Site icon Vistara News

Parineeti Chopra: ಪರಿಣಿತಿ ಚೋಪ್ರಾ-ರಾಘವ್ ಛಡ್ಡಾ ಮದುವೆ ಡೇಟ್‌ ಫಿಕ್ಸ್‌! ಎಲ್ಲಿ ಅದ್ಧೂರಿ ವಿವಾಹ?

Raghav Chadha, Parineeti Chopra

ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ರಾಘವ್ ಛಡ್ಡಾ (Raghav Chadha) ಮತ್ತು ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಜೋಡಿ (Parineeti Chopra) ಸೆಪ್ಟೆಂಬರ್ 23 ಮತ್ತು 24 ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಲಿದೆ. ಲೀಲಾ ಪ್ಯಾಲೆಸ್ (Leela Palace ) ಮತ್ತು ದಿ ಒಬೆರಾಯ್ ಉದಯವಿಲಾಸ್‌ನಲ್ಲಿ (The Oberoi Udaivilas.) ವಿವಾಹದ ವಿಧಿವಿಧಾನಗಳು ನಡೆಯಲಿವೆ ಎಂದು ವರದಿಯಾಗಿದೆ.

20 ಕ್ಕೂ ಹೆಚ್ಚು ಅತಿಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. 50ಕ್ಕೂ ಹೆಚ್ಚು ವಿವಿಐಪಿಗಳು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ. ಬುಕ್ಕಿಂಗ್ ಖಾತ್ರಿಯಾದ ತಕ್ಷಣ ಎರಡೂ ಹೋಟೆಲ್‌ಗಳಲ್ಲಿ ಮದುವೆಯ ಆಚರಣೆಗೆ ಸಿದ್ಧತೆಗಳು ಪ್ರಾರಂಭವಾದವು. ವಿವಾಹದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಹಲವರು ಇರಲಿದ್ದಾರೆ. ಪರಿಣಿತಿ ಚೋಪ್ರಾ ಅವರ ಸೋದರಸಂಬಂಧಿ ಪ್ರಿಯಾಂಕಾ ಚೋಪ್ರಾ ಮತ್ತು ಅವರ ಪತಿ ನಿಕ್ ಜೋನಾಸ್ ಕೂಡ ಭಾಗಿಯಾಗಲಿದ್ದಾರೆ. ಮೂಲಗಳ ಪ್ರಕಾರ, ಹಳದಿ, ಮೆಹೆಂದಿ ಮತ್ತು ಸಂಗೀತ ಸೇರಿದಂತೆ ವಿವಾಹ ಕಾರ್ಯಕ್ರಮಗಳು ಸೆಪ್ಟೆಂಬರ್ 23 ರಂದು ಪ್ರಾರಂಭವಾಗಲಿವೆ. ಮದುವೆಯ ನಂತರ, ಹರಿಯಾಣದ ಗುರುಗ್ರಾಮದಲ್ಲಿ ಆರತಕ್ಷತೆ ನಡೆಯಲಿದೆ.

ಲೀಲಾ ಪ್ಯಾಲೆಸ್ ಮತ್ತು ಉದಯವಿಲಾಸ್ ಹೊರತುಪಡಿಸಿ ಹತ್ತಿರದ ಮೂರು ಹೋಟೆಲ್‌ಗಳಲ್ಲಿ ಬುಕ್ಕಿಂಗ್ ಮಾಡಲಾಗಿದೆ. ಎರಡು ತಿಂಗಳ ಹಿಂದೆ, ರಾಘವ್ ಛಡ್ಡಾ ಮತ್ತು ಪರಿಣಿತಿ ಚೋಪ್ರಾ, ಹೋಟೆಲ್‌ಗಳ ಸ್ಥಳಗಳನ್ನು ಖುದ್ದಾಗಿ ಪರಿಶೀಲಿಸಲು ಉದಯಪುರಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ: Parineeti Chopra: ಬೆನ್ನತ್ತಿದ ಫೋಟೋಗ್ರಾಫರ್ಸ್‌ ಮೇಲೆ ಸಿಟ್ಟಾದ ಪರಿಣಿತಿ ಚೋಪ್ರಾ

ಮೇ 13ರಂದು ದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ಜೋಡಿಯ ನಿಶ್ಚಿತಾರ್ಥ ನಡೆಯಿತು. ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್, ಮಾಜಿ ಕೇಂದ್ರ ಸಚಿವರಾದ ಪಿ ಚಿದಂಬರಂ ಮತ್ತು ಕಪಿಲ್ ಸಿಬಲ್, ಮತ್ತು ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಸೇರಿದಂತೆ ಹಲವಾರು ರಾಜಕಾರಣಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಈ ಜೋಡಿ ಕಳೆದ ವರ್ಷದಿಂದಲೂ ಪ್ರೀತಿಯಲ್ಲಿದೆ. ಪರಿಣಿತಿ ಅವರು ಚಮ್ಕೀಲಾ ಸಿನಿಮಾಕ್ಕಾಗಿ ಪಂಜಾಬ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಆ ವೇಳೆ ರಾಘವ್‌ ಅವರು ಅಲ್ಲಿಗೆ ತೆರಳಿ ನಟಿಯೊಂದಿಗೆ ಮಾತನಾಡಿದ್ದರು. ಆಗಲೇ ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು ಎಂದೂ ಹೇಳಲಾಗುತ್ತಿದೆ.

Exit mobile version