ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ (Rashmika Mandanna) ಟ್ರೋಲ್ ವಿಚಾರವಾಗಿ ಸಾಕಷ್ಟು ಸಂದರ್ಶನದಲ್ಲಿ ತಮ್ಮ ಬಗ್ಗೆ ಸಮರ್ಥಿಸಿಕೊಳ್ಳುತ್ತಲೇ ಇದ್ದಾರೆ. ಸಂಕ್ರಾಂತಿಗೆ ಶುಭ ಹಾರೈಸಿರುವ ಪೋಸ್ಟ್ ವಿಚಾರವಾಗಿ ನೆಟ್ಟಿಗರು ರಶ್ಮಿಕಾ ಅವರನ್ನು ಕ್ಲಾಸ್ ತೆಗೆದುಕೊಂಡಿದ್ದಾರೆ. ಕನ್ನಡಕ್ಕೆ ಪ್ರಾಶಸ್ತ್ಯ ನೀಡಿದ್ದರೂ ರಶ್ಮಿಕಾ ಅವರ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.
ಸಂಕ್ರಾಂತಿ ಹಬ್ಬದ ಅಂಗವಾಗಿ ರಶ್ಮಿಕಾ ಮಂದಣ್ಣ ಟ್ವೀಟ್ ಮಾಡಿದ್ದಾರೆ. ಕೆಂಪು ಬಣ್ಣದ ಟಾಪ್ ಧರಿಸಿ, ಸಾಂಪ್ರದಾಯಿಕ ಉಡುಗೆತೊಟ್ಟು ಕೈ ಮುಗಿದಿದ್ದಾರೆ. ಹಲವು ಭಾಷೆಗಳಲ್ಲಿ ರಶ್ಮಿಕಾ ಶುಭಾಶಯ ತಿಳಿಸಿದ್ದಾರೆ. ವಿಶೇಷ ಎಂದರೆ ಅವರು ಮೊದಲು ಕನ್ನಡದಲ್ಲಿ ಬರೆದುಕೊಂಡಿದ್ದಾರೆ. ಸಂಕ್ರಾಂತಿಯ ಶುಭಾಶಯಗಳು ಎಂದು ರಶ್ಮಿಕಾ ಬರೆದಿದ್ದಾರೆ. ಆ ಬಳಿಕ ತಮಿಳು, ಹಿಂದಿ, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್‌ನಲ್ಲಿ ನಟಿ ಶುಭಕೋರಿದ್ದಾರೆ.
ಇದನ್ನೂ ಓದಿ | Rashmika Mandanna | ಕರ್ನಾಟಕದಲ್ಲಿ ಸೋಲನುಭವಿಸಿದ ವಾರಿಸು: ರಶ್ಮಿಕಾ ಕಾರಣವಂತೆ!
ಈ ಬಗ್ಗೆ ಅವರ ಅಭಿಮಾನಿ ವರ್ಗ ಕನ್ನಡಕ್ಕೆ ಮೊದಲ ಪ್ರಾಶಸ್ತ್ಯ ನೀಡಿದ್ದಾರೆ ಎಂದು ಖುಷಿ ವ್ಯಕ್ತಪಡಿಸಿದರೆ ನೆಟ್ಟಿಗರು ಅಸಮಾಧಾನ ಹೊರಹಾಕಿದ್ದಾರೆ. ರಶ್ಮಿಕಾ ಅವರೇ ನೀವು ಈ ಮೊದಲು ಮಾಡಿದ್ದನ್ನು ನಾವು ಮರೆಯುವುದಿಲ್ಲ. ಏನೇ ಮಾಡಿದರೂ ನೀವು ನಮಗೆ ಇಷ್ಟವಾಗುವುದಿಲ್ಲ ಎಂದು ಕೆಲವರು ಬರೆದುಕೊಂಡಿದ್ದಾರೆ.
ಇದನ್ನೂ ಓದಿ | Rashmika Mandanna | ನನಗೆ ಮನರಂಜನೆ ನೀಡುವುದಷ್ಟೇ ಕೆಲಸ: ರಶ್ಮಿಕಾ ಮಂದಣ್ಣ