Site icon Vistara News

Kannada New Movie: ಪೃಥ್ವಿ ಅಂಬಾರ್ ಅಭಿನಯದ ‘ದೂರದರ್ಶನ’ ಮಾರ್ಚ್ 3ಕ್ಕೆ ತೆರೆಗೆ

pruthvi ambaar dooradarshana film Release Date

ಬೆಂಗಳೂರು: ಸುಕೇಶ್ ಶೆಟ್ಟಿ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ದೂರದರ್ಶನ’ (Kannada New Movie) ಸಿನಿಮಾ ಸ್ಯಾಂಡಲ್ ವುಡ್ ಅಂಗಳದಲ್ಲಿ ನಿರೀಕ್ಷೆ ಹುಟ್ಟಿಸಿದೆ. ಮಾರ್ಚ್ 3ರಂದು ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದಲ್ಲಿ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಹಾಗೂ ಅಯಾನ ನಾಯಕ, ನಾಯಕಿಯಾಗಿ ನಟಿಸಿದ್ದಾರೆ.

ಪೃಥ್ವಿ ಅಂಬಾರ್ ಮಾತನಾಡಿ ʻʻಈ ಸಿನಿಮಾ ಎಲ್ಲರಿಗೂ ತುಂಬಾ ಹತ್ತಿರ ಆಗುತ್ತದೆ. ಒಂದು ಕಾದಂಬರಿ ಓದಿದ ಅನುಭವವನ್ನು ಈ ಸಿನಿಮಾ ಎಲ್ಲರಿಗೂ ನೀಡುತ್ತದೆ. ನಾನು ಮನು ಎಂಬ ಪಾತ್ರ ಮಾಡಿದ್ದೇನೆ. ಬಾಲ್ಯದಲ್ಲಿ ಮಾಡಿದ ತರಲೆ ಎಲ್ಲವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ನಿರ್ದೇಶಕರು ತುಂಬ ಚೆನ್ನಾಗಿ ಈ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ದೂರದರ್ಶನ ಒಂದು ಒಳ್ಳೆಯ ಕಟೆಂಟ್ ಸಿನಿಮಾ. ಲವ್ ಸ್ಟೋರಿ, ಕಾಮಿಡಿ, ಎಮೋಷನ್ಸ್ ಎಲ್ಲವೂ ಈ ಚಿತ್ರದಲ್ಲಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿʼʼ ಎಂದರು.

ನಿರ್ದೇಶಕ ಸುಕೇಶ್ ಶೆಟ್ಟಿ ಮಾತನಾಡಿ ʻʻಈ ಸಿನಿಮಾ ಈ ಮಟ್ಟಿಗೆ ಬಂದು ನಿಂತಿದೆ ಅಂದರೆ ಅದಕ್ಕೆ ಕಾರಣ ನಮ್ಮ ನಿರ್ಮಾಪಕರು. ಅವರಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಸಿನಿಮಾ ಮಾರ್ಚ್ 3ರಂದು ಬಿಡುಗಡೆಯಾಗುತ್ತಿದೆ. ಎರಡು ಕಾಲು ಗಂಟೆ ಒಂದು ಊರೊಳಗೆ ಹೋಗಿ ಎಂಜಾಯ್ ಮಾಡಿದ ಅನುಭವವನ್ನು ಈ ಸಿನಿಮಾ ಪ್ರತಿಯೊಬ್ಬರಿಗೂ ನೀಡಲಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿʼʼ ಎಂದರು.

ಇದನ್ನೂ ಓದಿ: Kannada New Movie: ಅಶ್ವಿನ್ ವಿಜಯ ಮೂರ್ತಿ ನಿರ್ದೇಶನದ ‘ಆರ’ ಸಿನಿಮಾ ಪೋಸ್ಟರ್ ರಿಲೀಸ್

ಇದನ್ನೂ ಓದಿ: Kannada New Movie: ಮನೋಜ್ ಪಿ ನಡಲುಮನೆ ನಿರ್ದೇಶನದ ‘ಮೇರಿ’ಟ್ರೈಲರ್‌ ಔಟ್‌

ವಿ ಎಸ್ ಎಂಟರ್ಟೈನ್ಮೆಂಟ್ ಬ್ಯಾನರ್‌ನಡಿ ರಾಜೇಶ್ ಭಟ್ ಚಿತ್ರವನ್ನು ನಿರ್ಮಾಣ ಮಾಡಿದ್ದು, ಉಗ್ರಂ ಮಂಜು ಕಾರ್ಯಕಾರಿ ನಿರ್ಮಾಣ ಚಿತ್ರಕ್ಕಿದೆ. ಉಗ್ರಂ ಮಂಜು, ಸುಂದರ್, ಹರಿಣಿ, ದೀಪಕ್ ರೈ ಪಾಣಾಜೆ, ರಘು ರಮಣಕೊಪ್ಪ, ಹುಲಿ ಕಾರ್ತಿಕ್, ಸೂರಜ್ ಮಂಗಳೂರು, ಸೂರ್ಯ ಕುಂದಾಪುರ ಒಳಗೊಂಡ ತಾರಾಗಣ ಚಿತ್ರದಲ್ಲಿದೆ. ಅರುಣ್ ಸುರೇಶ್ ಕ್ಯಾಮೆರಾ ವರ್ಕ್, ಪ್ರದೀಪ್ ಆರ್ ರಾವ್ ಸಂಕಲನ, ನಂದೀಶ್ ಟಿ ಜಿ ಸಂಭಾಷಣೆ, ವಾಸುಕಿ ವೈಭವ ಸಂಗೀತ ಚಿತ್ರಕ್ಕಿದೆ.

Exit mobile version