಕೊಂಡ ಪ್ರಣಿತಾಗೆ ಪವರ್‌ ಫುಲ್‌ ಪಾತ್ರವೇ ದೊರೆತಿತ್ತು. ಅರ್ಪಿತಾ ನಾಥ್‌ ಐಪಿಎಸ್‌ ಆಗಿ ಅವರು ತೆರೆ ಮೇಲೆ ಮಿಂಚಿದ್ದರು. 2021ರಲ್ಲಿ ತೆರೆಕಂಡ ಬಾಲಿವುಡ್‌ ʼಹಂಗಾಮ 2ʼ ಮತ್ತು ʼಭುಜ್‌: ದಿ ಪ್ರೈಡ್‌ ಆಫ್‌ ಇಂಡಿಯಾʼ ಚಿತ್ರಗಳ ಬಳಿಕ 3 ವರ್ಷ ಪ್ರಣಿತಾ ಅಭಿನಯದ ಯಾವುದೇ ಚಿತ್ರ ಬಿಡುಗಡೆಯಾಗಿರಲಿಲ್ಲ. ಬಣ್ಣದ ಲೋಕಕ್ಕೆ ಮರಳಿದ್ದ ಅವರು ಫೋಟೊ ಶೂಟ್‌, ಜಾಹೀರಾತು ಮೂಲಕ ಸಕ್ರಿಯರಾಗಿದ್ದರು. ಈ ಮಧ್ಯೆ ಅವರು ಕನ್ನಡ ಮಾಧ್ಯಮ ಶಾಲೆಗಳಿಗೆ ಸಹಾಯ ಹಸ್ತ ಚಾಚುವ ಮೂಲಕ ಸಮಾಜ ಸೇವೆಯಲ್ಲಿಯೂ ತೊಡಗಿದ್ದರು. ಕೈಯಲ್ಲಿರುವ ಸಿನಿಮಾಗಳ ಚಿತ್ರೀಕರಣಗಳನ್ನೆಲ್ಲ ಮುಗಿಸಿರುವ ಅವರು ಸದ್ಯ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Pranitha Subhash: ಎರಡನೇ ಮಗುವಿನ ನಿರೀಕ್ಷೆಯಲ್ಲಿ ಪ್ರಣಿತಾ ಸುಭಾಷ್‌; ಬೇಬಿ ಬಂಪ್ ಫೋಟೊ ಹಂಚಿಕೊಂಡ ನಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Kannada New Movie: ‘ಕಲ್ಕಿ’ ಚಿತ್ರದ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಕನ್ನಡಕ್ಕೆ ಎಂಟ್ರಿ!

“ಆ ದಿನಗಳು” ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಬಲರಾಮನ ದಿನಗಳು” ಚಿತ್ರಕ್ಕೆ ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ “ಆ ದಿನಗಳು” ಖ್ಯಾತಿಯ ಕೆ‌.ಎಂ. ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್‌ ಪ್ರಭಾಕರ್‌ ನಾಯಕರಾಗಿ ನಟಿಸುತ್ತಿರುವ 25ನೇ ಚಿತ್ರ “ಬಲರಾಮನ ದಿನಗಳು”. ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ (Kannada New Movie) ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ‌. ಹೆಸರಾಂತ ಸಂಗೀತ ನಿರ್ದೇಶಕ ಹಾಗೂ ಗಾಯಕ ಸಂತೋಷ್ ನಾರಾಯಣನ್ ಅವರನ್ನು “ಬಲರಾಮನ ದಿನಗಳು” ಚಿತ್ರತಂಡ ಅದ್ದೂರಿಯಾಗಿ ಕನ್ನಡಕ್ಕೆ ಬರಮಾಡಿಕೊಂಡರು. ನಂತರ ಸಂತೋಷ್ ನಾರಾಯಣನ್ ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಪ.ರಂಜಿತ್ ಅವರ “ಅಟ್ಟಕತ್ತಿ” ಚಿತ್ರದ ಮೂಲಕ ಸ್ವತಂತ್ರ ಸಂಗೀತ ನಿರ್ದೇಶಕರಾದ ಇವರು, “ಕಾಲ”, ” ಕಬಾಲಿ”, “ಭೈರವ”, ” ದಸರಾ” ಹಾಗೂ ಇತ್ತೀಚಿಗೆ ತೆರೆಕಂಡ “ಕಲ್ಕಿ” ಸಿನಿಮಾವರೆಗೂ 50 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಹಲವು ಚಿತ್ರಗಳಲ್ಲಿ ಹಾಡಿದ್ದಾರೆ ಕೂಡ‌.

“ನನ್ನ ತಾಯಿಗೆ ಕನ್ನಡ ಬರುತ್ತದೆ. ಅವರು ನನಗೂ ಸ್ವಲ್ಪ ಕನ್ನಡ ಹೇಳಿಕೊಟ್ಟಿದ್ದಾರೆ. ಬೆಂಗಳೂರಿಗೆ ಆಗಾಗ ಬರುತ್ತಿರುತ್ತೇನೆ. “ಬಲರಾಮನ ದಿನಗಳು” ನನ್ನ 51ನೇ ಚಿತ್ರ ಹಾಗೂ ನಾನು ಸಂಗೀತ ನೀಡುತ್ತಿರುವ ಕನ್ನಡದ ಮೊದಲ ಚಿತ್ರ. ಪದ್ಮಾವತಿ ಫಿಲಂಸ್, ಚೈತನ್ಯ ಹಾಗೂ ವಿನೋದ್ ಪ್ರಭಾಕರ್ ಅವರ ಜತೆಗೆ ಕೆಲಸ ಮಾಡುತ್ತಿರುವುದು ಖುಷಿಯಾಗಿದೆ. ಈ ಸಂದರ್ಭದಲ್ಲಿ ಗುರುಗಳಾದ ಇಳಯರಾಜ, ಎ.ಆರ್.ರೆಹಮಾನ್ ಅವರನ್ನು ನೆನಪಿಸಿಕೊಳ್ಳುತ್ತೇನೆ. ರಘು ದೀಕ್ಷಿತ್ ಅವರ “ನಿನ್ನ ಪೂಜೆಗೆ ಬಂದೆ ಮಾದೇಶ್ವರ” ಸೇರಿದಂತೆ ಕೆಲವು ಹಾಡುಗಳಿಗೆ ಪ್ರೋಗ್ರಾಮರ್ ಆಗಿ ಕೆಲಸ ಮಾಡಿದ್ದೇನೆ. ಅಜನೀಶ್ ಲೋಕನಾಥ್ ಹಾಗೂ ರವಿ ಬಸ್ರೂರ್ ಅವರ ಸಂಗಿತ ಇಷ್ಟ ಎಂದು ಹೇಳಿದ ಸಂತೋಷ್ ನಾರಾಯಣನ್, ಈ ಚಿತ್ರದಲ್ಲೂ ಒಳ್ಳೆಯ ಹಾಡುಗಳನ್ನು ಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.

ಇದು ನನ್ನ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. “ಬಲರಾಮನ ದಿನಗಳು” ಗೆ ಬಲ ನೀಡುವುದಕ್ಕೆ ಸಂತೋಷ್‍ ನಾರಾಯಣನ್ ಅವರು ಇಲ್ಲಿಗೆ ಬಂದಿದ್ದಾರೆ. ಸಂತೋಷ್‍ ನಾರಾಯಣನ್ ಅವರೇ ಯಾಕೆ? ಎಂಬ ಪ್ರಶ್ನೆ ಬರಬಹುದು. ಅವರ ಕೆಲಸವನ್ನು ನಮ್ಮಲ್ಲಿ ಜನ ಒಪ್ಪಿಕೊಂಡಿದ್ದಾರೆ. ಅವರು ಯಾರು ಎಂದು ಗೊತ್ತಿಲ್ಲದಿರಬಹುದು, ಅವರ ಮುಖ ನೋಡದಿರಬಹುದು. ಆದರೆ, ಗ್ಯಾಂಗ್‍ಸ್ಟರ್ ಸಿನಿಮಾ ಸಂಬಂಧಪಟ್ಟ ಯಾವುದೇ ಪೋಸ್ಟ್ ನೋಡಿ, ಇವರ ಸಿಗ್ನೇಚರ್ ಸಂಗೀತ ಇದ್ದೇ ಇರುತ್ತದೆ. ಹಾಗಾಗಿ, ನಮ್ಮ ಚಿತ್ರತಂಡದವರೆಲ್ಲಾ ನಿರ್ಧಾರ ತೆಗೆದುಕೊಂಡು ಅವರನ್ನು ಕರೆಸಿದ್ದೇವೆ. ಇದೊಂದು ಗ್ಯಾಂಗ್‍ಸ್ಟರ್ & ಕಲ್ಟ್ ಸಿನಿಮಾ ಆಗಿರುವುದರಿಂದ ಅವರೇ ಸೂಕ್ತ ಎಂದನಿಸಿತು. ಅವರು ದೊಡ್ಡ ಸಂಗೀತ ನಿರ್ದೇಶಕ. ಅವರನ್ನು ಕರೆದುಕೊಂಡು ಬರುವುದು ಅಷ್ಟು ಸುಲಭವಾಗಿರಲಿಲ್ಲ. ಬಹಳ ಕಷ್ಟಪಟ್ಟು ಅವರನ್ನು ಕರೆದುಕೊಂಡು ಬಂದಿದ್ದೇವೆ. ‘ಕಲ್ಕಿ’ ಬಿಡುಗಡೆಗೂ ಮೊದಲೇ, ಮೇ ತಿಂಗಳಲ್ಲಿ ಅವರನ್ನು ಮಾತನಾಡಿಸಿದ್ದೆವು. ಅವರಿಗೆ ಚಿತ್ರಕಥೆ ರೀಡಿಂಗ್‍ ಕೊಡುತ್ತಿದ್ದಂತೆಯೇ ಒಪ್ಪಿಕೊಂಡರು. ಚಿತ್ರ ವಿಭಿನ್ನವಾಗಿದೆ, 70-80ರ ಕಾಲಘಟ್ಟದ ಚಿತ್ರವಾಗಿರುವುದರಿಂದ ಸಾಕಷ್ಟು ಪ್ರಯೋಗ ಮಾಡಬಹುದು ಎಂದು ಖುಷಿಪಟ್ಟು ಒಪ್ಪಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕನ್ನಡಕ್ಕೆ ಕರೆದುಕೊಂಡು ಬಂದಿರುವ ಹೆಮ್ಮೆ ಇದೆ. ಚಿತ್ರದ ಕುರಿತು ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ ಎಂದರು ನಾಯಕ ಟೈಗರ್.

ಇದು 90 ರ ದಶಕದ ಕಾಲಘಟ್ಟದ ಭೂಗತಲೋಕದ ಕಥೆ. ಯಾವುದೇ ನೈಜ ಘಟನೆ ಅಥವಾ ವ್ಯಕ್ತಿಯ ಕುರಿತಾದ ಚಿತ್ರವಲ್ಲ. ಕಾಲ್ಪನಿಕ ಕಥೆ. ಟೈಗರ್ ಅವರ ಚಿತ್ರವನ್ನು ನಿರ್ದೇಶಿಸುವ ಆಸೆಯಿತ್ತು. ಅದು ಈ ಚಿತ್ರದ ಮೂಲಕ ಈಡೇರಿದೆ. ನಿರ್ಮಾಪಕರಾದ ಪದ್ಮಾವತಿ ಜಯರಾಂ ಮತ್ತು ಶ್ರೇಯಸ್‍ ಗೆ ವಂದನೆಗಳು. ಸಂತೋಷ್ ನಾರಾಯಣ್ ಅವರ ಸಂಗೀತ ನಿರ್ದೇಶನದಲ್ಲಿ ಒಳ್ಳೆಯ ಹಾಡುಗಳು ಬರಲಿದೆ ಎಂದು ನಿರ್ದೇಶಕ ಕೆ.ಎಂ.ಚೈತನ್ಯ ತಿಳಿಸಿದರು.

ಇದನ್ನೂ ಓದಿ: Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ನಾನು ಚಿಕ್ಕ ವಯಸ್ಸಿನಿಂದ ಟೈಗರ್ ಅವರ ಅಭಿಮಾನಿ ಎಂದು ಮಾತನಾಡಿದ ನಿರ್ಮಾಪಕ ಶ್ರೇಯಸ್, ಇಂದು ಅವರು ನಾಯಕರಾಗಿ ನಟಿಸುತ್ತಿರುವ ಚಿತ್ರ ನಿರ್ಮಾಣ ಮಾಡುತ್ತಿರುವುದು ಸಂತೋಷವಾಗಿದೆ. ನಮ್ಮ ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಮೊದಲ ಸಿನಿಮಾವಿದು. ನಮ್ಮ ಮೊದಲ ಚಿತ್ರಕ್ಕೆ ಹೆಸರಾಂತ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಸಂಗೀತ ನೀಡುತ್ತಿದ್ದಾರೆ ಹಾಗೂ ಕೆ.ಎಂ.ಚೈತನ್ಯ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ನಮ್ಮ ಚಿತ್ರದ ಘೋಷಣೆ ಮಾಡಿದಾಗ ತಾವೆಲ್ಲರು ನೀಡಿದ ಪ್ರೋತ್ಸಾಹಕ್ಕೆ ಚಿರ ಋಣಿ. ನನ್ನ ಕನಸಿಗೆ ಆಸರೆಯಾದ ಅಪ್ಪ ಅಮ್ಮನಿಗೆ ಧನ್ಯವಾದ. ಮುಂದೆ ಕೂಡ ನಿಮ್ಮ ಪ್ರೋತ್ಸಾಹ ಹೀಗೆ ಇರಲಿ ಎಂದರು ನಿರ್ಮಾಪಕ ಶ್ರೇಯಸ್. ನಿರ್ಮಾಪಕಿ ಪದ್ಮಾವತಿ ಜಯರಾಂ ಹಾಗೂ ಜಯರಾಂ ಅವರು ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading

ಬೆಂಗಳೂರು

Kannada New Movie: ಮುತ್ತುರಾಜ್ ನಿರ್ದೇಶನದ ‘ಲಿಪ್ ಲಾಕ್’ ಚಿತ್ರಕ್ಕೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಚಾಲನೆ

“ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತುರಾಜ್ ನಿರ್ದೇಶನದ “ಲಿಪ್ ಲಾಕ್” ನೂತನ ಚಿತ್ರದ (Kannada New Movie) ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರ ಸಹೋದರಿ ಸ್ಪೂರ್ತಿ ಕೃಷ್ಣಮೂರ್ತಿ ಆರಂಭ ಫಲಕ ತೋರಿದರು. ನಿರ್ದೇಶಕರ ಪುತ್ರ ಲಿಖಿತ್ ಗೌಡ ಕ್ಯಾಮೆರಾ ಚಾಲನೆ ಮಾಡಿದರು. ಈ ಕುರಿತ ವಿವರ ಇಲ್ಲಿದೆ,

VISTARANEWS.COM


on

Kannada new movie
Koo

ಬೆಂಗಳೂರು: ಒಂದೇ ಟೇಕ್‌ನಲ್ಲಿ ಚಿತ್ರೀಕರಣವಾಗಿದ್ದ “ಯಂಗ್ ಮ್ಯಾನ್” ಚಿತ್ರದ ನಿರ್ದೇಶಕ ಮುತ್ತುರಾಜ್ ನಿರ್ದೇಶನದ ಮುಂದಿನ ಚಿತ್ರ “ಲಿಪ್ ಲಾಕ್”. ಇತ್ತೀಚೆಗೆ ಈ ನೂತನ ಚಿತ್ರದ (Kannada New Movie) ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರ ಸಹೋದರಿ ಸ್ಪೂರ್ತಿ ಕೃಷ್ಣಮೂರ್ತಿ ಆರಂಭ ಫಲಕ ತೋರಿದರು. ನಿರ್ದೇಶಕರ ಪುತ್ರ ಲಿಖಿತ್ ಗೌಡ ಕ್ಯಾಮೆರಾ ಚಾಲನೆ ಮಾಡಿದರು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಎಲ್ಲರೂ ಅಂದುಕೊಂಡಿರುವ “ಲಿಪ್ ಲಾಕ್” ಬೇರೆ. ಆದರೆ “ಲಿಪ್ ಲಾಕ್” ನಿಜವಾದ ಅರ್ಥ ಬೇರೆ ಎಂದು ತಿಳಿಸುವ ನಿರ್ದೇಶಕ ಮುತ್ತುರಾಜ್, ಇದೊಂದು ಪರಿಶುದ್ಧ ಪ್ರೇಮಕಥೆ. ಯಾವುದೇ ಮುಜುಗರವಿಲ್ಲದೆ ಕುಟುಂಬ ಸಮೇತ ಬಂದು ಎಲ್ಲರೂ ನೋಡಬಹುದಾದ ಕೌಟುಂಬಿಕ ಕಥೆಯೂ ಹೌದು. ಬೆಂಗಳೂರಿನಲ್ಲೇ ಚಿತ್ರೀಕರಣ ನಡೆಯುತ್ತದೆ‌. ಕರಣ್ ಆರ್ಯನ್, ತ್ರಿವಿಕ್ರಮ್ ಹಾಗೂ ಚಿತ್ರದ ನಿರ್ಮಾಪಕರೂ ಆಗಿರುವ ಹೇಮಂತ್ ಕುಮಾರ್ ಈ ಚಿತ್ರದ ನಾಯಕರಾಗಿದ್ದು, ನಾಯಕಿಯರಾಗಿ ದೀಪ, ಜಗದೀಶ್, ಸೃಷ್ಟಿ, ನಿಹಾರಿಕಾ ನಟಿಸುತ್ತಿದ್ದಾರೆ. ಜಗಪ್ಪ, ಆನಂದ್, ಕರಿಬಸವ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಲೋಕಿ ತವಸ್ಯ ಸಂಗೀತ ನಿರ್ದೇಶನ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಹಾಗೂ ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿದೆ‌ ಎಂದರು.

ನಿರ್ಮಾಪಕನಾಗಿ ಇದು ಮೊದಲ ಚಿತ್ರ. ಹೇಮಂತ್ ಸಿನಿಮಾಸ್ ಹಾಗೂ ಪರಿ ಮೂವೀ ಮೇಕರ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ನಿರ್ಮಾಣದ ಜತೆಗೆ ಪ್ರಮುಖ ಪಾತ್ರದಲ್ಲೂ ನಟಿಸುತ್ತಿದ್ದೇನೆ ಎಂದರು ಹೇಮಂತ್ ಕೃಷ್ಣಮೂರ್ತಿ.

ನಿರ್ದೇಶಕರು ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ನನ್ನದು ಈ ಚಿತ್ರದಲ್ಲಿ ಕೆಳ ಮಧ್ಯಮ ವರ್ಗದ ಹುಡುಗನ ಪಾತ್ರ‌ ಎಂದರು ನಟ ಕರಣ್ ಆರ್ಯನ್.

ಇದನ್ನೂ ಓದಿ: Bengaluru Power Cut: ಗಮನಿಸಿ, ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಕರೆಂಟ್‌ ಇರಲ್ಲ!

ನನ್ನ ಪಾತ್ರ ಕೂಡ ವಿಭಿನ್ನವಾಗಿದೆ. “ಬ್ಯಾಡ್ ಮ್ಯಾನರ್ಸ್” ಚಿತ್ರದ ನಂತರ ಈ ಚಿತ್ರದಲ್ಲಿ ನಟಿಸುತ್ತಿದ್ದೇನೆ ಎಂದರು”ಪದ್ಮಾವತಿ ” ಧಾರಾವಾಹಿ ಖ್ಯಾತಿಯ ತ್ರಿವಿಕ್ರಮ್. ಈ ವೇಳೆ ನಟಿಯರಾದ ದೀಪ ಜಗದೀಶ್ , ಸೃಷ್ಟಿ ಹಗೂ ನಿಹಾರಿಕಾ ಕೂಡ ಚಿತ್ರದ ಕುರಿತು ಮಾತನಾಡಿದರು.

Continue Reading

ಸಿನಿಮಾ

Akkineni Nagarjuna: ಟಾಲಿವುಡ್‌ ಸ್ಟಾರ್‌ ನಾಗಾರ್ಜುನಗೆ ಸೇರಿದ ಕನ್ವೆನ್ಷನ್ ಸೆಂಟರ್ ನೆಲಸಮ; ನಿಯಮ ಉಲ್ಲಂಘಿಸಿದ್ರಾ ನಟ?

Akkineni Nagarjuna: ಖ್ಯಾತ ಟಾಲಿವುಡ್‌ ನಟ ಅಕ್ಕಿನೇನಿ ನಾಗಾರ್ಜುನ ಅವರಿಗೆ ಸೇರಿದ ಎನ್-ಕನ್ವೆನ್ಷನ್ ಸೆಂಟರ್ ಅನ್ನು ಅಧಿಕಾರಿಗಳು ನೆಲಸಮಗೊಳಿಸಿದ್ದಾರೆ. ಹೈದರಾಬಾದ್‌ ನಗರದ ಮಾದಾಪುರದ ತಮ್ಮಿಡಿಕುಂಟಾ ಸರೋವರದ ಫುಲ್‌ ಟ್ಯಾಂಕ್ ಲೆವೆಲ್‌ ಪ್ರದೇಶ ಮತ್ತು ಬಫರ್ ವಲಯವನ್ನು ಅತಿಕ್ರಮಿಸಿದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Akkineni Nagarjuna
Koo

ಹೈದರಾಬಾದ್‌: ಖ್ಯಾತ ಟಾಲಿವುಡ್‌ ನಟ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರಿಗೆ ಹೈದರಾಬಾದ್‌ ಡಿಸಾಸ್ಟರ್‌ ರೆಸ್ಪಾನ್ಸ್‌ ಆ್ಯಂಡ್‌ ಅಸ್ಸೆಟ್ಸ್‌ ಮಾನಿಟರಿಂಗ್‌ ಆ್ಯಂಡ್‌ ಪ್ರೊಟೆಕ್ಷನ್‌ (HYDRA)ನ ಅಧಿಕಾರಿಗಳು ಬಹುದೊಡ್ಡ ಶಾಕ್‌ ಕೊಟ್ಟಿದ್ದಾರೆ. ನಗರದ ಮಾದಾಪುರದ ತಮ್ಮಿಡಿಕುಂಟಾ ಸರೋವರ (Thammidikunta Lake)ದ ಫುಲ್‌ ಟ್ಯಾಂಕ್ ಲೆವೆಲ್‌ (FTL) ಪ್ರದೇಶ ಮತ್ತು ಬಫರ್ ವಲಯವನ್ನು ಅತಿಕ್ರಮಿಸಿದ ಆರೋಪದ ಮೇಲೆ ನಾಗಾರ್ಜುನ ಅವರ ಎನ್-ಕನ್ವೆನ್ಷನ್ ಸೆಂಟರ್ ಅನ್ನು ನೆಲಸಮಗೊಳಿಸಿದ್ದಾರೆ.

ಜಲಮೂಲಗಳು ಮತ್ತು ಸಾರ್ವಜನಿಕ ಭೂಮಿಯನ್ನು ಅತಿಕ್ರಮಿಸಿರುವ ಅಕ್ರಮ ನಿರ್ಮಾಣಗಳನ್ನು ತೆಗೆದುಹಾಕುವ ಕಾರ್ಯಾಚರಣೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್‌-ಕನ್ವೆನ್ಷನ್‌ ಸೆಂಟರ್‌ ಅನ್ನು ಸುಮಾರು 10 ಎಕ್ರೆಯಲ್ಲಿ ನಿರ್ಮಿಸಲಾಗಿದೆ. ಎನ್-ಕನ್ವೆನ್ಷನ್ ಸೆಂಟರ್ ಮದುವೆ, ಕಾರ್ಪೋರೇಟ್‌ ಕೂಟಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಅಯೋಜನೆಗೆ ಜನಪ್ರಿಯ ಸ್ಥಳವಾಗಿ ಗುರುತಿಸಿಕೊಂಡಿದೆ.

ಈ ವರ್ಷದ ಆರಂಭದಲ್ಲಿ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (GHMC)ನ ವಲಯ ಆಯುಕ್ತರಿಗೆ ನಗರ ಮತ್ತು ಸುತ್ತಮುತ್ತಲಿನ ಜಲಮೂಲಗಳ ಅತಿಕ್ರಮಣವನ್ನು ತಡೆಗಟ್ಟಲು ಸರೋವರ ಸಂರಕ್ಷಣಾ ಸಮಿತಿಗಳನ್ನು ರಚಿಸುವಂತೆ ಸೂಚಿಸಲಾಗಿತ್ತು. ಇತ್ತೀಚೆಗೆ ಬಿಡುಗಡೆಗೊಂಡ ನ್ಯಾಷನಲ್‌ ರಿಮೋಟ್‌ ಸೆನ್ಸಿಂಗ್‌ ಸೆಂಟರ್‌ (NRSC)ನ ವರದಿಯು 1979 ಮತ್ತು 2024ರ ನಡುವೆ ಹೈದರಾಬಾದ್‌ನ ಸರೋವರಗಳ ವಿಸ್ತಾರವು ಶೇ. 61ರಷ್ಟು ಕಡಿಮೆಯಾಗಿದೆ ಎನ್ನುವ ಅಂಶವನ್ನು ಬಹಿರಂಗಪಡಿಸಿತ್ತು.

ನಾಗಾರ್ಜುನ ಅವರ ಕನ್ವೆನ್ಷನ್ ಸೆಂಟರ್ ಎಫ್‌ಟಿಎಲ್‌ ಪ್ರದೇಶದ 1.12 ಎಕ್ರೆ ಮತ್ತು ಬಫರ್ ವಲಯ ಹೆಚ್ಚುವರಿ 2 ಎಕರೆ ಪ್ರದೇಶದಲ್ಲಿದೆ ವ್ಯಾಪಿಸಿದೆ ಎಂದು ಆರೋಪಿಸಲಾಗಿದೆ. ಅಧಿಕೃತ ಮೂಲಗಳ ಪ್ರಕಾರ, ತಮ್ಮಿಡಿಕುಂಟಾ ಸರೋವರದ ಎಫ್‌ಟಿಎಸ್‌ ಪ್ರದೇಶದ ವ್ಯಾಪ್ತಿ ಸುಮಾರು 29.24 ಎಕ್ರೆ. ನಾಗಾರ್ಜುನ ಅವರಿಗೆ ಸೇರಿದ ಈ ಆಸ್ತಿಯು ಹಲವು ವರ್ಷಗಳಿಂದ ಪರಿಶೀಲನೆಯಲ್ಲಿತ್ತು. ಆದಾಗ್ಯೂ ಜಿಎಚ್ಎಂಸಿ ಅಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ತೆಲಂಗಾಣದ ಸಚಿವ ಕೋಮಟಿರೆಡ್ಡಿ ವೆಂಕಟ್ ರೆಡ್ಡಿ ಅವರು ಕನ್ವೆನ್ಷನ್ ಸೆಂಟರ್ ವಿರುದ್ಧ ಬುಧವಾರ (ಆಗಸ್ಟ್‌ 21) ಹೈಡ್ರಾಗೆ ಅಧಿಕೃತ ದೂರು ನೀಡಿದ್ದರು. ಅವರು ತಮ್ಮ ದೂರಿನೊಂದಿಗೆ ಗೂಗಲ್ ಅರ್ಥ್ ಮ್ಯಾಪ್‌ನೊಂದಿಗೆ ಅತಿಕ್ರಮಣವನ್ನು ಸೂಚಿಸುವ ಎಫ್‌ಟಿಎಸ್‌ನ ಮ್ಯಾಪ್‌ ಅನ್ನೂ ಲಗತ್ತಿಸಿದ್ದರು.

ನಾಗಾರ್ಜುನ ಹೇಳಿದ್ದೇನು?

ಘಟನೆ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ನಾಗಾರ್ಜುನ ಆಘಾತ ವ್ಯಕ್ತಪಡಿಸಿದ್ದಾರೆ. ತಾವು ಯಾವುದೇ ಜಾಗವನ್ನು ಅತಿಕ್ರಮಿಸಿಲ್ಲ ಎಂದೂ ಹೇಳಿದ್ದಾರೆ. “ಇದು ಪಟ್ಟಾ ಭೂಮಿಯಾಗಿದ್ದು, ಕೆರೆಯ ಒಂದು ಇಂಚು ಸಹ ಅತಿಕ್ರಮಣವಾಗಿಲ್ಲ. ಕಾನೂನನ್ನು ಪಾಲಿಸುವ ನಾಗರಿಕನಾಗಿ, ನ್ಯಾಯಾಲಯವು ನನ್ನ ವಿರುದ್ಧ ತೀರ್ಪು ನೀಡಿದ್ದರೆ ನಾನೇ ನೆಲಸಮವನ್ನು ಮಾಡುತ್ತಿದ್ದೆ” ಎಂದು ಅವರು ಬರೆದುಕೊಂಡಿದ್ದಾರೆ. ಜತೆಗೆ ʼʼಕಟ್ಟಡ ನೆಲಸಮಕ್ಕೆ ಮೊದಲು ತನಗೆ ಯಾವುದೇ ನೋಟಿಸ್ ನೀಡಲಾಗಿಲ್ಲ. ಅಧಿಕಾರಿಗಳು ಕೈಗೊಂಡ ತಪ್ಪು ಕ್ರಮಗಳಿಗೆ ಸಂಬಂಧಿಸಿದಂತೆ ನಾವು ನ್ಯಾಯಾಲಯದಿಂದ ಸೂಕ್ತ ಪರಿಹಾರವನ್ನು ಕೋರುತ್ತೇವೆʼʼ ಎಂದೂ ಅವರು ಹೇಳಿದ್ದಾರೆ.

ಇದನ್ನೂ ಓದಿ: Bulldozer Action: ಅಯೋಧ್ಯೆಯಲ್ಲಿ ಬುಲ್ಡೋಜರ್‌ ಸದ್ದು; ಅಪ್ರಾಪ್ತೆಯ ಅತ್ಯಾಚಾರ ಆರೋಪಿ ಮೊಯೀದ್‌ ಖಾನ್‌ಗೆ ಸೇರಿದ ಕಟ್ಟಡ ಪುಡಿಪುಡಿ

Continue Reading

ಬೆಂಗಳೂರು

Kannada New Movie: ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಟ್ರೇಲರ್ ರಿಲೀಸ್‌; ಸಿನಿಮಾ ಬಿಡುಗಡೆ ಯಾವಾಗ?

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ (Kannada New Movie) ಟ್ರೇಲರ್ ಬಿಡುಗಡೆಯಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ಅವರು ನಿರ್ಮಿಸಿರುವ, ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿರುವ ಹಾಗೂ ಯುವ ಕಲಾವಿದರಾದ ವಿಹಾನ್, ಅಂಕಿತ ಅಮರ್ ಮತ್ತು ಮಯೂರಿ ನಟರಾಜ ನಟಿಸಿರುವ ಸುಂದರ ದೃಶ್ಯ ಕಾವ್ಯ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ (Kannada New Movie) ಸೆಪ್ಟೆಂಬರ್ 5ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ.

ಚಿತ್ರದ ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಹಾಗೂ ಹಾಡುಗಳನ್ನು ಬಹಳವಾಗಿ ಮೆಚ್ಚಿಕೊಂಡಿರುವ ಪ್ರೇಕ್ಷಕರು ಚಿತ್ರಮಂದಿರಗಳಿಗೂ ಬಂದು ಚಿತ್ರವನ್ನು ನೋಡಿ ಪ್ರೋತ್ಸಾಹಿಸುತ್ತಾರೆ ಎಂಬ ಭರವಸೆ ಚಿತ್ರತಂಡಕ್ಕಿದೆ‌. ಟ್ರೇಲರ್ ಬಿಡುಗಡೆ ಸಮಾರಂಭದ ಆದಿಯಲ್ಲಿ ಚಿತ್ರ ತಂಡ ಪವರ್ ಸ್ಟಾರ್ ಅವರಿಗೆ ಗೌರವ ಸಲ್ಲಿಸುವ ಕಾರಣದಿಂದ ಅವರ ಚಿತ್ರಗಳ ಗೀತೆ ಹಾಡಿ ಅಭಿಮಾನ ಮೆರೆದರು.

ನಂತರ ನಿರ್ಮಾಪಕ ರಕ್ಷಿತ್ ಶೆಟ್ಟಿ ಮಾತನಾಡಿ, ನಿರ್ದೇಶಕ ಚಂದ್ರಜಿತ್ ಅವರು 9 ವರ್ಷಗಳ ಹಿಂದೆ ಬ್ಲಾಗ್‌ನಲ್ಲಿ ಮೆಸೇಜ್ ಮಾಡಿದ್ದರು. ಲಿಂಕ್ ಓಪನ್ ಮಾಡಿದೆ. ಬರವಣಿಗೆ ವಿಶೇಷ ಅನಿಸಿತು. ನಂತರ ಚಂದ್ರಜಿತ್ ಅವರು ಭೇಟಿಯಾದರು‌‌. ಅವರು ಬರೆದ ಕಥೆ ಸಿನಿಮಾವಾಗಿ ರೂಪಾಂತರವಾಯಿತು. ಕನ್ನಡದಲ್ಲಿ ಈ ಕಥೆಯನ್ನು ಹೋಲುವ ಚಿತ್ರಗಳು ಬಂದಿರಬಹುದು.‌ ಆದರೆ ಈ ರೀತಿಯ ನಿರೂಪಣೆಯಿರುವ ಚಿತ್ರ ಬಂದಿಲ್ಲ. ನಾನು ಈಗಾಗಲೇ ಮೂರು ಸಲ ಚಿತ್ರ ನೋಡಿದ್ದೇನೆ. ಟ್ರೇಲರ್ ಹಾಗೂ ಸಿ‌ನಿಮಾ‌‌ ಎರಡು ಬಹಳ ಇಷ್ಟವಾಗಿದೆ. ವಿಹಾನ್ ಹಾಗು ಅಂಕಿತ ಇಬ್ಬರದು ಪ್ರಶಸ್ತಿ ಬರುವಂತಹ ಅಭಿನಯ. ಜತೆಗೆ ಮಯೂರಿ ಕೆಲವೇ ಸನ್ನಿವೇಶದಲ್ಲಿ ಕಾಣಿಸಿಕೊಂಡರೂ ಎಲ್ಲರ ಗಮನ ಸೆಳೆಯುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಟ್ರೇಲರ್ ಬಿಡುಗಡೆಯಾಗಿದೆ. ಸೆಪ್ಟೆಂಬರ್ 5 ಚಿತ್ರ ತೆರೆ ಕಾಣಲಿದೆ. ನಾನು ಯಾವುದಕ್ಕೂ ಬೇಗ ಕಾಂಪ್ರಮೈಸ್ ಆಗುವುದಿಲ್ಲ.‌ ಆದರೆ ನನ್ನ ತಂಡ ಟ್ರೇಲರ್ ಅನ್ನು ಎರಡೇ ದಿನದಲ್ಲಿ‌‌ ಸಿದ್ದ ಮಾಡಿತು. ನನಗೂ ನೋಡಿ ಖುಷಿಯಾಯಿತು. ಇನ್ನು, ನಿರ್ಮಾಪಕ ರಕ್ಷಿತ್ ಶೆಟ್ಟಿ ಸೇರಿದಂತೆ ಇಡೀ ತಂಡದ ಸಹಕಾರದಿಂದ ಚಿತ್ರ ಕೂಡ ಚೆನ್ನಾಗಿ ಮೂಡಿಬಂದಿದೆ. ವಿಹಾನ್, ಅಂಕಿತ ಅಮರ್ ಹಾಗೂ ಮಯೂರಿ ಅವರ ಜತೆಗೆ ಈ ಚಿತದಲ್ಲಿ “ಗೀತಾಂಜಲಿ” ಚಿತ್ರದ ಖ್ಯಾತಿಯ ಗಿರಿಜಾ ಶೆಟ್ಟರ್ ಅಭಿನಯಿಸಿದ್ದಾರೆ. ಇಪ್ಪತ್ತು ವರ್ಷಗಳ ನಂತರ ಅವರು ಮತ್ತೆ ನಮ್ಮ ಚಿತ್ರದಲ್ಲಿ ನಟಿಸಿದ್ದು, ಬಹಳ ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಸಹಕಾರ, ಪ್ರೋತ್ಸಾಹ ಇರಲಿ ಎಂದರು ಚಂದ್ರಜಿತ್ ಬೆಳ್ಳಿಯಪ್ಪ.

ನಟ ವಿಹಾನ್ ಮಾತನಾಡಿ, ಹಾಡು ಎಲ್ಲರಿಗೂ ಇಷ್ಟವಾಗಿದೆ ಸಿನಿಮಾ ಕೂಡ ಇಷ್ಟವಾಗಲಿದೆ. ಸಿನಿಮಾ ನೋಡಿದವರು ಇನ್ನಷ್ಟು ಜನರನ್ನು ಚಿತ್ರಮಂದಿರಕ್ಕೆ ಕರೆತರುತ್ತಾರೆ ಎಂಬ ಭರವಸೆ ಇದೆ. ನಿರ್ದೇಶಕ ಚಂದ್ರಜಿತ್ ಹೇಳಿದ ಕಥೆ ಆಸಕ್ತಿಕರವಾಗಿತ್ತು. ಪ್ರತಿಭೆ ನೋಡಿ ಆಯ್ಕೆ ಮಾಡಿಕೊಳ್ಳುವಲ್ಲಿ ರಕ್ಷಿತ್ ಶೆಟ್ಟಿ ಕೂಡ ಒಬ್ಬರು. ಸಿನಿಮಾಗೆ ಆಯ್ಕೆಯಾದ ಮೇಲೆ ಅವರಿಗೆ ಮೆಸೇಜ್ ಮಾಡಿ ಧನ್ಯವಾದ ಹೇಳಿದ್ದೆ ಎಂದರು.

ಇದನ್ನೂ ಓದಿ: Village Administrative Officer: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅಪ್ಲೈ ಮಾಡಿದವರು ಗಮನಿಸಿ; ಅರ್ಜಿ, ಶುಲ್ಕ ಸ್ಥಿತಿ ಪರಿಶೀಲಿಸುವ ವಿಧಾನ ಇಲ್ಲಿದೆ

ನಟಿ ಅಂಕಿತ ಅಮರ್ ಮಾತನಾಡಿ, ಪ್ರತಿಯೊಬ್ಬರಿಗೂ ಸಾಕಷ್ಟು ಕನಸುಗಳಿವೆ. ಕನಸು, ಹೊಂಬಿಸಲಾಗಿ ಬಂದ ಚಿತ್ರ ಇಬ್ಬನಿ‌ ತಬ್ಬಿದ ಇಳೆಯಲಿ ಚಿತ್ರ. ಒಂದು ರೀತಿ ಮ್ಯಾಜಿಕ್ ಕ್ರಿಯೇಟ್ ಮಾಡಿದೆ “ಇಬ್ಬನಿ ತಬ್ಬಿದ ಇಳೆಯಲಿ”. ಈ ಚಿತ್ರದಲ್ಲಿ ಸಂದರ್ಭ ಖಳನಾಯಕ. ಸಂದರ್ಭದ ಅನುಸಾರ ಪಾತ್ರಗಳ ಪರಿಚಯ ಮಾಡಿಸಿದ್ದಾರೆ. ಕಲಾವಿದರಿಗೆ ನಿರ್ದೇಶಕ ಎನ್ನುವ ರೋಲ್ ಬಹು ಮುಖ್ಯ. ಪ್ರತಿಯೊಂದು ನಿರ್ದೇಶಕ ಚಂದ್ರಜಿತ್ ಅವರಿಂದ ಆಗಿರುವುದು. ಪ್ರೀತಿಯ ಆಚರಣೆಯನ್ನು ಸಂಗೀತ ಮತ್ತು ವಿಶ್ಯುಯಲ್ ಮೂಲಕ ಕಟ್ಟಿಕೊಡಲಾಗಿದೆ. ಈ ಆಚರಣೆಗೆ ಮತ್ತಷ್ಟು ಕಳೆ ಬರಬೇಕಾದರೆ ಚಿತ್ರಮಂದಿರಕ್ಕೆ ಬಂದು ಎಲ್ಲರೂ ಸಿನಿಮಾ‌ ನೋಡಿ ಹೊಸ ಕಲಾವಿದರು ಹಾಗೂ ತಂತ್ರಜ್ಞರಿಗೆ ಪ್ರೋತ್ಸಾಹ ನೀಡಿ ಎಂದು ಕೇಳಿಕೊಂಡರು.

ನಟಿ ಮಯೂರಿ ನಟರಾಜ್ ಮಾತನಾಡಿ, ಟ್ರೇಲರ್ ಬಿಡುಗಡೆಯಾಗಿರುವುದು ಖುಷಿ ಆಗಿದೆ. ಕಣ್ಣಲ್ಲೇ ಅಭಿನಯಿಸಬೇಕು ಎನ್ನುವುದು ಸವಾಲಾಗಿತ್ತು. ಸಿನಿಮಾ ನೋಡಿ ತಿಳಿಸಿ. ಹೊಸಬರು ಇರುವ ಚಿತ್ರವನ್ನು ಈ‌ ಮಟ್ಟವನ್ನು ತೆರೆಗೆ ತರುವುದು ದೊಡ್ಡ ವಿಷಯ. ಹೊಸಬರಿಗೂ ದೊಡ್ಡಮಟ್ಟದಲ್ಲಿ ಸಿನಿಮಾ ಮಾಡಲಿ ಎಂದು ಹಾರೈಸಿದರು.

ಪರಂವಃ ಸಂಸ್ಥೆಯ ಸಿಇಓ ಶ್ರೀನಿಶ್ ಶೆಟ್ಟಿ, ಚಿತ್ರ ಕನ್ನಡದಲ್ಲಿ ಮತ್ತೊಂದು ಬ್ಲಾಕ್ ಬ್ಲಸ್ಟರ್ ಚಿತ್ರವಾಗಲಿದೆ. ಚಿತ್ರ ನೋಡಿದ ತಂಡ ನಿರ್ದೇಶಕ ಚಂದ್ರಜಿತ್ ಅವರನ್ನು ತಬ್ಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದೇವೆ ಎಂದರು.

ಚಾರ್ಲಿ 777 ನಿರ್ದೇಶಕ ಕಿರಣ್ ರಾಜ್ ಮಾತನಾಡಿ, ಟ್ರೈಲರ್ ಚೆನ್ನಾಗಿ ಮೂಡಿಬಂದಿದೆ. ನಿರ್ದೇಶಕ ಚಂದ್ರಜಿತ್ ನಾನು ಕಿರಿಕ್ ಪಾರ್ಟಿಯಿಂದ ಜತೆಯಾಗಿ ಕೆಲಸ ಮಾಡಿದ್ದೇವೆ ಎಂದ ಅವರು, ಗೆಲ್ಲಲು ಎಲ್ಲಾ ಅರ್ಹತೆ ಇರುವ ಸಿನಿಮಾ. ಚಿತ್ರದಲ್ಲಿ ನನ್ನಗೊಂದು ಪಾತ್ರ ನೀಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: Vande Bharat Express: ಇನ್ನು ಮುಂದೆ ತುಮಕೂರಿನಲ್ಲೂ ನಿಲ್ಲಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು; ಟಿಕೆಟ್‌ ದರ ಎಷ್ಟು?

ಸಂಗೀತ ನಿರ್ದೇಶಕ ಗಗನ್ ಬಡೇರಿಯಾ, ಛಾಯಾಗ್ರಾಹಕ ಶ್ರೀವತ್ಸನ್ ಸೆಲ್ವರಾಜನ್, ಸಂಕಲನಕಾರ ರಕ್ಷಿತ್ ಕಾಪು ಮತ್ತಿತರು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.

Continue Reading
Advertisement
Rohit Sharma
ಕ್ರೀಡೆ36 mins ago

Rohit Sharma: ಪಾರ್ಕ್​ನಲ್ಲಿ ಅಭ್ಯಾಸ ನಡೆಸಿದ ರೋಹಿತ್​; ವಿಡಿಯೊ ವೈರಲ್​

Chain snatching Case
ಕ್ರೈಂ48 mins ago

Chain snatching Case: ಆನ್‌ಲೈನ್‌ ಬೆಟ್ಟಿಂಗ್ ಚಟಕ್ಕೆ ಬಿದ್ದು ಮೈತುಂಬ ಸಾಲ ಮಾಡಿದ; ಚೈನ್ ಸ್ನಾಚಿಂಗ್‌ಗೆ ಇಳಿದು ಸಿಕ್ಕಿಬಿದ್ದ

Polluted Water
ಕರ್ನಾಟಕ1 hour ago

Polluted Water: ಕಲುಷಿತ ನೀರಿಗೆ ಮತ್ತೊಂದು ಬಲಿ; ಚಿಕಿತ್ಸೆ ಫಲಿಕಾರಿಯಾಗದೆ ಮಹಿಳೆ ಸಾವು

Wild Animals Attack
ಕರ್ನಾಟಕ2 hours ago

Wild Animals Attack: ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ರೈತ ಬಲಿ

unified pension scheme
ಪ್ರಮುಖ ಸುದ್ದಿ4 hours ago

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Sunita Williams
ದೇಶ4 hours ago

Sunita Williams: ಮುಂದಿನ ವರ್ಷ ಫೆಬ್ರುವರಿಯಲ್ಲಿ ಭೂಮಿಗೆ ಮರಳಲಿದ್ದಾರೆ ಸುನೀತಾ ವಿಲಿಯಮ್ಸ್;‌ ನಾಸಾ ಘೋಷಣೆ

karnataka weather forecast
ಮಳೆ4 hours ago

Karnataka Weather : ಬೆಂಗಳೂರು ಸೇರಿದಂತೆ ಉಡುಪಿ, ಉತ್ತರ ಕನ್ನಡದಲ್ಲಿಂದು ಭಾರಿ ಮಳೆ ಎಚ್ಚರ

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯವರ ಬಹು ದಿನಗಳ ಕನಸು ನನಸು; ಕುಟುಂಬದ ಆಪ್ತರಿಂದ ಶುಭ ಸುದ್ದಿ

Rahul Gandhi
ದೇಶ10 hours ago

Rahul Gandhi: ಮಿಸ್‌ ಇಂಡಿಯಾ ಪಟ್ಟಿಯಲ್ಲಿ ದಲಿತ, ಬುಡಕಟ್ಟು, ಒಬಿಸಿ ಮಹಿಳೆಯರು ಇಲ್ಲವೇ ಇಲ್ಲ-ರಾಹುಲ್‌ ಗಾಂಧಿ ಹೊಸ ಆರೋಪ

Sudha Murthy
ಬೆಂಗಳೂರು11 hours ago

Sudha Murthy: ವೈದ್ಯಕೀಯ ಸೇವೆಯಲ್ಲಿ ಬದ್ಧತೆ, ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ19 hours ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌