Site icon Vistara News

Rashmika Mandanna: ಪುಷ್ಪ -2 ಸೆಟ್‌ ಫೋಟೊವನ್ನು ಹಂಚಿಕೊಂಡ ರಶ್ಮಿಕಾ ಮಂದಣ್ಣ

Rashmika Mandanna

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ‘ಪುಷ್ಪ: ದಿ ರೂಲ್’ ಸಿನಿಮಾದ ಚಿತ್ರೀಕರಣದಲ್ಲಿದ್ದಾರೆ. ಮತ್ತೊಮ್ಮೆ ಅಲ್ಲು ಅರ್ಜುನ್ ಜತೆ ನಟಿಸಲಿದ್ದಾರೆ. ಸೆಪ್ಟೆಂಬರ್ 8ರಂದು, ರಶ್ಮಿಕಾ ಪುಷ್ಪ ಚಿತ್ರದ ಸೆಟ್‌ನಲ್ಲಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ. ಇದಕ್ಕೂ ಮುಂಚೆ ರಶ್ಮಿಕಾ ಮಂದಣ್ಣ ಚಿತ್ರದಿಂದ ಹೊರಬಿದ್ದಿದ್ದರು ಎಂದು ವರದಿಯಾಗಿತ್ತು. ‘ಪುಷ್ಪ 2’ ಸಿನಿಮಾದಿಂದ ರಶ್ಮಿಕಾರನ್ನು ಹೊರಗಿಡಲೆಂದೇ ಅವರ ಶ್ರೀವಲ್ಲಿ ಪಾತ್ರವನ್ನು ಕೊಲ್ಲಲಾಗಿದೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೀಗ ರಶ್ಮಿಕಾ ಸೆಟ್‌ನಲ್ಲಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ: ದಿ ರೂಲ್’ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ‘ಪುಷ್ಪ 2ರ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಇನ್ನೂ ಬಹಿರಂಗಪಡಿಸಿಲ್ಲ. ‘ಪುಷ್ಪ: ದಿ ರೂಲ್’ ಅನ್ನು ಸುಕುಮಾರ್ ನಿರ್ದೇಶಿಸಿದ್ದಾರೆ. ಮತ್ತು ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಪುಷ್ಪ -2 ಸೆಟ್‌ಗಳಿಂದ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಚಿತ್ರದಲ್ಲಿ ಅಲ್ಲು ಅರ್ಜುನ್ ಗ್ಯಾಂಗ್‌ಸ್ಟರ್ ಆಗಿ ನಟಿಸಿದ್ದಾರೆ. ಟ್ರಕ್​ಗಳಲ್ಲಿ ರಕ್ತಚಂದನ ಸಾಗಿಸುವ ರೀತಿಯ ವಿಡಿಯೋ ಒಂದು ಇತ್ತೀಚೆಗೆ ವೈರಲ್ ಆಗಿತ್ತು. ಇದನ್ನು ನೋಡಿದ ಅನೇಕರು ಇದು ‘ಪುಷ್ಪ 2’ ಚಿತ್ರದ ಶೂಟಿಂಗ್ ದೃಶ್ಯ ಎನ್ನಲಾಗಿತ್ತು. ನೂರಾರು ಸಂಖ್ಯೆಯಲ್ಲಿ ಟ್ರಕ್​ಗಳು ನಿಂತಿರು ವಿಡಿಯೊ ವೈರಲ್ ಆಗಿತ್ತು. ಪುಷ್ಪ’ ಸಿನಿಮಾ ರಿಲೀಸ್ ಆಗಿದ್ದು 2021ರ ಡಿಸೆಂಬರ್​ ತಿಂಗಳಲ್ಲಿ. ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆಯುತ್ತಾ ಬಂದರೂ ‘ಪುಷ್ಪ 2’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಅಪ್​ಡೇಟ್​ನ ತಂಡ ನೀಡಿಲ್ಲ.

ಇದನ್ನೂ ಓದಿ: Rashmika Mandanna: ರಶ್ಮಿಕಾ- ವಿಜಯ್‌ ಲಿವ್ ಇನ್ ರಿಲೇಷನ್‌ಶಿಪ್‌ ಪಕ್ಕಾ? ಸಾಕ್ಷಿಗೆ ಇಲ್ಲಿದೆ ಫೋಟೊ!

ಸಿನಿಮಾ ರಿಲೀಸ್​ ದಿನಾಂಕ ಕೂಡ ಘೋಷಣೆ ಆಗಿಲ್ಲ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.ಕೆಲವು ಮೂಲಗಳ ಪ್ರಕಾರ ಸಿನಿಮಾದ ಟಾಕಿ ಭಾಗದ ಚಿತ್ರೀಕರಣ ಪೂರ್ಣಗೊಂಡಿದ್ದು, ಹಾಡುಗಳು ಹಾಗೂ ಕೆಲವು ಪ್ಯಾಚ್ ವರ್ಕ್ ಚಿತ್ರೀಕರಣವಷ್ಟೆ ಬಾಕಿ ಇದೆ ಎನ್ನಲಾಗುತ್ತಿದೆ. ಜತೆಗೆ ಕೆಲ ಫೈಟ್ ಚಿತ್ರೀಕರಣವೂ ಆಗಬೇಕಿದೆ ಎನ್ನಲಾಗುತ್ತಿದೆ.

ರಶ್ಮಿಕಾ ಅವರು ರಣಬೀರ್ ಕಪೂರ್ ಜತೆ ʼಅನಿಮಲ್ʼ ಸಿನಿಮಾದಲ್ಲಿ ತೆರೆ ಹಂಚಿಕೊಳ್ಳುತ್ತಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ʻಅರ್ಜುನ್​ ರೆಡ್ಡಿ’ ಸಿನಿಮಾ ಖ್ಯಾತಿಯ ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ತಮಿಳು, ಮಲಯಾಳಂ, ತೆಲುಗು ಮತ್ತು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ʻಅನಿಮಲ್ʼ ಸಿನಿಮಾ ಬಿಡುಗಡೆಯಾಗಲಿದೆ.. ಮುರಾದ್ ಖೇತಾನಿಯ ಸಿನಿ 1 ಸ್ಟುಡಿಯೋಸ್ ಮತ್ತು ಪ್ರಣಯ್ ರೆಡ್ಡಿ ವಂಗಾ ಅವರ ಭದ್ರಕಾಳಿ ಪಿಕ್ಚರ್ಸ್‌ ನಿರ್ಮಿಸಿದೆ.

Exit mobile version