ಮುಂಬೈ: ಬಾಲಿವುಡ್‌ನಲ್ಲಿ ಸೆಲೆಬ್ರಿಟಿಗಳ ಲವ್, ಡೇಟಿಂಗ್, ಲವ್ವಿ ಡವ್ವಿ ಕುರಿತ ಗಾಸಿಪ್‌ಗಳು ಸಾಮಾನ್ಯ. ಇಂತಹ ಲವ್ವಿ ಡವ್ವಿ ಕುರಿತು ಈಗ ಮತ್ತೊಂದು ಸುದ್ದಿಯಾಗಿದೆ. ಅದರಲ್ಲೂ, ಆಪ್ ನಾಯಕ, ರಾಜ್ಯಸಭೆ ಸದಸ್ಯ ರಾಘವ್ ಚಡ್ಡಾ (Raghav Chadha) ಹಾಗೂ ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಅವರು ಇತ್ತೀಚೆಗೆ ಒಟ್ಟಿಗೆ ಕಾಣಿಸಿಕೊಂಡಿದ್ದು, ಇಬ್ಬರೂ ಜೋಡಿ ಹಕ್ಕಿಗಳು ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲೂ, ಒಂದೇ ವಾರದಲ್ಲಿ ಇಬ್ಬರೂ ಎರಡು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದು, ವಿಡಿಯೊಗಳು ಕೂಡ ಲಭ್ಯವಾಗಿವೆ. ಹಾಗಾಗಿ, ಇಬ್ಬರ ನಡುವಿನ ಪ್ರೀತಿ, ಡೇಟಿಂಗ್ ಕುರಿತು ಚರ್ಚೆ ಜೋರಾಗಿವೆ.
ಕಳೆದ ಬುಧವಾರ (ಮಾರ್ಚ್ 22) ರಾಘವ್ ಹಾಗೂ ಪರಿಣೀತಿ ಅವರು ಮುಂಬೈನ ರೆಸ್ಟೋರೆಂಟ್ ಒಂದರಲ್ಲಿ ಒಟ್ಟಿಗೆ ಊಟಕ್ಕೆ ತೆರಳಿದ್ದರು. ಇಬ್ಬರೂ ಒಟ್ಟಿಗೆ ಹೋಟೆಲ್ ಪ್ರವೇಶಿಸುವ ಹಾಗೂ ಹೋಟೆಲ್‌ನಿಂದ ಹೊರಬರುವ ವಿಡಿಯೊ ಹಾಗೂ ಫೋಟೊಗಳು ಲಭ್ಯವಾಗಿವೆ. ಇದಾದ ಮರುದಿನವೇ (ಮಾರ್ಚ್ 23) ಇಬ್ಬರೂ ಮತ್ತೆ ಇನ್ನೊಂದು ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಹೀಗೆ ಪದೇಪದೆ ಒಟ್ಟಿಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೇಟಿಂಗ್ ಕುರಿತು ಮಾತುಗಳು ಕೇಳಿಬರುತ್ತಿವೆ.
ಇಲ್ಲಿದೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡ ವಿಡಿಯೊ
ಪರಿಣೀತಿ ಬಗ್ಗೆ ಅಲ್ಲ, ರಾಜನೀತಿ ಬಗ್ಗೆ ಕೇಳಿ ಎಂದ ಚಡ್ಡಾ
ಪರಿಣೀತಿ ಜತೆಗಿನ ಡೇಟಂಗ್ ಕುರಿತು ಸುದ್ದಿಗಾರರು ಪ್ರಶ್ನೆ ಕೇಳುತ್ತಲೇ ನಾಚಿ ನೀರಾದ ರಾಘವ್ ಚಡ್ಡಾ, “ನನಗೆ ಪರಿಣೀತಿ ಬಗ್ಗೆ ಅಲ್ಲ, ರಾಜನೀತಿ ಬಗ್ಗೆ ಪ್ರಶ್ನೆ ಕೇಳಿ” ಎಂದು ನಕ್ಕಿದ್ದಾರೆ. ಹಾಗೆಯೇ, ನೀವು ಮದುವೆ ಆಗುವುದು ಯಾವಾಗ ಎಂದು ಕೇಳಿದ ಪ್ರಶ್ನೆಗೆ, “ನಾನು ಮದುವೆಯಾಗುವಾಗ ನಿಮಗೆ ಖಂಡಿತವಾಗಿಯೂ ತಿಳಿಸುತ್ತೇನೆ” ಎಂದು ಹೇಳುವ ಮೂಲಕ ಜಾರಿಕೊಂಡಿದ್ದಾರೆ.
ಇದನ್ನೂ ಓದಿ: Kriti sanon: ವರುಣ್ ಧವನ್ ಮಾತಿಗೆ ಬೇಸರಗೊಂಡ ಕೃತಿ ಸನೂನ್: ಡೇಟಿಂಗ್ ವದಂತಿಗಳಿಗೆ ಪ್ರಭಾಸ್ ಹೇಳಿದ್ದೇನು?
ಪಂಜಾಬ್ ಆಪ್ ನಾಯಕ, ರಾಜ್ಯಸಭೆಯ ಯುವ ಸದಸ್ಯರಾಗಿರುವ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಒಟ್ಟಿಗೆ ಓದಿದ್ದಾರೆ. ಹಾಗಾಗಿ, ಇಬ್ಬರಿಗೂ ಮೊದಲಿನಿಂದಲೂ ಪರಿಚಯ ಇದೆ ಎಂದು ತಿಳಿದುಬಂದಿದೆ. ಆದರೆ, ಮೂಲಗಳ ಪ್ರಕಾರ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇಬ್ಬರೂ ಆತ್ಮೀಯರಾಗಿದ್ದಾರೆ. ಹಾಗಾಗಿ, ಡೇಟಿಂಗ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.