Site icon Vistara News

Kannada New Movie: ‘ರಾಮಾ ರಾಮಾ ರೇ’ ನಿರ್ದೇಶಕನ ಹೊಸ ಸಿನಿಮಾ ಅನೌನ್ಸ್‌!

satya prakash Rama Rama Re

ಬೆಂಗಳೂರು; ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಗಳನ್ನು (Kannada New Movie) ಪಡೆದ ಖ್ಯಾತಿ ಹೊಂದಿರುವ ಡಿ. ಸತ್ಯಪ್ರಕಾಶ್ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ. ನಿರ್ದೇಶಕ ಡಿ. ಸತ್ಯಪ್ರಕಾಶ್‌ ಚಿತ್ರ ಸೆಟ್ಟೇರಿತು ಎಂದರೆ ಏನಾದರೂ ಒಂದು ವಿಶೇಷತೆಗಳನ್ನು ಹೊತ್ತು ತರುತ್ತಾರೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ನಂಬಿದ್ದಾರೆ. ಸಾಕಷ್ಟು ದಿನಗಳ ಬಳಿಕ ಸತ್ಯ ಪ್ರಕಾಶ್​ ಅವರು ಅಳೆದು-ತೂಗಿ ತಮಗೆ ಹೆಚ್ಚು ಆಪ್ತ ಎನಿಸಿದ ಕಥೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆ ಸಿನಿಮಾದ ಶೀರ್ಷಿಕೆ ಏನು ಎಂಬುದು ಕೂಡ ಈಗ ಬಹಿರಂಗ ಆಗಿದೆ. “ಎಕ್ಸ್ ಅಂಡ್‌ ವೈ” ಎಂದು ಶೀರ್ಷಿಕೆ ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದಾರೆ.

ತಮ್ಮ ಹಿಂದಿನ ಮೂರು ಚಿತ್ರಗಳಲ್ಲಿ ಮೂಡಿಸಿದ ವಿಶೇಷತೆಗಳಂತೆ ಇಲ್ಲೂ ಚಿತ್ರದ ಟೈಟಲ್‌, ಆರಿಸಿಕೊಂಡ ಕಥೆ, ಲೊಕೇಶನ್ಸ್‌, ಕಲಾವಿದರ ಆಯ್ಕೆಯಲ್ಲದೆ ತಾವೇ ಮುಖ್ಯ ಪಾತ್ರಧಾರಿಯಾಗಿ ನಟನೆಗೆ ಇಳಿದಿದ್ದಾರೆ. ಸತ್ಯ ಪ್ರಕಾಶ್​ ಅವರು ಈ ಹಿಂದೆ ನಿರ್ದೇಶನ ಮಾಡಿದ್ದ ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’, ‘ಮ್ಯಾನ್​ ಆಫ್​ ದ ಮ್ಯಾಚ್​’ ಸಿನಿಮಾಗಳ ಶೀರ್ಷಿಕೆಗಳು ಭಿನ್ನವಾಗಿದ್ದವು. ಇದೇ ನವಂಬರ್‌ 24ರ ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಜಯನಗರದ ತಮ್ಮದೇ ಕಛೇರಿಯಲ್ಲಿ ಸ್ನೇಹಿತರು, ಕಲಾವಿದರು, ಹಾಗೂ ತಮ್ಮ ತಂಡದ ತಂತ್ರಜ್ಞರನ್ನೊಳಗೂಡಿ ಸತ್ಯ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ಮುಹೂರ್ತ ಮುಗಿಸಿಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ಸೆಟ್ಟೇರಿಯೇ ಬಿಡ್ತು ಚಟ್ಟ ಸಿನಿಮಾ; ನೀವಂದುಕೊಂಡಂತಲ್ಲ ಇದು!

ನಿರ್ಮಾಣ ಹಾಗೂ ನಿರ್ದೇಶನದ ಜತೆಗೆ ಸತ್ಯಪ್ರಕಾಶ್‌ ಹಾಗೂ ಅಥರ್ವ ಪ್ರಕಾಶ್‌ ನಾಯಕರಾಗಿ ಅಭಿನಯಿಸುತ್ತಿದ್ದು ಲವಿತ್‌ ಛಾಯಾಗ್ರಹಣ, ವಾಸುಕಿ ವೈಭವ್‌ ಸಂಗೀತ ನರ್ದೇಶನ, ಬಿ.ಎಸ್‌ ಕೆಂಪರಾಜು ಅವರ ಸಂಕಲನ ಇದೆ. ವರದರಾಜ್‌ ಕಾಮತ್‌ ಕಲಾನಿರ್ದೇಶನ ಮಾಡುತ್ತಿದ್ದಾರೆ. ಇಡೀ ಚಿತ್ರ ಬೆಂಗಳೂರು ಮತ್ತು ಮಂಗಳೂರು ಸುತ್ತ ಮುತ್ತಣ ಪರಿಸರದಲ್ಲಿ ಚಿತ್ರೀಕರಿಸಲು ಯೋಜಿಸಲಾಗಿದೆ ಎಂದು ಸತ್ಯಪ್ರಕಾಶ್‌ ತಿಳಿಸಿದ್ದಾರೆ.

Exit mobile version