ಬೆಂಗಳೂರು: ರಕ್ಷಿತ್ ಶೆಟ್ಟಿ- ರುಕ್ಮಿಣಿ ವಸಂತ್ ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಎರಡು ಭಾಗಗಳಲ್ಲಿ ಬರಲಿದೆ. ಸೈಡ್ A ಮತ್ತು ಸೈಡ್ B ಎಂದು ಎರಡು ಪಾರ್ಟ್‌ಗಳಲ್ಲಿ ಬರಲಿದೆ ಎಂದು ಚಿತ್ರದ ನಾಯಕ ನಟ ರಕ್ಷಿತ್ ಶೆಟ್ಟಿ (Rakshit shetty) ಹೇಳಿಕೊಂಡಿದ್ದಾರೆ.
ʻಸಪ್ತ ಸಾಗರದಾಚೆ ಎಲ್ಲೋʼ ಸಿನಿಮಾ ಶೂಟಿಂಗ್ ಮುಗಿಸಿದ್ದು, ಜೂನ್ 15ರಂದು ಸಿನಿಮಾ ರಿಲೀಸ್ ದಿನಾಂಕ ಘೋಷಣೆ ಮಾಡಲಿದೆ ಎಂದೂ ಚಿತ್ರ ತಂಡ ಹೇಳಿದೆ. ಈ ಬಗ್ಗೆ ಇತ್ತೀಚೆಗೆ ಟ್ವೀಟ್ ಮಾಡಿದ್ದ ರಕ್ಷಿತ್ ಶೆಟ್ಟಿ, ʼʼ137 ದಿನಗಳ ಸೊಗಸಾದ ಚಿತ್ರೀಕರಣಕ್ಕೆ ಪೂರ್ಣವಿರಾಮ. ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಚಿತ್ರಮಂದಿರಗಳಿಗೆ ಅಪ್ಪಳಿಸಿದಾಗ, ನಿಮ್ಮ ಪ್ರೀತಿಪಾತ್ರರೊಂದಿಗೆ ಇರುತ್ತೀರಿ ಎಂದು ಭಾವಿಸುತ್ತೇವೆʼʼ ಎಂದು ಬರೆದುಕೊಂಡಿದ್ದರು.
ಚಾರ್ಲಿ ಸಿನಿಮಾ ಬಳಿಕ ಅವರ ಮುಂಬರುವ ಸಿನಿಮಾ ರಿಲೀಸ್‌ಗಾಗಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit shetty) ಅವರ ಅಭಿಮಾನಿಗಳು ಕುತೂಹಲದಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.
ʻಸಪ್ತ ಸಾಗರದಾಚೆ ಎಲ್ಲೋʼನಲ್ಲಿ ರಕ್ಷಿತ್ ಶೆಟ್ಟಿ ಅವರು ಡಿಫರೆಂಟ್ ಲುಕ್ ಮೂಲಕ ಮೆಚ್ಚುಗೆ ಗಳಿಸಿದ್ದಾರೆ. ಮನು–ಪ್ರಿಯಾ ಹೆಸರಿನ ನಾಯಕ ಮತ್ತು ನಾಯಕಿಯ ಪಾತ್ರಗಳ ಲಕ್ ಬಿಡುಗಡೆಗೊಂಡು ಗಮನ ಸೆಳೆಯುತ್ತಿದೆ. ನಾಯಕಿ ರುಕ್ಮಿಣಿ ವಸಂತ್ ಕೂಡ ಡಿಫರೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಈ ಸಿನಿಮಾಗಾಗಿ 20 ಕೆ.ಜಿ ತೂಕವನ್ನು ಹೆಚ್ಚಿಸಿಕೊಂಡಿದ್ದರು. ರಕ್ಷಿತ್ ಶೆಟ್ಟಿ ಮೂಲಕ ಎರಡು ಕೋನಗಳಲ್ಲಿ ಈ ಸಿನಿಮಾದ ಕತೆ ಬಿಚ್ಚಿಕೊಳ್ಳಲಿದೆಯಾ ಎಂಬ ಪ್ರಶ್ನೆ ಟೀಸರ್ ವೀಕ್ಷಕರಲ್ಲಿ ಮೂಡುತ್ತದೆ.
ಹೇಮಂತ್ ರಾವ್ ಈ ಚಿತ್ರದ ನಿರ್ದೇಶಕರು. ಇವರ ʼಕವಲುದಾರಿʼ ಮತ್ತು ʼಗೋಧಿ ಬಣ್ಣ ಸಾಧಾರಣ ಮೈಕಟ್ಟುʼ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ರಕ್ಷಿತ್ ಅಭಿಮಾನಿಗಳು ಈ ಚಿತ್ರದ ಬಗ್ಗೆ ಭಾರಿ ನಿರೀಕ್ಷೆ ಇರಿಸಿಕೊಂಡಿದ್ದಾರೆ. ಚಿತ್ರಕ್ಕೆ 137 ದಿನಗಳ ಕಾಲ ಶೂಟ್ ಮಾಡಲಾಗಿದೆ.
ಇದನ್ನೂ ಓದಿ: Rakshit shetty: ರಕ್ಷಿತ್ ಶೆಟ್ಟಿ-ರುಕ್ಮಿಣಿ ವಸಂತ್ ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ ಶೂಟಿಂಗ್ ಪೂರ್ಣ