Site icon Vistara News

Pruthvi Ambaar | ಪೃಥ್ವಿ ಅಂಬಾರ್‌ ನಟನೆಯ ʻದೂರದರ್ಶನʼ ಸಿನಿಮಾ ಟೀಸರ್‌ ಔಟ್‌!

Pruthvi Ambaar (Doradarshan)

ಬೆಂಗಳೂರು: ದಿಯಾ ಸಿನಿಮಾ ಖ್ಯಾತಿಯ ಪೃಥ್ವಿ ಅಂಬಾರ್‌ (Pruthvi Ambaar) ನಾಯಕ ನಟನಾಗಿ ನಟಿಸಿರುವ ದೂರದರ್ಶನ ಸಿನಿಮಾದ ಟೀಸರ್‌ ಬಿಡುಗಡೆಗೊಂಡಿದೆ. ‘ದೂರದರ್ಶನ’ ಸಿನಿಮಾ ಸುಕೇಶ್ ಶೆಟ್ಟಿ ನಿರ್ದೇಶನಲ್ಲಿ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ ಸುಕೇಶ್ ಶೆಟ್ಟಿ.

ಈ ಚಿತ್ರ 80, 90 ದಶಕದಲ್ಲಿ ಹಳ್ಳಿಗಳಲ್ಲಿ ನಡೆಯುವ ಕಥೆಯನ್ನು ಒಳಗೊಂಡಿದೆ. ಹಳ್ಳಿಯೊಂದಕ್ಕೆ ಟಿವಿ (ದೂರದರ್ಶನ)ಯ ಆಗಮನವಾದ ಮೇಲೆ ಏನೆಲ್ಲ ಬದಲಾವಣೆ ಆಗುತ್ತದೆ ಎನ್ನುವುದು ಚಿತ್ರದ ಒನ್ ಲೈನ್ ಸ್ಟೋರಿ. ಡ್ರಾಮಾ ಹಾಗೂ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಅಯಾನ ನಾಯಕಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ | Actress Ramya | ಗೋಡೆಯಲ್ಲಿ ಅರಳಿದ ಸ್ಯಾಂಡಲ್‌ವುಡ್‌ ಪದ್ಮಾವತಿ : ಬಾದಲ್ ಕೈ ಚಳಕದ ವಿಡಿಯೊ ಇಲ್ಲಿದೆ!

ಉಗ್ರಂ ಮಂಜು, ಸುಂದರ್ ವೀಣಾ, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಸಿನಿಮಾದಲ್ಲಿದೆ. ಕೊನೆಯ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

ವಿ ಎಸ್ ಮೀಡಿಯಾ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ರಾಜೇಶ್ ಭಟ್ ದೂರದರ್ಶನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ವಾಸುಕಿ ವೈಭವ್ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ಪ್ರದೀಪ್ ಆರ್ ರಾವ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ | Rashmika Mandanna | ಎಲ್ಲವೂ ಪ್ರಾರಂಭವಾದ ದಿನ ಎಂದು ʻಕಿರಿಕ್‌ ಪಾರ್ಟಿʼ ಸಿನಿಮಾ ಪೋಸ್ಟರ್‌ ಹಂಚಿಕೊಂಡ ರಶ್ಮಿಕಾ ಮಂದಣ್ಣ!

Exit mobile version