Raju Srivastava | ಫಲಿಸಲಿಲ್ಲ ಒಂದೂವರೆ ತಿಂಗಳ ಚಿಕಿತ್ಸೆ; ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್​ ನಿಧನ - Vistara News

ಪ್ರಮುಖ ಸುದ್ದಿ

Raju Srivastava | ಫಲಿಸಲಿಲ್ಲ ಒಂದೂವರೆ ತಿಂಗಳ ಚಿಕಿತ್ಸೆ; ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್​ ನಿಧನ

ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಕ್ಕು-ನಲಿಸಿದ್ದ ಖ್ಯಾತ ನಟ ರಾಜು ಶ್ರೀವಾಸ್ತವ್​ ಇಂದು ನಿಧನರಾದರು. ಆಗಸ್ಟ್​ 10ರಂದು ಹೃದಾಯಾಘಾತಕ್ಕೊಳಗಾಗಿ ಏಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

VISTARANEWS.COM


on

Raju Srivastava
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ್​ ನಿಧನರಾಗಿದ್ದಾರೆ. ಅವರಿಗೆ 58ವರ್ಷ ವಯಸ್ಸಾಗಿತ್ತು. ಆಗಸ್ಟ್​ 10ರಂದು ಜಿಮ್​​ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗ​ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ದೆಹಲಿಯ ಏಮ್ಸ್​​ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಒಂದೂವರೆ ತಿಂಗಳು ಚಿಕಿತ್ಸೆ ನೀಡಿದ್ದರೂ ಫಲಕಾರಿಯಾಗದೆ, ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ಅವರ ಮಿದುಳು ಕಾರ್ಯನಿಲ್ಲಿಸಿತ್ತು ಎಂದು ಹೇಳಲಾಗಿದೆ.

ರಾಜು ಶ್ರೀವಾಸ್ತವ್​ ಎಂದಿನಂತೆ ಆಗಸ್ಟ್​ 10ರಂದು ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದರು. ಆಗ ತೀವ್ರ ಹೃದಯಾಘಾತದಿಂದ ಕುಸಿದುಬಿದ್ದಿದ್ದರು. ಜಿಮ್​ ತರಬೇತುದಾರ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರೂ ರಾಜುಗೆ ಎಚ್ಚರ ಇರಲಿಲ್ಲ. ಸುಮಾರು 15 ದಿನ ಅವರು ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದರು. ವೆಂಟಿಲೇಟರ್​​ನಲ್ಲೇ ಇಟ್ಟು ಆರೈಕೆ ಮಾಡಲಾಗುತ್ತಿತ್ತು. ಎರಡು ಸಲ ಸಿಪಿಆರ್ (Cardiopulmonary Resuscitation)​ ಚಿಕಿತ್ಸೆ ಕೂಡ ನೀಡಲಾಗಿತ್ತು. ಆಗಸ್ಟ್​ 25ರಂದು ಅವರು ಎಚ್ಚರಗೊಂಡಾಗ, ಆರೋಗ್ಯ ಸುಧಾರಿಸಬಹುದು ಎಂಬ ಭರವಸೆ ಹುಟ್ಟಿತ್ತು. ಆದರೆ ಮತ್ತೆ ಸೆಪ್ಟೆಂಬರ್​ 1ರಂದು ವಿಪರೀತ ಜ್ವರ ಕಾಡಿತ್ತು. ಮತ್ತೆ ಆರೋಗ್ಯ ಕ್ಷೀಣಿಸುತ್ತ ಬಂದಿತ್ತು. ಇದೀಗ ಒಂದೂವರೆ ತಿಂಗಳ ಚಿಕಿತ್ಸೆ, ಅನೇಕಾನೇಕ ಅಭಿಮಾನಿಗಳ ಪ್ರಾರ್ಥನೆ ಫಲಿಸಲಿಲ್ಲ. ಇಂದು ಬೆಳಗ್ಗೆ ರಾಜು ಉಸಿರು ನಿಲ್ಲಿಸಿದ್ದಾರೆ.

ರಾಜು ಶ್ರೀವಾಸ್ತವ್​​ರಿಗೆ ಹೃದಯಾಘಾತವಷ್ಟೇ ಅಲ್ಲ, ಮಿದುಳಿನಲ್ಲೂ ರಕ್ತ ಹೆಪ್ಪುಗಟ್ಟಿತ್ತು. ಇದೇ ಕಾರಣಕ್ಕೇ ಅವರ ಆರೋಗ್ಯ ಕ್ಷೀಣಿಸುತ್ತಿತ್ತು. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಇಬ್ಬರೂ ರಾಜು ಶ್ರೀವಾಸ್ತವ್​ ಪತ್ನಿ ಶಿಖಾ ಶ್ರೀವಾಸ್ತವ್​ಗೆ ಕರೆ ಮಾಡಿ, ಚಿಕಿತ್ಸೆಗೆ ಪೂರ್ತಿ ಸಹಾಯ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಏನೆಲ್ಲ ಪ್ರಯತ್ನ ಪಟ್ಟರೂ ಬದುಕುಳಿಯಲಿಲ್ಲ ಹಾಸ್ಯನಟ.

ರಾಜು ಶ್ರೀವಾಸ್ತವ ಅವರು 1980ರಲ್ಲಿಯೇ ಮನರಂಜನೆ ಕ್ಷೇತ್ರ ಪ್ರವೇಶಿಸಿ ಹ್ಯಾಸನಟರಾಗಿ ಗುರುತಿಸಿಕೊಂಡಿದ್ದಾರೆ. “ಬಾಜಿಗರ್‌”, “ಮೈನೆ ಪ್ಯಾರ್‌ ಕಿಯಾ”, “ಬಾಂಬೆ ಟು ಗೋವಾ” ಸೇರಿ ಬಾಲಿವುಡ್‌ನ (Bollywood) ಹಲವು ಸಿನಿಮಾಗಳಲ್ಲಿ ಮನೋಜ್ಞವಾಗಿ ನಟಿಸಿದ್ದಾರೆ. 2005ರಲ್ಲಿ ಆರಂಭವಾದ “ದಿ ಗ್ರೇಟ್‌ ಇಂಡಿಯನ್‌ ಲಾಫ್ಟರ್‌ ಚಾಲೆಂಜ್‌” ರಿಯಾಲಿಟಿ ಶೋನಲ್ಲಿ ಭಾಗವಹಿಸಿ, ಖ್ಯಾತಿ ಗಳಿಸುವ ಜತೆಗೆ ಸ್ಟ್ಯಾಂಡಪ್‌ ಕಮಿಡಿಯನ್‌ ಆಗಿಯೂ ರೂಪುಗೊಂಡರು. ಇನ್ನು, “ಪೇಟ್‌ ಸಫಾ” ಜಾಹೀರಾತಂತೂ ರಾಜು ಶ್ರೀವಾಸ್ತವ ಅವರನ್ನು ಮನೆಮಾತಾಗಿಸಿದೆ.

ಇದನ್ನೂ ಓದಿ: Raju Srivastava | ಹಾಸ್ಯನಟ ರಾಜು ಶ್ರೀವಾಸ್ತವ್​​ಗೆ ಮರಳಿದ ಪ್ರಜ್ಞೆ; ಮುಂದುವರಿದ ಚಿಕಿತ್ಸೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

HD Revanna: HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ, ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. ಇದಾದ ಬಳಿಕ ಎಚ್‌.ಡಿ.ಕುಮಾರಸ್ವಾಮಿ ಅವರು ಮಹತ್ವದ ಸಭೆ ನಡಸಿದ್ದು, ಎಚ್‌.ಡಿ.ರೇವಣ್ಣ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಮಗ ಪ್ರಜ್ವಲ್‌ ರೇವಣ್ಣ (Prajwal Revanna) ಮಾಡಿದ್ದಾರೆ ಎನ್ನಲಾದ ತಪ್ಪಿಗೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ (HD Revanna) ಬಂಧಿತರಾಗಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು (SIT Officials) ವಶಪಡಿಸಿಕೊಂಡಿದ್ದು, ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊಗಳು ವೈರಲ್‌ ಆದ ಬಳಿಕ ವಿದೇಶಕ್ಕೆ ಪರಾರಿಯಾಗಿದ್ದು, ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಈಗ ಎಚ್‌.ಡಿ.ರೇವಣ್ಣ ಅವರನ್ನೂ ಅಮಾನತುಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ.

ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸುತ್ತಲೇ ಮಾಜಿ ಸಿಎಂ, ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಜಿ.ಟಿ.ದೇವೇಗೌಡ ಸೇರಿ ಹಲವರೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣವು ಜೆಡಿಎಸ್‌ಗೆ ಮುಜುಗರ ತಂದಿದ್ದು, ಮೈತ್ರಿ ಪಕ್ಷವಾದ ಬಿಜೆಪಿಯೂ ಪ್ರಕರಣದಿಂದ ದಿನೇದಿನೆ ಅಂತರ ಕಾಪಾಡಿಕೊಳ್ಳುತ್ತಿದೆ. ಹಾಗಾಗಿ, ಎಚ್‌.ಡಿ.ರೇವಣ್ಣ ಅವರನ್ನೂ ಪಕ್ಷದಿಂದ ಅಮಾನತುಗೊಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗೊಂದು ವೇಳೆ ಅಮಾನತುಗೊಳಿಸಿದರೆ ತಂದೆ-ಮಗ ಇಬ್ಬರೂ ಅಮಾನತಾದಂತಾಗುತ್ತದೆ. ಮುಜುಗರ ತಪ್ಪಿಸಿಕೊಳ್ಳಲು ಕುಮಾರಸ್ವಾಮಿ ಅವರ ಬಳಿ ಇರುವ ಏಕೈಕ ಮಾರ್ಗ ಎಂದರೆ, ಅವರನ್ನು ಅಮಾನತುಗೊಳಿಸುವುದಾಗಿದೆ ಎಂದು ಹೇಳಲಾಗುತ್ತಿದೆ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Continue Reading

ಪ್ರಮುಖ ಸುದ್ದಿ

Terrorist Attack : ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ: ನಾಲ್ವರು ವಾಯುಪಡೆ ಸಿಬ್ಬಂದಿಗೆ ಗಾಯ

ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಶಹಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಸುರಕ್ಷಿತಗೊಳಿಸಲಾಗಿದೆ. ಸೇನಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.

VISTARANEWS.COM


on

Terrorist Attack
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ಭಾರಿ ಗುಂಡಿನ ದಾಳಿ ನಡೆಸಿದ (Terrorist Attack) ಪರಿಣಾಮ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರದೇಶಕ್ಕೆ ಇನ್ನಷ್ಟು ಸೇನಾ ಪಡೆಯನ್ನು ಕಳುಹಿಸಲಾಗಿದ್ದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ.

ಕಳೆದ ವರ್ಷ ಸೇನೆಯ ಮೇಲೆ ಸರಣಿ ಭಯೋತ್ಪಾದಕ ದಾಳಿಗಳಿಗೆ ಸಾಕ್ಷಿಯಾದ ಈ ಪ್ರದೇಶದಲ್ಲಿ ಈ ವರ್ಷ ಸಶಸ್ತ್ರ ಪಡೆಗಳ ಮೇಲೆ ನಡೆದ ಮೊದಲ ಪ್ರಮುಖ ದಾಳಿ ಇದಾಗಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ವಾಹನಗಳ ಬೆಂಗಾವಲು ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಈ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಪ್ರಾರಂಭಿಸಿದೆ. ಶಹಸಿತಾರ್ ಬಳಿಯ ಸಾಮಾನ್ಯ ಪ್ರದೇಶದ ವಾಯುನೆಲೆಯೊಳಗೆ ವಾಹನಗಳನ್ನು ಸುರಕ್ಷಿತಗೊಳಿಸಲಾಗಿದೆ. ಸೇನಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

ಈ ದಾಳಿಯಲ್ಲಿ ಯಾವುದೇ ಹಾನಿ ಅಥವಾ ಸಾವುನೋವು ವರದಿಯಾಗಿಲ್ಲ. ಗಾಯಗೊಂಡ ಸೈನಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಎರಡು ವಾರದ ಹಿಂದೆ ಉಗ್ರನ ದಾಳಿಗೆ ಸರ್ಕಾರಿ ನೌಕರ ಬಲಿಯಾಗಿದ್ದರು

ಎರಡು ವಾರದ ಹಿಂದೆ ಜಮ್ಮು-ಕಾಶ್ಮೀರ (Jammu and Kashmir)ದಲ್ಲಿ ಮತ್ತೊಮ್ಮೆ ಗುಂಡಿನ ಸದ್ದು ಮೊಳಗಿತ್ತು . ಭಯೋತ್ಪಾದಕನ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. (Terrorist Attack). ಜಮ್ಮು-ಕಾಶ್ಮೀರದ ರಾಜೌರಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಗುಂಡಿನ ದಾಳಿಗೆ ಸರ್ಕಾರಿ ನೌಕರ ಮೊಹಮ್ಮದ್ ರಜಾಕ್ ಬಲಿಯಾಗಿದ್ದರು. ರಾಜೌರಿಯ ಶದ್ರಾ ಶರೀಫ್ ಪ್ರದೇಶದ ಮಸೀದಿಯಿಂದ ಹೊರಬಂದ ಕೂಡಲೇ ಅವರ ಮೇಲೆ ಗುಂಡಿನ ದಾಳಿ ನಡೆದಿತ್ತು. ತೀವ್ರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು.

40 ವರ್ಷದ ಮೊಹಮ್ಮದ್ ರಜಾಕ್ ಸಮಾಜ ಕಲ್ಯಾಣ ಇಲಾಖೆಯ ಉದ್ಯೋಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ. ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದಾರೆ. ಶೋಧ ಕಾರ್ಯಾಚರಣೆಯನ್ನು ಈಗಾಗಲೇ ಪ್ರಾರಂಭಿಸಲಾಗಿದೆ. ಮೃತ ರಝಾಕ್ ಅವರ ಸಹೋದರ ಪ್ರಾದೇಶಿಕ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ಕರ್ನಾಟಕ

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿತು. ಇದಾದ ಕೆಲ ಹೊತ್ತಿನಲ್ಲೇ, ಮಾಜಿ ಪ್ರಧಾನಿ ದೇವೇಗೌಡರ ನಿವಾಸದಲ್ಲಿಯೇ ಎಚ್‌.ಡಿ.ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದರು. ಇನ್ನು ಪ್ರಜ್ವಲ್‌ ರೇವಣ್ಣ ಕೂಡ ವಿದೇಶದಿಂದ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

HD Revanna
Koo

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅಶ್ಲೀಲ ವಿಡಿಯೊಗಳು, ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕರ್ನಾಟಕ ಸೇರಿ ದೇಶಾದ್ಯಂತ ಸುದ್ದಿಯಾಗಿರುವ ಪೆನ್‌ಡ್ರೈವ್‌ ಕೇಸ್‌ನಲ್ಲಿ (Pendrive Case) ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರ ಪುತ್ರ ಎಸ್‌ಐಟಿ ವಶಕ್ಕೆ ಸೇರಿದ್ದು, ಪ್ರಕರಣಕ್ಕೆ ಮಹತ್ವದ ತಿರುವೊಂದು ಸಿಕ್ಕಿದೆ. ಇದರ ಬೆನ್ನಲ್ಲೇ‌, ಅಶ್ಲೀಲ ವಿಡಿಯೊಗಳು ವೈರಲ್‌ ಆಗುತ್ತಲೇ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಕೂಡ ಭಾರತಕ್ಕೆ ಬಂದು ಪೊಲೀಸರಿಗೆ ಶರಣಾಗಲಿದ್ದಾರೆ ಎಂದು ತಿಳಿದುಬಂದಿದೆ.

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಕೇಸ್‌ನಲ್ಲಿ ಮೊದಲ ಆರೋಪಿಯಾಗಿರುವ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ, ರೇವಣ್ಣ ಅವರನ್ನು ವಶಪಡಿಸಿಕೊಂಡಿರುವ ಕುರಿತು ಪ್ರಕ್ರಿಯೆ ಮುಗಿಸುವ ಅವರು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಿದ್ದಾರೆ. ಆದಾಗ್ಯೂ, ಬಂಧಿಸಿದ 24 ಗಂಟೆಯೊಳಗೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾದ ಕಾರಣ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ಬಳಿಕ ವಿಚಾರಣೆ ನಡೆಸಲಿದ್ದಾರೆ. ಇಲ್ಲವೇ, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಹಂಗೇರಿಯಲ್ಲಿ ಪ್ರಜ್ವಲ್?‌

ಪ್ರಜ್ವಲ್‌ ರೇವಣ್ಣ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಪಾಸ್‌ಪೋರ್ಟ್‌ ಎಂಟ್ರಿ ಮಾಹಿತಿಯ ಮೇರೆಗೆ ಒಂದಷ್ಟು ಸುಳಿವು ಪತ್ತೆಹಚ್ಚಿದ್ದಾರೆ. ಪಾಸ್‌ಪೋರ್ಟ್‌ ಎಂಟ್ರಿ ಆಧಾರದ ಮೇಲೆ ಪ್ರಜ್ವಲ್‌ ರೇವಣ್ಣ ಬುಡಾಫೆಸ್ಟ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಜ್ವಲ್‌ ರೇವಣ್ಣ ಪತ್ತೆಗೆ ಕಸರತ್ತು ನಡೆಸುತ್ತಿರುವ ಎಸ್‌ಐಟಿ ಅಧಿಕಾರಗಳು, ಬ್ಲ್ಯೂ ಕಾರ್ನರ್‌ ನೋಟಿಸ್‌ ಹೊರಡಿಸಬೇಕು ಎಂದು ಸಿಬಿಐಗೆ ಮನವಿ ಕೂಡ ಮಾಡಿದ್ದಾರೆ.

ಆರೋಪಿಯ ಚಲನವಲನಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲು ಬ್ಲ್ಯೂ ಕಾರ್ನರ್ ನೋಟೀಸ್‌ ಜಾರಿಗೊಳಿಸಲಾಗುತ್ತದೆ. ಆರೋಪಿ ಬಗ್ಗೆ ಸುಳಿವು ಸಿಕ್ಕ ಬಳಿಕ ಆ ಮಾಹಿತಿಯನ್ನು ಸಿಐಡಿಗೆ ಸಿಬಿಐ ನೀಡಲಿದೆ. ಮತ್ತೆ ಇದನ್ನು ಆಧರಿಸಿ ಕೋರ್ಟ್‌ಗೆ ಮಾಹಿತಿ ‌ನೀಡಿ ರೆಡ್ ಕಾರ್ನರ್ ನೊಟೀಸ್ ಜಾರಿ ಮಾಡಲು ಎಸ್ಐಟಿ ಮನವಿ ಮಾಡಬೇಕಿದೆ. ಸಿಬಿಐ, ಇಂಟರ್‌ಫೋಲ್‌ಗೆ ಮನವಿ ಮಾಡಿ ರೆಡ್ ಕಾರ್ನರ್ ನೊಟೀಸ್ ಪಡೆಯಲಿದೆ.

ಇದನ್ನೂ ಓದಿ: HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

Continue Reading

ಪ್ರಮುಖ ಸುದ್ದಿ

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Champions Trophy :ಭಾರತ ತಂಡ ಪ್ರಯಾಣ ಮಾಡದ ಹಿನ್ನೆಲೆಯಲ್ಲಿ ಪಂದ್ಯದ ತಾಣ ಬದಲಾಯಿಸುವ ಬಗ್ಗೆ ಅಥವಾ ಹೈಬ್ರಿಡ್ ಮಾದರಿ ಪರಿಗಣಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಅರ್ಹತಾ ಸುತ್ತಿನ ಪಂದ್ಯಗಳನ್ನು ಪ್ರತ್ಯೇಕವಾಗಿ ಒಂದು ನಗರದಲ್ಲಿ ನಿಗದಿಪಡಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ಪ್ರಸ್ತಾಪಿಸಿದೆ ಎಂದು ಹೇಳಲಾಗಿದೆ.

VISTARANEWS.COM


on

Champions Trophy
Koo

ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಚಾಂಪಿಯನ್ಸ್ (Champions Trophy) ಟ್ರೋಫಿಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನಕ್ಕೆ ಪ್ರಯಾಣಿಸಲು ನಿರಾಕರಿಸಿದರೆ ಭಾರತವು ಐಸಿಸಿಗೆ ತಾರ್ಕಿಕ ಉತ್ತರ ನೀಡಬೇಕಾಗುತ್ತದೆ. ಅಲ್ಲದೆ, ಐಸಿಸಿ ಪಂದ್ಯಾವಳಿಯಲ್ಲಿ ಭಾಗವಹಿಸದಿರುವ ನಿರ್ಧಾರವು ಭಾರತ ಕ್ರಿಕೆಟ್​ ತಂಡಕ್ಕೆ (Indian Cricket Team) ಹಿನ್ನಡೆಯನ್ನುಂಟು ಮಾಡುತ್ತದೆ ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ರಶೀದ್ ಲತೀಫ್ (Rashid Latif) ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಭಾಗವಹಿಸುವುದಿಲ್ಲ ಎಂದು ಮೂಲಗಳು ಹೇಳಿರುವ ಹಿನ್ನೆಲೆಯಲ್ಲಿ ಲತೀಫ್​ ಭಾರತ ತಂಡವನ್ನು ಬ್ಲ್ಯಾಕ್​ಮೇಲ್ ಮಾಡಲು ಮುಂದಾಗಿದೆ.

ಭಾರತ ತಂಡ ಪ್ರಯಾಣ ಮಾಡದ ಹಿನ್ನೆಲೆಯಲ್ಲಿ ಪಂದ್ಯದ ತಾಣ ಬದಲಾಯಿಸುವ ಬಗ್ಗೆ ಅಥವಾ ಹೈಬ್ರಿಡ್ ಮಾದರಿ ಪರಿಗಣಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಅರ್ಹತಾ ಸುತ್ತಿನ ಪಂದ್ಯಗಳನ್ನು ಪ್ರತ್ಯೇಕವಾಗಿ ಒಂದು ನಗರದಲ್ಲಿ ನಿಗದಿಪಡಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಗೆ ಪ್ರಸ್ತಾಪಿಸಿದೆ ಎಂದು ಹೇಳಲಾಗಿದೆ. ಇವೆಲ್ಲದರಿಂದ ದಿಕ್ಕೆಟ್ಟಿರುವ ಪಾಕಿಸ್ತಾನದ ಆಟಗಾರ ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದಾರೆ.

“ನೀವು ದ್ವಿಪಕ್ಷೀಯ ಸರಣಿಯನ್ನು ನಿರಾಕರಿಸಬಹುದು. ಆದರೆ ಐಸಿಸಿ ಟೂರ್ನಿಗಳನ್ನು ನಿರಾಕರಿಸುವುದು ಕಷ್ಟ. ಐಸಿಸಿ ತನ್ನ ಯೋಜನೆಯನ್ನು ರೂಪಿಸಿದಾಗ ತಂಡಗಳಿಗೆ ತಾವು ಎಲ್ಲಿ ಆಡಬೇಕೆಂದು ತಿಳಿದಿರುತ್ತದೆ. ಉದಾಹರಣೆಗೆ ವಿಶ್ವಕಪ್ ಆಡಲು ಭಾರತಕ್ಕೆ ಹೋಗಬೇಕು ಎಂದು ಪಾಕಿಸ್ತಾನಕ್ಕೆ ತಿಳಿದಿತ್ತು ಮತ್ತು ಅದಕ್ಕೆ ಅನುಗುಣವಾಗಿ ಒಪ್ಪಂದಗಳಿಗೆ ಸಹಿ ಹಾಕಿತ್ತು ಎಂದು ರಶೀದ್ ಲತೀಫ್ ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

ಐಸಿಸಿ ಟೂರ್ನಿಗಳನ್ನು ನಿರಾಕರಿಸುವುದು ಸ್ವಲ್ಪ ಕಷ್ಟದ ವಿಷಯ. 1996 ರ ವಿಶ್ವಕಪ್​​ನಲ್ಲಿ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ಶ್ರೀಲಂಕಾಕ್ಕೆ ಹೋಗಲು ನಿರಾಕರಿಸಿದವು. ಇಡೀ ಗುಂಪು ಹಂತ ಬದಲಾಯಿತು ಮತ್ತು ಶ್ರೀಲಂಕಾ ಚಾಂಪಿಯನ್ ಆಯಿತು. ಇದು ಬಹಳ ದೊಡ್ಡ ತಪ್ಪು. ಭಾರತ ಅಥವಾ ಪಾಕಿಸ್ತಾನ ಜತೆಯಾಗಿ ಹೋಗದಿರುವುದು ತಪ್ಪು. ಸರ್ಕಾರದ ಮಟ್ಟದಲ್ಲಿ ಯಾವುದೇ ಸಂದರ್ಭಗಳು ಸಂಭವಿಸಿದರೆ ಬರದಿರುವುದಕ್ಕೆ ಕಾರಣ ನೀಡಬೇಕಾಗುತ್ತದೆ. ಪಾಕಿಸ್ತಾನದ ಪರಿಸ್ಥಿತಿಗಳು ಸರಿಯಾಗಿಲ್ಲ ಇತ್ಯಾದಿಗಳನ್ನು ಉಲ್ಲೇಖಿಸಿ ನೀವು ದ್ವಿಪಕ್ಷೀಯ ಸರಣಿಯನ್ನು ನಿರಾಕರಿಸಬಹುದು/ ನನ್ನ ಅಭಿಪ್ರಾಯದಲ್ಲಿ, ಐಸಿಸಿ ಪಂದ್ಯಾವಳಿಯನ್ನು ನಿರಾಕರಿಸುವುದು ಹಿನ್ನಡೆಯನ್ನುಂಟು ಮಾಡುತ್ತದೆ,” ಎಂದು ಮಾಜಿ ವಿಕೆಟ್ ಕೀಪರ್ ಬ್ಯಾಟರ್​ ಹೇಳಿದ್ದಾರೆ

ಲಭ್ಯವಿರುವ ಮಾಹಿತಿಯ ಪ್ರಕಾರ, ಪಿಸಿಬಿ ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್ ಅನ್ನು ಚಾಂಪಿಯನ್ಸ್​ ಟ್ರೋಫಿಯ ಸ್ಥಳಗಳಾಗಿ ಆಯ್ಕೆ ಮಾಡಿದೆ. ಲಾಹೋರ್ ಅಂತಿಮ ಪಂದ್ಯಕ್ಕೆ ಆತಿಥ್ಯ ವಹಿಸುತ್ತದೆ.

Continue Reading
Advertisement
HD Revanna
ಕರ್ನಾಟಕ25 mins ago

HD Revanna: ರೇವಣ್ಣ ಬಂಧನ ಬೆನ್ನಲ್ಲೇ ಕುಮಾರಸ್ವಾಮಿ ಮೀಟಿಂಗ್;‌ ಮಗನ ಬಳಿಕ ತಂದೆಯೂ ಅಮಾನತು?

Terrorist Attack
ಪ್ರಮುಖ ಸುದ್ದಿ26 mins ago

Terrorist Attack : ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ: ನಾಲ್ವರು ವಾಯುಪಡೆ ಸಿಬ್ಬಂದಿಗೆ ಗಾಯ

HD Revanna
ಕರ್ನಾಟಕ44 mins ago

HD Revanna: ರೇವಣ್ಣ ಬಂಧನದ ಬೆನ್ನಲ್ಲೇ ಪೊಲೀಸರಿಗೆ ಪ್ರಜ್ವಲ್‌ ಶರಣಾಗತಿ? ಸಿ.ಎಸ್.ಪುಟ್ಟರಾಜು ಮಹತ್ವದ ಹೇಳಿಕೆ

Drown in River
ಕರ್ನಾಟಕ52 mins ago

Drown In River: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಕುರಿಗಾಹಿ ಯುವಕ ಸಾವು

Champions Trophy
ಪ್ರಮುಖ ಸುದ್ದಿ54 mins ago

Champions Trophy : ಭಾರತ ಕ್ರಿಕೆಟ್​ ತಂಡಕ್ಕೆ ಬೆದರಿಕೆ ಒಡ್ಡಿದ ಪಾಕಿಸ್ತಾನದ ಮಾಜಿ ಆಟಗಾರ

Davanagere lok sabha constituency bjp candidate gayatri siddeshwar election campaign
ದಾವಣಗೆರೆ1 hour ago

Lok Sabha Election: ಚುನಾವಣೆಯಲ್ಲಿ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ್ ಮನವಿ

HD Revanna
ಕರ್ನಾಟಕ1 hour ago

HD Revanna: ಮಾಜಿ ಪ್ರಧಾನಿ ಪುತ್ರ ಎಚ್‌.ಡಿ.ರೇವಣ್ಣ ಬಂಧನ; ಮುಂದೇನಾಗಲಿದೆ? ಪ್ರಕ್ರಿಯೆ ಏನು?

Prajwal Revanna Case
ಕರ್ನಾಟಕ1 hour ago

Prajwal Revanna Case: ಪೆನ್‌ಡ್ರೈವ್‌ ಕೇಸ್;‌ ದೇವೇಗೌಡರ ನಿವಾಸದಲ್ಲೇ ಎಚ್‌.ಡಿ.ರೇವಣ್ಣ ಬಂಧನ

Village Administrative Officer
ಪ್ರಮುಖ ಸುದ್ದಿ2 hours ago

Village Administrative Officer: ತಾಂತ್ರಿಕ ಸಮಸ್ಯೆ; ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ಮೇ 15ರವರೆಗೆ ವಿಸ್ತರಣೆ

Lok Sabha Election
Latest2 hours ago

Lok Sabha Election : ಕಾಂಗ್ರೆಸ್​ ತೊರೆದ ಲವ್ಲಿ ಸೇರಿ ನಾಲ್ವರಿಂದ ಬಿಜೆಪಿ ಸೇರ್ಪಡೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ15 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌