Site icon Vistara News

Ram Pothineni: ಶ್ರೀಲೀಲಾ ಜತೆ ರಾಮ್ ಪೋತಿನೇನಿ ರೊಮ್ಯಾನ್ಸ್‌!

Ram Pothineni Boyapati Rapo’s First Thunder looks powerful

ಬೆಂಗಳೂರು: ಟಾಲಿವುಡ್ ಚಿತ್ರರಂಗದ ನಟ ಉಸ್ತಾದ್ ರಾಮ್ ಪೋತಿನೇನಿ (Ram Pothineni) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಮ್ ಜನುಮದಿನದ ಪ್ರಯುಕ್ತ ‘ಬೋಯಾಪಾಟಿ ರ‍್ಯಾಂಪೋ’ (Boyapati Rapo) ಚಿತ್ರದ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿದೆ. ಕೈಯಲ್ಲಿ ಕತ್ತಿ ಹಿಡಿದು, ಎಮ್ಮೆಯೊಟ್ಟಿಗೆ ಮಾಸ್ ಡೈಲಾಗ್ ಹೊಡೆಯುತ್ತ ರಗಡ್ ಲುಕ್ ನಲ್ಲಿ ರಾಮ್ ಪೋತಿನೇನಿ ಎಂಟ್ರಿ ಕೊಟ್ಟಿದ್ದಾರೆ.

ಲವರ್ ಬಾಯ್ ಆಗಿ ಮಿಂಚುತ್ತಿದ್ದ ರಾಮ್ ಪೋತಿನೇನಿ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ದರ್ಶನ ಕೊಟ್ಟಿದ್ದಾರೆ. ಕನ್ನಡತಿ ಶ್ರೀಲೀಲಾ ಅವರು ರಾಮ್‌ ಅವರೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಸಂತೋಷ್ ಡಿಟೇಕ್ ಕ್ಯಾಮೆರಾ ವರ್ಕ್, ತಮನ್ ಎಸ್ ಎಸ್ ಸಂಗೀತ ಚಿತ್ರಕ್ಕಿದೆ.

ಸದ್ಯ ‘ಬೋಯಾಪಾಟಿ ರ‍್ಯಾಂಪೋ’ ಎಂಬ ಶೀರ್ಷಿಕೆ ಇಡಲಾಗಿದ್ದು, ಮುಂದಿನ ದಿನಗಳಲ್ಲಿ ಬೇರೆ ಟೈಟಲ್ ರಿವೀಲ್ ಮಾಡಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಬೋಯಾಪಾಟಿ ಸೀನು ಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್‌ನಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ಮಾಡಿದ್ದಾರೆ.

ಜೀ ಸ್ಟುಡಿಯೋಸ್ ಸೌತ್ ಹಾಗೂ ಪವನ್ ಕುಮಾರ್ ಅರ್ಪಿಸುತ್ತಿರುವ ‘ಬೋಯಾಪಾಟಿ ರ‍್ಯಾಂಪೋ’ ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದೆ. ಇದೇ ವರ್ಷ ಅಕ್ಟೋಬರ್ 20ರಂದು ವಿಶ್ವಾದ್ಯಂತ ತೆರೆ ಕಾಣಲಿದೆ.

ಇದನ್ನೂ ಓದಿ: Ram Pothineni : ʻಡಬಲ್ ಇಸ್ಮಾರ್ಟ್’ ಮೂಲಕ ಮತ್ತೆ ಒಂದಾದ ಪುರಿ ಜಗನ್ನಾಥ್-ರಾಮ್ ಪೋತಿನೇನಿ

ನಿರ್ದೇಶಕ ಪುರಿ ಜಗನ್ನಾಥ್‌ ಜತೆಗೆ ರಾಮ್ ಪೋತಿನೇನಿ ಹೊಸ ಸಿನಿಮಾ

ನಟ ರಾಮ್ ಪೋತಿನೇನಿ (Ram Pothineni) ಹಾಗೂ ನಿರ್ದೇಶಕ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿದ್ದಾರೆ. ʻಇಸ್ಮಾರ್ಟ್ ಶಂಕರ್ʼ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ನಾಲ್ಕು ವರ್ಷದ ಬಳಿಕ ಸೀಕ್ವೆಲ್‌ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಚಿತ್ರತಂಡ.

ರಾಮ್ ಪೋತಿನೇನಿ ಜನ್ಮದಿನ. ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಟೈಟಲ್ ಹಾಗೂ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಡಬಲ್ ಮಾಸ್ ಹಾಗೂ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಈ ಚಿತ್ರಕ್ಕೆ ʻಡಬಲ್ ಇಸ್ಮಾರ್ಟ್ʼ ಎಂಬ ಶೀರ್ಷಿಕೆ ಫಿಕ್ಸ್ ಮಾಡಿದ್ದಾರೆ. 2024‌ ಮಾರ್ಚ್ 8ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.

ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ʻಡಬಲ್ ಇಸ್ಮಾರ್ಟ್ʼ ಸಿನಿಮಾವನ್ನು ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರಿ ಬಜೆಟ್‌ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.

ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ‌ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

Exit mobile version