ಬಾಲಿವುಡ್
Rashmika Mandanna Video : ನಡು ರಸ್ತೆಯಲ್ಲೇ ರಶ್ಮಿಕಾರನ್ನು ಅಡ್ಡಗಟ್ಟಿದ ಫೋಟೋಗ್ರಾಫರ್!
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸೋಮವಾರ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ನಟಿಯನ್ನು ಹಿಂಬಾಲಿಸಿದ ಫೋಟೋಗ್ರಾಫರ್‌ಗಳ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮುಂಬೈ: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸೋಮವಾರ ಮುಂಬೈನಲ್ಲಿ ಕಾಣಿಸಿಕೊಂಡಿದ್ದಾರೆ. ಅವರನ್ನು ಹಿಂಬಾಲಿಸಿದ ಬಾಲಿವುಡ್ ಫೋಟೋಗ್ರಾಫರ್ ಒಬ್ಬರು ನಡು ರಸ್ತೆಯಲ್ಲೇ ರಶ್ಮಿಕಾ ಅವರನ್ನು ಅಡ್ಡಗಟ್ಟಿ ಫೋಟೋ ತೆಗೆಯಲು ಯತ್ನಿಸಿದ್ದಾರೆ. ಈ ಬಗ್ಗೆ ನಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ನಟಿ ಸೋಮವಾರ ಮುಂಬೈ ಏರ್‌ಪೋರ್ಟ್‌ನಲ್ಲಿ ಇಳಿದು ಬಾಲಿವುಡ್ ಫೋಟೋಗ್ರಾಫರ್‌ಗೆ ಪೋಸ್ ಕೊಟ್ಟಿದ್ದರು. ಅದಾದ ಮೇಲೆ ನಟಿ ಕೆಲಸದ ನಿಮಿತ್ತ ಬಾಂದ್ರಾಕ್ಕೆ ಹೋಗಿದ್ದರು. ಬಾಂದ್ರಾದಿಂದ ವಾಪಸು ಬರುವಾಗ ಕೆಲವು ಫೋಟೋಗ್ರಾಫರ್‌ಗಳು ಅವರನ್ನು ಹಿಂಬಾಲಿಸಿದ್ದಾರೆ. ಟ್ರಾಫಿಕ್‌ನಲ್ಲಿ ರಶ್ಮಿಕಾ ಅವರ ಕಾರು ನಿಂತಾಗ ಅದರ ಬಳಿ ಹೋಗಿ, “ರಶ್ಮಿಕಾ ಜೀ, ರಶ್ಮಿಕಾ ಜೀ” ಎಂದು ಕರೆದಿದ್ದಾರೆ.
ಇದನ್ನೂ ಓದಿ: Viral Video: ಮೆಟ್ರೋದಲ್ಲಿ ವಿಚಿತ್ರವಾಗಿ ಡಾನ್ಸ್ ಮಾಡಿದ ಯುವತಿ; ನೋಡದಿರೋದೇ ವಾಸಿ ಎಂದ ಜನ
ಆಗ ನಟಿ ಕಾರಿನ ಕಿಟಕಿ ಗಾಜನ್ನು ಇಳಿಸಿ, “ಇನ್ನೂ ಎಷ್ಟು ಫೋಟೋ, ವಿಡಿಯೊಗಳನ್ನು ತೆಗೆಯಬೇಕು?” ಎಂದು ಅಸಮಾಧಾನದಿಂದ ಪ್ರಶ್ನಿಸಿದ್ದಾರೆ. ಅದಕ್ಕೆ ಫೋಟೋಗ್ರಾಫರ್ ನಾನು ನಿಮ್ಮನ್ನು ಬಾಂದ್ರಾದಿಂದ ಹಿಂಬಾಲಿಸಿಕೊಂಡು ಬಂದಿದ್ದೇನೆ ಎಂದು ಉತ್ತರಿಸಿದ್ದಾರೆ. ಆಗ ನಟಿ, “ಅದಿರಲಿ, ಆದರೆ ನಾವೀಗ ಟ್ರಾಫಿಕ್ ಮಧ್ಯದಲ್ಲಿದ್ದೇವೆ” ಎಂದು ಹೇಳಿದ್ದಾರೆ. ಫೋಟೋಗ್ರಾಫರ್ “ಸರಿ, ಆಯಿತು” ಎಂದು ಹೇಳಿದ ಮೇಲೆ ನಟಿ ಕಿಟಕಿ ಗಾಜನ್ನು ಏರಿಸಿಕೊಂಡಿದ್ದು, ಕಾರು ಮುಂದೆ ಚಲಿಸಿದೆ.
ಈ ವಿಡಿಯೊವನ್ನು ಯೂಟ್ಯೂಬ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೊ ಭಾರೀ ಸದ್ದು ಮಾಡುತ್ತಿದೆ. ಹಲವರು ಈ ಬಾಲಿವುಡ್ ಫೋಟೋಗ್ರಾಫರ್‌ಗಳ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.
ರಶ್ಮಿಕಾ ಅವರಿಗೆ ಸೋಮವಾರ ಬಿಡುವಿಲ್ಲದ ದಿನವಾಗಿತ್ತು. ಅವರು ಹಲವು ಡ್ರೆಸ್‌ಗಳನ್ನು ತೊಟ್ಟು ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದು ಕಂಡುಬಂದಿದೆ. ಆ ಕೆಲಸ ಮುಗಿದ ನಂತರ ನಟಿ ಮುಂಬೈ ವಿಮಾನ ನಿಲ್ದಾಣಕ್ಕೆ ವಾಪಸಾಗಿದ್ದು, ಅಲ್ಲಿಂದ ಹೈದರಾಬಾದ್‌ಗೆ ತೆರಳಿದ್ದಾರೆ. ಅಲ್ಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರು ಅಲ್ಲಿಂದ ಮನೆಗೆ ತೆರಳಿದ್ದಾರೆ.
ಇದನ್ನೂ ಓದಿ: Viral News: ಸಾಯುವ ಮುನ್ನ 33 ವರ್ಷದ ಗರ್ಲ್‌ಫ್ರೆಂಡ್‌ಗೆ 900 ಕೋಟಿ ರೂ. ಆಸ್ತಿ ಬರೆದಿಟ್ಟ ಮಾಜಿ ಪ್ರಧಾನಿ!
ರಶ್ಮಿಕಾ ಮಂದಣ್ಣ ಅವರು ತೆಲುಗು ನಟ ವಿಜಯ್ ದೇವರಕೊಂಡ ಅವರೊಂದಿಗೆ ಪ್ರೀತಿಯಲ್ಲಿದ್ದಾರೆ ಎಂದು ಸುದ್ದಿಗಳಿದ್ದವು. ಹಲವು ಕಡೆ ಅವರಿಬ್ಬರು ಜತೆಯಾಗಿ ಕಾಣಿಸಿಕೊಂಡಿದ್ದರು ಕೂಡ. ಆದರೆ ಕೆಲವು ದಿನಗಳಿಂದ ಅವರಿಬ್ಬರ ಪ್ರೀತಿ ಮುರಿದುಬಿದ್ದಿದೆ ಎಂದು ಸುದ್ದಿಯಾಗುತ್ತಿದೆ. ಇತ್ತೀಚೆಗೆ ನಟಿ ಸ್ಫೂರ್ತಿದಾಯಕ ವಾಕ್ಯಗಳನ್ನು ಸ್ಟೇಟಸ್ ಹಾಕಿಕೊಂಡಿದ್ದು, ಅವರ ಪ್ರೀತಿ ಮುರಿದು ಮತ್ತೆ ಗಟ್ಟಿಯಾಗುವುದಕ್ಕಾಗಿ ನಟಿ ಹಾಗೆ ಹಾಕಿಕೊಂಡಿದ್ದಾರೆ ಎಂದು ಅಭಿಮಾನಿಗಳು ಊಹಿಸಿದ್ದರು ಕೂಡ.
ಪ್ರಮುಖ ಸುದ್ದಿ
Rakshit Shetty: ಹೌದು, ನಾನು ಈಗಲೂ ರಶ್ಮಿಕಾ ಜತೆ ಸಂಪರ್ಕದಲ್ಲಿದ್ದೇನೆ! ರಕ್ಷಿತ್ ಶೆಟ್ಟಿ ಹೇಳಿಕೆ
Rakshit Shetty: ಕಿರಿಕ್ ಪಾರ್ಟಿ ಚಿತ್ರ ಬಿಡುಗಡೆ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಬೆಂಗಳೂರು: ನಿಶ್ಚಿತಾರ್ಥ ಮಾಡಿಕೊಂಡ ಬಳಿಕ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಬೇರೆ ಬೇರೆಯಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಈ ಇಬ್ಬರು ಪರಸ್ಪರ ಸಂಪರ್ಕದಲ್ಲಿದ್ದಾರೆ! ಹೌದು, ಈ ವಿಷಯವನ್ನು ಸ್ವತಃ ನಟ ರಕ್ಷಿತ್ ಶೆಟ್ಟಿ ಅವರು ಬಹಿರಂಗಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradache Ello) ಚಿತ್ರದ ಪ್ರಚಾರಕ್ಕೆ ಸಂಬಂಧಿಸಿದಂತೆ ಯುಟ್ಯೂಬ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಮಾಹಿತಿಯನ್ನು ನೀಡಿದ್ದಾರೆ.
ಕಿರಿಕ್ ಪಾರ್ಟಿ ಚಿತ್ರದಯ ಯಶಸ್ಸಿನ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು 2017ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ರಶ್ಮಿಕಾ ಮಂದಣ್ಣ ಅವರು ಈ ನಿಶ್ಚಿತಾರ್ಥ ಮುರಿದು, ಮದುವೆಗೆ ನಿರಾಕರಿಸಿದರು. ಆ ಬಳಿಕ, ರಶ್ಮಿಕಾ ಮಂದಣ್ಣ ಅವರು ಈ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ, ರಕ್ಷಿತಾ ಶೆಟ್ಟಿ ಮಾತ್ರ ಈಗಲೂ ರಶ್ಮಿಕಾ ಮಂದಣ್ಣ ಜತೆಗೆ ಸಂಪರ್ಕದಲ್ಲಿರುವುದಾಗಿ ಹೇಳುವ ಮೂಲಕ ಶಾಕ್ ನೀಡಿದ್ದಾರೆ. ಅಲ್ಲದೇ, ಚಿತ್ರಗಳಲ್ಲಿ ರಶ್ಮಿಕಾ ಮಂದಣ್ಣ ತೋರುತ್ತಿರುವ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಹೇಳಿದ್ದೇನು?
ಇತ್ತೀಚೆಗೆ ಯುಟ್ಯೂಬ್‍ಗೆ ನೀಡಿದ ಸಂದರ್ಶನದಲ್ಲಿ ರಕ್ಷಿತ್ ಶೆಟ್ಟಿಗೆ, ಈಗಲೂ ರಶ್ಮಿಕಾ ಮಂದಣ್ಣ ಜತೆಗೆ ಸಂಪರ್ಕದಲ್ಲಿದ್ದೀರಾ ಎಂದು ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ರಕ್ಷಿತ್ ಶೆಟ್ಟಿ ಅವರು, ಹೌದು. ಈಗಲೂ ನಾನು ಮತ್ತು ರಶ್ಮಿಕಾ ಇಬ್ಬರು ಪರಸ್ಪರ ಸಂಪರ್ಕದಲ್ಲಿದ್ದೇವೆ. ಸಿನಿಮಾ ಜಗತ್ತನಲ್ಲಿ ಆಕೆ ದೊಡ್ಡ ಕನಸು ಕಂಡಿದ್ದಾಳೆ. ಅದರಂತೆ ಆಕೆ ಆ ಕನಸಿನತ್ತ ಸಾಗುತ್ತಿದ್ದಾಳೆ. ತಾನು ಏನು ಮಾಡಬೇಕು ಅಂದುಕೊಂಡಿದ್ದಾಳೋ ಅದನ್ನು ಸಾಧಿಸುವ ಶಕ್ತಿ ಅವಳಲ್ಲಿದೆ. ಆಕೆಯ ಸಾಧನೆಗಾಗಿ ನಾವೆಲ್ಲ ಆಕೆಯನ್ನು ಬೆಂಬಲಿಸಬೇಕು ಎಂದು ಹೇಳಿದರು.
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ರಶ್ಮಿಕಾ ಮಂದಣ್ಣ ಅವರು ಪದಾರ್ಪಣೆ ಮಾಡಿದರು. ಕಾಂತಾರ ಚಿತ್ರದ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕಿರಿಕ್ ಪಾರ್ಟಿ ಚಿತ್ರದ ನಿರ್ದೇಶಕರು. ಕಿರಿಕ್ ಪಾರ್ಟಿ ಚಿತ್ರದ ಚಿತ್ರೀಕರಣದ ವೇಳೆಯೇ ರಶ್ಮಿಕಾ-ರಕ್ಷಿತ್ ಒಬ್ಬರಿಗೊಬ್ಬರು ಪ್ರೀತಿಸಲಾರಂಭಿಸಿದರು ಎನ್ನುವ ವರದಿಗಳಿವೆ. ಕಿರಿಕ್ ಪಾರ್ಟಿ ಚಿತ್ರದ ಬಿಡುಗಡೆ ಬಳಿಕ ರಶ್ಮಿಕಾ ಮತ್ತು ರಕ್ಷಿತ್ ಎಂಗೆಜ್ಮೆಂಟ್ ಮಾಡಿಕೊಂಡರು. ಆದರೆ, ಕೆಲವು ತಿಂಗಳ ಬಳಿಕ ಇಬ್ಬರು ನಿಶ್ಚಿತಾರ್ಥ ಮುರಿದುಕೊಂಡರು. ಆದರೆ, ಯಾವುದೇ ಕಾರಣವನ್ನು ಅವರು ಬಹಿರಂಗ ಮಾಡಿರಲಿಲ್ಲ.
ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್ ಸೀರೆಯುಟ್ಟು ಫಸ್ಟ್ ಲುಕ್‌ನಲ್ಲೇ ನಾಚಿ ನೀರಾದ ರಶ್ಮಿಕಾ!
ರಣಬೀರ್ ಕಪೂರ್ (Ranbir Kapoor)) ಅಭಿನಯದ ʻಅನಿಮಲ್ʼ ಸಿನಿಮಾ (Animal first look poster) ದಿನಕ್ಕೊಂದು ಹೊಸ ಅಪ್‌ಡೇಟ್‌ಗಳನ್ನು ಹಂಚಿಕೊಳ್ಳುತ್ತಲೇ ಇದೆ. ಇದೀಗ ʻಅನಿಮಲ್ʼ ಸಿನಿಮಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಪೋಸ್ಟರ್ ಕಂಡು ರಶ್ಮಿಕಾ ಅವರ ಫ್ಯಾನ್ಸ್ ಸಂತಸ ಹೊರಹಾಕುತ್ತಿದ್ದಾರೆ. ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ʻಗೀತಾಂಜಲಿʼ (Geethanjali animal Cinema) ಪಾತ್ರವನ್ನು ನಿಭಾಯಿಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Rashmika Mandanna: ಮೊದಲ ಬಾರಿಗೆ ರಕ್ಷಿತ್ ಶೆಟ್ಟಿಯವರ ʻಕಿರಿಕ್ ಪಾರ್ಟಿʼ ಕುರಿತು ಬಾಯ್ಬಿಟ್ಟ ರಶ್ಮಿಕಾ ಮಂದಣ್ಣ
ಈಗಾಗಲೇ ಅನಿಮಲ್ ಚಿತ್ರತಂಡ ಹಲವು ಪಾತ್ರಗಳನ್ನು ಪರಿಚಯಿಸಿದೆ. ಕಬೀರ್ ಸಿಂಗ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಈ ಸಿನಿಮಾ ನಿರ್ದೇಶಿಸಿದ್ದಾರೆ. ರಶ್ಮಿಕಾ ಪೋಸ್ಟರ್‌ನಲ್ಲಿ, ಕೆಂಪು ಮತ್ತು ಬಿಳಿ ಬಣ್ಣದ ಬಾರ್ಡರ್ ಸೀರೆಯೊಂದಿಗೆ ಗೃಹಿಣಿಯ ಲುಕ್‌ನಲ್ಲಿ ಸಿಂಪಲ್ ಆಗಿ ಕಂಡಿದ್ದಾರೆ. ರಶ್ಮಿಕಾ ಅಭಿನಿಯೊಬ್ಬರು ʻ ಗೀತಾಂಜಲಿಯ ಲುಕ್ ಬಹಳ ವಿಭಿನ್ನವೆಂದು ತೋರುತ್ತದೆʼʼಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬರು. ‘ಇಡೀ ಚಿತ್ರರಂಗದಲ್ಲಿ ನಿಮಗಿಂತ ಮಿಗಿಲಾದವರು ಯಾರೂ ಇಲ್ಲ, ನೀವೇ ಅತ್ಯಂತ ಸುಂದರಿʼʼಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.
ಸಿನಿಮಾದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬಾಲಿವುಡ್
Dadasaheb Phalke Award: ವಹೀದಾ ರೆಹಮಾನ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
85ರ ಹರೆಯದ ವಹೀದಾ ರೆಹಮಾನ್ ಅವರು ಗೈಡ್, ಪ್ಯಾಸಾ, ಕಾಗಜ್ ಕೆ ಫೂಲ್ ಮತ್ತು ಚೌಧವೀಂ ಕಾ ಚಾಂದ್‌ನಂತಹ ಸೂಪರ್‌ಹಿಟ್ ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸಿದ ಚಲನಚಿತ್ರಗಳಲ್ಲಿ ನಟಿಸಿದ್ದು, ಬಾಲಿವುಡ್ (bollywood) ರಸಿಕರ ಮೆಚ್ಚುಗೆಯ ನಟಿಯಾಗಿದ್ದಾರೆ.
ಹೊಸದಿಲ್ಲಿ: ಬಾಲಿವುಡ್‌ನ ಖ್ಯಾತ ಹಿರಿಯ ನಟಿ ವಹೀದಾ ರೆಹಮಾನ್ (Waheeda Rehman) ಅವರಿಗೆ 2021ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ನೀಡಲಾಗುತ್ತಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಘೋಷಿಸಿದ್ದಾರೆ.
85ರ ಹರೆಯದ ವಹೀದಾ ರೆಹಮಾನ್ ಅವರು ಗೈಡ್, ಪ್ಯಾಸಾ, ಕಾಗಜ್ ಕೆ ಫೂಲ್ ಮತ್ತು ಚೌಧವೀಂ ಕಾ ಚಾಂದ್‌ನಂತಹ ಸೂಪರ್‌ಹಿಟ್ ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸಿದ ಚಲನಚಿತ್ರಗಳಲ್ಲಿ ನಟಿಸಿದ್ದು, ಬಾಲಿವುಡ್ (bollywood) ರಸಿಕರ ಮೆಚ್ಚುಗೆಯ ನಟಿಯಾಗಿದ್ದಾರೆ. ಅವರು ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕಾರಗಳನ್ನೂ ಪಡೆದಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು (Dadasaheb Phalke Award) ದೇಶದ ಅತ್ಯುನ್ನತ ಚಲನಚಿತ್ರ ಪ್ರಶಸ್ತಿ; ಇದನ್ನು ಕೇಂದ್ರ ಸರ್ಕಾರ ಕೊಡಮಾಡುತ್ತದೆ.
ಎಕ್ಸ್ (ಟ್ವಿಟರ್)ನಲ್ಲಿನ ಪೋಸ್ಟ್‌ನಲ್ಲಿ, ಅನುರಾಗ್ ಠಾಕೂರ್ ಹೀಗೆ ಬರೆದಿದ್ದಾರೆ: “ವಹೀದಾ ರೆಹಮಾನ್ ಅವರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಈ ವರ್ಷದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಘೋಷಿಸಲು ನಾನು ಅಪಾರ ಸಂತೋಷ ಪಡುತ್ತೇನೆ. ವಹೀದಾಜೀ ಹಿಂದಿ ಚಲನಚಿತ್ರಗಳಲ್ಲಿನ ಅವರ ಪಾತ್ರಗಳಿಗಾಗಿ ವಿಮರ್ಶಾತ್ಮಕ ಮೆಚ್ಚುಗೆ ಪಡೆದಿದ್ದಾರೆ. ಪ್ಯಾಸಾ, ಕಾಗಜ್ ಕೆ ಫೂಲ್, ಚೌಧವಿ ಕಾ ಚಾಂದ್, ಸಾಹೇಬ್ ಬಿವಿ ಔರ್ ಗುಲಾಮ್, ಗೈಡ್, ಖಾಮೋಶಿ ಅವುಗಳಲ್ಲಿ ಪ್ರಮುಖವಾದವುಗಳು. 5 ದಶಕಗಳ ಕಾಲದ ತಮ್ಮ ವೃತ್ತಿಜೀವನದಲ್ಲಿ ಅವರು ತಮ್ಮ ಪಾತ್ರಗಳನ್ನು ಮೆರೆದಿದ್ದಾರೆ. ರೇಷ್ಮಾ ಔರ್ ಶೇರಾ ಚಿತ್ರದ ಪಾತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ವಹೀದಾಜಿ ಅವರು ಸಮರ್ಪಣೆ, ಬದ್ಧತೆ ಮತ್ತು ಅತ್ಯುನ್ನತ ಮಟ್ಟವನ್ನು ಸಾಧಿಸಬಲ್ಲ ಭಾರತೀಯ ನಾರಿಯ ಶಕ್ತಿಯನ್ನು ಪ್ರತಿನಿಧಿಸಿದ್ದಾರೆ. ಕಠಿಣ ಪರಿಶ್ರಮದಿಂದ ವೃತ್ತಿಪರ ಶ್ರೇಷ್ಠತೆ ಸಾಧಿಸಿದ್ದಾರೆ. ಸಂಸತ್ತು ಐತಿಹಾಸಿಕ ನಾರಿ ಶಕ್ತಿ ವಂದನೆ ಅಧಿನಿಯಮವನ್ನು ಅಂಗೀಕರಿಸಿರುವ ಸಮಯದಲ್ಲಿ ವಹೀದಾ ಅವರಿಗೆ ಈ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿರುವುದು ಸಕಾಲಿಕ ಹಾಗೂ ಭಾರತೀಯ ಚಿತ್ರರಂಗದ ಪ್ರಾತಿನಿಧಿಕ ಪ್ರಮುಖ ಮಹಿಳೆಯೊಬ್ಬರಿಗೆ ನೀಡಿದ ಸೂಕ್ತವಾದ ಗೌರವ. ನಾನು ಅವರನ್ನು ಅಭಿನಂದಿಸುತ್ತೇನೆ ಮತ್ತು ನಮ್ಮ ಚಲನಚಿತ್ರ ಇತಿಹಾಸದ ಭಾಗವಾಗಿರುವ ಅವರ ಸಾಧನೆಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.”
I feel an immense sense of happiness and honour in announcing that Waheeda Rehman ji is being bestowed with the prestigious Dadasaheb Phalke Lifetime Achievement Award this year for her stellar contribution to Indian Cinema.
— Anurag Thakur (@ianuragthakur) September 26, 2023
Waheeda ji has been critically acclaimed for her…
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯು ದಿವಂಗತ ನಟ ದೇವ್ಆನಂದ್ (Dev Anand) ಅವರ ಶತಮಾನೋತ್ಸವದೊಂದಿಗೆ ಸೇರಿಕೊಂಡಿದೆ. ದೇವ್ ಆನಂದ್ ಹಾಗೂ ವಹೀದಾ ರೆಹಮಾನ್ 1965ರ ಬ್ಲಾಕ್‌ಬಸ್ಟರ್ ಚಿತ್ರ ʼಗೈಡ್ʼನ ರೊಮ್ಯಾಂಟಿಕ್ ಜೋಡಿ. ಈ ವರ್ಷದ ಕೊನೆಯಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ವಹೀದಾ ರೆಹಮಾನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 2020ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಆಶಾ ಪರೇಖ್ (Asha Parekh) ಹಾಗೂ ಅದರ ಹಿಂದಿನ ವರ್ಷದ (2019) ಪ್ರಶಸ್ತಿಯನ್ನು ರಜನಿಕಾಂತ್ (Rajinikanth) ಪಡೆದಿದ್ದರು. ವಹೀದಾ ಸದ್ಯ ಬೆಂಗಳೂರಿನ ನಿವಾಸಿಯಾಗಿದ್ದಾರೆ.
ಇದನ್ನೂ ಓದಿ: Sunday read | ಈ ಚೆಲುವೆ ವನ್ಯಜೀವಿ ಫೋಟೋಗ್ರಫಿ ಮಾಡಿದಾಗ…
ದೇಶ
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
Swara Bhasker: ನಟಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸ್ವರಾ ಭಾಸ್ಕರ್ ಹಾಗೂ ಸಮಾಜವಾದಿ ಪಕ್ಷದ ಯುವ ನಾಯಕ ಫಹಾದ್ ಅಹ್ಮದ್ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ ಮದುವೆಯಾಗಿದ್ದರು.
ನವದೆಹಲಿ: ನಟಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸ್ವರಾ ಭಾಸ್ಕರ್ (Swara Bhasker) ಅವರು ಸೆಪ್ಟೆಂಬರ್ 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ(Baby Girl). ಸಮಾಜವಾದಿ ಪಕ್ಷದ ನಾಯಕ ಫಹಾದ್ ಅಹ್ಮದ್ (Fahad Ahmad) ಅವರು ಸ್ವರಾ ಅವರ ಪತಿಯಾಗಿದ್ದಾರೆ. ತಮಗೆ ಹೆಣ್ಣು ಮಗು ಜನಿಸಿದ ಮಾಹಿತಿಯನ್ನು ದಂಪತಿಯು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಮಗುವಿನ ಮೊದಲ ಫೋಟೋ ಕೂಡ ಷೇರ್ ಮಾಡಿದ್ದಾರೆ. ಮಗುವಿಗೆ ‘ರಾಬಿಯಾ’ (Raabiyaa) ಎಂದು ನಾಮಕರಣ ಮಾಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಜಂಟಿಯಾಗಿ ಪೋಸ್ಟ್ ಮಾಡಿರುವ ಸ್ವರಾ ಮತ್ತು ಫಹಾದ್ ಅವರು, ನಮ್ಮ ಪ್ರಾರ್ಥನೆ ಫಲಿಸಿತು. ಆಶೀರ್ವಾದ ಲಭಿಸಿತು. ಹಾಡು ಪಿಸುಗುಟ್ಟಿದೆ… ಅದು ಅತೀಂದ್ರಿಯ ಸತ್ಯ…. ಸೆಪ್ಟೆಂಬರ್ 23ರಂದು ನಮಗೆ ಹೆಣ್ಣು ಮಗು ಜನಿಸಿದೆ. ಕೃತಜ್ಞತೆಯ ಮತ್ತು ಸಂತೋಷದ ಹೃದಯಗಳೊಂದಿಗೆ, ನಿಮ್ಮ ಪ್ರೀತಿಗೆ ಧನ್ಯವಾದಗಳು! ಇದು ಸಂಪೂರ್ಣ ಹೊಸ ಜಗತ್ತು ಎಂದು ಬರೆದುಕೊಂಡಿದ್ದಾರೆ.
ಸ್ವರಾ-ಫಹಾದ್ ದಂಪತಿ ಫೋಟೋ ಷೇರ್ ಮಾಡಿದ್ದಾರೆ. ಈ ಪೈಕಿ ಮೊದಲನೆಯ ಫೋಟೋದಲ್ಲಿ ಕೂಸು ರಾಬಿಯಾ ಜತೆ ಸ್ವರ ಭಾಸ್ಕರ್ ಇದ್ದಾರೆ. ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಮಯದಲ್ಲಿ, ತೊಟ್ಟಿಲಲ್ಲಿ ಮಗುವಿನ ಪಕ್ಕದಲ್ಲಿ ಸ್ವರಾ ಮತ್ತು ಫಹಾದ್ ಇದ್ದಾರೆ. ಆಸ್ಪತ್ರೆಯ ಹಾಸಿಗೆಯ ಮೇಲೆ ತನ್ನ ನವಜಾತ ಮಗಳೊಂದಿಗೆ ಸ್ವರಾ ಇರುವ ಮತ್ತೊಂದು ಫೋಟೋ ಇದೆ. ಇನ್ನೂ ಒಂದು, ಫಹಾದ್ ಮಗುವನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡಿರುವ ಹಾಗೂ ಕೊನೆಯದು ಮೂವರು ಇರುವ ಕುಟುಂಬದ ಮತ್ತೊಂದು ಫೋಟೋವನ್ನು ಕಾಣಬಹುದಾಗಿದೆ.
ಈ ಸುದ್ದಿಯನ್ನೂ ಓದಿ: Swara Bhaskar: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ರಾಹುಲ್ ಗಾಂಧಿ ಭಾಗಿ
ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ತಾಯಿ, ತಂದೆಯಾದ ಸ್ವರಾ ಮತ್ತು ಫಹಾದ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. ಅಭಿಮಾನಿಗಳಿಂದ ಸೆಲೆಬ್ರಿಟಿಗಳವರೆಗೆ ಹಲವಾರು ಜನರು ಈಗ ದಂಪತಿಗಳಿಗೆ ಶುಭಾಶಯ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ. ತಿಲೋತಮಾ ಶೋಮ್, ಗುನೀತ್ ಮೊಂಗಾ ಮತ್ತು ಪಾರ್ವತಿ ಕಾಮೆಂಟ್‌ಗಳಲ್ಲಿ ದಂಪತಿಗಳನ್ನು ಅಭಿನಂದಿಸಿದ್ದಾರೆ.
ಇದೇ ವರ್ಷದ ಫೆಬ್ರವರಿಯಲ್ಲಿ ಸ್ವರಾ ಭಾಸ್ಕರ್ ಮ್ತತು ಫಹಾದ್ ಅಹ್ಮದ್ ಅವರು ಕೋರ್ಟ್‌ನಲ್ಲಿ ವಿವಾಹವಾಗಿದ್ದರು. ಬಳಿಕ ಮಾರ್ಚ್ ತಿಂಗಳಲ್ಲಿ ಹಳದಿ, ಸಂಗೀತ, ವೆಡ್ಡಿಂಗ್ ರಿಸೆಪ್ಷನ್ ಸೇರಿದಂತೆ ಅನೇಕ ಮದುವೆಯ ಕಾರ್ಯಕ್ರಮಗಳನ್ನು ನಡೆಸಿದ್ದರು. ಜೂನ್ ತಿಂಗಳಲ್ಲಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸ್ವರಾ ಭಾಸ್ಕರ್ ಹಾಗೂ ಫಹಾದ್ ಅಹ್ಮದ್ ಅವರು ಘೋಷಿಸಿದ್ದರು. ಈಗ ಮುದ್ದಾದ ಹೆಣ್ಣುಮಗಳ ತಂದೆತಾಯಿಯಾಗಿದ್ದಾರೆ.
ಸಿನಿಮಾದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬಾಲಿವುಡ್
Jawan box office collection: 9 ತಿಂಗಳಲ್ಲೇ 2000 ಕೋಟಿ ರೂ. ಕೊಳ್ಳೆ ಹೊಡೆದ ಶಾರುಖ್; ʻಜವಾನ್ʼ ಹೊಸ ದಾಖಲೆ!
ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection). ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಜವಾನ್‌ನ ಬಾಕ್ಸ್ ಆಫೀಸ್ ಬಗ್ಗೆ ಟ್ವಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಬೆಂಗಳೂರು: ಶಾರುಖ್ ಖಾನ್, ನಯನತಾರಾ ಮತ್ತು ವಿಜಯ್ ಸೇತುಪತಿ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection). ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಜವಾನ್‌ನ ಬಾಕ್ಸ್ ಆಫೀಸ್ ಬಗ್ಗೆ ಟ್ವಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಅಟ್ಲೀ ಸಂತಸ ವ್ಯಕ್ತಪಡಿಸಿ ʻʻದೇವರು ನಮಗೆ ತುಂಬಾ ಕರುಣೆ ತೋರಿದ್ದಾನೆ. ಎಲ್ಲರಿಗೂ ಧನ್ಯವಾದಗಳು” ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ʻಪಠಾಣ್ ಸಿನಿಮಾ ಬಳಿಕ 1000 ಕೋಟಿ ರೂ. ದಾಖಲೆ ಕಂಡ ಎರಡನೇ ಸಿನಿಮಾ ʻಜವಾನ್ʼ ಆಗಿದೆ.
ಕೇವಲ 18 ದಿನಗಳಲ್ಲಿ 1000 ಕೋಟಿ ಬಾಚಿದ ಜವಾನ್!
ಅಟ್ಲೀ ಇದೀಗ ವಿಡಿಯೊ ಹಂಚಿಕೊಂಡು ಶಾರುಖ್ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ್ದಾರೆ. ಈ ವರ್ಷದ ಆರಂಭದಲ್ಲಿ, ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ನಟಿಸಿದ ಪಠಾಣ್, ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂ. ಗಳಿಸಿತ್ತು. ಪಠಾಣ್ ಸಿನಿಮಾ ಜನವರಿ 25ರಂದು ಬಿಡುಗಡೆಯಾಗಿತ್ತು. ನಾಲ್ಕು ವಾರಗಳ ಬಳಿಕ ಅಂದರೆ ಫೆಬ್ರವರಿ 21 ರಂದು ವಿಶ್ವಾದ್ಯಂತ 1000 ಕೋಟಿ ರೂ. ಗಡಿ ದಾಟಿತು. ಈ ಸಿನಿಮಾಗೆ ಹೋಲಿಸಿದರೆ, ಜವಾನ್ ಕೇವಲ 18 ದಿನಗಳಲ್ಲಿ 1000 ಕೋಟಿ ರೂ. ಗಡಿ ದಾಟಿದೆ. ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಜವಾನ್ ಸೆಪ್ಟೆಂಬರ್ 7ರಂದು ಬಿಡುಗಡೆಯಾಗಿತ್ತು.
ಜವಾನ್ ತನ್ನ ಮೂರನೇ ವಾರಾಂತ್ಯದಲ್ಲಿ ಗಳಿಕೆಯಲ್ಲಿ ಮತ್ತಷ್ಟು ಏರಿಕೆ ಕಂಡಿದೆ. ಸೆ. 24ರಂದು ವಿಶ್ವಾದ್ಯಂತ ಒಟ್ಟು ಕಲೆಕ್ಷನ್ 979.08 ಕೋಟಿಯಾಗಿದೆ. ಸೆ. 25ರಂದು 25.84 ಕೋಟಿ ರೂ. ಗಳಿಸಿತ್ತು. ಇದೀಗ ಇಲ್ಲಿಯವರೆಗೆ 1004 ಕೋಟಿ ರೂ,ಗಿಂತ ಹೆಚ್ಚು ವಿಶ್ವಾದ್ಯಂತ ಗಳಿಸಿದೆ. ವರದಿಯ ಪ್ರಕಾರ, ಜವಾನ್ ತನ್ನ ಮೂರನೇ ಭಾನುವಾರ ಭಾರತದಲ್ಲಿ 14.95 ಕೋಟಿ ರೂ. ನಿವ್ವಳವನ್ನು ಸಂಗ್ರಹಿಸಿದೆ. ಮೊದಲ ದಿನದಂದು ಎಲ್ಲಾ ಭಾಷೆಗಳಲ್ಲಿ ಭಾರತದಲ್ಲಿ 75 ಕೋಟಿ ರೂ. ಗಳಿಕೆ ಕಂಡಿತ್ತು.
ಇದನ್ನೂ ಓದಿ: Jawan Box Office Collection: ಅಬ್ಬಾ! ಈವರೆಗಿನ ʻಜವಾನ್ʼ ಗಳಿಕೆ ಇಷ್ಟೊಂದಾ?
God is so kind to us
— atlee (@Atlee_dir) September 25, 2023
Thank you all #jawan
History in the maKING ft. Jawan! 🔥
Have you watched it yet? Go book your tickets now! https://t.co/uO9YicOXAI
Watch #Jawan in cinemas – in Hindi, Tamil & Telugu. pic.twitter.com/h57GwuTTP3
ʼಜವಾನ್ʼ ಸಿನಿಮಾ ರಿಲೀಸ್ ಆಗಿ 11 ದಿನದಲ್ಲಿ ಶಾರುಖ್ ಅವರ ಪಠಾಣ್ ಹಾಗೂ ಸನ್ನಿ ಡಿಯೋಲ್ ಅವರ ಗದರ್ 2 ದಾಖಲೆಗಳನ್ನು ಬ್ರೇಕ್ ಮಾಡಿತ್ತು. 11 ದಿನದಲ್ಲಿ ಬರೋಬ್ಬರಿ 400 ಕೋಟಿ ರೂ. ಕಲೆಕ್ಷನ್ ಮಾಡಿತ್ತು ಜವಾನ್.
ಶಾರುಖ್ ಖಾನ್, ನಯನತಾರಾ ಮತ್ತು ವಿಜಯ್ ಸೇತುಪತಿ ಅವರಲ್ಲದೆ, ಜವಾನ್ ಚಿತ್ರದಲ್ಲಿ ಪ್ರಿಯಾಮಣಿ, ಸನ್ಯಾ ಮಲ್ಹೋತ್ರಾ, ರಿಧಿ ಡೋಗ್ರಾ, ಲೆಹರ್ ಖಾನ್, ಗಿರಿಜಾ ಓಕ್ ಮತ್ತು ಸಂಜೀತಾ ಭಟ್ಟಾಚಾರ್ಯ ಕೂಡ ನಟಿಸಿದ್ದಾರೆ. ಸಂಜಯ್ ದತ್ ಮತ್ತು ದೀಪಿಕಾ ಪಡುಕೋಣೆ ಕೂಡ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
-
Live News20 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ11 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ3 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
South Cinema14 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ?
-
ಕರ್ನಾಟಕ14 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್10 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ11 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್14 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ