Site icon Vistara News

Rashmika Mandanna | ರಣಬೀರ್‌-ರಶ್ಮಿಕಾ ಅಭಿನಯದ ʻಅನಿಮಲ್‌ʼ ಸಿನಿಮಾ ಫಸ್ಟ್‌ ಲುಕ್‌ ಔಟ್‌: ರಗಡ್‌ ಲುಕ್‌ ಅಂದ್ರು ಫ್ಯಾನ್ಸ್‌!

Rashmika Mandanna

ಬೆಂಗಳೂರು : 2023ರಲ್ಲಿ ರಣಬೀರ್‌ ಕಪೂರ್‌ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಬ್ರಹ್ಮಾಸ್ತ್ರ ಸಿನಿಮಾ ಯಶಸ್ಸಿನ ನಂತರ ʻತು ಜೂಠಿ ಮೇ ಮಕ್ಕಾರ್ʼ ಎಂಬ ಶೀರ್ಷಿಕೆಯ ಚಿತ್ರದಲ್ಲಿ ಶ್ರದ್ಧಾ ಕಪೂರ್‌ ಜತೆಗೆ ನಟಿಸಿಸಲಿದ್ದಾರೆ. ಇದೀಗ ʻಅನಿಮಲ್ʼ ಚಿತ್ರದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ. ಪೋಸ್ಟರ್‌ ನೋಡುವಾಗ ರಗಡ್‌ ಲುಕ್‌ನಲ್ಲಿ ಮಿಂಚಿದ್ದಾರೆ ನಟ ರಣಬೀರ್‌. ಈ ಸಿನಿಮಾಗೆ ರಶ್ಮಿಕಾ ಮಂದಣ್ಣ (Rashmika Mandanna ) ನಾಯಕಿಯಾಗಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ ಅವರಿಗೆ ಹಿಂದಿ ಚಿತ್ರರಂಗದಲ್ಲಿ ಸಖತ್​ ಡಿಮ್ಯಾಂಡ್​ ಸೃಷ್ಟಿ ಆಗಿದೆ. ಅವರ ಮೊದಲ ಬಾಲಿವುಡ್​ ಸಿನಿಮಾ ‘ಗುಡ್​ ಬೈ’ ನಿರೀಕ್ಷಿತ ಮಟ್ಟದಲ್ಲಿ ಗಳಿಕೆ ಮಾಡಲಿಲ್ಲ. ಈಗ ಎರಡನೇ ಸಿನಿಮಾ ‘ಮಿಷನ್​ ಮಜ್ನು’ ಬಿಡುಗಡೆಗೆ ಸಜ್ಜಾಗಿದೆ. ಜನವರಿ 20ರಂದು ನೆಟ್​ಫ್ಲಿಕ್ಸ್​ ಮೂಲಕ ಈ ಚಿತ್ರ ವೀಕ್ಷಣೆಗೆ ಲಭ್ಯವಾಗಲಿದೆ. ಅದಕ್ಕೂ ಮುನ್ನ ರಶ್ಮಿಕಾ ಮಂದಣ್ಣ ಅವರ ಬಹುನಿರೀಕ್ಷಿತ ‘ಅನಿಮಲ್​’  ಚಿತ್ರದ ಫಸ್ಟ್‌ಲುಕ್‌ ಬಿಡುಗಡೆಗೊಂಡಿದೆ.

ಇದನ್ನೂ ಓದಿ |Ranbir Kapoor | ʻʻಮಗಳಿಗೆ 20 ಆದಾಗ, ನನಗೆ 60 ವರ್ಷʼʼ: ತಮಗಿರುವ ಅಭದ್ರತೆ ಕುರಿತು ರಣಬೀರ್‌ ಹೇಳಿದ್ದೇನು?

ರಕ್ತಸಿಕ್ತ ಮುಖ, ಕೈಯಲ್ಲಿ ಸುತ್ತಿಗೆ ಹಿಡಿದು ರಗಡ್‌ ಲುಕ್‌ನಲ್ಲಿ ಮಿಂಚಿದ್ದಾರೆ ನಟ ರಣಬೀರ್‌. ರಣಬೀರ್ ಇಂತಹ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇ ಮೊದಲು. ರಣಬೀರ್‌ ಅಭಿಮಾನಿಗಳು ಲುಕ್‌ ನೋಡಿ ಮಾಸ್‌ ಆಗಿ ಕಾಣಿಸಿತ್ತಿದ್ದಾರೆ ಎಂದು ಕಮೆಂಟ್‌ ಮೂಲಕ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರದಲ್ಲಿ ಬಾಬಿ ಡಿಯೋಲ್, ಅನಿಲ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ಮಿಂಚಲಿದ್ದಾರೆ. ʻಅರ್ಜುನ್​ ರೆಡ್ಡಿ’ ಸಿನಿಮಾ ಖ್ಯಾತಿಯ ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

ತಮಿಳು, ಮಲಯಾಳಂ, ತೆಲುಗು ಮತ್ತು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ʻಅನಿಮಲ್ʼ ಸಿನಿಮಾ ಆಗಸ್ಟ್ 11, 2023 ರಂದು ಬಿಡುಗಡೆಯಾಗಲಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಚಿತ್ರೀಕರಣ ಪ್ರಾರಂಭಗೊಂಡಿತ್ತು. ಮುರಾದ್ ಖೇತಾನಿಯ ಸಿನಿ 1 ಸ್ಟುಡಿಯೋಸ್ ಮತ್ತು ಪ್ರಣಯ್ ರೆಡ್ಡಿ ವಂಗಾ ಅವರ ಭದ್ರಕಾಳಿ ಪಿಕ್ಚರ್ಸ್‌ ನಿರ್ಮಿಸಿದೆ.

ಇದನ್ನೂ ಓದಿ | Ranbir Kapoor | ಪಾಕಿಸ್ತಾನದ ಚಿತ್ರದಲ್ಲಿ ನಟಿಸುತ್ತೇನೆ ಎಂದ ರಣಬೀರ್‌ ಕಪೂರ್‌: ಟ್ರೋಲ್‌ಗೆ ಗುರಿಯಾದ ನಟ!

Exit mobile version