ಬೆಂಗಳೂರು : ವಿಧಾನ ಸೌಧದ ಮೆಟ್ಟಿಲುಗಳ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ನೀಡಲಾದ ಕರ್ನಾಟಕ ರತ್ನ ಪ್ರಶಸ್ತಿ ಪುನೀತ್ ರಾಜ್‌ಕುಮಾರ್ (Puneeth Rajkumar) ಅವರಿಗೆ ನವೆಂಬರ್ 1ರಂದು ಅರ್ಪಿಸಲಾಗಿದೆ. ನಟ ಶಿವರಾಜ್‌ಕುಮಾರ್ ಅಲ್ಲದೇ ಅಪ್ಪು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ʻʻಕರ್ನಾಟಕ ರತ್ನ ನನ್ನ ಅಪ್ಪುʼʼ ಎಂದು ಪುನೀತ್ ಅವರ ಭಾವಚಿತ್ರದೊಂದಿಗೆ ಪೋಸ್ಟ್ ಶೇರ್ ಮಾಡಿದ್ದಾರೆ.
ಅಪ್ಪು ಅಭಿಮಾನಿಗಳು ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದು, ಅನಿವಾಸಿ ಕನ್ನಡಿಗರೊಬ್ಬರು ಈ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ʻʻವಿದೇಶದಲ್ಲಿ ಅನಿವಾಸಿ ಕನ್ನಡಿಗರು ಕನ್ನಡ ಪ್ರೇಮವನ್ನು ಮೆರೆದಿದ್ದಾರೆ . ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಕನ್ನಡ ಮತ್ತು ಗಂಧದಗುಡಿಯ ಬಗ್ಗೆ ಕಟ್ಟಿದ್ದ ಕನಸನ್ನು ನಾವೆಲ್ಲರೂ ಸೇರಿ ನನಸಾಗಿಸೋಣ. ಜೈ ಕರ್ನಾಟಕ, ಜೈ ಕನ್ನಡ , ಜೈ ಅನಿವಾಸಿ ಕನ್ನಡಿಗʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ | Gandhada Gudi | ಮಂಡ್ಯದ ನಿಮಿಷಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಅಶ್ವಿನಿ ಪುನೀತ್ ರಾಜಕುಮಾರ್
ಸೋಷಿಯಲ್ ಮೀಡಿಯಾದಲ್ಲಿ ಪುನೀತ್ ರಾಜಕುಮಾರ್ ಅವರಿಗೆ ಶುಭಾಶಯ ಜತೆಗೆ ʻʻಡಾಕ್ಟರ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವಾಗ ಮಳೆ ಬಂದಿತ್ತು. ಡಾ. ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವಾಗ ಮಳೆ ಬಂದಿದೆʼʼಎಂದು ಡಾ.ರಾಜ್ ಅವರನ್ನೂ ನೆನೆದು ಟ್ವೀಟ್ ಮಾಡುತ್ತಿದ್ದಾರೆ.
ಕರ್ನಾಟಕ ರತ್ನ ರಾಜ್ ಕುಟುಂಬಕ್ಕೆ ಸಂದಿರುವ ಎರಡನೇ ಕರ್ನಾಟಕ ರತ್ನ ಪ್ರಶಸ್ತಿ. ೧೯೯೨ರಲ್ಲಿ ಡಾ. ರಾಜ್ ಕುಮಾರ್ ಅವರಿಗೆ ಚಲನಚಿತ್ರ ರಂಗದ ಶ್ರೇಷ್ಠ ಸಾಧನೆಗಾಗಿ ಈ ವಿಶೇಷ ಪ್ರಶಸ್ತಿ ನೀಡಲಾಗಿತ್ತು. ೧೯೯೨ರಲ್ಲಿ ಮೊದಲ ಬಾರಿಗೆ ಪ್ರಶಸ್ತಿ ನೀಡಲಾಗಿದ್ದು, ಕುವೆಂಪು ಮತ್ತು ಡಾ. ರಾಜ್ ಕುಮಾರ್ ಅವರಿಗೆ ಇದನ್ನು ನೀಡಲಾಗಿತ್ತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕಳೆದ ವರ್ಷದ ನವೆಂಬರ್ ತಿಂಗಳಲ್ಲೇ ಘೋಷಿಸಿದ್ದರು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಪುನೀತ್ ಅವರಿಗೆ ಈ ಉನ್ನತ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಇದನ್ನೂ ಓದಿ | Appu Namana | ಮಳೆಹನಿಗಳ ಮಂಗಳವೃಷ್ಟಿಯೊಂದಿಗೆ ಪುನೀತ್ ಮುಡಿಗೇರಿತು ಕರ್ನಾಟಕ ರತ್ನ ಪ್ರಶಸ್ತಿ