Site icon Vistara News

Radhika Merchant: ಪ್ರಿವೆಡ್ಡಿಂಗ್‌ಗೆ ಅಂಬಾನಿ ಸೊಸೆ ಧರಿಸಿದ್ದು 65 ವರ್ಷ ಹಳೆಯ ಸ್ಕರ್ಟ್‌! ಇದರ ಬೆಲೆ?

Radhika Merchant archival Dior dress for her pre-wedding

ಬೆಂಗಳೂರು: ರಾಧಿಕಾ ಮರ್ಚಂಟ್‌ (Radhika Merchant) ಹಾಗೂ ಅನಂತ್ ಅಂಬಾನಿ ಮದುವೆಗೆ ಸಜ್ಜಾಗುತ್ತಿದ್ದಾರೆ. ಈ ಮುಂಚೆ ಇಟಲಿಯಲ್ಲಿ ನಡೆದ ಪ್ರಿ ವೆಡ್ಡಿಂಗ್‌ ಫೋಟೊಗಳು ಇದೀಗ ಭಾರಿ ವೈರಲ್‌ ಆಗುತ್ತಿವೆ. ಇಟಲಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ವಿವಾಹ ಪೂರ್ವ ಆಚರಣೆಯಲ್ಲಿ ರಾಧಿಕಾ ಮರ್ಚಂಟ್‌ ಅವರ ಡ್ರೆಸ್‌ ಕೂಡ ಹೈಲೈಟ್‌ ಆಗಿತ್ತು. ಆರ್ಕೈವಲ್ ಡಿಯೊರ್ ಸ್ಕರ್ಟ್‌ (archival Dior dress) ಧರಿಸಿದ್ದರು ರಾಧಿಕಾ. 1959ರ ಫ್ಯಾಷನ್‌ ಸ್ಲೀವ್ ಲೆಸ್ ಡ್ರೆಸ್ ಆಗಿದ್ದರೂ ಮಾಡರ್ನ್ ಆಗಿದೆ. ವಿಶಾಲವಾದ ಭುಜದ ಪಟ್ಟಿಗಳು, ಚೌಕಾಕಾರದ ಡಿಸೈನ್‌, ಜತೆಗೆ ಸ್ಕರ್ಟ್ ರೀತಿಯ ವಿನ್ಯಾಸ ಇನ್ನಷ್ಟು ಸೌಂದರ್ಯವನ್ನು ಹೆಚ್ಚಿಸುತ್ತವೆ. ಈ ಸ್ಕರ್ಟ್‌ ಬೆಲೆ 3,20,714ರೂ. ಆಗಿದೆ.

ರಾಧಿಕಾ ಮರ್ಚಂಟ್‌ ಇಟಲಿಯ ಪೋರ್ಟೋಫಿನೋದಲ್ಲಿ ನಡೆದ ಆಚರಣೆಗಳಿಗಾಗಿ ಬಾರ್ಬಿಕೋರ್ ಟ್ರೆಂಡ್ ಧರಿಸಿದ್ದರು. ಈ ಉಡುಪನ್ನು ಯೆವ್ಸ್ ಸೇಂಟ್ ಲಾರೆಂಟ್ ವಿನ್ಯಾಸಗೊಳಿಸಿದ್ದಾರೆ. ವರದಿಯ ಪ್ರಕಾರ ರಾಧಿಕಾ ಅವರ ಆರ್ಕೈವಲ್ ಡಿಯೊರ್ ಉಡುಪನ್ನು ಸ್ಯಾನ್ ಫ್ರಾನ್ಸಿಸ್ಕೋದ ಕಸ್ಸಂದ್ರ ಕಾರ್ಪೆಂಟರ್ ಅವರಿಂದ ಪಡೆಯಲಾಗಿದೆ ಎನ್ನಲಾಗಿದೆ . ಇದು ಮೂಲತಃ ಜೀನಿ ಮ್ಯಾಗ್ನಿನ್ ಅವರದ್ದು ಎನ್ನಲಾಗಿದೆ.

ವೈರಲ್ ಬಾರ್ಬಿಕೋರ್ ಮತ್ತು ಕೊಕ್ವೆಟ್ ಕೋರ್ ಫ್ಯಾಷನ್ ಒಳಗೊಂಡ ಈ ಡ್ರೆಸ್‌ ಪ್ರಕಾಶಮಾನವಾದ ರಾಸ್ಪ್ಬೆರಿ ಗುಲಾಬಿ ಬಣ್ಣಗಳ ಮಿಶ್ರಣದಲ್ಲಿದೆ. 1959ರ ಫ್ಯಾಷನ್‌ ಸ್ಲೀವ್ ಲೆಸ್ ಡ್ರೆಸ್ ಆಗಿದ್ದರೂ ಮಾಡರ್ನ್ ಆಗಿದೆ. ವಿಶಾಲವಾದ ಭುಜದ ಪಟ್ಟಿಗಳು, ಚೌಕಾಕಾರದ ಡಿಸೈನ್‌, ಜತೆಗೆ ಸ್ಕರ್ಟ್ ರೀತಿಯ ವಿನ್ಯಾಸ ಇನ್ನಷ್ಟು ಸೌಂದರ್ಯವನ್ನು ಹೆಚ್ಚಿಸುತ್ತವೆ. ಈ ಸ್ಕರ್ಟ್‌ ಬೆಲೆ 3,20,714ರೂ. ಆಗಿದೆ. ರಾಧಿಕಾ ಅವರು ಈ ಸ್ಕರ್ಟ್‌ ಜತೆಗೆ ವಜ್ರದ ಉಂಗುರ, ಗುಲಾಬಿ ಬಣ್ಣದ ಹರ್ಮೆಸ್ ಮಿನಿ ಕೆಲ್ಲಿ ಬ್ಯಾಗ್ ಧರಿಸಿದ್ದರು. ಪೋನಿಟೇಲ್‌ಗೆ ರೇಷ್ಮೆಯ ಸ್ಕಾರ್ಫ್‌ ಧರಿಸಿದ್ದರು.

ಇದನ್ನೂ ಓದಿ: Pawan Kalyan: ಮರು ಬಿಡುಗಡೆಯಾಗುತ್ತಿದೆ ಪವನ್ ಕಲ್ಯಾಣ್ ಹಳೆಯ ಸಿನಿಮಾ..!

ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್​ನಲ್ಲಿ ಮದುವೆ ನಡೆಯಲಿದೆ.

ಜುಲೈ 12 ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.


Exit mobile version