ಬೆಂಗಳೂರು: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ಆಗಾಗ ತಮ್ಮ ಬೋಲ್ಡ್ ಲುಕ್ನಿಂದಲೇ ಸುದ್ದಿಯಾಗುತ್ತಿರುತ್ತಾರೆ. ಇದೀಗ ಮತ್ತೆ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಗಮನ ಸೆಳೆದಿದ್ದಾರೆ. ಕೆಲ ವರ್ಷಗಳ ಹಿಂದೆ ಕೈ ಮೇಲೆ ಟ್ಯಾಟೂ ಒಂದನ್ನು ಹಾಕಿಸಿಕೊಂಡಿದ್ದರು. ಅದರಲ್ಲಿ irreplaceable ಎಂದು ಬರೆಸಿಕೊಂಡಿದ್ದರು. ಅದನ್ನೀಗ ರಿವೀಲ್ ಮಾಡಿದ್ದಾರೆ. ಇದರ ಅರ್ಥ ʻʻಜೀವನದಲ್ಲಿ ನಿಮ್ಮನ್ನು ಯಾರೂ ರಿಪ್ಲೇಸ್ ಮಾಡಲು ಸಾಧ್ಯವಿಲ್ಲʼʼ ಎಂದು.
ಈಗಾಗಲೇ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮಗಳಾಗಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ “ಗುಡ್ ಬೈʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಅವರು ಬಾಲಿವುಡ್ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಬಿಗ್ ಬಿ ಜತೆಗಿನ ʻಗುಡ್ ಬೈʼ ಚಿತ್ರದ (Goodbye Movie) ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಜತೆ ರಿಲೀಸ್ ಡೇಟ್ ಕೂಡ ಅನೌನ್ಸ್ ಆಗಿದೆ. ಚಿತ್ರವು ಅಕ್ಟೋಬರ್ ೭ರಂದು ಚಿತ್ರಮಂದಿರಗಳಲ್ಲಿ ವಿಶ್ವಾದ್ಯಂತ ಬಿಡುಗಡೆಗೆ ಸಿದ್ಧವಾಗಿದೆ.
ರಶ್ಮಿಕಾ ಮಂದಣ್ಣ ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದು, ತಮಿಳಿನ ʻವರಿಸುʼ ಚಿತ್ರದಲ್ಲಿ ದಳಪತಿ ವಿಜಯ್ ಜತೆ ನಾಯಕಿಯಾಗಿ ನಟಿಸಲಿದ್ದಾರೆ. ವಂಶಿ ಪೈಡಿಪಲ್ಲಿ ನಿರ್ದೇಶನದ ಈ ಚಿತ್ರಕ್ಕೆ, ರಾಷ್ಟ್ರ ಪ್ರಶಸ್ತಿ ವಿಜೇತ ದಿಲ್ ರಾಜು ಅವರು ವೆಂಕಟೇಶ್ವರ ಕ್ರಿಯೇಷನ್ಸ್ನ ಪ್ರತಿಷ್ಠಿತ ಬ್ಯಾನರ್ ಅಡಿಯಲ್ಲಿ ಬೆಂಬಲ ನೀಡುತ್ತಿದ್ದಾರೆ. ರಶ್ಮಿಕಾ ಬಾಲಿವುಡ್ನಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ʻಮಿಷನ್ ಮಜ್ನುʼ ಚಿತ್ರದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ | Rashmika Mandanna | ಕ್ಯಾಮೆರಾ ಕಣ್ಣಿಗೆ ಬೋಲ್ಡ್ ಆಗಿ ಪೋಸ್ ಕೊಟ್ಟ ರಶ್ಮಿಕಾ: ಗರಂ ಆದ್ರು ಫ್ಯಾನ್ಸ್!