Site icon Vistara News

Ragini Dwivedi: ಮೋಹನ್‌ಲಾಲ್‌ ಜತೆ ಶೂಟಿಂಗ್‌ ಶುರು ಮಾಡಿದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

Ragini Dwivedi with mohanlal

ಬೆಂಗಳೂರು: ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ. ಈ ಸಿನಿಮಾದಲ್ಲಿ ನಟಿಸುವ ಚಾನ್ಸ್​ ಸಿಕ್ಕಿರುವುದಕ್ಕೆ ರಾಗಿಣಿ ದ್ವಿವೇದಿ ಸಖತ್​ ಖುಷಿ ಆಗಿದ್ದಾರೆ.

ಈ ಪ್ಯಾನ್‌ ಇಂಡಿಯಾ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಎವಿಎಸ್ ಸ್ಟುಡಿಯೋಸ್ ಮತ್ತು ಕನೆಕ್ಟ್ ಮೀಡಿಯಾ 200 ಕೋಟಿ ರೂ ಬಜೆಟ್‌ನಲ್ಲಿ ಸಿನಿಮಾ ಮಾಡಲಿದೆ ಎಂದು ವರದಿಯಾಗಿದೆ. ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದ್ದು, ಇದು ಏಕ್ತಾ ಅವರ ಮೊದಲ ಪ್ಯಾನ್ ಇಂಡಿಯಾ ಚಿತ್ರವಾಗಿದೆ.

ಮೋಹನ್‌ಲಾಲ್‌ ಅವರ ಜತೆ ತೆರೆ ಹಂಚಿಕೊಳ್ಳುತ್ತಿರುವುದಕ್ಕೆ ಖುಷಿಯಾಗಿದೆ. ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ನಿರ್ದೇಶಕರಿಗೆ ಧನ್ಯವಾದ.

ನಂದ್ ಕಿಶೋರ್ ನಿರ್ದೇಶನದ ಈ ಚಿತ್ರ 2024ರಲ್ಲಿ ತೆಲುಗು, ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಇದೊಂದು ಪೌರಾಣಿಕ ಹಾಗೂ ಫ್ಯಾಂಟಸಿ ಕಥಾ ಹಂದರವನ್ನು ಹೊಂದಿರುವ ಸಿನಿಮಾ ಎಂದು ಹೇಳಿಕೊಂಡಿರುವ ನಂದಕಿಶೋರ್, ಸಾಹಸ ಪ್ರಧಾನ ದೃಶ್ಯಗಳನ್ನೂ ಹೊಂದಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: Mohanlal New Film | ಮಲಯಾಳಂ ಸೂಪರ್‌ಸ್ಟಾರ್‌ ಮೋಹನ್‌ಲಾಲ್‌ ಹೊಸ ಸಿನಿಮಾ ವೃಷಭ, ಇದು ಅಪ್ಪ-ಮಗನ ಕಥೆ

ಇದರಲ್ಲಿ ಶ್ರೀಕಾಂತ್ ಮೇಕಾ ಪುತ್ರ ರೋಷನ್ ಕೂಡ ನಟಿಸುತ್ತಿದ್ದಾರೆ. ಅಲ್ಲದೇ, ಕನ್ನಡದ ಕಲಾವಿದರಿಗೂ ಅವಕಾಶ ಇರಲಿದೆ ಎನ್ನಲಾಗಿದೆ. ಸಂತೋಷ್ ತುಂಡಿಯಲ್ ಸಿನಿಮಾಟೋಗ್ರಾಫರ್ ಆಗಿದ್ದು, ತೆಲುಗಿನ ಖ್ಯಾತ ಸಂಗೀತ ನಿರ್ದೇಶಕ ದೇವಿಶ್ರೀ ಪ್ರಸಾದ್ ಅವರ ಸಂಗೀತ ಚಿತ್ರಕ್ಕಿದೆ. ಮೂಲ ತೆಲುಗು ಮತ್ತು ಮಲಯಾಳಂನಲ್ಲಿ ಸಿನಿಮಾ ತಯಾರಾಗಲಿದ್ದು, ನಂತರ ಇತರ ಭಾಷೆಗಳಿಗೆ ಡಬ್ ಮಾಡಲಾಗುತ್ತಿದೆ ಎನ್ನಲಾಗಿದೆ.

Exit mobile version