Site icon Vistara News

Actress Ramya | ʻಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾಗೆ ರಮ್ಯಾ ಬೈ? ಹೊಸ ನಟಿಯ ಹೆಸರು ರಿವೀಲ್‌!

Ramya Actress

ಬೆಂಗಳೂರು: ಸ್ಯಾಂಡಲ್‌ವುಡ್‌ ಮೋಹಕ ತಾರೆ ರಮ್ಯಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ (Actress Ramya) ಸಿನಿಮಾ ಮೂಲಕ ಮತ್ತೆ ಸಿನಿಮಾ ರಂಗಕ್ಕೆ ಬರುವ ವಿಚಾರ ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿತ್ತು. ಆದರೆ ಇದೀಗ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದಿಂದ ರಮ್ಯಾ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

ನಿರ್ಮಾಪಕಿಯೂ ಆಗಿ, ನಾಯಕಿಯೂ ಆಗಿ ಈ ಸಿನಿಮಾಗೆ ರಮ್ಯಾ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಸಿನಿಮಾದಲ್ಲಿ ಸಿರಿ ರವಿಕುಮಾರ್ ಲೀಡ್ ಪಾತ್ರದಲ್ಲಿ ಮಾಡಲಿದ್ದಾರೆ ಎಂದು ಸ್ವತಃ ರಮ್ಯಾ ಅವರ ಪ್ರೊಡಕ್ಷನ್ ಹೌಸ್ ತಿಳಿಸಿದೆ. 

ಆ್ಯಪಲ್ ಬಾಕ್ಸ್ ಅಧಿಕೃತ ಪೇಜಿನಲ್ಲಿ ಹಾಕಿರುವಂತೆ, ‘ಸಿರಿ ರವಿಕುಮಾರ್ ನಮ್ಮ ನಿರ್ಮಾಣದ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಆದರೆ, ರಮ್ಯಾ ಬೆಳ್ಳಿಪರದೆಯ ಮೇಲೆ ಆದಷ್ಟು ಬೇಗ ಮರಳಲಿದ್ದಾರೆ’ ಎಂದು ಬರೆಯಲಾಗಿದೆ. ಅಲ್ಲಿಗೆ ರಮ್ಯಾ ಕೇವಲ ನಿರ್ಮಾಪಕಿಯಾಗಿ ಮಾತ್ರ ಉಳಿಯಲಿದ್ದಾರಾ ಅಥವಾ ಇಬ್ಬರು ನಾಯಕಿಯರು ಈ ಸಿನಿಮಾದಲ್ಲಿ ಇದ್ದಾರಾ ಎನ್ನುವುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಇದನ್ನೂ ಓದಿ | Hondisi Bareyiri | ಓ ಕವನ ಹಾಡು ರಿಲೀಸ್ ಮಾಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ರಾಜ್ ಬಿ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಅವರು ಕೂಡ ಪ್ರಧಾನ ಪಾತ್ರವನ್ನೇ ನಿರ್ವಹಿಸುತ್ತಿದ್ದಾರೆ. ನಿರ್ಮಾಣದಲ್ಲೂ ಹೂಡಿಕೆ ಮಾಡಿದ್ದಾರೆ. ರಮ್ಯಾ ಈ ಸಿನಿಮಾದಲ್ಲಿ ಕೇವಲ ನಿರ್ಮಾಪಕಿಯಾಗಿ ಮಾತ್ರ ಇರುತ್ತಾರಾ? ಅಥವಾ ನಟಿಯಾಗಿಯೂ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ | Hondisi Bareyiri | ಓ ಕವನ ಹಾಡು ರಿಲೀಸ್ ಮಾಡಿದ ಸ್ಯಾಂಡಲ್‌ವುಡ್‌ ನಟಿ ರಮ್ಯಾ

Exit mobile version