Site icon Vistara News

Actress Ramya | ನಟಿ ರಮ್ಯಾಗಾಗಿ ಹಾಸ್ಟೆಲ್‌ ಹುಡುಗರ ಪ್ರತಿಭಟನೆ: ವೈರಲ್‌ ಆಯ್ತು ವಿಡಿಯೊ!

Ramya Actress

ಬೆಂಗಳೂರು: ಮೋಹಕ ತಾರೆ ರಮ್ಯಾ (Actress Ramya) ಭಾಗಿಯಾಗಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಪ್ರಚಾರಕ್ಕಾಗಿ ವಿಡಿಯೊ ಮಾಡಲಾಗಿದೆ. ಪ್ರಚಾರ ವಿಡಿಯೊದಲ್ಲಿ ರಮ್ಯಾ ಕಾಣಿಸಿಕೊಂಡಿದ್ದಾರೆ. ಪ್ರಚಾರದ ವಿಡಿಯೊ ಕ್ರಿಯೇಟಿವ್‌ ಆಗಿದ್ದು, ಹಾಸ್ಟೆಲ್‌ ಹುಡುಗರ ತಂಡ ನಟಿ ರಮ್ಯಾಗಾಗಿ ಪ್ರತಿಭಟನೆ ಮಾಡಿದ್ದಾರೆ. ಗುಡಿ ಕಟ್ಟಿಸಿ ಪೂಜೆ ಮಾಡಿದ್ದಾರೆ. ಹಾಸ್ಟೆಲ್ ಹುಡುಗರ ಪ್ರತಿಭಟನೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಹೊಸಬರ ಕ್ರಿಯೇಟಿವಿಟಿ ಮೆಚ್ಚಿಕೊಂಡಿರುವ ರಮ್ಯಾ ಕೂಡ ಈ ತಂಡಕ್ಕೆ ಸಾಥ್​ ನೀಡಿದ್ದಾರೆ. ಪ್ರೋಮೊ ವಿಡಿಯೊದಲ್ಲಿ ನಟಿಸುವ ಮೂಲಕ ರಮ್ಯಾ ಅವರು ಮತ್ತೆ ಬಣ್ಣ ಹಚ್ಚಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ರಂಗಭೂಮಿಯ ಅನೇಕ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. 

ಇದನ್ನೂ ಓದಿ | Upcoming Kannada Movie | ಒಂದೇ ದಿನ ತೆರೆಗೆ ಅಪ್ಪಳಿಸಲಿವೆ ಆರು ಸಿನಿಮಾಗಳು: ನಿಮ್ಮ ಆಯ್ಕೆ ಯಾವುದು?

ಈ ಹಿಂದೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ ಅವರಿಂದ ಸಿನಿಮಾ ಪ್ರಮೋಷನಲ್ ಕಂಟೆಂಟ್ ಮಾಡಿಸಿ ಗಮನ ಸೆಳೆದಿತ್ತು. ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದರೆ ಇಂಟರೆಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ವರುಣ್‌ ಸ್ಟುಡಿಯೋಸ್‌ ಹಾಗೂ ಪ್ರಜ್ವಲ್ ಬಿ.ಪಿ ಅವರ ಗುಲ್‌ಮೊಹರ್ ಫಿಲ್ಮ್ಸ್‌ ಬ್ಯಾನರ್‌ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ.

ಯೂತ್‌ ಸಬ್ಜೆಕ್ಟ್ ಒಳಗೊಂಡ ಚಿತ್ರವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹಲವು ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸಿದ್ದಾರೆ. ಇವರ ಜತೆಗೆ ಸ್ಯಾಂಡಲ್‌ವುಡ್‌ ಸ್ಟಾರ್ ನಟರ ಗೆಸ್ಟ್ ಅಪಿಯರೆನ್ಸ್ ಕೂಡ ಚಿತ್ರದಲ್ಲಿರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ನಿರತವಾಗಿದ್ದು, ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಯೋಜನೆ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದಿ | Ramya Actress | ʻಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರಕ್ಕೆ ಮೋಹಕ ತಾರೆ ರಮ್ಯಾ ಸಾಥ್‌!

Exit mobile version