Site icon Vistara News

Rashmika Mandanna: ಧನುಷ್‌ ಜತೆ ರಶ್ಮಿಕಾ ರೊಮ್ಯಾನ್ಸ್‌!

Rashmika Mandanna upcoming film D51

ಬೆಂಗಳೂರು: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಬಾಲಿವುಡ್‌ನಲ್ಲಿ ಅತ್ಯಂತ ಬೇಡಿಕೆ ಇರುವ ನಟಿ. ರಶ್ಮಿಕಾ ಮಂದಣ್ಣ ಮತ್ತು ರಣಬೀರ್ ಕಪೂರ್ ಒಟ್ಟಿಗೆ ನಟಿಸಿರುವ ಬಹು ನಿರೀಕ್ಷಿತ ಚಿತ್ರ ಅನಿಮಲ್ ಡಿಸೆಂಬರ್ 1ರಂದು ಥಿಯೇಟರ್‌ಗೆ ಲಗ್ಗೆ ಇಡಲಿದೆ. ಈ ಸುದ್ದಿ ಬೆನ್ನಲ್ಲೇ ನಟಿ ಮತ್ತೊಮ್ಮೆ ಸಿಹಿ ಸುದ್ದಿಯನ್ನು ಅವರ ಫ್ಯಾನ್ಸ್‌ಗೆ ನೀಡಿದ್ದಾರೆ. ಧನುಷ್‌​ ನಟನೆಯ 51ನೇ ಸಿನಿಮಾವನ್ನು ‘ಡಿ 51’ (D 51 Movie) ಎಂದು ಕರೆಯಲಾಗುತ್ತಿದೆ. ಈ ಚಿತ್ರದಲ್ಲಿನ ನಾಯಕಿ ಪಾತ್ರಕ್ಕೆ ರಶ್ಮಿಕಾ ಆಯ್ಕೆ ಆಗಿದ್ದಾರೆ. ಈ ಖುಷಿಯ ಸಮಾಚಾರವನ್ನು ಅವರು ಸೋಶಿಯಲ್​ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ.

ಸೋಶಿಯಲ್​ ಮೀಡಿಯಾ ಮೂಲಕ ರಶ್ಮಿಕಾ ಮಾತನಾಡಿ ʻʻಇಂದು, ನಾನು ನಿಮ್ಮೆಲ್ಲರಿಗೂ ಒಂದು ದೊಡ್ಡ ಸರ್‌ಪ್ರೈಸ್‌ ತಂದಿದ್ದೇನೆʼʼ ಎಂದು ಡಿ 51 ಪೋಸ್ಟರ್ ಅನಾವರಣಗೊಳಿಸಿದ್ದಾರೆ. ಧನುಷ್ ಜತೆಗೆ ಇದೇ ಮೊದಲ ಬಾರಿ ಸಿನಿಮಾ ಮೂಲಕ ರಶ್ಮಿಕಾ ತೆರೆ ಹಂಚಿಕೊಳ್ಳುತ್ತಿದ್ದಾರೆ. ದಳಪತಿ ವಿಜಯ್ ಅವರ ವಾರಿಸು ಚಿತ್ರದಲ್ಲಿ ರಶ್ಮಿಕಾ ಕಾಣಿಸಿಕೊಂಡಿದ್ದರು.

ಈಗ ‘ಡಿ 51’ ಮೂಲಕ ಅವರ ಖಾತೆಗೆ ಮತ್ತೊಂದು ತಮಿಳು ಸಿನಿಮಾ ಸೇರ್ಪಡೆ ಆದಂತಾಗಿದೆ. ಧನುಷ್‌​ ಅವರು ಈಗ ‘ಕ್ಯಾಪ್ಟನ್​ ಮಿಲ್ಲರ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಬಳಿಕ ಅವರು 50ನೇ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಾರೆ. ಆ ಬಳಿಕ ‘ಡಿ 51’ ಸಿನಿಮಾ ಸೆಟ್ಟೇರಲಿದೆ. ಆ ಸಿನಿಮಾಗೆ ಶೇಖರ್​ ಕಮ್ಮುಲ (Dhanush Sekhar Kammula) ಅವರು ನಿರ್ದೇಶನ ಮಾಡಲಿದ್ದಾರೆ. ಶ್ರೀವೆಂಕಟೇಶ್ವರ ಸಿನಿಮಾಸ್​ ಮತ್ತು ಒಮಿಗೋಸ್​ ಕ್ರಿಯೇಷನ್ಸ್​ ಬ್ಯಾನರ್​ ಮೂಲಕ ಈ ಚಿತ್ರ ನಿರ್ಮಾಣ ಆಗಲಿದೆ. ಧನುಷ್‌​​ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಹೊರತುಪಡಿಸಿ ಬೇರೆ ಯಾವೆಲ್ಲ ಕಲಾವಿದರು ನಟಿಸುತ್ತಾರೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ತಾಂತ್ರಿಕ ವರ್ಗದ ಬಗ್ಗೆಯೂ ಹೆಚ್ಚಿನ ಮಾಹಿತಿ ಹೊರಬರುವುದು ಬಾಕಿ ಇದೆ.

ಇದನ್ನೂ ಓದಿ: Rashmika Mandanna: ʻಡಿಸೆಂಬರ್‌ ನನಗೆ ಸಿಕ್ಕಾಪಟ್ಟೆ ಲಕ್ಕಿʼ ಎಂದ ರಶ್ಮಿಕಾ!

ರಶ್ಮಿಕಾ ಅವರ ಕೈಯಲ್ಲಿ ಹಲವಾರು ಸಿನಿಮಾಗಳಿವೆ. ಈಗಾಗಲೇ ಪುಷ್ಪ 2 ಚಿತ್ರೀಕರಣ ಶುರು ಮಾಡಿದೆ. ಅನಿಮಲ್‌ ಚಿತ್ರದಲ್ಲಿ ಬಾಬಿ ಡಿಯೋಲ್, ಅನಿಲ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ಮಿಂಚಲಿದ್ದಾರೆ. ʻಅರ್ಜುನ್​ ರೆಡ್ಡಿ’ ಸಿನಿಮಾ ಖ್ಯಾತಿಯ ಸಂದೀಪ್​ ರೆಡ್ಡಿ ವಂಗ ಅವರು ‘ಅನಿಮಲ್​’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.ತಮಿಳು, ಮಲಯಾಳಂ, ತೆಲುಗು ಮತ್ತು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ʻಅನಿಮಲ್ʼ ಸಿನಿಮಾ ಬಿಡುಗಡೆಯಾಗಲಿದೆ.. ಮುರಾದ್ ಖೇತಾನಿಯ ಸಿನಿ 1 ಸ್ಟುಡಿಯೋಸ್ ಮತ್ತು ಪ್ರಣಯ್ ರೆಡ್ಡಿ ವಂಗಾ ಅವರ ಭದ್ರಕಾಳಿ ಪಿಕ್ಚರ್ಸ್‌ ನಿರ್ಮಿಸಿದೆ.

Exit mobile version