Kichcha Sudeep : ಕಿಚ್ಚ, ಕುಮಾರ್ ಗಲಾಟೆ ಮಧ್ಯೆ ರೆಹಮಾನ್​ ಎಂಟ್ರಿ; ಮತ್ತೊಂದು ಮೋಸದ ಆರೋಪ - Vistara News

ಸಿನಿಮಾ

Kichcha Sudeep : ಕಿಚ್ಚ, ಕುಮಾರ್ ಗಲಾಟೆ ಮಧ್ಯೆ ರೆಹಮಾನ್​ ಎಂಟ್ರಿ; ಮತ್ತೊಂದು ಮೋಸದ ಆರೋಪ

ನಿರ್ಮಾಪಕ ರೆಹಮಾನ್​ ಸುದ್ದಿಗೋಷ್ಠಿ ನಡೆಸಿ ಹುಚ್ಚ ಸಿನಿಮಾದ ಅವಧಿಯಲ್ಲಿ ನೀಡಿದ್ದ ಮುಂಗಡ ವಾಪಸ್ ಕೊಟ್ಟಿಲ್ಲ ಎಂದು ಆರೋಪ ಮಾಡಿದ್ದಾರೆ.

VISTARANEWS.COM


on

Kichcha Sudeep
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೂರು ದಿನಗಳಿಂದ ಸ್ಯಾಂಡಲ್​ವುಡ್​ ನಿರ್ಮಾಪಕ ಎನ್​. ಕುಮಾರ್ ಹಾಗೂ ನಟ ಕಿಚ್ಚ ಸುದೀಪ್ (Kichcha Sudeep) ನಡುವೆ ವಾಕ್ಸಮರ ನಡೆಯುತ್ತಿದೆ. ಅದು ಕಾನೂನು ಸಮರದ ಮಟ್ಟಕ್ಕೆ ಹೋಗಿದೆ. ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇದೆ. ಈ ಪ್ರಕರಣಕ್ಕೆ ತೆರೆ ​​ ಬೀಳುತ್ತೆ ಎಂದು ಚಲನಚಿತ್ರ ಪ್ರೇಕ್ಷಕರು ಅಂದುಕೊಳ್ಳುತ್ತಿರುವ ನಡುವೆಯೇ ಮತ್ತೊಬ್ಬರು ಸುದೀಪ್​ ವಿರುದ್ಧ ಆರೋಪ ಮಾಡಿದ್ದಾರೆ. ಹುಚ್ಚ ಸಿನಿಮಾ ಸಮಯದಲ್ಲಿ ನೀಡಿದ ಮುಂಗಡ ಹಣವನ್ನು ಸುದೀಪ್​​ ವಾಪಸ್​ ಕೊಟ್ಟಿಲ್ಲ ಎಂದು ನಿರ್ಮಾಪಕ ರೆಹಮಾನ್​ ಆರೋಪಿಸಿದ್ದಾರೆ.

ನಿರ್ಮಾಪಕ ಎಂ.ಎನ್​ ಕುಮಾರ್​ ವಿರುದ್ಧ ಸುದೀಪ್​ ಕಾನೂನು ಸಮರ ಆರಂಭಿಸಿದ್ದು, ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಏತನ್ಮಧ್ಯೆ ಈಗ ಕುಮಾರ್ ​ ಪರ ಹುಚ್ಚ ಸಿನಿಮಾದ ನಿರ್ಮಾಪಕ ರೆಹಮಾನ್​ ನಿಂತಿರುವುದು ಮತ್ತೊಮ್ಮೆ ನೂರು ಅನುಮಾನಗಳಿಗೆ ಕಾರಣವಾಗಿದೆ.

ಹುಚ್ಚ ಸಿನಿಮಾ ಮಾಡಿದ್ದು ನಾನು, ಆ ಸಿನಿಮಾದಿಂದಲೇ ಕಿಚ್ಚ ಅನ್ನೋ ಬಿರುದು ಬಂದಿದ್ದು. ಹಾಗಂತ ನಾನು ಅವರ ವಿರುದ್ಧ ಮಾನನಷ್ಟ ಮೊಕದ್ದೊಮ್ಮೆ ಹಾಕಲು ಸಾಧ್ಯವೇ ಎಂದು ಹೇಳುವ ಮುಖೇನ ಸುದೀಪ್​ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ನಿರ್ಮಾಪಕ ಎಂ.ಎನ್​ ಕುಮಾರ್​, ನಟ ಸುದೀಪ್​ ವಿರುದ್ಧ ಬರೋಬ್ಬರಿ 10 ಕೋಟಿ ರೂಪಾಯಿ ವಂಚನೆ ಆರೋಪ ಮಾಡಿದ್ದರು. ಸಿನಿಮಾ ಮಾಡುವುದಾಗಿ ಹೇಳಿ, ಹಣ ಪಡೆದು ತಮ್ಮ ಆಪ್ತರಿಗೆ ಕೊಡಿಸಿದ್ದಾರೆ. ಈಗ ಸಿನಿಮಾ ಮಾಡಿಕೊಡಿ ಅಂತಾ ಕೇಳಿದ್ರೆ, ಪ್ರತಿಕ್ರಿಯೆ ನೀಡಿಲ್ಲ ಅಂತಾ ಕಳೆದ ವಾರ ಆರೋಪವನ್ನು ಮಾಡಿದ್ದರು. ತಮ್ಮ ಮೇಲೆ ಸರಣಿ ಆರೋಪಗಳೂ ಕೇಳಿಬಂದ ಬೆನ್ನಲ್ಲೇ ಕಿಚ್ಚ ಸುದೀಪ್​ ಅವರು ಕುಮಾರ್​ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದೊಮ್ಮೆ ಹೂಡಿದ್ದಾರೆ.

ಕಿಚ್ಚ ಸುದೀಪ್​ ಕೂಡ ಮಾಧ್ಯಮಗಳಿಗೆ ಒಂದಿಷ್ಟು ವಿಷಯಗಳನ್ನು ತಲುಪಿಸಿದ್ದು, ತಮ್ಮ ಆಪ್ತ ಹಾಗೂ ನಿರ್ಮಾಪಕ ಜಾಕ್​​ ಮಂಜು ಮತ್ತು​ ಸುದೀಪ್​ ಮ್ಯಾನೇಜರ್​ ಚಕ್ರವರ್ತಿ ಚಂದ್ರಾಚೂಡ್​​ ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬಂದು ಕುಮಾರ್​ ಮಾಡಿದ್ದ ಆರೋಪಗಳಿಗೆ ಹುರುಳಿಲ್ಲ ಎಂದಿದ್ದರು.

ಇದನ್ನೂ ಓದಿ : Sudeep Puneeth | ಸುದೀಪ್-ಪುನೀತ್‌ ಬಾಂಧವ್ಯಕ್ಕೆ ಸಾಕ್ಷಿಯಾಯ್ತು ಹುಟ್ಟುಹಬ್ಬ ಸಂಭ್ರಮ

ಇದೇ ವಿಚಾರವಾಗಿ ಸುದೀಪ್​ ಒಂದು ಮೆಸೇಜ್​​ ಕಳಿಸಿದ್ದಾರೆ. ನಾನು ಬೆಳೆದಿದ್ದೇ ಸಿನಿಮಾ ನಿರ್ಮಾಪಕರಿಂದ. 27 ವರ್ಷಗಳ ನನ್ನ ಸಿನಿಮಾ ಕೆರಿಯರ್​ನಲ್ಲಿ ಒಳಿತನ್ನೇ ಮಾಡಿದ್ದೇನೆ ನನ್ನ ವಿರುದ್ಧ ಮಾಡಿದ ಆರೋಪಗಳಿಗೆ ನಾನು ಕಾನೂನು ಮೂಲಕವೇ ಉತ್ತರ ಕೊಡುತ್ತೇನೆ. ನನಗೆ ಸಿನಿಮಾ ಕ್ಷೇತ್ರದ ಎಲ್ಲಾ ಅಂಗ ಸಂಸ್ಥೆಗಳ ಮೇಲೆ ನಂಬಿಕೆಯಿದೆ ಎಂದಿದ್ದರು.

ಸದ್ಯ ಕಿಚ್ಚ ಸುದೀಪ್​​ ಅವರು ನಿರ್ಮಾಪಕ ಎಂ.ಎನ್.​ ಕುಮಾರ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಅತ್ತ​ ಕುಮಾರ್​ ಅವರ ಮುಂದಿನ ನಿರ್ಧಾರ ಪ್ರಕಟಗೊಂಡಿಲ್ಲ. ಗಲಾಟೆ ಬೇಗ ಕೊನೆಯಾಗಲಿ ಎಂದು ಸಿನಿ ಪ್ರೇಕ್ಷಕರು ಬಯಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Chaya Singh: ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ; ಚಿನ್ನಾಭರಣ ಕದ್ದಿದ್ದ ಮನೆಕೆಲಸದಾಕೆ ಬಂಧನ

Chaya Singh: ನಟಿ ಛಾಯಾ ಸಿಂಗ್‌ ಅವರ ತಾಯಿ ಮನೆಯಲ್ಲಿ 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಈ ಸಂಬಂಧ ಮನೆಕೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Chaya Singh
Koo

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda
Vaishnavi Gowda

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಸಿನಿಮಾ

Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

Actor Dhanush: ಕಾಲಿವುಡ್‌ ನಟ ಧನುಷ್‌ ಮತ್ತು ಐಶ್ವರ್ಯಾ ರಜನಿಕಾಂತ್‌ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ ಅವರು ಇಬ್ಬರ ಬಗ್ಗೆ ಶಾಕಿಂಗ್‌ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅವರು ಪರಸ್ಪರ ಮೋಸ ಮಾಡಿಕೊಂಡಿದ್ದರು ಎಂದು ಹೇಳಿದ್ದಾರೆ.

VISTARANEWS.COM


on

Actor Dhanush
Koo

ಚೆನ್ನೈ: ಈಗಾಗಲೇ ಕಾಲಿವುಡ್‌ ನಟ ಧನುಷ್‌ (Actor Dhanush) ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ (Aishwarya Rajinikanth) ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ. 2022ರ ಜನವರಿ 17ರಂದು ಧನುಷ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ 18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡುವುದಾಗಿ ಘೋಷಿಸಿದ್ದರು. ಆದರೆ ಇಬ್ಬರು ತಮ್ಮ ಸುದೀರ್ಘ ದಾಂಪತ್ಯ ಜೀವನ ಯಾವ ಕಾರಣಕ್ಕೆ ಕೊನೆಯಾಯ್ತು ಎನ್ನುವುದನ್ನು ತಿಳಿಸಿಲ್ಲ. ಇದೀಗ ಜನಪ್ರಿಯ ಗಾಯಕಿ ಸುಚಿತ್ರಾ (Suchitra) ಅವರು ಧನುಷ್‌ ಮತ್ತು ಐಶ್ವರ್ಯಾ ಅವರಿಗೆ ಸಂಬಂಧಿಸಿ ಶಾಕಿಂಗ್‌ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೆಯೂ ಧನುಷ್‌ ಬಗ್ಗೆ ಆರೋಪ ಹೊರಿಸಿದ್ದ ಸುಚಿತ್ರಾ ಸಂದರ್ಶನವೊಂದರಲ್ಲಿ, ಧನುಷ್‌ ಮತ್ತು ಐಶ್ವರ್ಯಾ ಪರಸ್ಪರ ಮೋಸ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಯೂಟ್ಯೂಬ್‌ ಚಾನಲ್‌ ಕುಮುದಂಗೆ ನೀಡಿದ ಸಂದರ್ಶನಲ್ಲಿ ಸುಚಿತ್ರಾ ಈ ಬಗ್ಗೆ ಮಾತನಾಡಿದ್ದಾರೆ. ಧನುಷ್‌ ಮತ್ತು ಐಶ್ವರ್ಯಾ ಇಬ್ಬರೂ ವ್ಯವಸ್ಥಿತವಾಗಿ ಪರಸ್ಪರ ಮೋಸ ಮಾಡಿಕೊಂಡಿದ್ದ ದಂಪತಿ ಎಂದು ಸುಚಿತ್ರಾ ಕರೆದಿದ್ದಾರೆ. ಇವರು ಮದುವೆಯಾದ ಮೇಲೆ ಆಗಾಗ ಇತರರೊಂದಿಗೆ ಡೇಟಿಂಗ್ ಹೋಗುತ್ತಿದ್ದರು ಎಂದೂ ಹೇಳಿದ್ದಾರೆ. ಧನುಷ್ ಅವರೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಸುಚಿತ್ರಾ, ಐಶ್ವರ್ಯಾ ಅವರನ್ನು ಕೆಟ್ಟ ತಾಯಿ ಎಂದು ಜರೆದಿದ್ದಾರೆ ಮತ್ತು ಈ ವಿಚಾರದಲ್ಲಿ ಧನುಷ್‌ ಪರವಾಗಿ ನಿಂತಿದ್ದಾರೆ. ಧನುಷ್ ಪ್ರೀತಿಯ ತಂದೆಯಾಗಿ ತಮ್ಮ ಕರ್ತವ್ಯಗಳನ್ನು ಪೂರೈಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಐಶ್ವರ್ಯಾ ಅವರು ಯಾವಾಗಲೂ ಧನುಷ್‌ ತಮಗೆ ಮೋಸ ಮಾಡಿದ್ದಾರೆ ಎಂದು ಹೇಳುತ್ತಾರೆ. ಆದರೆ ಅವರೂ ಕೂಡ ಅದನ್ನೇ ಮಾಡಿದ್ದಾರೆ. ಆಕೆಗೊಂದು ನ್ಯಾಯ ಆತನಿಗೊಂದು ನ್ಯಾಯವೇ? ಎಂದು ಸುಚಿತ್ರಾ ಪ್ರಶ್ನಿಸಿದ್ದಾರೆ. “ಅವರು ಬಾರ್‌ನಲ್ಲಿ ಕುಳಿತು ಡೇಟಿಂಗ್ ನಡೆಸುತ್ತಿರುವ ವ್ಯಕ್ತಿಯೊಂದಿಗೆ ಮದ್ಯ ಸೇವಿಸಿದ್ದಾರೆ” ಎಂದಿದ್ದಾರೆ.

ತಮ್ಮ ಮಾಜಿ ಪತಿ ಕಾರ್ತಿಕ್ ವಿರುದ್ಧವೂ ಸುಚಿತ್ರಾ ಗಂಭೀರ ಆರೋಪ ಮಾಡಿದ್ದಾರೆ. ʼʼಆತ (ಕಾರ್ತಿಕ್) ಸಲಿಂಗಕಾಮಿ. ಆದರೆ ಅದನ್ನು ಹೇಳಲು ಅವನಿಗೆ ಧೈರ್ಯವಿಲ್ಲ. ಪತಿ ಸಲಿಂಗಕಾಮಿ ಎಂದು ನನಗೆ ಮದುವೆಯಾದ 2 ವರ್ಷಕ್ಕೆ ತಿಳಿಯಿತು. ಧನುಷ್ ಹಾಗೂ ನನ್ನ ಮಾತಿ ಪತಿ ಒಟ್ಟಿಗೆ ಕೋಣೆಯಲ್ಲಿ ಏನು ಮಾಡುತ್ತಿದ್ದರು? ಪಾರ್ಟಿಗಳಲ್ಲಿ ಏನು ನಡೆಯುತ್ತಿತ್ತು?ʼʼ ಎಂದು ಸುಚಿತ್ರಾ ಕೇಳಿದ್ದಾರೆ.

ಧನುಷ್ ವಿರುದ್ಧ ಆರೋಪ ಹೊರಿಸಿದ್ದ ಸುಚಿತ್ರಾ

2017ರಲ್ಲಿ ಸುಚಿತ್ರಾ ಅವರು ಧನುಷ್ ಸಹಾಯಕ ತಮ್ಮ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದರು. ಆ ಬಳಿಕ ಧನುಷ್ ಬಗ್ಗೆಯೂ ದೂರಿದ್ದರು. ಧನುಷ್ ಓರ್ವ ಡ್ರಗ್ ಅಡಿಕ್ಟ್ ವ್ಯಕ್ತಿ, ತಮಗೆ ಕಿರುಕುಳ ನೀಡಿದ್ದರು ಎಂದು ಹೇಳಿದ್ದರು. ಇದೀಗ ಮತ್ತೊಮ್ಮೆ ಧನುಷ್‌ ವಿರುದ್ದ ಮಾತನಾಡಿ ಸಂಚಲನ ಮೂಡಿಸಿದ್ದಾರೆ.

ಕಳೆದ ತಿಂಗಳು ಧನುಷ್‌ ಮತ್ತು ಐಶ್ವರ್ಯಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ʼʼಇಬ್ಬರೂ ಅಧಿಕೃತವಾಗಿ ಚೆನ್ನೈಯ ನ್ಯಾಯಾಲಯದಲ್ಲಿ ವಿಚ್ಛೇಧನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೆಲವು ವರ್ಷಗಳಿಂದ ಅವರು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅವರು ಪರಸ್ಪರ ಗೌರವ ಹೊಂದಿದ್ದಾರೆ. ಇದು ಸೌಹಾರ್ದಯುತ ಪ್ರಕ್ರಿಯೆಯಾಗಲಿದೆ” ಎಂದು ಮೂಲಗಳು ತಿಳಿಸಿವೆ.

ಸದ್ಯ ಧನುಷ್‌ ‌ʼರಾಯನ್‌ʼ ಚಿತ್ರದಲ್ಲಿ ನಟಿಸುವ ಜತೆಗೆ ನಿರ್ದೇಶನವನ್ನೂ ಮಾಡುತ್ತಿದ್ದಾರೆ. ರಾಷ್ಟ್ರ ಪಶಸ್ತಿ ವಿಜೇತ ನಟಿ ಅಪರ್ಣಾ ಬಾಲಮುರಳಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದರ ಜತೆಗೆ ಬಹುಭಾಷಾ ಸಿನಿಮಾ ʼಕುಬೇರʼದಲ್ಲಿಯೂ ಧನುಷ್‌ ನಟಿಸುತ್ತಿದ್ದು, ಇವರಿಗೆ ಜೋಡಿಯಾಗಿ ಕನ್ನಡತಿ ರಶ್ಮಿಕಾ ಮಂದಣ್ಣ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಐಶ್ವರ್ಯಾ ರಜನಿಕಾಂತ್‌ ನಿರ್ರದೇಶನದ ʼಲಾಲ್‌ ಸಲಾಂʼ ಬಾಕ್ಸ್‌ ಆಫೀಸ್‌ನಲ್ಲಿ ಅಷ್ಟೇನೂ ಸದ್ದು ಮಾಡಿಲ್ಲ. ಅವರ ಮುಂದಿನ ಸಿನಿಮಾ ಇನ್ನಷ್ಟೆ ಘೋಷಣೆಯಾಗಬೇಕಿದೆ.

ಇದನ್ನೂ ಓದಿ: Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Continue Reading

ಕಿರುತೆರೆ

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

Vaishnavi Gowda: ಕನ್ನಡದ ಜನಪ್ರಿಯ ಸೀತಾ ರಾಮ ಧಾರಾವಹಿಯ ನಾಯಕಿ ವೈಷ್ಣವಿ ಗೌಡ ಅವರಿಗೆ ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ. ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಅದರಂತೆ ಕ್ರಮ ಕೈಗೊಳ್ಳಲಾಗಿದೆ.

VISTARANEWS.COM


on

Vaishnavi Gowda
Koo

ಬೆಂಗಳೂರು: ಕಿರುತೆರೆಯ ಜನಪ್ರಿಯ ನಟಿ ವೈಷ್ಣವಿ ಗೌಡ (Vaishnavi Gowda) ಅವರಿಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರು ದಂಡದ ಬಿಸಿ ಮುಟ್ಟಿಸಿದ್ದಾರೆ. ಧಾರಾವಾಹಿಯ ದೃಶ್ಯವೊಂದರಲ್ಲಿ ಹೆಲ್ಮೆಟ್‌ ಧರಿಸದೆ ಸ್ಕೂಟರ್‌ನಲ್ಲಿ ಸಂಚರಿಸಿದ ಕಾರಣಕ್ಕೆ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಸದ್ಯ ಝೀ ಕನ್ನಡ ವಾಹಿನಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ʼಸೀತಾ ರಾಮʼ ಧಾರಾವಾಹಿಯಲ್ಲಿ ವೈಷ್ಣವಿ ಗೌಡ ನಾಯಕಿ ಸೀತಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 2023ರ ಜುಲೈ 17ರಂದು ಆರಂಭವಾದ ಈ ಧಾರಾವಾಹಿ ವೀಕ್ಷಕರ ಗಮನ ಸೆಳೆಯುತ್ತಿದೆ. ಆರಂಭವಾಗಿ ಸುಮಾರು 10 ತಿಂಗಳು ಕಳೆದಿದ್ದರೂ ಈಗಲೂ ಟಾಪ್‌ ಲಿಸ್ಟ್‌ನಲ್ಲಿದೆ. ಉತ್ತಮ ಟಿಆರ್‌ಪಿ ಪಡೆದುಕೊಳ್ಳುತ್ತಿರುವ ಈ ಧಾರಾವಾಹಿಯ ದೃಶ್ಯವೇ ಸದ್ಯ ವೈಷ್ಣವಿ ಗೌಡ ಅವರಿಗೆ ಫಜೀತಿ ತಂದಿಟ್ಟಿದೆ.

ಏನಿದು ಪ್ರಕರಣ?

ʼಸೀತಾ ರಾಮʼ ಧಾರಾವಾಹಿಯ 14ನೇ ಸಂಚಿಕೆಯ ದೃಶ್ಯ ಸದ್ಯ ಪ್ರಕರಣದ ಕೇಂದ್ರ ಬಿಂದು. ಇದರಲ್ಲಿ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಗೆಳೆತಿ ಪ್ರಿಯಾ (ಶ್ವೇತಾ ಶಂಕರಪ್ಪ) ಸ್ಕೂಟರ್‌ನಲ್ಲಿ ತೆರಳುವ ದೃಶ್ಯವಿದೆ. ಸ್ಕೂಟರ್‌ ಓಡಿಸುತ್ತಿದ್ದ ಶ್ವೇತಾ ಹೆಲ್ಮೆಟ್ ಧರಿಸಿದ್ದರೆ ಹಿಂದಿನ ಸೀಟಿನಲ್ಲಿದ್ದ ವೈಷ್ಣವಿ ಹೆಲ್ಮೆಟ್ ಧರಿಸಿರಲಿಲ್ಲ. ಇದನ್ನು ಉಲ್ಲೇಖಿಸಿ ಮಂಗಳೂರಿನ ಜಯಪ್ರಕಾಶ್‌ ಎಕ್ಕೂರು ಎನ್ನುವವರು ಮಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದರು. ವೈಷ್ಣವಿ ಗೌಡ ಟ್ರಾಫಿಕ್‌ ರೂಲ್ಸ್‌ ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಣಿಸಿದ ಪೊಲೀಸರಿಗೆ ಬಳಿಕ ಧಾರಾವಾಹಿಯ ಶೂಟಿಂಗ್ ಬೆಂಗಳೂರಿನ ನಂದಿನಿ ಲೇಔಟ್​ನಲ್ಲಿ ನಡೆದ ವಿಚಾರ ಗೊತ್ತಾಗಿತ್ತು. ಬಳಿಕ ಇದನ್ನು ಬೆಂಗಳೂರಿನ ರಾಜಾಜಿನಗರ ಠಾಣೆಗೆ ವರ್ಗಾಯಿಸಲಾಯಿತು. ಸದ್ಯ ಸ್ಕೂಟರ್‌ ಮಾಲೀಕರಾದ ಸವಿತಾ ಹಾಗೂ ವೈಷ್ಣವಿ ಅವರಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

ಹಿಂದಿಗೆ ರಿಮೇಕ್‌

ಸದ್ಯ ʼಸೀತಾ ರಾಮʼ ಧಾರಾವಾಹಿ ಹಿಂದಿಗೆ ರಿಮೇಕ್‌ ಆಗುತ್ತಿದೆ. ಹಿಂದಿ ರಿಮೇಕ್‌ಗೆ ‘ಮೇ ಹೂ ಸಾತ್ ತೆರೆ’ ಎನ್ನುವ ಶೀರ್ಷಿಕೆ ಇಡಲಾಗಿದೆ. ಇದು ಝೀ ಹಿಂದಿ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕನ್ನಡದಲ್ಲಿ ವೈಷ್ಣವಿ ಗೌಡ ಜತೆಗೆ ರಾಮ್‌ ಆಗಿ ಗಗನ್ ಚಿನ್ನಪ್ಪ ನಟಿಸುತ್ತಿದ್ದಾರೆ. ಧಾರಾವಾಹಿಯ ಪ್ರಧಾನ ಆಕರ್ಷಣೆಯಾದ ಸಿಹಿ ಪಾತ್ರದಲ್ಲಿ ಪುಟಾಣಿ ರೀತು ಸಿಂಗ್ ಮೋಡಿ ಮಾಡಿದ್ದಾರೆ. ಇವರ ಜತೆಗೆ ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು ಈ ಧಾರಾವಾಹಿಯ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಹಿಂದಿಯಲ್ಲಿ ಗಗನ್ ಚಿನ್ನಪ್ಪ ಮಾಡಿರುವ ರಾಮ್‌ ಪಾತ್ರವನ್ನು ಕರಣ್ ವೋಹ್ರಾ ನಿರ್ವಹಿಸಲಿದ್ದು, ವೈಷ್ಣವಿ ಗೌಡ ಅವರ ಸೀತಾ ಪಾತ್ರವನ್ನು ಪಾತ್ರವನ್ನು ‘ಜಾನ್ಸಿ ಕಿ ರಾಣಿ’ ಧಾರಾವಾಹಿ ಖ್ಯಾತಿಯ ಉಲ್ಕಾ ಗುಪ್ತಾ ಮಾಡುತ್ತಿದ್ದಾರೆ. ಇದರ ಜತೆಗೆ ʼಸೀತಾ ರಾಮʼ ಮಲೆಯಾಳಂಗೂ ಡಬ್‌ ಆಗುತ್ತಿದೆ. ಝೀ ಕೇರಳಂ ವಾಹಿನಿಯಲ್ಲಿ ಇದು ಪ್ರಸಾರವಾಗಲಿದೆ.

ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್‌ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ

ವಿಶೇಷ ಎಂದರೆ ʼಸೀತಾ ರಾಮʼ ಧಾರಾವಾಹಿಯೂ ರಿಮೇಕ್‌. ಇದು ಮರಾಠಿಯ ‘ಮಜಿ ತುಜಿ ರೆಶಿಮಗತ್’ ಧಾರಾವಾಹಿಯ ಕಥೆಯನ್ನು ಆಧರಿಸಿ ತಯಾರಾಗಿದೆ. ಈ ಧಾರಾವಾಹಿ ಝೀ ಮರಾಠಿಯಲ್ಲಿ 2021ರ ಆಗಸ್ಟ್​ನಿಂದ 2023ರ ಜನವರಿವರೆಗೆ ಪ್ರಸಾರವಾಗಿತ್ತು. 458 ಕಂತುಗಳನ್ನು ಹೊಂದಿದ್ದ ಇದರಲ್ಲಿ ಪ್ರಾರ್ಥನಾ ಬೆಹೆರೆ ಹಾಗೂ ಶ್ರೇಯಸ್ ತಲ್ಪಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಸಿನಿಮಾ

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

Ramayana Movie: ಸದ್ಯ ಚಿತ್ರ ಪ್ರೇಮಿಗಳ ಕುತೂಹಲ ಕೆರಳಿಸಿರುವ ಸಿನಿಮಾಗಳಲ್ಲಿ ರಾಮಾಯಣ ಕೂಡ ಒಂದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಕೆಜಿಎಫ್‌ ಸರಣಿ ಚಿತ್ರಗಳ ಮೂಲಕ ದೇಶದ ಗಮನ ಸೆಳೆದ ರಾಕಿ ಭಾಯಿ ಯಶ್‌ ರಾವಣನಾಗಿ ಈ ಸಿನಿಮಾ ಮೂಲಕ ಬಾಲಿವುಡ್‌ ಪ್ರವೇಶಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸದೊಂದು ಅಪ್‌ಡೇಟ್‌ ಹೊರ ಬಿದ್ದಿದೆ. ಈ ಚಿತ್ರದ ಬಜೆಟ್‌ ಎಷ್ಟು ಗೊತ್ತೆ?

VISTARANEWS.COM


on

Ramayana Movie
Koo

ಮುಂಬೈ: ಸದ್ಯ ದೇಶಾದ್ಯಂತ ʼರಾಮಾಯಣʼ (Ramayana Movie) ಚಿತ್ರದ್ದೇ ಸದ್ದು. ಬಾಲಿವುಡ್‌ನ ಖ್ಯಾತ ನಿರ್ದೇಶಕ ನಿತೇಶ್ ತಿವಾರಿ (Nitesh Tiwari) ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಸಿನಿಮಾ ಬಹು ತಾರಾಗಣದ ಮೂಲಕವೇ ಸುದ್ದಿಯಾಗುತ್ತಿದೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯರಾಗುತ್ತಿರುವ ಈ ಚಿತ್ರದಲ್ಲಿ ರಾಮನಾಗಿ ರಣಬೀರ್‌ ಕಪೂರ್‌ (Ranbir Kapoor) ಮತ್ತು ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ ರಾಕಿಂಗ್‌ ಸ್ಟಾರ್‌ ಯಶ್‌ (Yash) ಬಾಲಿವುಡ್‌ಗೆ ಕಾಲಿಡುತ್ತಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆಯಾಗಿಲ್ಲ. ಈ ಮಧ್ಯೆ ಸಿನಿಮಾ ಬಜೆಟ್‌ ಬಗ್ಗೆ ಹೊಸ ಅಪ್‌ಡೇಟ್‌ ಹೊರ ಬಿದ್ದಿದೆ.

ಬಜೆಟ್‌ ಎಷ್ಟು?

ʼರಾಮಾಯಣʼ ಸಿನಿಮಾ ಬರೋಬ್ಬರಿ 835 ಕೋಟಿ ರೂ. ವೆಚ್ಚದಲ್ಲಿ ತಯಾರಾಗುತ್ತಿದೆ ಎನ್ನುವ ಸುದ್ದಿ ಹಬ್ಬಿದೆ. ಈ ಮೂಲಕ ಭಾರತೀಯ ಸಿನಿರಂಗದಲ್ಲೇ ಅತೀ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ. ʼʼರಾಮಾಯಣ ಕೇವಲ ಸಿನಿಮಾವಲ್ಲ. ಅದೊಂದು ಭಾವನೆ. ನಂಬಿಕೆ. ಹೀಗಾಗಿ ನಿರ್ಮಾಪಕರು ಈ ಚಿತ್ರದ ತಯಾರಿಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ. ದುಬಾರಿ ವೆಚ್ಚದಲ್ಲಿ ನಿರ್ಮಾಪಕರು ತೆರೆ ಮೇಲೆ ಮ್ಯಾಜಿಕ್‌ ಮಾಡಲು ಮುಂದಾಗಿದ್ದಾರೆʼʼ ಎಂದು ಮೂಲವೊಂದು ತಿಳಿಸಿದೆ.

ಈಗಾಗಲೇ ರಾಮಾಯಣ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ. ಇತ್ತೀಚೆಗೆ ಶೂಟಿಂಗ್‌ನ ತುಣುಕೊಂಡು ಲೀಕ್‌ ಆಗಿ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ʼʼಚಿತ್ರದ ಬಜೆಟ್‌ 835 ಕೋಟಿ ರೂ.ಗೆ ತಲುಪಲಿದೆ. ಪೋಸ್ಟ್‌ ಪ್ರೊಡಕ್ಷನ್‌ಗೇ ಸುಮಾರು 600 ದಿನ ಬೇಕಾಗುತ್ತದೆ. ಈ ಮೂಲಕ ಜಾಗತಿಕ ಮಟ್ಟದಲ್ಲಿ ಭಾರತೀಯ ಸಿನಿಮಾವೊಂದು ರಾರಾಜಿಸಲಿದೆʼʼ ಎಂದು ವರದಿಯೊಂದರಲ್ಲಿ ವಿವರಿಸಲಾಗಿದೆ.

ಅತ್ಯಂತ ದುಬಾರಿ ಚಿತ್ರ

ಪ್ರಭಾಸ್‌ ಅಭಿನಯದ, ಕಳೆದ ವರ್ಷ ತೆರೆಕಂಡ ʼಆದಿಪುರುಷ್‌ʼ ಸಿನಿಮಾ ಇದುವರೆಗಿನ ಅತ್ಯಂತ ವೆಚ್ಚದ ಸಿನಿಮಾ ಎನಿಸಿಕೊಂಡಿತ್ತು. ರಾಮಾಯಣವನ್ನು ಆಧರಿಸಿದ ಇದು ಸುಮಾರು 700 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗಿತ್ತು ಎನ್ನಲಾಗಿದೆ. ಎರಡನೇ ಸ್ಥಾನದಲ್ಲಿ ಪ್ರಭಾಸ್‌ ಅವರದ್ದೇ ʼಕಲ್ಕಿ 2898 ಎಡಿʼ ಸಿನಿಮಾ ಇದೆ. ದೀಪಿಕಾ ಪಡುಕೋಣೆ ನಾಯಕಿಯಾಗಿರುವ ಇದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿದ್ದು, ಈ ಚಿತ್ರದ ಬಜೆಟ್‌ ಸುಮಾರು 600 ಕೋಟಿ ರೂ. ಇನ್ನು ರಜನಿಕಾಂತ್‌ ನಟಿಸಿದ್ದ ʼ2.0ʼ ಚಿತ್ರಕ್ಕೆ 570 ಕೋಟಿ ರೂ. ವೆಚ್ಚವಾಗಿತ್ತು. ಹೀಗಾಗಿ ʼರಾಮಾಯಣʼ ಇದುವರೆಗಿನ ದುಬಾರಿ ಸಿನಿಮಾ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಇದು ಸುಮಾರು 3 ಭಾಗಗಳಲ್ಲಿ ತೆರೆಗೆ ಬರಲಿದೆ ಎನ್ನುವ ಸುದ್ದಿಯೂ ಇದೆ.

ಯಶ್‌ ನಟಿಸುತ್ತಾರಾ?

ʼಕೆಜಿಎಫ್‌ʼ ಸರಣಿ ಸಿನಿಮಾ ಮೂಲಕ ದೇಶದ ಗಮನ ಸೆಳೆದ ಸ್ಯಾಂಡಲ್‌ವುಡ್‌ ನಟ ಯಶ್‌ ರಾಮಾಯಣ ಸಿನಿಮಾದಲ್ಲಿ ರಾವಣನನಾಗಿ ಅಬ್ಬರಿಸಲಿದ್ದಾರೆ. ಅದಕ್ಕಾಗಿ ದುಬಾರಿ ಸಂಭಾವನೆಯನ್ನೇ ಪಡೆದುಕೊಂಡಿದ್ದಾರೆ ಎನ್ನುವ ಸುದ್ದಿ ಹರಡಿದೆ. ಇದರ ಜತೆಗೆ ಯಶ್‌ ನಟಿಸುತ್ತಿಲ್ಲ, ಬದಲಾಗಿ ಚಿತ್ರ ನಿರ್ಮಾಣದಲ್ಲಿ ಕೈ ಜೋಡಿಸುತ್ತಿದ್ದಾರೆ ಎಂದೂ ಹೇಳಲಾಗುತ್ತಿದೆ. ಆದರೆ ಇದುವರೆಗೆ ಈ ಬಗ್ಗೆ ಚಿತ್ರತಂಡವಾಗಲೀ, ಯಶ್‌ ಕಡೆಯಿಂದಾಗಲೀ ಸ್ಪಷ್ಟನೆ ದೊರೆತಿಲ್ಲ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ನಟಿಸುತ್ತಾರೆ ಎಂದು ವರದಿಯಾಗಿದೆ. ಸದ್ಯ ಯಶ್ ಮತ್ತೊಂದು ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ.

Continue Reading
Advertisement
copper mine lift collapse
ಪ್ರಮುಖ ಸುದ್ದಿ5 mins ago

M‌ine Lift Collapse: ತಾಮ್ರದ ಗಣಿಯೊಳಗೆ ಲಿಫ್ಟ್‌ ಕುಸಿದು 14 ಮಂದಿ ಪಾತಾಳದಲ್ಲಿ ಟ್ರ್ಯಾಪ್

Health Tips in Kannada
ಆರೋಗ್ಯ10 mins ago

Health Tips in Kannada: ಕುತ್ತಿಗೆ ನೋವಿನಿಂದ ಬಳಲುತ್ತಿದ್ದೀರಾ? ಈ ಸಂಗತಿ ತಿಳಿದುಕೊಂಡಿರಿ

Mango Juice Benefits
ಆರೋಗ್ಯ1 hour ago

Mango Juice Benefits: ತಾಜಾ ಮಾವಿನ ರಸ ಕುಡಿಯುವುದರಿಂದ ಎಷ್ಟೊಂದು ಪ್ರಯೋಜನ ಇದೆ ನೋಡಿ…

Karnataka Weather Forecast
ಉಡುಪಿ1 hour ago

Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

SSLC Result
ಪ್ರಮುಖ ಸುದ್ದಿ7 hours ago

ವಿಸ್ತಾರ ಸಂಪಾದಕೀಯ: ರಾಜ್ಯ ಪ್ರಾಥಮಿಕ- ಪ್ರೌಢಶಾಲಾ ಶಿಕ್ಷಣದ ಪರಿಸ್ಥಿತಿ ಸರಿಹೋಗುವುದೆಂದು?

Kangana Ranaut
ಪ್ರಮುಖ ಸುದ್ದಿ7 hours ago

Kangana Ranaut : ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್​ ಬಳಿ ಇರುವ ಆಸ್ತಿ ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

heavy wind and rain damaged tree and electricity poles In Jholada Gudde village
ಶಿವಮೊಗ್ಗ7 hours ago

Karnataka Weather: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್‌ ಮರ, ವಿದ್ಯುತ್‌ ಕಂಬ

ಪ್ರಮುಖ ಸುದ್ದಿ7 hours ago

SSLC Result 2024: ಎಸ್‌ಎಸ್‌ಎಲ್‌ಸಿ ಸಾಧಕರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ಘೋಷಿಸಿದ ಸಿಎಂ, ಡಿಸಿಎಂ

IPL 2024
ಕ್ರಿಕೆಟ್7 hours ago

IPL 2024 : ಲಕ್ನೊ ವಿರುದ್ಧ 19 ರನ್ ವಿಜಯ, ಗೆಲುವಿನೊಂದಿಗೆ ಐಪಿಎಲ್​ ಅಭಿಯಾನ ಮುಗಿಸಿದ ಡೆಲ್ಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

Prajwal Revanna Case
ಕರ್ನಾಟಕ10 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ನಾಳೆಯೇ ಜರ್ಮನಿಯಿಂದ ಭಾರತಕ್ಕೆ?; ವಿಸ್ತಾರ ನ್ಯೂಸ್‌ಗೆ ಮಹತ್ವದ ದಾಖಲೆ ಲಭ್ಯ

HD Revanna Released first reaction after release will be acquitted of all charges
ರಾಜಕೀಯ12 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202414 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202418 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ18 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು19 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌