ಬೆಂಗಳೂರು: ನಟ ರಾಮ್ ಪೋತಿನೇನಿ (Ram Pothineni) ಹಾಗೂ ನಿರ್ದೇಶಕ ಪುರಿ ಜಗನ್ನಾಥ್ ಮತ್ತೊಮ್ಮೆ ಒಂದಾಗಿದ್ದಾರೆ. ʻಇಸ್ಮಾರ್ಟ್ ಶಂಕರ್ʼ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ನಾಲ್ಕು ವರ್ಷದ ಬಳಿಕ ಸೀಕ್ವೆಲ್ಗೆ ಕೈ ಹಾಕಿದ್ದಾರೆ. ರಾಮ್ ಹುಟ್ಟುಹಬ್ಬದ ಪ್ರಯುಕ್ತ ಟೈಟಲ್ ಹಾಗೂ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ ಚಿತ್ರತಂಡ.
ಮೇ 15ರಂದು ರಾಮ್ ಪೋತಿನೇನಿ ಜನ್ಮದಿನ. ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಟೈಟಲ್ ಹಾಗೂ ಬಿಡುಗಡೆ ದಿನಾಂಕ ಘೋಷಣೆ ಮಾಡಲಾಗಿದೆ. ಡಬಲ್ ಮಾಸ್ ಹಾಗೂ ಮನರಂಜನೆ ನೀಡಲು ಸಜ್ಜಾಗಿರುವ ಪುರಿ ಜಗನ್ನಾಥ್ ಈ ಚಿತ್ರಕ್ಕೆ ʻಡಬಲ್ ಇಸ್ಮಾರ್ಟ್ʼ ಎಂಬ ಶೀರ್ಷಿಕೆ ಫಿಕ್ಸ್ ಮಾಡಿದ್ದಾರೆ. 2024 ಮಾರ್ಚ್ 8ರಂದು ಶಿವರಾತ್ರಿ ಹಬ್ಬಕ್ಕೆ ಈ ಚಿತ್ರ ತೆರೆಗೆ ಬರಲಿದೆ.
ಪುರಿ ಜಗನ್ನಾಥ್ ಕಥೆ ಬರೆದು ನಿರ್ದೇಶಿಸುತ್ತಿರುವ ʻಡಬಲ್ ಇಸ್ಮಾರ್ಟ್ʼ ಸಿನಿಮಾವನ್ನು ಚಾರ್ಮಿ ಕೌರ್ ಹಾಗೂ ಪುರಿ ಜಗನ್ನಾಥ್ ನಿರ್ಮಿಸುತ್ತಿದ್ದಾರೆ. ಲೈಗರ್ ಸಿನಿಮಾದಲ್ಲಿ ಖಳನಾಯಕ ಘರ್ಜಿಸಿದ್ದ ವಿಷು ರೆಡ್ಡಿ ಪುರಿ ಸಿಇಒ ಆಗಿ ಕೆಲಸ ಮಾಡುತ್ತಿದ್ದಾರೆ. ಭಾರೀ ಬಜೆಟ್ನಲ್ಲಿ ತಯಾರಾಗುತ್ತಿರುವ ಈ ಸಿನಿಮಾ ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿರಲಿದೆ.
ಇದನ್ನೂ ಓದಿ: Alia Bhatt: ಇಟಾಲಿಯನ್ ಫ್ಯಾಷನ್ ಹೌಸ್ ಗುಚಿಗೆ ನಟಿ ಆಲಿಯಾ ಭಟ್ ಮೊದಲ ಭಾರತೀಯ ಜಾಗತಿಕ ರಾಯಭಾರಿ
ʻಡಬಲ್ ಇಸ್ಮಾರ್ಟ್ʼ ಪೋಸ್ಟರ್ನಲ್ಲಿ ರಾಮ್ ಪೋತಿನೇನಿ ರಕ್ತದ ಗುರುತುಗಳ ತ್ರಿಶೂಲ್ ಹಿಡಿದು ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿದ್ದಾರೆ. ಮುಂದಿನ ವರ್ಷದ ಶಿವರಾತ್ರಿ ಹಬ್ಬಕ್ಕೆ ಬಿಡುಗಡೆಯಾಗಲಿರುವ ಈ ಚಿತ್ರ ತೆಲುಗು, ತಮಿಳು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಮೂಡಿ ಬರಲಿದೆ. ಉಳಿದ ತಾರಾಬಳಗ ಹಾಗೂ ತಾಂತ್ರಿಕ ವರ್ಗದ ಮಾಹಿತಿಯನ್ನು ಶೀಘ್ರದಲ್ಲೇ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.