Site icon Vistara News

Rakshit Shetty: ನಿನ್ನ ಹೆಸರು ಕೆಡಿಸಲು ಸಂಚು ಮಾಡ್ತಿದ್ದಾರೆ, ಬೆನ್ನೆಲುಬಾಗಿ ನಾನಿರುವೆ; ರಕ್ಷಿತ್‌ಗೆ ದೈವ ಅಭಯ!

Rakshith Shetty Took korgajja Daiva darshana

ಬೆಂಗಳೂರು: ಸ್ಯಾಂಡಲ್‌ವುಡ್‌ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ (Rakshit Shetty) ಅವರು ನಟನೆ, ನಿರ್ದೇಶನ ಜತೆ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ರಕ್ಷಿತ್‌ ಶೆಟ್ಟಿ ಅವರು ಕೊರಗಜ್ಜ ಅವರ ದರ್ಶನ ಪಡೆದಿದ್ದಾರೆ. ಬೆಂಗಳೂರಿನಲ್ಲಿ ರಕ್ಷಿತ್‌ ಶೆಟ್ಟಿ ವಾಸಿಸುತ್ತಿದ್ದರೂ ಆಗಾಗ ಕರಾವಳಿಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ʻʻಕೆಲವರು ನಿನ್ನ ಹೆಸರು ಕೆಡಿಸಲು ಸಂಚು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಆ ದುಷ್ಟ ಶಕ್ತಿಗಳನ್ನು ನನ್ನ ಕಾಲ ಬುಡದಲ್ಲಿ ಅಡಗಿಸಿಟ್ಟು ಸದಾ ನಿನ್ನ ಒಳ್ಳೆಯ ಕಾರ್ಯಗಳಿಗೆ ನಿನ್ನ ಬೆನ್ನೆಲುಬಾಗಿ ನಾನು ನಿಲ್ಲುತ್ತೇನೆʼʼ ಎಂದು ಕೊರಗಜ್ಜ ದೈವ, ರಕ್ಷಿತ್ ಶೆಟ್ಟಿಗೆ ಅಭಯ ನೀಡಿರುವ ವಿಡಿಯೊ ಇದೀಗ ವೈರಲ್‌ ಆಗಿದೆ.

ಇತ್ತೀಚೆಗೆ ಕರಾವಳಿಯ ಕಾರ್ಣಿಕದ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ರಕ್ಷಿತ್ ಪಾಲ್ಗೊಂಡಿದ್ದರು. ಹಾಗೆಯೇ ಉಡುಪಿಯ ಅಲೆವೂರಿನಲ್ಲಿ (alevoor udupi kola) ದೈವಗಳ ಪುನರ್ ಪ್ರತಿಷ್ಠೆ, ಕೋಲ ಇತ್ತು. ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಕೋಲದಲ್ಲಿ ಅವರು ಭಾಗಿ ಆಗಿದ್ದರು. ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118ನೇ‌ ನೇಮೋತ್ಸವದಲ್ಲಿ ಪಾಲ್ಗೊಂಡು, ಪೂಜೆ ನೆರವೇರಿಸಿ ಪ್ರಸಾದ ಸ್ವೀಕರಿಸಿದ್ದಾರೆ.

ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಪಾರ್ಟ್ ʻಎʼ ಹಾಗೂ ʻಬಿʼ ಕಳೆದ ವರ್ಷ ರಿಲೀಸ್ ಆಗಿತ್ತು. ಇದೀಗ ರಿಚರ್ಡ್​ ಆಂಟನಿ ಹಾಗೂ ‘ಪುಣ್ಯಕೋಟಿ ಸಿನಿಮಾಗಳನ್ನು ರಕ್ಷಿತ್‌ ನಿರ್ದೇಶನ ಮಾಡುತ್ತಿದ್ದಾರೆ. ನನ್ನ ಮುಂದಿನ ಎರಡು ಸಿನಿಮಾಗಳಿಗೆ (ʻರಿಚರ್ಡ್​ ಆಂಟನಿ’ ಹಾಗೂ ‘ಪುಣ್ಯಕೋಟಿ’) ಪರಶುರಾಮ ಹಾಗೂ ಆತನ ಕೊಡಲಿಯೇ ಸ್ಫೂರ್ತಿ. ಈ ಕಥೆ ಜತೆ ಹೀಗಾಗಲೇ 4 ವರ್ಷ ಕಳೆದಿದ್ದೇನೆ. ಇನ್ನೂ ನಾಲ್ಕು ವರ್ಷ ಕಳೆಯೋದು ಇದೆ ಅನಿಸುತ್ತಿದೆ ಎಂದು ರಕ್ಷಿತ್ ಶೆಟ್ಟಿ ಈ ಹಿಂದೆ ಹೇಳಿಕೊಂಡಿದ್ದರು.

ಇದನ್ನೂ ಓದಿ: Karnataka Election | 2023ರ ಚುನಾವಣೆಯಲ್ಲಿ ಟಿಕೆಟ್‌ಗಾಗಿ ಸೆಣಸುತ್ತಿರುವ ಯುವ ರಾಜಕಾರಣಿಗಳು ಇವರು

ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಗೆ ಸಖತ್‌ ರೆಸ್ಪಾನ್ಸ್‌!

ನಟ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ ಚಿತ್ರದ ಟ್ರೈಲರ್‌ ಬಿಡುಗಡೆಗೊಂಡಿದೆ. ಟ್ರೈಲರ್‌ ನೋಡಿ ಸಖತ್‌ ಕಾಮಿಡಿ ಎಂಟರ್‌ಟೈನರ್ ಸಿನಿಮಾ ಎಂದು ವೀಕ್ಷಕರು ಹಾಡಿ ಹೊಗಳುತ್ತಿದ್ದಾರೆ. ಜೀವನದ ಜಂಜಾಟದಿಂದ ಬೇಸತ್ತು ರಿಲ್ಯಾಕ್ಸ್ ಆಗುವುದಕ್ಕೆ ಥಾಯ್ಲೆಂಡ್ ಪ್ರವಾಸ ಕೈಗೊಳ್ಳುವ 3 ‘ಬ್ಯಾಚುಲರ್’ಗಳ ಕಥೆ ಚಿತ್ರದಲ್ಲಿದೆ.

ರಿಚರ್ಡ್‌ ಆಂಟನಿ ಜತೆಗೆ ರಕ್ಷಿತ್‌ ಶೆಟ್ಟಿ ಹಲವು ಯೋಜನೆಗಳನ್ನು ಹೊಂದಿದ್ದಾರೆ. ಈ ಬಗ್ಗೆ ಈ ಹಿಂದೆ ಅವರು ಟ್ವೀಟ್‌ ಹಂಚಿಕೊಂಡಿದ್ದರು. ʻʻಸಪ್ತ ಸಾಗರದಾಚೆ ಎಲ್ಲೋ ನಂತರ ನನ್ನ ಲೈನ್ ಅಪ್‌ಗಳು ಸಾಕಷ್ಟು ಸ್ಪಷ್ಟವಾಗಿವೆ. ಅಂದರೆ ರಿಚರ್ಡ್​ ಆಂಟನಿ, ಪುಣ್ಯ ಕೋಟಿ 1 (PK 1), ಪುಣ್ಯ ಕೋಟಿ 2 (PK 2), (RA), PK 1 ಮತ್ತು 2,ಮಿಡ್ನೈಟ್ ಟು ಮೋಕ್ಷ (M2M) ಇವುಗಳು ನನಗೆ ನಿದ್ದೆಯಿಲ್ಲದ ರಾತ್ರಿಗಳನ್ನು ನೀಡುವ ನಾಲ್ಕು ಚಲನಚಿತ್ರಗಳಾಗಿವೆ. ಆದರೆ ಕಿರಿಕ್‌ ಪಾರ್ಟಿ 2 (KP2) ಗಾಗಿ ನಾನು ವಿಭಿನ್ನ ಯೋಜನೆಗಳನ್ನು ಹೊಂದಿದ್ದೇನೆʼʼ ಎಂದಿದ್ದರು.

Exit mobile version