Site icon Vistara News

Ragini Dwivedi: ರಾಗಿಣಿ ದ್ವಿವೇದಿ ಅಭಿನಯದ ʻಬಿಂಗೊʼ ಚಿತ್ರದ ಡಬ್ಬಿಂಗ್‌ ಮುಕ್ತಾಯ

Ragini Dwivedi Bingo Movie Dubbing complete

ಬೆಂಗಳೂರು: “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ “ಬಿಂಗೊ” ಚಿತ್ರದ ಡಬ್ಬಿಂಗ್ ಮುಕ್ತಾಯಗೊಂಡಿದೆ. ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ (Ragini Dwivedi) ನಾಯಕ – ನಾಯಕಿಯಾಗಿ ನಟಿಸಿರುವ ಸಿನಿಮಾ ಇದು. “ಬಿಂಗೊ” ಚಿತ್ರದ ಡಬ್ಬಿಂಗ್ ಸಾಧುಕೋಕಿಲ ಅವರ ಲೂಪ್ ಸ್ಟುಡಿಯೊದಲ್ಲಿ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಿರುಸಿನಿಂದ ಸಾಗಿವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಸಸ್ಪೆನ್ಸ್ ಥ್ರಿಲ್ಲರ್ ಜಾನರ್‌ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಮೇ 24ರಂದು ನಟಿ ರಾಗಿಣಿ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ಬಿಂಗೊ” ಚಿತ್ರತಂಡ ರಾಗಿಣಿ ಅವರಿಗೆ ಶುಭಾಶಯ ತಿಳಿಸಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ , ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್), ಮುರಳಿ ಪೂರ್ವಿಕ್, ಅಪೂರ್ವ, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಹಿತನ್ ಹಾಸನ್ ಸಂಗೀತ ನೀಡಿರುವ ಮೂರು ಹಾಡುಗಳು ಈ ಚಿತ್ರದಲ್ಲಿದೆ. ಸದ್ಯದಲ್ಲೇ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಸಾಹಸ ಸನ್ನಿವೇಶಗಳಿದ್ದು, ನರಸಿಂಹ ಸಾಹಸ ನಿರ್ದೇಶನ ಮಾಡಿದ್ದಾರೆ. ಕಂಬಿ ರಾಜು ಅವರ ನೃತ್ಯ ನಿರ್ದೇಶನ ಸಿನಿಮಾಕ್ಕಿದೆ.

ಇದನ್ನೂ ಓದಿ: Ragini Dwivedi: ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!

ಮೋಹನ್‌ಲಾಲ್‌ ಜತೆ ಶೂಟಿಂಗ್‌ ಶುರು ಮಾಡಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಸಿಕ್ಕಿರುವುದಕ್ಕೆ ರಾಗಿಣಿ ದ್ವಿವೇದಿ ಸಖತ್​ ಖುಷಿ ಆಗಿದ್ದಾರೆ.

ಈ ಪ್ಯಾನ್‌ ಇಂಡಿಯಾ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಎವಿಎಸ್ ಸ್ಟುಡಿಯೋಸ್ ಮತ್ತು ಕನೆಕ್ಟ್ ಮೀಡಿಯಾ 200 ಕೋಟಿ ರೂ ಬಜೆಟ್‌ನಲ್ಲಿ ಸಿನಿಮಾ ಮಾಡಲಿದೆ ಎಂದು ವರದಿಯಾಗಿದೆ. ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದ್ದು, ಇದು ಏಕ್ತಾ ಅವರ ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿದೆ.

ನಂದ್ ಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ತೆಲುಗು, ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ.

Exit mobile version