ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ (National award winning) ನಿರ್ದೇಶಕ ಬ್ಲೆಸ್ಸಿ (Director blessy) ಸಾರಥ್ಯದ ಪೃಥ್ವಿರಾಜ್ ಸುಕುಮಾರನ್ (Prithviraj Sukumaran) ಮತ್ತು ಅಮಲಾ ಪಾಲ್ (Amala Paul) ನಟನೆಯ ವಿಭಿನ್ನ ಮತ್ತು ಬಹು ನಿರೀಕ್ಷೆಯ ಚಿತ್ರ ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾ ಇಂದು (ಮಾ.28) ರಿಲೀಸ್ ಆಗಿದೆ.
ಇದೀಗ ಸಿನಿಮಾ ಕಂಡು ಪ್ರೇಕ್ಷಕರು ಹಾಡಿ ಹೊಗಳಿದ್ದಾರೆ. ಮುಖ್ಯವಾಗಿ ಪೃಥ್ವಿರಾಜ್ ಸುಕುಮಾರನ್ ಅವರ ನಟನೆಯನ್ನು ಮೆಚ್ಚಿಕೊಂಡಾಡಿದ್ದಾರೆ.
ಒಬ್ಬ ಅಭಿಮಾನಿ, “ಸುಂದರವಾದ ಹಿನ್ನೆಲೆ ಧ್ವನಿ, ಹೃದಯ ಸ್ಪರ್ಶಿಸುವ ಹಾಡುಗಳು, ಪೃಥ್ವಿರಾಜ್ ಅವರ ಸುಂದರ ನಟನೆ, ಮೂರರಿಂದ ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆಯುವುದು ಖಚಿತ” ಎಂದು ಬರೆದಿದ್ದಾರೆ.
ಇದನ್ನೂ ಓದಿ: Prithviraj Sukumaran: ಹೀಗಿದೆ ನೋಡಿ ʼಆಡು ಜೀವಿತಂʼ ಟ್ರೈಲರ್: ಮಾ. 28ಕ್ಕೆ ತೆರೆಗೆ
The Perfect Fan Boy Tribute Which Gave Ultimate Goosebumps To Each And Every Fans.!🤌🔥#Mohanlal in #PrithvirajSukumaran film 💥#5YearsOfLucifer#Lucifer #L2E #Empuraan #AADUJEEVITHAM pic.twitter.com/8GVLGa1sbL
— sᴀʀᴀᴛʜ (@Sarath_Offl3) March 28, 2024
ಮತ್ತೊಬ್ಬರು ʻʻಮೊದಲಾರ್ಧ ಚೆನ್ನಾಗಿದೆ. ಪೃಥ್ವಿರಾಜ್ ಸುಕುಮಾರನ್ ಅವರ ಅಭಿನಯ ಸಖತ್ʼʼಎಂದು ಬರೆದಿದ್ದಾರೆ.
The Perfect Fan Boy Tribute Which Gave Ultimate Goosebumps To Each And Every Fans.!🤌🔥#Mohanlal in #PrithvirajSukumaran film 💥#5YearsOfLucifer#Lucifer #L2E #Empuraan #AADUJEEVITHAM pic.twitter.com/8GVLGa1sbL
— sᴀʀᴀᴛʜ (@Sarath_Offl3) March 28, 2024
ಇಂಗ್ಲಿಷ್ ಸಬ್‌ಟೈಟಲ್ ಸ್ವಲ್ಪ ಸರಿಯಿರಲಿಲ್ಲ. ಡಬ್ಬಿಂಗ್ ಆವೃತ್ತಿಯಿದ್ದರೂ, ಹೆಚ್ಚಿನ ಪ್ರೇಕ್ಷಕರು ಇಂಗ್ಲಿಷ್ ಸಬ್‌ಟೈಟಲ್‌ಗೆ ಪ್ರಾಮುಖ್ಯತೆ ನೀಡುತ್ತಾರೆ ʼʼಎಂದು ಬರೆದುಕೊಂಡಿದ್ದಾರೆ.
Wtt🤯🤯 when i opened to book ticket for #TheGoatLife movie the house is housefull in patna😭🔥🔥
— Alone😔 (@HarshaV06031805) March 28, 2024
Planning to watch tomorrow😔
All the best @PrithviOfficial anna from #Prabhas fans❤️#AADUJEEVITHAM #PrithvirajSukumaran pic.twitter.com/AXqPcz26fA
ಆಡು ಜೀವಿತಂ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.
ಆಡು ಜೀವಿತಂ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.
ಏನಿದೆ ಆಡುಜೀವಿತಂ ಸಿನಿಮಾ ಕಥೆ?
ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್ GOAT LIFE ಎಂದಿದೆ.
ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ.