Priyanka Upendra: ಅಭಿಮಾನಿಗಳ ಜತೆ ಪ್ರಿಯಾಂಕಾ ಉಪೇಂದ್ರ ಬರ್ತಡೇ ಸೆಲೆಬ್ರೇಶನ್! - Vistara News

South Cinema

Priyanka Upendra: ಅಭಿಮಾನಿಗಳ ಜತೆ ಪ್ರಿಯಾಂಕಾ ಉಪೇಂದ್ರ ಬರ್ತಡೇ ಸೆಲೆಬ್ರೇಶನ್!

Priyanka Upendra: ಡ್ರೋನ್ ಮೂಲಕ ಚಿತ್ರದ 2ನೇ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಹುಟ್ಟುಹಬ್ಬವನ್ನು ಮತ್ತಷ್ಟು ವಿಭಿನ್ನವಾಗಿಸಿದರು.

VISTARANEWS.COM


on

Priyanka Upendra birthday celebration with fans!
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಪ್ರಿಯಾಂಕಾ ಉಪೇಂದ್ರ (Priyanka Upendra) ಅವರಿಗೆ ನವೆಂಬರ್ 12 ಹುಟ್ಟುಹಬ್ಬದ ಸಂಭ್ರಮ. ರಿಯಲ್ ಸ್ಟಾರ್ ಪತ್ನಿಗೆ ಅಭಿಮಾನಿಗಳಿಂದ ಶುಭಾಶಯಗಳು ಮಹಾಪೂರವೇ ಹರಿದು ಬರುತ್ತಿದ್ದು ಸಾಮಾಜಿಕ ಜಾಣತನದಲ್ಲಿ ಪೋಸ್ಟರ್ ಶೇರ್ ಮಾಡಿ ಸಂಭ್ರಮಿಸುತಿದ್ದಾರೆ. ಪ್ರಿಯಾಂಕಾ ಅವರು ಇಂದು ಅಭಿಮಾನಿಗಳು ಹಾಗೂ ಕುಟುಂಬದ ಜೊತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ಕ್ಯಾಪ್ಚರ್ ಸಿನಿಮಾ ತಂಡ ಪ್ರಿಯಾಂಕಾ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಸಂಭ್ರಮಿಸಿದರು. ವಿಭಿನ್ನವಾದ ಕೇಕ್ ತಯಾರಿಸಿದ್ದ ಕ್ಯಾಪ್ಚರ್ ತಂಡ ಪ್ರಿಯಾಂಕ ಅವರಿಗೆ ಬಿಗ್ ಸರ್ಪ್ರೈಸ್ ನೀಡಿದರು‌. ಇದೇ ಸಮಯದಲ್ಲಿ ಕ್ಯಾಪ್ಚರ್ ತಂಡದಿಂದ ಪ್ರಿಯಾಂಕ ಅವರ ಮತ್ತೊಂದು ಪೋಸ್ಟರ್ ಅನ್ನು ರಿಲೀಸ್ ಮಾಡಲಾಯಿತು. ಡ್ರೋನ್ ಮೂಲಕ ಚಿತ್ರದ 2ನೇ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಹುಟ್ಟುಹಬ್ಬವನ್ನು ಮತ್ತಷ್ಟು ವಿಭಿನ್ನವಾಗಿಸಿದರು.

ಅದ್ಧೂರಿಯಾಗಿ ನೆರವೇರಿದ ಪ್ರಿಯಾಂಕ ಹುಟ್ಟು ಹಬ್ಬಕ್ಕೆ ಪತಿ ರಿಯಲ್ ಸ್ಟಾರ್ ಉಪೇಂದ್ರ ಕೂಡ ಸಾತ್ ನೀಡಿದರು. ಪತ್ನಿ ಪ್ರಿಯಾಂಕಾ ಅವರಿಗೆ ಕೇಕ್ ತಿನಿಸುವ ಮೂಲಕ ಶುಭಾಶಯ ಹೇಳಿದರು. ಜತೆಗೆ ಕ್ಯಾಪ್ಚರ್ ಚಿತ್ರ ತಂಡಕ್ಕೂ ಶುಭಾ ಹಾರೈಸಿದರು. ಕ್ಯಾಪ್ಚರ್ ತಂಡದ ವಿಭಿನ್ನ ಪ್ರಯತ್ನಕ್ಕೆ ಪ್ರಿಯಾಂಕಾ ಉಪೇಂದ್ರ ಸಂತಸ ವ್ಯಕ್ತಪಡಿಸಿದರು. ಕೇಕ್ ಕತ್ತರಿಸಿ ಮಾಧ್ಯಮದ ಜೊತೆ ಮಾತನಾಡಿದ ಪ್ರಿಯಾಂಕಾ ʻʻ’ದೀಪಾವಳಿಗೆ ಬರ್ತಡೇ ಬಂದಿದ್ದು ತುಂಬಾ ಖುಷಿ ಇದೆ.
ಉಪೇಂದ್ರ ಅವರ ಬರ್ತಡೇ ಗಣೇಶ ಹಬ್ಬಕ್ಕೆ ಬರುತ್ತೆ. ತುಂಬಾ ವಿಶೇಷವಿದು. ನನಗೆ ಸಿನಿಮಾ ಅಂದರೆ ತುಂಬಾ ಇಷ್ಟ, ಮದುವೆ ಅದ್ಮೇಲೂ ನನ್ನ ಗ್ರಾಫ್ ಹೀಗೆ ಹೋಗುತ್ತೆ ಎಂದು ಅಂದ್ಕೊಂಡಿರಲಿಲ್ಲ. ಒಳ್ಳೆ ಸಿನಿಮಾಗೆ ಆಡಿಯನ್ಸ್ ಸಪೋರ್ಟ್ ಇದ್ದೇ ಇರುತ್ತೆ, ಇದು ನನ್ನ ಟೀಂ ಎಫರ್ಟ್’ ಎಂದರು.

ಇದನ್ನೂ ಓದಿ: Priyanka Upendra Interview: ಸ್ಯಾಂಡಲ್‌ವುಡ್‌ ನಟಿ ಪ್ರಿಯಾಂಕಾ ಉಪೇಂದ್ರ ಸಿಗ್ನೇಚರ್‌ ಸ್ಟೈಲ್‌ ಏನು?

ಜತೆಗೆ ಇಂದೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ರಾಧಿಕಾ ಕುಮಾರಸ್ವಾಮಿ ಅವರಿಗೂ ವಿಶ್ ಮಾಡಿದರು. ಸದ್ಯ ಪ್ರಿಯಾಂಕಾ ಅವರು ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಕ್ಯಾಪ್ಚರ್ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ. ಲೋಹಿತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕ್ಯಾಪ್ಚರ್ ಸಿನಿಮಾದ ಪ್ರಮೋಷನ್ ಭರ್ಜರಿಯಾಗಿ ನಡೆಯುತ್ತಿದೆ. ಟೈಟಲ್ ಮತ್ತು ಪೋಸ್ಟರ್ ಮೂಲಕ ಸದ್ದು ಮಾಡುತ್ತಿರುವ ಕ್ಯಾಪ್ಚರ್ ಡಿಸೆಂಬರ್ ಮೊದಲ ವಾರದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.

ಕ್ಯಾಪ್ಚರ್ ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ಅವರ ಸಹೋದರ ರವಿರಾಜ್ ಅವರು ತಮ್ಮ ಶ್ರೀ ದುರ್ಗಾಪರಮೇಶ್ವರಿ ಬ್ಯಾನರ್ ಮೂಲಕ ನಿರ್ಮಾಣ ಮಾಡಿದ್ದಾರೆ. ಸಿಸಿಟಿವಿ ಕಾನ್ಸೆಪ್ಟ್ ನಲ್ಲಿ ಮೂಡಿ ಬಂದಿರುವ ಕ್ಯಾಪ್ಚರ್ ಸಿನಿಮಾ ಬಾರಿ ಕುತೂಹಲ ಮೂಡಿಸಿದ್ದು ಅಭಿಮಾನಿಗಳು ಸಹ ಕಾತರದಿಂದ ಕಾಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Rashmika Mandanna: ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿದರು.

VISTARANEWS.COM


on

Rashmika Mandanna Reacts To India Decade of Growth Amid Lok Sabha Polls
Koo

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯ 5ನೇ ಹಂತದ ಮತದಾನದ ಹೊಸ್ತಿಲಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿವೃದ್ದಿಗೆ ಮತ ನೀಡಿ ಎಂದು ಹೇಳಿದ್ದಾರೆ. ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾಧ್ಯಮದ ಜತೆ ಮಾತನಾಡಿದ್ದಾರೆ. ವಾಣಿಜ್ಯ ನಗರಿ ಮುಂಬೈಯಲ್ಲಿ ದೇಶದ ಅತಿ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (Atal Setu) ಎಂದು ಕರೆಯಲಾಗುವ ‘ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್’ (Mumbai Trans Harbour Link-MTHL) ಅನ್ನು ಪ್ರಧಾನಿ ನರೇಂದ್ರ ಮೋದಿ ಜನವರಿಯಲ್ಲಿ ಲೋಕಾರ್ಪಣೆ ಮಾಡಿದ್ದರು. ಈ ಅಟಲ್‌ ಸೇತು ದೇಶದ ಅತೀ ದೊಡ್ಡ ಮತ್ತು ಜಗತ್ತಿನ 12ನೇ ಅತೀ ದೊಡ್ಡ ಸಮುದ್ರ ಸೇತುವೆ ಎನಿಸಿಕೊಂಡಿದೆ. ಈ ಸೇತುವೆಯನ್ನು ಈಗ ಸಾರ್ವಜನಿಕರು ನೋಡಬಹುದು.

ಮುಂಬೈ ಅಟಲ್ ಸೇತುವೆ ಮಾರ್ಗಮಧ್ಯೆ ಪ್ರಯಾಣಿಸುತ್ತ ರಶ್ಮಿಕಾ ಮಾತನಾಡಿ “ಎರಡು ಗಂಟೆಗಳ ಪ್ರಯಾಣವನ್ನು 20 ನಿಮಿಷಗಳಲ್ಲಿ ಮಾಡಬಹುದು. ಹಾಗೆ, ನೀವು ಅದನ್ನು ನಂಬುವುದಿಲ್ಲ! ಈ ರೀತಿಯ ಏನಾದರೂ ಸಾಧ್ಯ ಎಂದು ಯಾರು ಭಾವಿಸಿದ್ದರು. ಮುಂಬೈಯಿಂದ ಮುಂಬೈಗೆ, ಗೋವಾದಿಂದ ಮುಂಬೈವರೆಗೆ ಹಾಗೂ ಬೆಂಗಳೂರುನಿಂದ ಮುಂಬೈವರೆಗೆ ಎಲ್ಲಾ ಪ್ರಯಾಣಗಳನ್ನು ತುಂಬಾ ಸುಲಭವಾಗಿ ಮಾಡಲಾಗಿದೆ. ಅದೂ ಕೂಡ ಅದ್ಭುತ ಮೂಲಸೌಕರ್ಯದೊಂದಿಗೆ ಇದು ನನಗೆ ಹೆಮ್ಮೆ ತರುತ್ತದೆ” ಎಂದು ರಶ್ಮಿಕಾ ಹೇಳಿದ್ದಾರೆ.

ಇದನ್ನೂ ಓದಿ: Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

ರಶ್ಮಿಕಾ ಮಾತು ಮುಂದುವರಿಸಿ ʻʻಕಳೆದ 10 ವರ್ಷಗಳಲ್ಲಿ ನಮ್ಮ ದೇಶದ ಅಭಿವೃದ್ಧಿ ಗಮನಿಸಿದರೆ ಇನ್ನು ತಡೆಯಲು ಸಾಧ್ಯವಿಲ್ಲ. “ಈಗ ಭಾರತ ಯಾವುದಕ್ಕೂ ನೋ ಎನ್ನುವುದಿಲ್ಲ. ನಮ್ಮ ದೇಶದ ಮೂಲಸೌಕರ್ಯ, ಯೋಜನೆ, ರಸ್ತೆ ಯೋಜನೆ ಅದ್ಭುತವಾಗಿದೆ. ಈಗ ಇದು ನಮ್ಮ ಸಮಯ ಎಂದು ನಾನು ಭಾವಿಸುತ್ತೇನೆ! ಏಳು ವರ್ಷಗಳಲ್ಲಿ 20 ಕಿ.ಮೀ ಸೇತುವೆ ನಿರ್ಮಾಣವಾಗಿದೆ. ಚೆನ್ನಾಗಿಯೂ ಇದೆ. ಇದನ್ನು ನೋಡಿ ನನಗೆ ಮಾತೇ ಬರುತ್ತಿಲ್ಲ” ಎಂದು ಹೇಳಿದರು.

ಸದ್ಯ ದೇಶದಲ್ಲಿ 2024ರ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ಯುವ ಪೀಳಿಗೆ ಜವಾಬ್ದಾರಿಯುತವಾಗಿ ಮತ ಚಲಾಯಿಸುವಂತೆ ರಶ್ಮಿಕಾ ಮನವಿ ಮಾಡಿದ್ದಾರೆ, “ಯುವ ಪೀಳಿಗೆ – ಯುವ ಭಾರತ – ಅಂತಹ ವೇಗದಲ್ಲಿ ಬೆಳೆಯುತ್ತಿದೆ. ಭಾರತವು ಅತ್ಯಂತ ಬುದ್ಧಿವಂತ ದೇಶ ಎಂದು ಹೇಳಲು ಬಯಸುತ್ತೇನೆ! ಯುವ ಭಾರತೀಯರು ಮತ ಚಲಾಯಿಸಬೇಕು. ಜನರು ನಿಜವಾಗಿಯೂ ನೋಡುತ್ತಿದ್ದಾರೆ, ಜನರು ತುಂಬಾ ಜವಾಬ್ದಾರಿಯುತರಾಗಿದ್ದಾರೆ. ಅದರ ಬಗ್ಗೆ ತುಂಬಾ ಸ್ಮಾರ್ಟ್ ಆಗಿದ್ದಾರೆ. ಅವರು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದ್ದಾರೆ ಎಂದು ನಾನು ಭಾವಿಸುತ್ತೇನೆ” ಎಂದು ರಶ್ಮಿಕಾ ಹೇಳಿದ್ದಾರೆ. ಈ ಹೇಳಿಕೆ ಬೆನ್ನಲ್ಲೇ ನಟಿಗೆ ಕೆಲವರು ಮೊದಲು ನೀವು ವೋಟ್‌ ಹಾಕಿ ಎಂದು ಕಮೆಂಟ್‌ ಮಾಡಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಸಿನಿಮಾ

Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

Actor Dhanush: ಕಾಲಿವುಡ್‌ ನಟ ಧನುಷ್‌ ಮತ್ತು ಐಶ್ವರ್ಯಾ ರಜನಿಕಾಂತ್‌ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ ಅವರು ಇಬ್ಬರ ಬಗ್ಗೆ ಶಾಕಿಂಗ್‌ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರು ಪರಸ್ಪರ ಮೋಸ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Actor Dhanush
Koo

ಚೆನ್ನೈ: ಈಗಾಗಲೇ ಕಾಲಿವುಡ್‌ ನಟ ಧನುಷ್‌ (Actor Dhanush) ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ (Aishwarya Rajinikanth) ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. 2022ರ ಜನವರಿ 17ರಂದು ಧನುಷ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ 18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವುದಾಗಿ ಘೋಷಿಸಿದ್ದರು. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ (Suchitra) ಅವರು ಧನುಷ್‌ ಮತ್ತು ಐಶ್ವರ್ಯಾ ಅವರಿಗೆ ಸಂಬಂಧಿಸಿ ಶಾಕಿಂಗ್‌ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೂ ಧನುಷ್‌ ಬಗ್ಗೆ ಆರೋಪ ಹೊರಿಸಿದ್ದ ಸುಚಿತ್ರಾ ಸಂದರ್ಶನವೊಂದರಲ್ಲಿ, ಧನುಷ್‌ ಮತ್ತು ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯೂಟ್ಯೂಬ್‌ ಚಾನಲ್‌ ಕುಮುದಂಗೆ ನೀಡಿದ ಸಂದರ್ಶನಲ್ಲಿ ಸುಚಿತ್ರಾ ಈ ಬಗ್ಗೆ ಮಾತನಾಡಿದ್ದಾರೆ. ಧನುಷ್‌ ಮತ್ತು ಐಶ್ವರ್ಯಾ ಇಬ್ಬರೂ ವ್ಯವಸ್ಥಿತವಾಗಿ ಪರಸ್ಪರ ಮೋಸ ಮಾಡಿಕೊಂಡಿದ್ದ ದಂಪತಿ ಎಂದು ಸುಚಿತ್ರಾ ಕರೆದಿದ್ದಾರೆ. ಇವರು ಮದುವೆಯಾದ ಮೇಲೆ ಆಗಾಗ ಇತರರೊಂದಿಗೆ ಡೇಟಿಂಗ್ ಹೋಗುತ್ತಿದ್ದರು ಎಂದೂ ಹೇಳಿದ್ದಾರೆ. ಧನುಷ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸುಚಿತ್ರಾ, ಐಶ್ವರ್ಯಾ ಅವರನ್ನು ಕೆಟ್ಟ ತಾಯಿ ಎಂದು ಜರೆದಿದ್ದಾರೆ ಮತ್ತು ಈ ವಿಚಾರದಲ್ಲಿ ಧನುಷ್‌ ಪರವಾಗಿ ನಿಂತಿದ್ದಾರೆ. ಧನುಷ್ ಪ್ರೀತಿಯ ತಂದೆಯಾಗಿ ತಮ್ಮ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಐಶ್ವರ್ಯಾ ಅವರು ಯಾವಾಗಲೂ ಧನುಷ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳುತ್ತಾರೆ. ಆದರೆ ಅವರೂ ಕೂಡ ಅದನ್ನೇ ಮಾಡಿದ್ದಾರೆ. ಆಕೆಗೊಂದು ನ್ಯಾಯ ಆತನಿಗೊಂದು ನ್ಯಾಯವೇ? ಎಂದು ಸುಚಿತ್ರಾ ಪ್ರಶ್ನಿಸಿದ್ದಾರೆ. “ಅವರು ಬಾರ್‌ನಲ್ಲಿ ಕುಳಿತು ಡೇಟಿಂಗ್ ನಡೆಸುತ್ತಿರುವ ವ್ಯಕ್ತಿಯೊಂದಿಗೆ ಮದ್ಯ ಸೇವಿಸಿದ್ದಾರೆ” ಎಂದಿದ್ದಾರೆ.

ತಮ್ಮ ಮಾಜಿ ಪತಿ ಕಾರ್ತಿಕ್ ವಿರುದ್ಧವೂ ಸುಚಿತ್ರಾ ಗಂಭೀರ ಆರೋಪ ಮಾಡಿದ್ದಾರೆ. ʼʼಆತ (ಕಾರ್ತಿಕ್) ಸಲಿಂಗಕಾಮಿ. ಆದರೆ ಅದನ್ನು ಹೇಳಲು ಅವನಿಗೆ ಧೈರ್ಯವಿಲ್ಲ. ಪತಿ ಸಲಿಂಗಕಾಮಿ ಎಂದು ನನಗೆ ಮದುವೆಯಾದ 2 ವರ್ಷಕ್ಕೆ ತಿಳಿಯಿತು. ಧನುಷ್ ಹಾಗೂ ನನ್ನ ಮಾತಿ ಪತಿ ಒಟ್ಟಿಗೆ ಕೋಣೆಯಲ್ಲಿ ಏನು ಮಾಡುತ್ತಿದ್ದರು? ಪಾರ್ಟಿಗಳಲ್ಲಿ ಏನು ನಡೆಯುತ್ತಿತ್ತು?ʼʼ ಎಂದು ಸುಚಿತ್ರಾ ಕೇಳಿದ್ದಾರೆ.

ಧನುಷ್ ವಿರುದ್ಧ ಆರೋಪ ಹೊರಿಸಿದ್ದ ಸುಚಿತ್ರಾ

2017ರಲ್ಲಿ ಸುಚಿತ್ರಾ ಅವರು ಧನುಷ್ ಸಹಾಯಕ ತಮ್ಮ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು. ಆ ಬಳಿಕ ಧನುಷ್ ಬಗ್ಗೆಯೂ ದೂರಿದ್ದರು. ಧನುಷ್ ಓರ್ವ ಡ್ರಗ್ ಅಡಿಕ್ಟ್ ವ್ಯಕ್ತಿ, ತಮಗೆ ಕಿರುಕುಳ ನೀಡಿದ್ದರು ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ಧನುಷ್‌ ವಿರುದ್ದ ಮಾತನಾಡಿ ಸಂಚಲನ ಮೂಡಿಸಿದ್ದಾರೆ.

ಕಳೆದ ತಿಂಗಳು ಧನುಷ್‌ ಮತ್ತು ಐಶ್ವರ್ಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ʼʼಇಬ್ಬರೂ ಅಧಿಕೃತವಾಗಿ ಚೆನ್ನೈಯ ನ್ಯಾಯಾಲಯದಲ್ಲಿ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ವರ್ಷಗಳಿಂದ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅವರು ಪರಸ್ಪರ ಗೌರವ ಹೊಂದಿದ್ದಾರೆ. ಇದು ಸೌಹಾರ್ದಯುತ ಪ್ರಕ್ರಿಯೆಯಾಗಲಿದೆ” ಎಂದು ಮೂಲಗಳು ತಿಳಿಸಿವೆ.

ಸದ್ಯ ಧನುಷ್‌ ‌ʼರಾಯನ್‌ʼ ಚಿತ್ರದಲ್ಲಿ ನಟಿಸುವ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ರಾಷ್ಟ್ರ ಪಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಬಹುಭಾಷಾ ಸಿನಿಮಾ ʼಕುಬೇರʼದಲ್ಲಿಯೂ ಧನುಷ್‌ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಕನ್ನಡತಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಐಶ್ವರ್ಯಾ ರಜನಿಕಾಂತ್‌ ನಿರ್ರದೇಶನದ ʼಲಾಲ್‌ ಸಲಾಂʼ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ಅವರ ಮುಂದಿನ ಸಿನಿಮಾ ಇನ್ನಷ್ಟೆ ಘೋಷಣೆಯಾಗಬೇಕಿದೆ.

ಇದನ್ನೂ ಓದಿ: Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Continue Reading

ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

Kalki 2898 AD: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ ಕೂಡ ಒಂದು. ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಪ್ಯಾನ್‌ ಇಂಡಿಯಾ ಚಿತ್ರವಾಗಿ ತೆರೆಗೆ ಬರಲಿರುವ ಈ ಸಿನಿಮಾದ ಕನ್ನಡ ಮತ್ತು ಹಿಂದಿ ಅವತರಣಿಕೆಯ ತಮ್ಮ ಪಾತ್ರಕ್ಕೆ ನಾಯಕಿ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ. ಮೂಲತಃ ಕರ್ನಾಟಕವರಾದ ದೀಪಿಕಾ 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಬಳಿಕ ಕನ್ನಡತ್ತ ಮುಖ ಮಾಡಿರಲಿಲ್ಲ. ಈದೀಗ ಅವರು ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ಎನ್ನುವ ವಿಚಾರ ತಿಳಿದು ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

VISTARANEWS.COM


on

Kalki 2898 AD
Koo

ಮುಂಬೈ: ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಕಲ್ಕಿ 2898 ಎಡಿʼ (Kalki 2898 AD) ಕೂಡ ಒಂದು. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchanಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಚಿತ್ರದ ಬಗ್ಗೆ ಮಹತ್ವದ ಅಪ್‌ಡೇಟ್‌ ಹೊರ ಬಿದ್ದಿದ್ದು, ಕನ್ನಡ ಅವತರಣಿಕೆಯಲ್ಲಿ ತಮ್ಮ ಪಾತ್ರಕ್ಕೆ ದೀಪಿಕಾ ಪಡುಕೋಣೆ ಸ್ವತಃ ಡಬ್‌ ಮಾಡಲಿದ್ದಾರೆ ಎನ್ನಲಾಗಿದೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಜೂನ್‌ 27ರಂದು ಬಿಡುಗಡೆ

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Kalki 2898 – AD: ʻಪ್ರಾಜೆಕ್ಟ್‌ ಕೆʼ ಸಿನಿಮಾ ಟೈಟಲ್‌ ರಿವೀಲ್‌; ಪ್ರಭಾಸ್‌, ದೀಪಿಕಾ, ಅಮಿತಾಭ್‌ ಲುಕ್‌ ಔಟ್‌!

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading

ಟಾಲಿವುಡ್

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

Pushpa 2: ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

VISTARANEWS.COM


on

Pushpa 2 Allu Arjun fan recreates hook step on graduation day
Koo

ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ʻಪುಷ್ಪ 2ʼ (Pushpa 2) ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿತ್ತು. ‘ಪುಷ್ಪ 2’ ಚಿತ್ರದ ಮೊದಲ ಸಿಂಗಲ್ ‘ಪುಷ್ಪ ಪುಷ್ಪ’ ಬಿಡುಗಡೆ ಆದ ತಕ್ಷಣದಿಂದಲೇ ಟ್ರೆಂಡ್‌ ಆಗಿತ್ತು. ಅಲ್ಲು ಅರ್ಜುನ್‌ ಅವರ ಸ್ಟೈಲಿಶ್ ಸ್ಟೆಪ್ಸ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದರು. ಇದೀಗ ಈ ಸ್ಟೆಪ್ಸ್‌ವನ್ನು ಪದವಿ ವಿದ್ಯಾರ್ಥಿವೊಬ್ಬ ಪದವಿ ಪ್ರದಾನ ಮಾಡುವ ದಿನ ವೇದಿಕೆಯಲ್ಲಿ ‘ಪುಷ್ಪ ಪುಷ್ಪ’ ಸಾಂಗ್‌ ಸ್ಟೆಪ್ಸ್‌ ಹಾಕಿದ್ದಾನೆ. ವೇದಿಕೆ ಮೇಲೆ ಡ್ಯಾನ್ಸ್ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತ ಚಂದ್ರಬೋಸ್​ ಅವರು ತೆಲುಗಿನಲ್ಲಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಕನ್ನಡ ವರ್ಷನ್​ಗೆ ವರದರಾಜ್​ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು.

ಇದನ್ನೂ ಓದಿ: Pushpa 2: ಬರೋಬ್ಬರಿ 60 ಕೋಟಿ ರೂ.ಗೆ ‘ಪುಷ್ಪ 2’ ಆಡಿಯೊ ಹಕ್ಕು ಮಾರಾಟ?

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading
Advertisement
terror module
ದೇಶ41 seconds ago

Terror Module Bust: ಪಂಜಾಬ್‌ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದ ನಾಲ್ವರು ಅರೆಸ್ಟ್‌

woman murder case
ಕ್ರೈಂ5 mins ago

Murder Case: ಹುಬ್ಬಳ್ಳಿಯಲ್ಲಿ ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಕೊಲೆ

Rashmika Mandanna Reacts To India Decade of Growth Amid Lok Sabha Polls
ಟಾಲಿವುಡ್23 mins ago

Rashmika Mandanna: ʻನಮೋʼ ಸಾಧನೆಗೆ ಕಿರಿಕ್‌ ಬ್ಯೂಟಿ ರಶ್ಮಿಕಾ ಕ್ಲೀನ್‌ ಬೋಲ್ಡ್‌!

Job Alert
ಉದ್ಯೋಗ34 mins ago

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

viral video garbage bengaluru roads
ವೈರಲ್ ನ್ಯೂಸ್1 hour ago

Viral video: ʼಅಸಹ್ಯಕರ!ʼ ಬೆಂಗಳೂರಿನ ರಸ್ತೆಗಳ ಕಸದ ವಿಡಿಯೋ ಪೋಸ್ಟ್‌ ಮಾಡಿದ ಕಿರಣ್ ಮಜುಂದಾರ್ ಶಾ

Stone pelting
ದೇಶ1 hour ago

Stone Pelting: ಉತ್ತರಪ್ರದೇಶದಲ್ಲಿ ಗುಂಪು ಘರ್ಷಣೆ; ಕಲ್ಲು ತೂರಾಟ, ಕೇಳಿಬಂತು ಗುಂಡಿನ ಸಪ್ಪಳ

Crowd Funding
ದೇಶ1 hour ago

Crowd Funding: ಕಂದಮ್ಮನ ಚಿಕಿತ್ಸೆಗೆ ಹರಿದು ಬಂದ ನೆರವು; 3 ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

copper mine lift collapse
ಪ್ರಮುಖ ಸುದ್ದಿ2 hours ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ2 hours ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ2 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ14 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202416 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202420 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ20 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು21 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌