Site icon Vistara News

Abhishek Ambareesh Wedding: ಅಭಿಷೇಕ್‌ ಅಂಬರೀಶ್‌- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್‌!

Rajinikanth Came to Abhishek Ambareesh And Aviva marriage

ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್‌ ಅಂಬರೀಶ್‌ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

ರಜನಿಕಾಂತ್ ಭಾಗವಹಿಸಿ ಮುವೆಯ ಸಂಭ್ರಮದಲ್ಲಿ ಭಾಗವಹಿಸಿ ದಂಪತಿಯನ್ನು ಆಶೀರ್ವದಿಸಿದರು. ಇದೀಗ ವಿಡಿಯೊ, ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.


ಕರ್ಕಾಟಕ ಲಗ್ನದಲ್ಲಿ (9:30-10:30) ಇಬ್ಬರೂ ಹಸೆಮಣೆ ಏರಿದರು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು.

ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.

Exit mobile version