ಬೆಂಗಳೂರು : ಒಂದು ಮೊಟ್ಟೆಯ ಕಥೆ ಚಿತ್ರದ ನಾಯಕ ರಾಜ್ ಬಿ ಶೆಟ್ಟಿ (Raj B Shetty) ಈಗಾಗಲೇ ನಟಿ ರಮ್ಯಾ ಜತೆ ಸಿನಿಮಾ ಮಾಡುತ್ತಿರುವುದು ತಿಳಿದೇ ಇದೆ. ಇದೀಗ ಮಾಲಿವುಡ್‌ನಲ್ಲಿ ಹೆಜ್ಜೆ ಇಡಲು ಸಜ್ಜಾಗಿದ್ದಾರೆ. ವಿಶೇಷ ಅಂದರೆ ರಾಷ್ಟ್ರ ಪ್ರಶಸ್ತಿ ವಿಜೇತೆ ಅಪರ್ಣಾ ಬಾಲಮುರಳಿ ಜತೆ ನಟಿಸುತ್ತಿದ್ದಾರೆ.
ಸ್ಯಾಂಡಲ್‌ವುಡ್ ನಟಿ ರಮ್ಯಾ ಜತೆಗೆ ʻʻಸ್ವಾತಿ ಮುತ್ತಿನ ಮಳೆ ಹನಿಯೇʼʼ ಚಿತ್ರದ ಅನೌನ್ಸ್ ಆದ ಬೆನ್ನಲ್ಲೇ, ಮಾಲಿವುಡ್ ಚಿತ್ರರಂಗ ಪ್ರವೇಶಿಸುತ್ತಿರುವ ವಿಷಯವನ್ನು ಪೋಸ್ಟರ್ ಹಂಚಿಕೊಳ್ಳುವುದರ ಮೂಲಕ ರಾಜ್ ಬಿ ಶೆಟ್ಟಿ ಹೇಳಿಕೊಂಡಿದ್ದಾರೆ.
ಚಿತ್ರವನ್ನು ನಿರ್ದೇಶಕ ಜಿಶೋ ಲೋನ್ ಆಂಟನಿ ಎಂಬುವರು ನಿರ್ದೇಶಿಸಲಿದ್ದು ‘ರುಧಿರಂ’ ಎಂಬ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ವಿಎಸ್ ಲಾಲನ್ ಬಂಡವಾಳ ಹೂಡಲಿದ್ದು ಮಿಥುನ್ ಮುಕುಂದನ್ ಸಂಗೀತ ಚಿತ್ರಕ್ಕಿರಲಿದೆ. ಮೂಲ ಮಲಯಾಳಂನಲ್ಲಿ ಈ ಚಿತ್ರ ಬಂದರೂ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದೆ ಚಿತ್ರತಂಡ. ಈ ಮೂಲಕ ಹಿಂದಿಯಲ್ಲಿ ಚಿತ್ರ ಬಿಡುಗಡೆಯಾಗುವುದಿಲ್ಲ ಎಂಬುದು ತಿಳಿದುಬಂದಿದೆ.
ಇದನ್ನೂ ಓದಿ | Actor Suriya | ತಮಿಳು ನಟ ಸೂರ್ಯ ಜತೆ ಸಿನಿಮಾ ಮಾಡಲು ಮುಂದಾಗಿದೆ ಹೊಂಬಾಳೆ ಫಿಲ್ಮ್ಸ್
ʻಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದಲ್ಲಿಕ್ಕೆ ರಮ್ಯಾ ನಿರ್ಮಾಪಕಿಯಾಗಿದ್ದಾರೆ. ಹಾಗೆಯೇ, ನಾಯಕಿಯೂ ಆಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು.ಈ ಸಿನಿಮಾದಲ್ಲಿ ಸಿರಿ ರವಿಕುಮಾರ್ ಲೀಡ್ ಪಾತ್ರದಲ್ಲಿ ಮಾಡಲಿದ್ದಾರೆ ಎಂದು ಸ್ವತಃ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ತಿಳಿಸಿದೆ.
ಆ್ಯಪಲ್ ಬಾಕ್ಸ್ ಅಧಿಕೃತ ಪೇಜಿನಲ್ಲಿ ಹಾಕಿರುವಂತೆ, ‘ಸಿರಿ ರವಿಕುಮಾರ್ ನಮ್ಮ ನಿರ್ಮಾಣದ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆದರೆ, ರಮ್ಯಾ ಬೆಳ್ಳಿಪರದೆಗೆ ಆದಷ್ಟು ಬೇಗ ಮರಳಲಿದ್ದಾರೆ’ ಎಂದು ಬರೆಯಲಾಗಿದೆ. ಅಲ್ಲಿಗೆ ರಮ್ಯಾ ಕೇವಲ ನಿರ್ಮಾಪಕಿಯಾಗಿ ಮಾತ್ರ ಉಳಿಯಲಿದ್ದಾರಾ ಅಥವಾ ಇಬ್ಬರು ನಾಯಕಿಯರು ಈ ಸಿನಿಮಾದಲ್ಲಿ ಇದ್ದಾರಾ ಎನ್ನುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.
ಇದನ್ನೂ ಓದಿ | Actress Ramya | ʻಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾಗೆ ರಮ್ಯಾ ಬೈ? ಹೊಸ ನಟಿಯ ಹೆಸರು ರಿವೀಲ್!