Site icon Vistara News

Rashmika Mandanna: `ಅನಿಮಲ್‌’ ಶೂಟಿಂಗ್‌ ಕಂಪ್ಲೀಟ್‌ ಮಾಡಿದ ರಶ್ಮಿಕಾ ಮಂದಣ್ಣ

Rashmika Mandanna completed Animal shooting

ಬೆಂಗಳೂರು: ಆಲಿಯಾ ಭಟ್ ʻಹಾರ್ಟ್ ಆಫ್ ಸ್ಟೋನ್ʼ ಸಿನಿಮಾ ಮೂಲಕ (Alia Bhatt-Ranbir Kapoor) ಹಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಆಗಸ್ಟ್ 11ರಂದು ನೆಟ್​ಫ್ಲಿಕ್ಸ್ ಮೂಲಕ ಈ ಸಿನಿಮಾ ರಿಲೀಸ್ ಆಗುತ್ತಿದೆ. ಅದೇ ದಿನ ರಣಬೀರ್ ಕಪೂರ್ (Ranbir Kapoor) ನಟನೆಯ ‘ಅನಿಮಲ್’ ಸಿನಿಮಾ ಕೂಡ ರಿಲೀಸ್ ಆಗುತ್ತಿದೆ. ಇದೀಗ ಅನಿಮಲ್‌ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ ರಶ್ಮಿಕಾ ಮಂದಣ್ಣ (Rashmika Mandanna). ʻʻಅನಿಮಲ್ ಮುಗಿಯಿತು. ಅದ್ಭುತ ಪಾತ್ರ. ಈ ರೂಪದಲ್ಲಿ ನನ್ನನ್ನು ಯಾರೂ ನೋಡಿಲ್ಲʼʼ ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ.

ಅನಿಮಲ್‌ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿ. ಚಿತ್ರದಲ್ಲಿ ಬಾಬಿ ಡಿಯೋಲ್, ಅನಿಲ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ಮಿಂಚಲಿದ್ದಾರೆ. ಸದ್ಯ ರಶ್ಮಿಕಾ ಮಂದಣ್ಣ ಅನಿಮಲ್‌ ಸಿನಿಮಾ ಚಿತ್ರೀಕರಣ ಮುಗಿಸಿದ್ದಾರೆ. ರಣಬೀರ್‌ ಅಮೇಜಿಂಗ್ ಆಕ್ಟರ್. ಅಷ್ಟೇ ಒಳ್ಳೆಯ ಮನಸಿನ ಹುಡುಗ. ಅನಿಮಲ್ ನಿಮ್ಮನ್ನು ಖಂಡಿತ ರಂಜಿಸಲಿದೆ ಎನ್ನುತ್ತಾರೆ ರಶ್ಮಿಕಾ ಮಂದಣ್ಣ.

ʻಅರ್ಜುನ್​ ರೆಡ್ಡಿ’ ಸಿನಿಮಾ ಖ್ಯಾತಿಯ ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತಮಿಳು, ಮಲಯಾಳಂ, ತೆಲುಗು ಮತ್ತು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ʻಅನಿಮಲ್ʼ ಸಿನಿಮಾ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ. ಮುರಾದ್ ಖೇತಾನಿಯ ಸಿನಿ 1 ಸ್ಟುಡಿಯೋಸ್ ಮತ್ತು ಪ್ರಣಯ್ ರೆಡ್ಡಿ ವಂಗಾ ಅವರ ಭದ್ರಕಾಳಿ ಪಿಕ್ಚರ್ಸ್‌ ನಿರ್ಮಿಸಿದೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಮಂದಣ್ಣ ಮ್ಯಾನೇಜರ್‌ನನ್ನು ಕೆಲಸದಿಂದ ಕಿತ್ತಾಕಿದ್ದು ವಂಚನೆಗಾಗಿ ಅಲ್ಲ! ಮತ್ಯಾಕೆ?

ಹಾರ್ಟ್ ಆಫ್ ಸ್ಟೋನ್ ಜತೆಗೆ, ಆಲಿಯಾ ಭಟ್ ಅವರು ರಣವೀರ್ ಸಿಂಗ್ ಜತೆಗೆ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಸಿನಿಮಾ ಸಹ ಹೊಂದಿದ್ದಾರೆ. ಚಿತ್ರವು ಜುಲೈ 28 ರಂದು ಬಿಡುಗಡೆಯಾಗಲಿದೆ. ಇದರಲ್ಲಿ ಜಯಾ ಬಚ್ಚನ್, ಧರ್ಮೇಂದ್ರ ಮತ್ತು ಶಬಾನಾ ಅಜ್ಮಿ ಪ್ರಮುಖ ಪಾತ್ರಗಳಲ್ಲಿದ್ದಾರೆ.

Exit mobile version