Site icon Vistara News

Ram Mandir: ಅಯೋಧ್ಯೆಗೆ ತೆರಳಿದ ಸೂಪರ್‌ ಸ್ಟಾರ್‌ ರಜನಿಕಾಂತ್‌, ಧನುಷ್‌, ಪವನ್‌ ಕಲ್ಯಾಣ್‌!

Rajinikanth and Dhanush leave for Ayodhya to attend Ram Mandir

ಚೆನ್ನೈ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ಸೋಮವಾರ (ಜನವರಿ 22) ಪ್ರಾಣಪ್ರತಿಷ್ಠೆ ನೆರವೇರಿಸಲಾಗುತ್ತದೆ. ರಾಮಮಂದಿರದ (Ram Mandir) 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೆಲೆಬ್ರಿಟಿಗಳು ಸಿದ್ಧರಾಗಿದ್ದಾರೆ. ಧನುಷ್, ರಜನಿಕಾಂತ್, ಚಿರಂಜೀವಿ, ರಾಮ್ ಚರಣ್, ನಿಖಿಲ್‌ ಕುಮಾರ್‌ ರಿಷಬ್‌, ಕಂಗನಾ ಮತ್ತು ಇತರ ಅನೇಕ ನಟರು ಕಾರ್ಯಕ್ರಮಕ್ಕೆ ಆಹ್ವಾನವನ್ನು ಸ್ವೀಕರಿಸಿ ಈಗಾಗಲೇ ಅಯೋಧ್ಯೆಗೆ ಹೊರಟ್ಟಿದ್ದಾರೆ. ಕೆಲವು ಸೆಲೆಬ್ರಿಟಿಗಳು ಒಂದು ದಿನ ಮುಂಚಿತವಾಗಿ ಅಯೋಧ್ಯೆಗೆ ತಲುಪಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಿಂದ ರಜನಿಕಾಂತ್ ಮತ್ತು ಧನುಷ್ ಅಯೋಧ್ಯೆಗೆ ತೆರಳುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಚೆನ್ನೈ ವಿಮಾನ ನಿಲ್ದಾಣದಿಂದ ರಜನಿಕಾಂತ್ ಮತ್ತು ಧನುಷ್ ಅಯೋಧ್ಯೆಗೆ ತೆರಳುತ್ತಿರುವ ವಿಡಿಯೊ ವೈರಲ್‌ ಆಗಿದೆ. ಹಸಿರು ಟೀ ಶರ್ಟ್ ಧರಿಸಿದ್ದ ರಜನಿಕಾಂತ್ ಅವರು ಕಾರಿನಿಂದ ಹೊರಬರುತ್ತಿದ್ದಂತೆ ಅಭಿಮಾನಿಗಳು ಮತ್ತು ಮಾಧ್ಯಮದವರು ಸುತ್ತಿವರಿದಿದ್ದರು.ಧನುಷ್ ನೀಲಿ ಬಣ್ಣದ ಟ್ರ್ಯಾಕ್‌ಸೂಟ್ ಅಲ್ಲಿ ಕಾಣಿಸಿಕೊಂಡರು. ನಟ ವಿವೇಕ್ ಒಬೆರಾಯ್ ಮುಂಬೈನಿಂದ ಅಯೋಧ್ಯೆಗೆ ತೆರಳುತ್ತಿರುವ ವಿಡಿಯೊ ಕೂಡ ವೈರಲ್‌ ಆಗಿದೆ.

ಕಂಗನಾ ರಣಾವತ್ ಈಗಾಗಲೇ ಅಯೋಧ್ಯೆಯಲ್ಲಿದ್ದು, ನಾಳೆ ನಡೆಯುವ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುನ್ನ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡಿದ್ದಾರೆ. ದೇವಾಲಯದ ಆವರಣವನ್ನು ಗುಡಿಸಿದರು. ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನದ ಸ್ವಚ್ಛತಾ ಅಭಿಯಾನದ ಭಾಗವಾಗಿದದ್ದರು. ಈಗಾಗಲೇ ಪವನ್‌ ಕಲ್ಯಾಣ್‌ ಕೂಡ ಅಯೋಧ್ಯೆಗೆ ಹೊರಟ್ಟಿದ್ದಾರೆ.

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಗೋವಿಂದ್ ದೇವ್ ಗಿರಿ ಅವರು ರಾಮಮಂದಿರ ನಿರ್ಮಾಣಕ್ಕೆ ಇಲ್ಲಿಯವರೆಗೆ 1,100 ಕೋಟಿ ರೂ. ಹೆಚ್ಚು ಖರ್ಚು ಮಾಡಲಾಗಿದೆ ಎಂದು ಹೇಳಿದ್ದಾರೆ. ಕಾಮಗಾರಿ ಪೂರ್ಣಗೊಳಿಸಲು ಇನ್ನೂ 300 ಕೋಟಿ ರೂ. ಬೇಕಾಗಬಹುದು ಎಂದು ತಿಳಿಸಿದರು. ದೇವಸ್ಥಾನಕ್ಕೆ ಅನೇಕರು ದೇಣಿಗೆ ನೀಡಿದ್ದಾರೆ. ಅಕ್ಷಯ್ ಕುಮಾರ್, ಅನುಪಮ್ ಖೇರ್ ಮತ್ತು ಗುರ್ಮೀತ್ ಚೌಧರಿ ಸೇರಿದಂತೆ ಚಲನಚಿತ್ರ ಮತ್ತು ಟೆಲಿವಿಷನ್‌ ಸೇರಿ ಹಲವಾರು ಸೆಲೆಬ್ರಿಟಿಗಳು ದೇವಾಲಯದ ನಿರ್ಮಾಣಕ್ಕೆ ಕೊಡುಗೆ ನೀಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Ram Mandir : ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಆನ್​ಲೈನ್​ನಲ್ಲಿ ವೀಕ್ಷಿಸುವುದು ಹೇಗೆ?

ಇನ್ನು ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಮಾಧುರಿ ದೀಕ್ಷಿತ್‌, ಅಕ್ಷಯ್‌ ಕುಮಾರ್‌, ಆಲಿಯಾ ಭಟ್‌, ಆಯುಷ್ಮಾನ್‌ ಕುರಾನ, ಅಜಯ್‌ ದೇವಗನ್‌, ಅನುಪಮ್‌ ಖೇರ್‌, ಸಂಜಯ್‌ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ. ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಅವರೊಂದಿಗೆ ಚಿರಂಜೀವಿ ಅವರು ಕೂಡ ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಪ್ರಾಣ ಪ್ರತಿಷ್ಠಾ ಎಂದರೇನು?

ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.

ಇದನ್ನೂ ಓದಿ: Ram Mandir: 500 ವರ್ಷಗಳ ತಾಳ್ಮೆಯ ನಂತರ ಭವ್ಯ ರಾಮ‌ ಮಂದಿರ ಉದ್ಘಾಟನೆ: ಪ್ರಲ್ಹಾದ್‌ ಜೋಶಿ

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

Exit mobile version