Rashmika Mandanna | ‘ಕೂರ್ಗ್ ವರ್ಷದ ವ್ಯಕ್ತಿ 2022’ ಆಗಿ ಹೊರಹೊಮ್ಮಿದ ರಶ್ಮಿಕಾ ಮಂದಣ್ಣ Vistara News

ಸಿನಿಮಾ

Rashmika Mandanna | ‘ಕೂರ್ಗ್ ವರ್ಷದ ವ್ಯಕ್ತಿ 2022’ ಆಗಿ ಹೊರಹೊಮ್ಮಿದ ರಶ್ಮಿಕಾ ಮಂದಣ್ಣ

ಕರ್ನಾಟಕ ಮೂಲದ ನ್ಯೂಸ್ ಪೋರ್ಟಲ್ ನಡೆಸಿದ ಸಮೀಕ್ಷೆಯಲ್ಲಿ ರಶ್ಮಿಕಾ (Rashmika Mandanna ) ಅವರು ‘ಕೂರ್ಗ್ ವರ್ಷದ ವ್ಯಕ್ತಿ 2022’ಎಂದು ಆಯ್ಕೆಯಾಗಿದ್ದಾರೆ.

VISTARANEWS.COM


on

Rashmika Mandanna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ತೆಲುಗು ಚಿತ್ರರಂಗದ ಅತ್ಯಂತ ಜನಪ್ರಿಯ ಯುವ ತಾರೆಗಳಲ್ಲಿ ಒಬ್ಬರು. ಕರ್ನಾಟಕ ಮೂಲದ ನ್ಯೂಸ್ ಪೋರ್ಟಲ್ ನಡೆಸಿದ ಸಮೀಕ್ಷೆಯಲ್ಲಿ ರಶ್ಮಿಕಾ ಅವರು ‘ಕೂರ್ಗ್ ವರ್ಷದ ವ್ಯಕ್ತಿ 2022’ಎಂದು ಆಯ್ಕೆಯಾಗಿದ್ದಾರೆ.

ರಶ್ಮಿಕಾ ಮಂದಣ್ಣ ಈ ವಿಚಾರವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ. ʻʻಇದು ನನಗೆ ನಿಜವಾಗಿಯೂ ಸಂತೋಷವನ್ನು ನೀಡುತ್ತಿದೆ. ನನಗೆ ಹೆಮ್ಮೆಯಾಗುತ್ತಿದೆ. ನಿಮ್ಮ ಪ್ರೀತಿಗಾಗಿ ತುಂಬಾ ಧನ್ಯವಾದಗಳುʼʼ ಎಂದು ಬರೆದುಕೊಂಡಿದ್ದಾರೆ. 2016ರಲ್ಲಿ ಕಿರಿಕ್ ಪಾರ್ಟಿ ಮೂಲಕ ಚಿತ್ರರಂಗ ಪ್ರವೇಶಿಸಿದ ವಿರಾಜ ಪೇಟೆಯ ರಶ್ಮಿಕಾ ಮಂದಣ್ಣ, ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ ಬಹು ಭಾಷಾ ತಾರೆಯಾಗಿ ಮಿಂಚುತ್ತಿದ್ದಾರೆ. ರಕ್ಷಿತ್ ಶೆಟ್ಟಿ, ಪುನೀತ್ ರಾಜ್ ಕುಮಾರ್, ಅಮಿತಾಭ್ ಬಚ್ಚನ್, ಅಲ್ಲು ಅರ್ಜುನ್, ದಳಪತಿ ವಿಜಯ್ ಅವರಂತಹ ಖ್ಯಾತ ನಟರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. 

ಇದನ್ನೂ ಓದಿ | Rashmika Mandanna | ಹೊಸ ವರ್ಷಾಚರಣೆಗೆ ಬಿಳಿ ಸೀರೆಯಲ್ಲಿ ಮಿಂಚಿದ ರಶ್ಮಿಕಾ

ದಳಪತಿ ವಿಜಯ್‌ ಜತೆ ರಶ್ಮಿಕಾ ಮಂದಣ್ಣ ʻವಾರಿಸುʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ 12 ರಂದು ಸಿನಿಮಾ ಬಿಡುಗಡೆಯಾಗುತ್ತಿದ್ದು, ಸಿನಿಮಾ ಪ್ರಚಾರದಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್‌ ಅಡಿ ದಿಲ್ ರಾಜು ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ತೆಲುಗಿನ ಬೃಂದಾವನಂ, ʻಮಹರ್ಷಿʼ ಖ್ಯಾತಿಯ ವಂಶಿ ಪೈಡಿಪಳ್ಳಿ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಸಿನಿಮಾ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ | Rashmika Mandanna | ಸಮಂತಾ ವಿಚಾರದಲ್ಲಿ ನಾನು ಪೊಸೆಸಿವ್ ಎಂದ ರಶ್ಮಿಕಾ ಮಂದಣ್ಣ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Dr Vishnuvardhan: ಡಿ. 17 ರಂದು ಡಾ. ವಿಷ್ಣುವರ್ಧನ್‌ ಪುಣ್ಯಭೂಮಿಗಾಗಿ ಪ್ರತಿಭಟನೆ

Dr Vishnuvardhan: ಮೇರು ನಟ ಡಾ. ವಿಷ್ಣುವರ್ಧನ್‌ ಅವರ ಪುಣ್ಯಭೂಮಿಗೆ ಒತ್ತಾಯಿಸಿ ಡಿಸೆಂಬರ್‌ 17 ರಂದು ಡಾ.ವಿಷ್ಣುವರ್ಧನ್‌ ಅಭಿಮಾನಿ ಸಂಘಗಳ ಒಕ್ಕೂಟದ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ.

VISTARANEWS.COM


on

Dr Vishnuvardhan
Koo

ಬೆಂಗಳೂರು: ಮೇರು ನಟ ಡಾ. ವಿಷ್ಣುವರ್ಧನ್‌ ಅವರ (Dr Vishnuvardhan) ಪುಣ್ಯಭೂಮಿಯನ್ನು ಅಭಿಮಾನ್‌ ಸ್ಟುಡಿಯೋದಲ್ಲಿ ನಿರ್ಮಿಸಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಡಿ. 17 ರಂದು ಬೃಹತ್‌ ಪ್ರತಿಭಟನೆ ನಡೆಸಲು ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘಗಳ ಒಕ್ಕೂಟ‌ ಮುಂದಾಗಿದೆ. ಈ ಬಗ್ಗೆ ಒಕ್ಕೂಟದ ಮುಖಂಡ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ ನಡೆದ ಸಮಾಲೋಚನೆ ಸಭೆಯಲ್ಲಿ ನಿರ್ಧರಿಸಲಾಗಿದೆ.

ಮೇರು ನಟ ಡಾ. ವಿಷ್ಣುವರ್ಧನ್‌ ಅವರು ನಮ್ಮನ್ನಗಲಿ 14 ವರ್ಷಗಳಾದವು. ಆದರೆ ಇಂದಿಗೂ ಅವರ ಅಂತ್ಯಸಂಸ್ಕಾರಗೊಂಡ ಜಾಗವನ್ನು ಅಭಿವೃದ್ದಿಪಡಿಸುವ ಕೆಲಸವನ್ನು ಯಾವುದೇ ಸರ್ಕಾರ ಮಾಡಿಲ್ಲ. ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಡಿಸೆಂಬರ್‌ 17 ರಂದು ಡಾ.ವಿಷ್ಣುವರ್ಧನ್‌ ಅಭಿಮಾನಿ ಸಂಘಗಳ ಒಕ್ಕೂಟದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 10 ರಿಂದ ಸಂಜೆ 6ಗಂಟೆವರೆಗೆ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡ ವೀರಕಪುತ್ರ ಶ್ರೀನಿವಾಸ ತಿಳಿಸಿದ್ದಾರೆ.

ಪ್ರತಿಭಟನೆಯಲ್ಲಿ ನಾಡಿನ ಎಲ್ಲಾ ಕನ್ನಡಪರ ಸಂಘಟನೆಗಳು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ, ಕಲಾವಿದರ ಸಂಘ ಆದಿಯಾಗಿ ಡಾ.ವಿಷ್ಣುವರ್ಧನ್‌ ಅವರ ಒಡನಾಡಿಗಳೆಲ್ಲರೂ ಭಾಗವಹಿಸಲಿದ್ದಾರೆ. ಅಂದು ಸುಮಾರು ಐವತ್ತು ಸಾವಿರ ಜನ ಸೇರುವ ನಿರೀಕ್ಷೆ ಇದೆ. ಒಂದು ವೇಳೆ ಈ ಪ್ರತಿಭಟನೆಗೂ ಸರ್ಕಾರ ಸ್ಪಂದಿಸದೇ ಹೋದಲ್ಲಿ, ದೆಹಲಿಯಲ್ಲಿ ನಾವು ಹೋರಾಟವನ್ನು ಮುಂದುವರಿಸಲಿದ್ದೇವೆ ಜತೆಗೆ ಸರ್ಕಾರದ ಮಂತ್ರಿಗಳು ಭಾಗವಹಿಸುವ ಎಲ್ಲಾ ಕಾರ್ಯಕ್ರಮಗಳಲ್ಲಿ ಕಪ್ಪುಬಾವುಟ ಪ್ರದರ್ಶನಕ್ಕೆ ಮುಂದಾಗಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ | Actress Leelavathi: ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿಕೆಶಿ, ಆದರೆ ನಟಿ ಪ್ರಜ್ಞಾಶೂನ್ಯ

ವಾಸ್ತವದಲ್ಲಿ ಹಿರಿಯ ಕಲಾವಿದ ಬಾಲಕೃಷ್ಣ ಅವರಿಗೆ ಸರ್ಕಾರ ಅನುದಾನವಾಗಿ ನೀಡಿರುವ ಜಾಗವೇ ಅಭಿಮಾನ್‌ ಸ್ಟುಡಿಯೋ. ಕನ್ನಡಿಗರು ಚಿತ್ರರಂಗದ ಕೆಲಸಗಳಿಗೆ ಮದ್ರಾಸ್‌ಗೆ ಹೋಗುವುದನ್ನು ತಪ್ಪಿಸಬೇಕು ಎಂದು ಕನಸು ಹೊತ್ತು ಬಾಲಣ್ಣನವರು ಸರ್ಕಾರದ ಬಳಿ ಇಪ್ಪತ್ತು ಎಕರೆ ಜಾಗವನ್ನು 99 ವರುಷಕ್ಕೆ ಅನುದಾನವಾಗಿ ಪಡೆದು ಅಭಿಮಾನ್‌ ಸ್ಟುಡಿಯೋ ನಿರ್ಮಿಸಿದ್ದರು. ಆದರೆ ಅವರ ಅಗಲಿಕೆಯ ನಂತರ 2004ರಲ್ಲಿ ಅವರ ಮಕ್ಕಳು ಅದರಲ್ಲಿ ಹತ್ತು ಎಕರೆ ಜಾಗವನ್ನು ಮಾರಾಟ ಮಾಡಿ, ಸರ್ಕಾರಿ ಜಮೀನನ್ನು ದುರುಪಯೋಗಪಡಿಸಿಕೊಂಡಿದ್ದರು. ಈ ಕಾರಣದಿಂದ ಹಿಂದಿನ ಜಿಲ್ಲಾಧಿಕಾರಿ ಶಂಕರ್‌ ಅವರು ಅಭಿಮಾನ್‌ ಸ್ಟುಡಿಯೋ ಮುಟ್ಟುಗೋಲಿಗೆ ಆದೇಶಿಸಿದ್ದರು. ಆಗ ಬಾಲಕೃಷ್ಣ ಅವರ ಕುಟುಂಬಸ್ಥರು ನ್ಯಾಯಾಲಯದಲ್ಲಿ ತಡೆಯಾಜ್ಞೆಯನ್ನು ತಂದಿದ್ದರು ಎಂದು ವಿಷ್ಣುವರ್ಧನ ಅಭಿಮಾನಿ ಸಂಘಗಳ ಒಕ್ಕೂಟ ಹೇಳಿದೆ.

ಈ ನಡುವೆ, ಡಾ.ವಿಷ್ಣುವರ್ಧನ್‌ ಅವರ ಸ್ಮಾರಕವು ಮೈಸೂರಿಗೆ ಸ್ಥಳಾಂತರಗೊಂಡಿತು. ಆದರೆ ಅಭಿಮಾನಿಗಳು ಸ್ಮಾರಕ ಎಲ್ಲೇ ಆದರೂ ಅಂತ್ಯಸಂಸ್ಕಾರಗೊಂಡ ಜಾಗದಲ್ಲಿಯೇ ಪುಣ್ಯಭೂಮಿ ಇರಬೇಕು ಎಂದು ಹಠವಿಡಿದು, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಯನ್ನು ಅತ್ಯಂತ ಅದ್ಧೂರಿಯಾಗಿ ಅಭಿಮಾನ್‌ ಸ್ಟುಡಿಯೋದ ಡಾ.ವಿಷ್ಣು ಪುಣ್ಯಭೂಮಿಯಲ್ಲಿ ಆಚರಿಸುತ್ತಾ ಬರುತ್ತಿದ್ದಾರೆ.

ಇದನ್ನೂ ಓದಿ | Actress Leelavathi: ನಟಿ ಲೀಲಾವತಿ ಆರೋಗ್ಯ ವಿಚಾರಿಸಿ ಭಾವುಕರಾದ ಶಿವ ರಾಜ್‌ಕುಮಾರ್‌

ಆದರೆ, ಈಗ ಅಭಿಮಾನ್‌ ಸ್ಟುಡಿಯೋದ ಮಾಲೀಕರು ಅಭಿಮಾನಿಗಳಿಗೆ ಒಳಪ್ರವೇಶಿಸಲು ನಿರ್ಬಂಧಗಳನ್ನು ವಿಧಿಸುವುದರ ಜತೆಗೆ, ಪ್ರತಿವರ್ಷದ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆಗೆ ಹಲವಾರು ತೊಂದರೆಗಳನ್ನು ನೀಡುತ್ತಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ ಅವರನ್ನು ಭೇಟಿಮಾಡಿ ಅಹವಾಲನ್ನು ಸಲ್ಲಿಸಲಾಗಿದೆ. ಒಬ ನಟನಿಗೇ ಎರಡು ಕಡೆ ಸ್ಮಾರಕ, ಪುಣ್ಯಭೂಮಿ ಮಾಡುವುದು ಸರ್ಕಾರಕ್ಕೆ ಕಷ್ಟವಾದರೆ, ಆ ಜಮೀನಿಗೆ ತಗಲುವ ಮತ್ತು ಪುಣ್ಯಭೂಮಿ ಅಭಿವೃದ್ಧಿಗೆ ಬೇಕಾಗುವ ಹಣವನ್ನು ಅಭಿಮಾನಿಗಳೇ ನೀಡುವುದಾಗಿ ತಿಳಿಸಿರುತ್ತೇವೆ ಎಂದು ಒಕ್ಕೂಟದ ಮುಖಂಡರು ತಿಳಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Kantara Cinema : ಕಾಂತಾರದ ಮುಡಿಗೆ ಮತ್ತೊಂದು ಗರಿ; ಸಿಕ್ಕಿತು ಅಂತಾರಾಷ್ಟ್ರೀಯ ಪ್ರಶಸ್ತಿ

Kantara Cinema : ಕಾಂತಾರ ಸಿನಿಮಾದ ಚಾಪ್ಟರ್​ 1ರ ಟೀಸರ್ ಬಿಡುಗಡೆಗೊಂಡ ಮರುದಿನವೇ ಪ್ರಶಸ್ತಿ ಲಭಿಸಿದ್ದು ವಿಶೇಷ ಎನಿಸಿದೆ.

VISTARANEWS.COM


on

Silver peacock
Koo

ಗೋವಾ: ಕನ್ನಡದ ಸೂಪರ್ ಹಿಟ್​ ಸಿನಿಮಾ ಕಾಂತಾರದ (Kantara Cinema) ಯಶಸ್ಸಿನ ಹಾದಿಯಲ್ಲಿ ಮತ್ತೊಂದು ವಿಶೇಷ ಮನ್ನಣೆ ದೊರಕಿದೆ. ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದೈವಿಕ ಕತೆಯನ್ನು ಹೊಂದಿರುವ ಕಾಂತಾರ ಸಿನಿಮಾ ಚೊಚ್ಚಲ ಆವೃತ್ತಿಯ “ಸಿಲ್ವರ್ ಪಿಕಾಕ್​ ಅವಾರ್ಡ್’​​ ತನ್ನದಾಗಿಸಿಕೊಂಡಿದೆ. ಇದು ಉದ್ಘಾಟನಾ ಆವೃತ್ತಿಯ ಪ್ರಶಸ್ತಿಯಾಗಿದ್ದು ಕಾಂತಾರ ಸಿನಿಮಾ ತಂಡದ ಹಾಗೂ ಕನ್ನಡಿಗರ ಪಾಲಿಗೆ ವಿಶೇಷವಾಗಿದೆ. ಇದು ಕನ್ನಡ ಸಿನಿಮಾ ಒಂದಕ್ಕೆ ದೊರೆತ ಮೊಟ್ಟ ಮೊದಲ ಪ್ರಶಸ್ತಿಯೂ ಹೌದು.

ಹೊಂಬಾಳೆ ಫಿಲ್ಮ್ಸ್​​ ಈ ಮಾಹಿತಿಯನ್ನು ತನ್ನ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳ ಶಹಬ್ಬಾಸ್​ಗಿರಿ ಲಭಿಸುತ್ತಿದೆ. ಗೋವಾದಲ್ಲಿ ನಡೆಯುತ್ತಿರುವ 54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಕಾಂತಾರ ತಂಡಕ್ಕೆ ಈ ಪ್ರಶಸ್ತಿಯನ್ನು ವಿತರಣೆ ಮಾಡಲಾಗಿದೆ.

ಕಾಂತಾರ ಚಾಪ್ಟರ್​ 1 ಟೀಸರ್​ಗೆ ವಾಹ್​ ಎಂದ ಗೂಗಲ್

ಬೆಂಗಳೂರು: ರಿಷಭ್​ ಶೆಟ್ಟಿ ನಿರ್ದೇಶನದ ಮತ್ತು ಹೊಂಬಾಳೆ ಫೀಲ್ಮ್ಸ್​ ನಿರ್ಮಾಣದ ಕಾಂತಾರ ಚಾಪ್ಟರ್ 1 ಸಿನಿಮಾದ ಟೀಸರ್​ ಸೋಮವಾರ (ನವೆಂಬರ್​ 27) ಅನಾವರಣಗೊಂಡಿತ್ತು. ಮೊದಲ ಕಾಂತಾರ ಸಿನಿಮಾದ ಸೂಪರ್​ ಹಿಟ್​ ಇತಿಹಾಸದ ಹಿನ್ನೆಲೆಯಲ್ಲಿ ಈ ವಿಡಿಯೊ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆಗಳು ಇದ್ದವು. ಇದೀಗ ಎಲ್ಲರ ನಿರೀಕ್ಷೆಗಳನ್ನು ಮೀರಿ ಸಿನಿಮಾದ ಫಸ್ಟ್​ ಲುಕ್​ ಜನಮೆಚ್ಚುಗೆ ಗಳಿಸಿದೆ. ರಿಷಭ್​ ಅವರ ಲುಕ್​ ಹಾಗೂ ವಿಡಿಯೊ ನಿರ್ಮಾಣದ ಹಿಂದಿರುವ ಅದ್ಧೂರಿತನದ ಬಗ್ಗೆ ಶಹಬ್ಬಾಸ್​ಗಿರಿಗಳು ಬರುತ್ತಿವೆ. ಇದೀಗ ಅದೆಲ್ಲದಕ್ಕಿಂತ ಹೆಚ್ಚಾಗಿ ವಿಶ್ವದ ಅತಿ ದೊಡ್ಡ ಸರ್ಚ್ ಎಂಜಿನ್​ ಗೂಗಲ್​ ಕೂಡ ಕಾಂತಾರದ ಫಸ್ಟ್​ ಲುಕ್ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದು, ವಾಹ್​ ಎಂದು ಉದ್ಗಾರ ತೆಗೆದಿದೆ.

2024 ಹೆಚ್ಚು ರೋಮಾಂಚನಕಾರಿಯಾಗಿರಲಿದೆ. ಕಾಂತಾರ ಟೀಸರ್​ ಅನ್ನು ನೋಡಿದೆ. ವಾಹ್​ ಎಂದು ಹೇಳದಿರಲು ಸಾಧ್ಯವೇ ಇಲ್ಲ ಎಂದು ಗೂಗಲ್​ ಇಂಡಿಯಾ ತನ್ನ ಹುಡುಕಾಟದ (ಸರ್ಚ್​) ಪೇಜ್​ನಲ್ಲಿ ಬರೆದುಕೊಂಡಿದೆ. ಗೂಗಲ್ ಈ ರೀತಿ ಹೇಳುವುದಕ್ಕೊಂದು ಕಾರಣವಿದೆ. ಈ ಟೀಸರ್ ಬಿಡುಗಡೆಗೊಂಡ ಒಂದೇ ದಿನಲ್ಲಿ 77 ಲಕ್ಷಕ್ಕೂ ಅಧಿಕ ಮಂದಿ ಅದಕ್ಕಾಗಿ ಗೂಗಲ್​ನಲ್ಲಿ ಹುಡುಕಾಟ ನಡೆಸಿದ್ದಾರೆ. ಸರ್ಚ್​ ಎಂಜಿನ್ ಒಂದಕ್ಕೆ ಇಂಥ ಹುಡುಕಾಟಗಳು ದೊಡ್ಡ ಬೋನಸ್. ಹೀಗಾಗಿ ಗೂಗಲ್​ ಕಾಂತಾರದ ಜನಪ್ರಿಯತೆಯನ್ನು ಮೆಚ್ಚಿದೆ.

ಕಾಂತಾರ; ಚಾಪ್ಟರ್‌ 1 ಫಸ್ಟ್ ಲುಕ್‌ನಲ್ಲಿ ರಿಷಬ್ ಶೆಟ್ಟಿ ರೌದ್ರಾವತಾರ

ಕಾಂತಾರʼ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಯಾವಾಗ ಎಂಬುದು ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಇದೀಗ ಡಿವೈನ್ಸ್‌ ಸ್ಟಾರ್‌ ತಮ್ಮ ರೌದ್ರಾವತಾರವನ್ನು ತೋರಿಸಿದ್ದಾರೆ. ಇಂಗ್ಲಿಷ್‌ನಲ್ಲಿಯೇ ಕಾಂತಾರ ಚಾಪ್ಟರ್‌ -1 ಲುಕ್ ಬಿಡುಗಡೆಯಾಗಿದೆ. ಪ್ರತಿಕ್ಷಣವು ದೈವಿಕ ಸ್ಪರ್ಶ ನೀಡುವಂತಹ ಹಿನ್ನೆಲೆ ಧ್ವನಿಯಲ್ಲಿ ತಮ್ಮ ಅವತಾರವನ್ನು ಬಹಿರಂಗೊಳಿಸಿದ್ದಾರೆ.

ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ 2 ಕೂಡ ಅಷ್ಟೇ ಎತ್ತರದ ನಿರೀಕ್ಷೆಯನ್ನು ಹೊತ್ತುಕೊಂಡಿದೆ. ಕಾಂತಾರ-2 ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಹಲವು ದಿನಗಳಿಂದ ಕಾದು ಕುಳಿತ್ತಿದ್ದರು. ಇದೀಗ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ.

ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ.

ಇದನ್ನೂ ಓದಿ : ಕನ್ನಡ ಚಿತ್ರಗಳನ್ನು ನಿರಾಕರಿಸುತ್ತಿರುವ ಒಟಿಟಿ ವೇದಿಕೆಗಳು: ರಿಷಬ್ ಶೆಟ್ಟಿ ಆರೋಪ

ಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕಾಂತಾರ 2 ಸಿನಿಮಾ ಕೆಲಸಗಳು ಭರದಿಂದ ಸಾಗಿದೆ. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Continue Reading

ಕರ್ನಾಟಕ

BBK SEASON 10: ಡ್ರೋನ್‌ ಪ್ರತಾಪ್‌ ಕೊಟ್ಟ ಶಾಕ್‌ಗೆ ಕಣ್ಣೀರಿಟ್ಟ ನಮ್ರತಾ!

BBK SEASON 10: ಈ ವಾರ ಡ್ರೋನ್ ಪ್ರತಾಪ್‌ ಟೀಂಗೆ ನಮ್ರತಾ ಗೌಡ ಸೇರ್ಪಡೆಯಾಗಿದ್ದಾರೆ. ಆದರೆ, ಡ್ರೋನ್‌ ನಿರ್ಧಾರದಿಂದ ಆರಂಭದಲ್ಲೇ ನಮ್ರತಾ ಕಣ್ಣೀರಿಟ್ಟಿದ್ದಾರೆ.

VISTARANEWS.COM


on

drone Prathap and Namratha Gowda
Koo

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 10 ಶೋ (BBK SEASON 10) ದಿನದಿಂದ ದಿನಕ್ಕೆ ಹಲವು ತಿರುವುಗಳನ್ನು ಪಡೆಯುತ್ತಿದೆ. ಆರಂಭದಲ್ಲಿ ವಿನಯ್‌ ವಿರುದ್ಧ ಬೆಂಕಿ ಉಗುಳುತ್ತಿದ್ದ ಸಂಗೀತಾ, ನಂತರ ಅವರ ತಂಡಕ್ಕೇ ಹೋಗಿ ದೋಸ್ತಿ ಶುರು ಮಾಡಿದ್ದರು. ಇದೀಗ ಮತ್ತೊಂದು ಬದಲಾವಣೆ ಆಗಿದ್ದು, ನಮ್ರತಾ ಗೌಡ, ಡ್ರೋನ್ ಪ್ರತಾಪ್‌ನ ಟೀಂ ಸೇರಿದ್ದಾರೆ. ಆದರೆ, ಆರಂಭದಲ್ಲೇ ಪ್ರತಾಪ್‌ ಕೊಟ್ಟ ಶಾಕ್‌ನಿಂದ ನಮ್ರತಾ ಕಣ್ಣೀರಿಟ್ಟಿರುವುದು ಕಂಡುಬಂದಿದೆ.

ಬಿಗ್‌ ಬಾಸ್‌ ಸೀಸನ್ 10 ಹೊಸ ಪ್ರೋಮೋ ಬಿಡುಗಡೆಯಾಗಿದ್ದು, ಇದರಲ್ಲಿ ಡ್ರೋನ್‌ ಪ್ರತಾಪ್‌ ವಿರುದ್ಧ ನಮ್ರತಾ ಗೌಡ ಕಿಡಿಕಾರಿ ಕಣ್ಣೀರಿಟ್ಟಿರುವುದು ಕಾಣುತ್ತದೆ. ಈ ವಾರ ತಂಡಗಳು ಬದಲಾಗಿದ್ದು, ಮೈಕಲ್‌ ಅಥವಾ ಡ್ರೋನ್‌ ಪ್ರತಾಪ್‌ ನೇತೃತ್ವದ ಯಾವ ತಂಡಕ್ಕೆ ಹೋಗಲು ಇಚ್ಛಿಸುತ್ತೀರಿ ಎಂದು ನಮ್ರತಾಗೆ ಬಿಗ್‌ ಬಾಸ್‌ ಆಫರ್‌ ನೀಡುತ್ತಾರೆ. ಅದಕ್ಕೆ ತಾನು ಡ್ರೋನ್‌ ಪ್ರತಾಪ್‌ ತಂಡಕ್ಕೆ ಹೋಗುವುದಾಗಿ ಹೇಳುತ್ತಾರೆ.

ನಂತರ ನಿಮ್ಮ ತಂಡದಲ್ಲಿ ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಒಬ್ಬರನ್ನು ಹೊರಗಡೆ ಇಡಬೇಕು ಎಂದು ಪ್ರತಾಪ್‌ಗೆ ಸೂಚನೆ ಸಿಗುತ್ತದೆ. ಈ ವೇಳೆ ನಮ್ರತಾ ಗೌಡರ ಹೆಸರನ್ನು ಪ್ರತಾಪ್‌ ಸೂಚಿಸುತ್ತಾರೆ. ಇದರಿಂದ ಬೇಸರಗೊಂಡ ನಮ್ರತಾ, ನಾನು ಪ್ರತಾಪ್‌ನ ನಂಬಿ ಅವನ ತಂಡಕ್ಕೆ ಹೋದೆ, ಆದರೆ ಅವನು ಅವಕಾಶ ಕೊಡಲಿಲ್ಲ ಎಂದು ನಮ್ರತಾ ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ | BBK SEASON 10: ಮತ್ತೊಮ್ಮೆ ರಣಾಂಗಣವಾದ ಬಿಗ್‌ ಬಾಸ್‌ ಮನೆ; ಟಾಸ್ಕ್‌ ನಡುವೆ ಹತ್ತಿಕೊಂಡಿತಾ ಬೆಂಕಿ?

ಕ್ಯಾಪ್ಟನ್ಸಿ ಟಾಸ್ಕ್‌ನಿಂದ ನಮ್ರತಾ ಔಟ್

ಆರಂಭದಲ್ಲಿ ನಮ್ರತಾ ಗೌಡ ಹಾಗೂ ಡ್ರೋನ್‌ ಪ್ರತಾಪ್‌ ಸ್ನೇಹಿತರಾಗಿದ್ದರು. ಪ್ರತಾಪ್ ಅತ್ತಾಗ ನಮ್ರತಾ ಸಂತೈಸುತ್ತಿದ್ದರು. ನಾಮಿನೇಶನ್ ವೇಳೆ ನಮಗೆ ಕಾಣಿಸದಿರುವ ನಮ್ರತಾ ಬೇರೆ ಇದ್ದಾರೆ, ಅವರು ಹೊರಗಡೆ ಬರಬೇಕು ಹೇಳಿದ್ದರು. ಹೀಗಾಗಿ ನಮ್ರತಾ ಕೂಡ ಪ್ರತಾಪ್ ತಂಡಕ್ಕೆ ಹೋಗಿದ್ದಾರೆ. ಆದರೆ, ಆರಂಭದಲ್ಲಿ ಕ್ಯಾಪ್ಟನ್ಸಿ ಟಾಸ್ಕ್‌ನಿಂದ ತಮ್ಮನ್ನು ಹೊರಗಿಟ್ಟ ಹಿನ್ನೆಲೆಯಲ್ಲಿ ನಮ್ರತಾಗೆ ಬಹಳ ಬೇಜಾರಾಗಿದೆ.

ಇದನ್ನೂ ಓದಿ | BBK SEASON 10: ಶಾರ್ಟ್‌ ಟೆಂಪರ್ ನನ್ನ ವೀಕ್‌ನೆಸ್‌; ಆದ್ರೂ ಗೆದ್ದೆ ಗೆಲ್ತೀನಿ ಎಂದ ಪವಿ ಪೂವಪ್ಪ

“ನನಗೆ ಆಟವಾಡುವ ಆಸೆ ಇತ್ತು. ನಿಮ್ಮಲ್ಲಿ ಟ್ಯಾಲೆಂಟ್‌ ಇದೆ, ಅದನ್ನು ಹೊರಗೆ ತರಬೇಕು, ನಿಮಗೆ ಕಿಚ್ಚನ ಚಪ್ಪಾಳೆ ಸಿಗಬೇಕು ಅಂತ ಹೇಳಿ ಈಗ ಈ ರೀತಿನಾ ಮಾಡೋದು? ಇದರ ಬದಲು ನನಗೆ ಇಷ್ಟ ಇಲ್ಲ, ಅದಕ್ಕೇ ನಮ್ಮ ತಂಡಕ್ಕೆ ಸೇರಿಸಿಕೊಂಡು ಹೊಡೆದು ಹಾಕಿದೆ ಅಂತ ಅವನು ಹೇಳಬಹುದಿತ್ತಲ್ಲವೇ? ಎಂದು ನಮ್ರತಾ ಕಣ್ಣೀರಿಟ್ಟಿದ್ದಾರೆ. ಈ ವೇಳೆ ಅಲ್ಲಿದ್ದ ಪ್ರತಾಪ್‌ ನಿತರ್ಗಮಿಸುತ್ತಾರೆ.

ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ತಂತ್ರಜ್ಞಾನ

Kantara Cinema : ಕಾಂತಾರ ಚಾಪ್ಟರ್​ 1 ಟೀಸರ್​ಗೆ ವಾಹ್​ ಎಂದ ಗೂಗಲ್

Kanatara Cinema : ಕಾಂತಾರ ಚಾಪ್ಟರ್​-1 ಸಿನಿಮಾದ ಫಸ್ಟ್​ ಲುಕ್​ ನವೆಂಬರ್​ 27ರಂದು ಅನಾವರಣಗೊಂಡಿತ್ತು.

VISTARANEWS.COM


on

Kantara
Koo

ಬೆಂಗಳೂರು: ರಿಷಭ್​ ಶೆಟ್ಟಿ ನಿರ್ದೇಶನದ ಮತ್ತು ಹೊಂಬಾಳೆ ಫೀಲ್ಮ್ಸ್​ ನಿರ್ಮಾಣದ ಕಾಂತಾರ ಚಾಪ್ಟರ್ 1 ಸಿನಿಮಾದ ಟೀಸರ್​ ಸೋಮವಾರ (ನವೆಂಬರ್​ 27) ಅನಾವರಣಗೊಂಡಿತ್ತು. ಮೊದಲ ಕಾಂತಾರ ಸಿನಿಮಾದ ಸೂಪರ್​ ಹಿಟ್​ ಇತಿಹಾಸದ ಹಿನ್ನೆಲೆಯಲ್ಲಿ ಈ ವಿಡಿಯೊ ಬಗ್ಗೆ ಸಿಕ್ಕಾಪಟ್ಟೆ ನಿರೀಕ್ಷೆಗಳು ಇದ್ದವು. ಇದೀಗ ಎಲ್ಲರ ನಿರೀಕ್ಷೆಗಳನ್ನು ಮೀರಿ ಸಿನಿಮಾದ ಫಸ್ಟ್​ ಲುಕ್​ ಜನಮೆಚ್ಚುಗೆ ಗಳಿಸಿದೆ. ರಿಷಭ್​ ಅವರ ಲುಕ್​ ಹಾಗೂ ವಿಡಿಯೊ ನಿರ್ಮಾಣದ ಹಿಂದಿರುವ ಅದ್ಧೂರಿತನದ ಬಗ್ಗೆ ಶಹಬ್ಬಾಸ್​ಗಿರಿಗಳು ಬರುತ್ತಿವೆ. ಇದೀಗ ಅದೆಲ್ಲದಕ್ಕಿಂತ ಹೆಚ್ಚಾಗಿ ವಿಶ್ವದ ಅತಿ ದೊಡ್ಡ ಸರ್ಚ್ ಎಂಜಿನ್​ ಗೂಗಲ್​ ಕೂಡ ಕಾಂತಾರದ ಫಸ್ಟ್​ ಲುಕ್ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದು, ವಾಹ್​ ಎಂದು ಉದ್ಗಾರ ತೆಗೆದಿದೆ.

2024 ಹೆಚ್ಚು ರೋಮಾಂಚನಕಾರಿಯಾಗಿರಲಿದೆ. ಕಾಂತಾರ ಟೀಸರ್​ ಅನ್ನು ನೋಡಿದೆ. ವಾಹ್​ ಎಂದು ಹೇಳದಿರಲು ಸಾಧ್ಯವೇ ಇಲ್ಲ ಎಂದು ಗೂಗಲ್​ ಇಂಡಿಯಾ ತನ್ನ ಹುಡುಕಾಟದ (ಸರ್ಚ್​) ಪೇಜ್​ನಲ್ಲಿ ಬರೆದುಕೊಂಡಿದೆ. ಗೂಗಲ್ ಈ ರೀತಿ ಹೇಳುವುದಕ್ಕೊಂದು ಕಾರಣವಿದೆ. ಈ ಟೀಸರ್ ಬಿಡುಗಡೆಗೊಂಡ ಒಂದೇ ದಿನಲ್ಲಿ 77 ಲಕ್ಷಕ್ಕೂ ಅಧಿಕ ಮಂದಿ ಅದಕ್ಕಾಗಿ ಗೂಗಲ್​ನಲ್ಲಿ ಹುಡುಕಾಟ ನಡೆಸಿದ್ದಾರೆ. ಸರ್ಚ್​ ಎಂಜಿನ್ ಒಂದಕ್ಕೆ ಇಂಥ ಹುಡುಕಾಟಗಳು ದೊಡ್ಡ ಬೋನಸ್. ಹೀಗಾಗಿ ಗೂಗಲ್​ ಕಾಂತಾರದ ಜನಪ್ರಿಯತೆಯನ್ನು ಮೆಚ್ಚಿದೆ.

ಕಾಂತಾರ; ಚಾಪ್ಟರ್‌ 1 ಫಸ್ಟ್ ಲುಕ್‌ನಲ್ಲಿ ರಿಷಬ್ ಶೆಟ್ಟಿ ರೌದ್ರಾವತಾರ

ಕಾಂತಾರʼ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಯಾವಾಗ ಎಂಬುದು ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಇದೀಗ ಡಿವೈನ್ಸ್‌ ಸ್ಟಾರ್‌ ತಮ್ಮ ರೌದ್ರಾವತಾರವನ್ನು ತೋರಿಸಿದ್ದಾರೆ. ಇಂಗ್ಲಿಷ್‌ನಲ್ಲಿಯೇ ಕಾಂತಾರ ಚಾಪ್ಟರ್‌ -1 ಲುಕ್ ಬಿಡುಗಡೆಯಾಗಿದೆ. ಪ್ರತಿಕ್ಷಣವು ದೈವಿಕ ಸ್ಪರ್ಶ ನೀಡುವಂತಹ ಹಿನ್ನೆಲೆ ಧ್ವನಿಯಲ್ಲಿ ತಮ್ಮ ಅವತಾರವನ್ನು ಬಹಿರಂಗಗೊಳಿಸಿದ್ದಾರೆ.

ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ 2 ಕೂಡ ಅಷ್ಟೇ ಎತ್ತರದ ನಿರೀಕ್ಷೆಯನ್ನು ಹೊತ್ತುಕೊಂಡಿದೆ. ಕಾಂತಾರ-2 ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಹಲವು ದಿನಗಳಿಂದ ಕಾದು ಕುಳಿತ್ತಿದ್ದರು. ಇದೀಗ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ.

ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ.

ಇದನ್ನೂ ಓದಿ : ಕನ್ನಡ ಚಿತ್ರಗಳನ್ನು ನಿರಾಕರಿಸುತ್ತಿರುವ ಒಟಿಟಿ ವೇದಿಕೆಗಳು: ರಿಷಬ್ ಶೆಟ್ಟಿ ಆರೋಪ

ಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕಾಂತಾರ 2 ಸಿನಿಮಾ ಕೆಲಸಗಳು ಭರದಿಂದ ಸಾಗಿದೆ. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

Continue Reading
Advertisement
PM Narendra Modi phone call to workers, who rescued from collapsed tunnel
ದೇಶ19 mins ago

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

mantralaya mutt
ಕರ್ನಾಟಕ52 mins ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ2 hours ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್2 hours ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ2 hours ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ2 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ2 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER3 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ3 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್4 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ20 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌