ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ಆಗಸ್ಟ್ 19ರಂದು ಉತ್ತರ ಪ್ರದೇಶ ತಲುಪಿದ್ದಾರೆ. ಲಕ್ನೋಗೆ ತಲುಪಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಜೈಲರ್ ಸಿನಿಮಾವನ್ನು (Jailer Movie) ವೀಕ್ಷಿಸುವುದಾಗಿ (Jailer with CM Yogi Adityanath) ಮಾಧ್ಯಮದ ಮುಂದೆ ಹಂಚಿಕೊಂಡರು. ಈ ವೇಳೆ ಚಿತ್ರದ ಯಶಸ್ಸಿನ ಬಗ್ಗೆಯೂ ಪ್ರತಿಕ್ರಿಯಿಸಿದ್ದಾರೆ.
ಸಿಎಂ ಅವರೊಂದಿಗಿನ ಮುಂಬರುವ ಭೇಟಿಯ ಕುರಿತು ರಜನಿಕಾಂತ್ ಮಾತನಾಡಿʻʻ”ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಜೈಲರ್ ಸಿನಿಮಾವನ್ನು ವೀಕ್ಷಿಸಲಿದ್ದೇನೆ” ಎಂದು ಹೇಳಿದರು. ಅಷ್ಟೇ ಅಲ್ಲದೇ ಜೈಲರ್ ಸಕ್ಸಸ್‌ಗೆ ದೇವರ ಆಶೀರ್ವಾದ ಕಾರಣ ಎಂದು ಹೇಳಿದರು. ಇಂದು (ಆಗಸ್ಟ್ 19) ರಂದು ರಜನಿಕಾಂತ್, ಲಖನೌನಲ್ಲಿರುವ ಕೆಲವು ಆಧ್ಯಾತ್ಮಿಕ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.
ಈ ಹಿಂದೆ ರಜನಿಕಾಂತ್ ರಾಂಚಿಯಲ್ಲಿದ್ದರು. ಆಗಸ್ಟ್ 18ರಂದು ಚಿನ್ನಮಸ್ತ ದೇವಸ್ಥಾನಕ್ಕೆ ಭೇಟಿ ನೀಡಿ ಹರಕೆ ತೀರಿಸಿದ್ದರು. ರಾಂಚಿಯ ಯಗೋಡಾ ಆಶ್ರಮದಲ್ಲಿ ಒಂದು ಗಂಟೆ ಧ್ಯಾನ ಮಾಡಿ ಬಳಿಕ ಜಾರ್ಖಂಡ್ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್ ಅವರನ್ನು ರಾಜಭವನದಲ್ಲಿ ಭೇಟಿಯಾಗಿದ್ದರು.
ಸಿನಿಮಾ ರಿಲೀಸ್ ಆಗಿ ಶುಕ್ರವಾರ 9ನೇ ದಿನ. ಅಂದು ಸಿನಿಮಾ ಭಾರತದಲ್ಲಿ 10 ಕೋಟಿ ಕಲೆಕ್ಷನ್ ಮಾಡಿದೆ. ಮೊದಲ ವಾರದ ಜೈಲರ್ ಕಲೆಕ್ಷನ್ 235.65 ಕೋಟಿ ಇದ್ದು ವಿಶ್ವಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ.ಸಿನಿಮಾದ ತಮಿಳು ವರ್ಷನ್ 186.05 ಕೋಟಿ ಗಳಿಸಿದ್ದು ತೆಲುಗಿನಲ್ಲಿ 46.99 ಕೋಟಿ ಗಳಿಸಿದೆ. ಕನ್ನಡ ಹಾಗೂ ಹಿಂದಿ 1.9 ಕೋಟಿ ಗಳಿಸಿದೆ. ವಿಶ್ಲೇಷಕ ಮನೋಬಲ ವಿಜಯಬಾಲನ್ ಪ್ರಕಾರ ಈ ಸಿನಿಮಾದ ಸದ್ಯದ ಒಟ್ಟು ಕಲೆಕ್ಷನ್ 470.17 ಕೋಟಿ ರೂಪಾಯಿ.
ಇದನ್ನೂ ಓದಿ: Jailer Movie: `ಜೈಲರ್ 2’ನಲ್ಲಿ ಸೂಪರ್ ಸ್ಟಾರ್ ರಜನಿ ಜತೆ ದಳಪತಿ ವಿಜಯ್?
ರಜನಿಕಾಂತ್ ಮತ್ತು ಮೋಹನ್ ಲಾಲ್ ಕಾಂಬಿನೇಷನ್ ಸಿನಿಮಾ ಇದಾಗಿದ್ದು ಇದೇ ಮೊದಲ ಬಾರಿಗೆ ಇಬ್ಬರು ನಟರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ರಜನಿಕಾಂತ್ ಅವರ 169ನೇ ಚಿತ್ರ ಇದಾಗಿದೆ. ಸನ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಕಲಾನಿಧಿ ಮಾರನ್ ನಿರ್ಮಿಸಿದ್ದಾರೆ. ಕೇರಳದಲ್ಲಿ ಚಿತ್ರದ ವಿತರಣಾ ಹಕ್ಕುಗಳನ್ನು ಶ್ರೀ ಗೋಕುಲಂ ಮೂವೀಸ್ ಬ್ಯಾನರ್ ಅಡಿಯಲ್ಲಿ ಗೋಕುಲಂ ಗೋಪಾಲನ್ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: Jailer Movie: ʻವಿಕ್ರಮ್ʼ ಲೈಫ್‌ಟೈಮ್ ಕಲೆಕ್ಷನ್ ಮೀರಿಸಿದ ʻಜೈಲರ್ʼ; ಅಲ್ಲಿ ಮಾತ್ರ 2 ಕೋಟಿ ರೂ. ಗಳಿಸಿಲ್ಲ!
ಸೂಪರ್ ಸ್ಟಾರ್ ರಜನಿಕಾಂತ್ ಜತೆ ಸ್ಯಾಂಡಲ್‌ವುಡ್ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಇದೀಗ ಜೈಲರ್ ಮುಂದುವರಿದ (jailer 2) ಭಾಗಕ್ಕೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಸೂಪರ್ ಸ್ಟಾರ್ ರಜನಿಕಾಂತ್ ಜತೆಗೆ ಕಾಲಿವುಡ್ ಪವರ್ ಸ್ಟಾರ್ ದಳಪತಿ ವಿಜಯ್ (thalapathy Vijay) ಕೂಡ ಕಣಕ್ಕಿಳಿಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.