Site icon Vistara News

Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

Ramana Avatara Movie

Ramana Avatara Movie

ಬೆಂಗಳೂರು: ‘ಕವಲುದಾರಿ’ಯಂತಹ ಗಂಭೀರ ಸಿನಿಮಾ, ‘ನೋಡಿ ಸ್ವಾಮಿ ಇವನು ಇರೋದು ಹೀಗೆ’, ‘ಆಪರೇಷನ್ ಅಲಮೇಲಮ್ಮ’ ದಂತಹ ಕಾಮಿಡಿ ಚಿತ್ರಗಳಲ್ಲಿಯೂ ನಟಿಸಿ ಗಮನ ಸೆಳೆದಿರುವ ನಟ ರಿಷಿ (Rishi) ಇದೀಗ ‘ರಾಮನ ಅವತಾರ’ (Ramana Avatara Movie) ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಪ್ರಚಾರ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ವಿಭಿನ್ನ ಪ್ರಮೋಷನ್ ವಿಡಿಯೊ ಮೂಲಕ ʼರಾಮನ ಅವತಾರʼ ಬಳಗವೀಗ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಈಗ ಚಿತ್ರತಂಡದ ಕಡೆಯಿಂದ ಮೆಗಾ ಆಫರ್‌ ಸಿಕ್ಕಿದೆ. ʼರಾಮನ ಅವತಾರʼ ಸಿನಿಮಾದ ಟಿಕೆಟ್ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಸಿಂಗಲ್ ಸ್ಕ್ರೀನ್ ಜತೆಗೆ ಮಲ್ಟಿಫ್ಲೆಕ್ಸ್‌ಗಳಲ್ಲಿ ಟಿಕೆಟ್ ದರ ತಗ್ಗಿಸಲಾಗಿದ್ದು, ಕೇವಲ 99 ರೂ.ಗೆ ʼರಾಮನ ಅವತಾರʼ ಸಿನಿಮಾವನ್ನು ನೀವು ಕಣ್ತುಂಬಿಕೊಳ್ಳಬಹುದು.

ಮೇ 9ಕ್ಕೆ ಪ್ರೀಮಿಯರ; ಮೇ 10ಕ್ಕೆ ಚಿತ್ರ ರಿಲೀಸ್

ʼರಾಮನ ಅವತಾರʼ ಚಿತ್ರ ಮೇ 10ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಮೇ 10ಕ್ಕೂ ಮುನ್ನ ಒಂದು ದಿನ ಮೊದಲು ಅಂದರೆ ಮೇ 9ರಂದು ಪೇಯ್ಡ್ ಪ್ರೀಮಿಯರ್ ಶೋ ಏರ್ಪಡಿಸಲಾಗಿದೆ. ಪೇಯ್ಡ್ ಪ್ರೀಮಿಯರ್ ಶೋ ಟಿಕೆಟ್ ದರ ಕೂಡ 99 ರೂ. ನಿಗದಿ ಮಾಡಲಾಗಿದೆ. ಜತೆಗೆ ಚಿತ್ರ ಬಿಡುಗಡೆ ದಿನ ಅಂದರೆ ಮೇ 10ಕ್ಕೂ ಕೂಡ ಟಿಕೆಟ್ ಬೆಲೆ 99 ರೂ. ಇರಲಿದೆ. ಒಟ್ಟಿನಲ್ಲಿ ಮೇ 9 ಹಾಗೂ ಮೇ 10ರಂದು ನೀವು ʼರಾಮನ ಅವತಾರʼ ಸಿನಿಮಾವನ್ನು 99 ರೂ.ಗೆ ವೀಕ್ಷಿಬಹುದು.

ʼರಾಮನ ಅವತಾರʼ ಸಿನಿಮಾದಲ್ಲಿ ರಿಷಿಗೆ ಜೋಡಿಯಾಗಿ ಪ್ರಣೀತಾ ಸುಭಾಷ್  ಹಾಗೂ ಶುಭ್ರ ಅಯ್ಯಪ್ಪ ಸಾಥ್ ಕೊಟ್ಟಿದ್ದಾರೆ. ಅರುಣ್ ಸಾಗರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿಕಾಸ್ ಪಂಪಾಪತಿ ಸಾರಥ್ಯದಲ್ಲಿ ಚಿತ್ರ ಮೂಡಿ ಬಂದಿದ್ದು, ನಿರ್ದೇಶಕರಾಗಿ ಇವರಿಗೆ ಇದು ಮೊದಲ ಸಾಹಸ. ʼರಾಮನ ಅವತಾರʼ ಸಿನಿಮಾದ ಮೂಲಕ ವಿಕಾಸ್ ಮಾರ್ಡನ್ ರಾಮನ ಕಥೆಯನ್ನು ಹೇಳೋದಿಕ್ಕೆ ಹೊರಟಿದ್ದಾರೆ. ಟ್ರೈಲರ್‌ ನೋಡುತ್ತಿದ್ದರೆ ರಾಮಾಯಣ ನೆನಪಿಸುವ ಒಂದಷ್ಟು ದೃಶ್ಯಗಳು ಕಾಣುತ್ತವೆ. ರಾಮ ಹೆಗೆ ಜೆಂಟಲ್ ಮ್ಯಾನ್ ಆಗ್ತಾನೆ? ರಾವಣನ ರೀತಿ ಸಮಸ್ಯೆಗಳನ್ನು ಹೇಗೆ ಎದುರಿಸ್ತಾನೆ ಎನ್ನುವುದನ್ನು ಕಟ್ಟಿ ಕೊಡಲಾಗದೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ ‘ಆಪರೇಷನ್ ಅಲಮೇಲಮ್ಮ’ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ.

ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಿರ್ದೇಶಕ ವಿಕಾಸ್ ಪಂಪಾಪತಿ, ʻʻಈ ಸಿನಿಮಾ ಕ್ಯಾರೆಕ್ಟರ್ ಜರ್ನಿ ಹೇಳುತ್ತಿದ್ದೇವೆ. ರಾಮ ಪಾತ್ರಧಾರಿ ಅವನಿಗೆ ಅವನೇ ಜೆಂಟಲ್ ಮ್ಯಾನ್ ಎಂದು ಹೇಳಿಕೊಂಡು ಓಡಾಡುತ್ತಾ ಇರುತ್ತಾನೆ. ಅವನು ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಅವನ ಜೀವನದಲ್ಲಿ ನಡೆದ ಘಟನೆಗಳು ಅವನನ್ನು ಹೇಗೆ ಬದಲಾಯಿಸುತ್ತದೆ? ರಾಮನ ಹೇಗೆ ಜೆಂಟಲ್ ಮ್ಯಾನ್ ಆಗುತ್ತಾನೆ? ಎನ್ನುವುದನ್ನು ಎಂಟರ್ಟೈನಮೆಂಟ್ ಆಗಿ ಹೇಳಿದ್ದೇವೆ. ರಾಮನ ಅವತಾರ ಎಂದು ಹೇಗೆ ಹೆಸರಟ್ಟಿದ್ದೇವೆ ಎಂದರೆ ಎಲ್ಲರ ಲೈಫ್ ನಲ್ಲಿಯೂ ಒಂದಲ್ಲ ಒಂದು ರಾಮಾಯಣ ನಡೆಯುತ್ತದೆ. ಸೀತೆ ತರ ಹೆಂಡತಿ, ಲಕ್ಷ್ಮಣ ರೀತಿ ತಮ್ಮ, ರಾವಣನಿಂದ ಆಗುವ ಸಮಸ್ಯೆ. ಈ ರೀತಿ ಸಮಸ್ಯೆಗಳು ಎಲ್ಲರ ಜೀವನದಲ್ಲಿ ನಡೆಯುತ್ತವೆ. ಆ ಘಟನೆಗಳನ್ನು ಚಿತ್ರದಲ್ಲಿ ತೋರಿಸಲಾಗಿದೆʼʼ ಎಂದು ತಿಳಿಸಿದ್ದರು.

ಇದನ್ನೂ ಓದಿ: Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Exit mobile version