ಬೆಂಗಳೂರು: ಸ್ಯಾಂಡಲ್‌ವುಡ್ ನಟ ರಕ್ಷಿತ್ ಶೆಟ್ಟಿ (Rakshit Shetty) ಹಾಗೂ ರುಕ್ಮಿಣಿ ವಸಂತ್ (rukmini vasanth) ಅಭಿನಯದ ʻಸಪ್ತ ಸಾಗರದಾಚೆ ಎಲ್ಲೋʼ (saptha sagaradache ello) ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಎರಡನೇ ಭಾಗ ಸೈಡ್ ಬಿ ಅಕ್ಟೋಬರ್ 20ರಂದು ಬಿಡುಗಡೆಯಾಗಲಿದೆ. ಭಾಗ 1 (‘Sapta Sagaralu Dhaati) ನೋಡಿದವರು ಭಾಗ 2ನ್ನು ನೋಡಲೇಬೇಕು. ಹೀಗಾಗಿ ಪ್ರೇಕ್ಷಕರು ಭಾಗ 2ಕ್ಕೆ ಕಾಯುತ್ತಿದ್ದಾರೆ. ಇದೀಗ ತೆಲುಗಿಗೆ ಸಿನಿಮಾ ಡಬ್ ಆಗಿ ರಿಲೀಸ್ ಆಗುತ್ತಿದೆ. ‘ಸಪ್ತ ಸಾಗರಾಲು ದಾಟಿ’ ಟೈಟಲ್‌ನಲ್ಲಿ ಚಿತ್ರವನ್ನು ತೆಲುಗಿನಲ್ಲಿ ಡಬ್ ಮಾಡಿ ರಿಲೀಸ್ ಮಾಡಲಾಗುತ್ತಿದೆ.
ಕನ್ನಡ ಟೈಟಲ್‌ನ ಕೊಂಚ ಬದಲಿಸಿ ಸಪ್ತ ಸಾಗರ ದಾಟಿ ಎನ್ನುವ ಅರ್ಥ ಬರುವಂತೆ ಟೈಟಲ್ ಫಿಕ್ಸ್ ಮಾಡಲಾಗಿದೆ. ಮುಂದಿನ ವಾರ ‘ಸಪ್ತ ಸಾಗರದಾಚೆ ಎಲ್ಲೋ’ ತೆಲುಗು ವರ್ಷನ್ ಆಂಧ್ರ, ತೆಲಂಗಾಣ ಸೇರಿದಂತೆ ವಿದೇಶಗಳಲ್ಲಿ ರಿಲೀಸ್ ಆಗುತ್ತಿದೆ. ಇದನ್ನು ಅಧಿಕೃತವಾಗಿ ಚಿತ್ರತಂಡ ಘೋಷಿಸಿದೆ. 2 ವಾರಕ್ಕೆ ಈ ಸಿನಿಮಾ ಕನ್ನಡದಲ್ಲಿ 20 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ.
ಇದನ್ನೂ ಓದಿ: Rakshit Shetty: ತೆಲುಗು ವರ್ಷನ್‌ಗೆ `ಸಪ್ತ ಸಾಗರ’? ಒಟಿಟಿ ರಿಲೀಸ್ ಯಾವಾಗ?
ವರದಿಗಳ ಪ್ರಕಾರ ನವೆಂಬರ್‌ನಲ್ಲಿ ಎರಡೂ ಭಾಗಗಳನ್ನು ಒಟ್ಟಿಗೆ ಡಿಜಿಟಲ್ ಫ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಮಾಡಲಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಭಾಗ 1 ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನಲಾಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’- ಸೈಡ್ A ಬಿಡುಗಡೆಯಾದ 50 ದಿನಗಳ ಬಳಿಕ ಸೈಡ್- B ರಿಲೀಸ್ ಮಾಡಲಾಗುತ್ತಿದೆ. ಸಾಮಾನ್ಯವಾಗಿ ಯಾವುದೇ ಸಿನಿಮಾ ಥಿಯೇಟರ್‌ನಲ್ಲಿ ಬಿಡುಗಡೆಯಾದ 49 ದಿನಗಳ ಬಳಿಕ ಒಟಿಟಿ ಸ್ಟ್ರೀಮಿಂಗ್‌ಗೆ ಒಪ್ಪಂದ ಆಗಿರುತ್ತದೆ. ಆದರೆ ‘ಸಪ್ತ ಸಾಗರದಾಚೆ ಎಲ್ಲೋ’ 2ನೇ ಭಾಗ ಥಿಯೇಟರ್‌ಗೆ ಬರುವುದಕ್ಕೆ ಮುಂಚೆ ಭಾಗ 1 ಒಟಿಟಿಗೆ ಬರಲಿದೆಯಾ ಎನ್ನುವ ಕುತೂಹಲ ಪ್ರೇಕ್ಷಕರಿಗೆ ಹೆಚ್ಚಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.