ಇಷ್ಟು ದ್ವೇಷವನ್ನು ಹೇಗೆ ತಡೆದುಕೊಳ್ಳಲಿ?- ನೋವಿನಿಂದ ಸುದೀರ್ಘ ಪೋಸ್ಟ್ ಹಾಕಿದ ರಶ್ಮಿಕಾ ಮಂದಣ್ಣ - Vistara News

ಸಿನಿಮಾ

ಇಷ್ಟು ದ್ವೇಷವನ್ನು ಹೇಗೆ ತಡೆದುಕೊಳ್ಳಲಿ?- ನೋವಿನಿಂದ ಸುದೀರ್ಘ ಪೋಸ್ಟ್ ಹಾಕಿದ ರಶ್ಮಿಕಾ ಮಂದಣ್ಣ

ದಿಗ್ಗಜ ನಟರೊಂದಿಗೆ ಸಿನಿಮಾ ಮಾಡಿ, ವೃತ್ತಿ ಬದುಕಿನಲ್ಲಿ ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅತಿ ಹೆಚ್ಚು ಟ್ರೋಲ್ ಆಗುತ್ತಾರೆ. ಈ ಬಗ್ಗೆ ಅವರೀಗ ಮೌನ ಮುರಿದಿದ್ದಾರೆ.

VISTARANEWS.COM


on

Rashmika Mandanna Social Media Post On Receiving Hate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಯಾಂಡಲ್​ವುಡ್​ನಿಂದ ಹೊರಟು, ಬಾಲಿವುಡ್​ವರೆಗೆ ಸಾಲುಸಾಲು ಸಿನಿಮಾ ಮಾಡಿರುವ ನಟಿ ರಶ್ಮಿಕಾ ಮಂದಣ್ಣ ನ್ಯಾಷನಲ್​ ಕ್ರಶ್​ ಎಂದೇ ಸಖತ್ ಫೇಮಸ್​. ಆದರೆ ಸಿಕ್ಕಾಪಟೆ ಟ್ರೋಲ್​ ಆಗುವ ನಟಿಯೂ ಹೌದು. ರಶ್ಮಿಕಾ ಮಂದಣ್ಣ ಅವರನ್ನು ಟೀಕಿಸುವ, ವಿರೋಧಿಸುವ, ಟ್ರೋಲ್​ ಮಾಡುವವರ ವರ್ಗ ದೊಡ್ಡದಿದೆ. ರಶ್ಮಿಕಾ ಬಗ್ಗೆ ದ್ವೇಷ ಭರಿತ ಕಮೆಂಟ್​ಗಳನ್ನು, ಸೋಷಿಯಲ್​ ಮೀಡಿಯಾ ಪೋಸ್ಟ್​ ಹಾಕುವವರು ಹಲವರು ಇದ್ದಾರೆ. ಕೀಳು ಪದದ ನಿಂದನೆಗಳಿಂದಲೂ ರಶ್ಮಿಕಾ ಹೊರತಲ್ಲ. ಅವರನ್ನು ಮುಜುಗರಕ್ಕೀಡು ಮಾಡುವ ಪ್ರಶ್ನೆಗಳೂ ಸೋಷಿಯಲ್ ಮೀಡಿಯಾ ಪೋಸ್ಟ್​​ಗಳಲ್ಲಿ ಹರಿದಾಡುತ್ತಿರುತ್ತದೆ.

ಈಗ ನಟಿ ರಶ್ಮಿಕಾ ಮಂದಣ್ಣ ತಮ್ಮ ಇನ್​ಸ್ಟಾಗ್ರಾಂನಲ್ಲಿ ಒಂದು ಸುದೀರ್ಘ ಪೋಸ್ಟ್ ಹಾಕಿಕೊಂಡಿದ್ದಾರೆ. ವರ್ಷಗಳಿಂದಲೂ ನಾನು ದ್ವೇಷ, ವ್ಯಂಗ್ಯಭರಿತ ಮಾತುಗಳನ್ನೇ ಕೇಳುತ್ತಿದ್ದೇನೆ ಎಂದು ಬೇಸರದಿಂದ ಬರೆದುಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಹಾಕಿದ ಸೋಷಿಯಲ್​ ಮೀಡಿಯಾ ಪೋಸ್ಟ್​ ಹೀಗಿದೆ. ‘ಇತ್ತೀಚೆಗೆ ಒಂದಷ್ಟು ವಿಚಾರಗಳು ನನಗೆ ತುಂಬ ಸಮಸ್ಯೆ ತರುತ್ತಿವೆ. ಕೆಲವು ದಿನಗಳಿಂದ ಅಥವಾ ಹಲವು ತಿಂಗಳುಗಳಿಂದ, ಇಲ್ಲ ಒಂದು ವರ್ಷದಿಂದ ಎಂದರೂ ತಪ್ಪಾಗಲಾರದು. ಆ ಬಗ್ಗೆ ಈಗ ಮಾತನಾಡುತ್ತೇನೆ. ಇಲ್ಲಿ ನಾನು ನನಗಾಗಿ ಮಾತನಾಡುತ್ತಿದ್ದೇನೆ ಹೊರತು ಇನ್ಯಾವುದೇ ಕಾರಣಕ್ಕಲ್ಲ. ಇದನ್ನು ನಾನು ಒಂದು ವರ್ಷದಿಂದಲೇ ಮಾಡಬೇಕಿತ್ತು, ಆದರೆ ಈಗ ಮೌನ ಮುರಿಯುತ್ತಿದ್ದೇನೆ’

‘ನಾನು ನನ್ನ ನಟನಾ ವೃತ್ತಿ ಜೀವನ ಶುರು ಮಾಡಿದಾಗಿನಿಂದಲೂ ಬಹಳಷ್ಟು ದ್ವೇಷ ಭರಿತ ಮಾತುಗಳನ್ನು ಕೇಳುತ್ತಿದ್ದೇನೆ. ನನ್ನನ್ನು ದ್ವೇಷಿಸುವವರು ಅನೇಕರು ಇದ್ದಾರೆ. ಟ್ರೋಲ್​ ಮತ್ತು ನಕಾರಾತ್ಮಕ ಅಂಶಗಳಿಗೆ ಅಕ್ಷರಶಃ ನಾನೊಂದು ಪಂಚ್​ ಬ್ಯಾಗ್​ನಂತೆ ಆಗಿಬಿಟ್ಟಿದ್ದೇನೆ. ನಾನು ಯಾವ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದೇನೋ, ಅದಕ್ಕೆ ಬೆಲೆಯಿದೆ ಎಂಬುದು ನನಗೆ ಗೊತ್ತಿದೆ. ಪ್ರತಿಯೊಬ್ಬರಿಗೂ ಇಷ್ಟವಾಗುವಂತಹ ವ್ಯಕ್ತಿ ನಾನಲ್ಲ ಎಂದೂ ನನಗೆ ತಿಳಿದಿದೆ. ಎಲ್ಲರೂ ನನ್ನನ್ನು ಪ್ರೀತಿಸಬೇಕು ಎಂದು ಯಾವತ್ತೂ ಬಯಸುವುದಿಲ್ಲ. ಆದರೆ ನೀವು ನನ್ನನ್ನು ಇಷ್ಟಪಡುವುದಿಲ್ಲ ಎಂಬ ಕಾರಣಕ್ಕೆ ನನ್ನ ಬಗ್ಗೆ ನಕಾರಾತ್ಮಕ ಅಂಶಗಳನ್ನು ಹೊರಹಾಕುವುದು? ದ್ವೇಷ ಕಾರುವುದು? ಟ್ರೋಲ್ ಮಾಡುವುದು ಸರಿಯಲ್ಲ.

ನಾನು ಮಾಡುವ ಕೆಲಸದಿಂದ ನೀವೆಲ್ಲರೂ ಸಂತೋಷ ಪಡಬೇಕು ಎಂದು ನಾನು ಬಯಸುತ್ತೇನೆ ಮತ್ತು ಅದಕ್ಕಾಗಿ ಎಲ್ಲ ರೀತಿಯ ಪ್ರಯತ್ನವನ್ನೂ ಮಾಡುತ್ತೇನೆ. ನನ್ನಿಂದ ನಿಮಗೆ ಸಂತೋಷವಾದರೆ ಅದೇ ನನಗೆ ಖುಷಿ. ನಾನು ಮಾಡುವ ಕೆಲಸದಿಂದ ನಿಮಗೂ, ನನಗೂ ಇಬ್ಬರಿಗೂ ಹೆಮ್ಮೆಯಾಗಬೇಕು ಎಂಬುದೇ ನನ್ನ ಆಶಯ. ಅದಕ್ಕಾಗಿ ಎಷ್ಟಾಗತ್ತೋ, ಅಷ್ಟು ಪರಿಪೂರ್ಣ ಪ್ರಯತ್ನ ಮಾಡುತ್ತಿದ್ದೇನೆ.

ಆದರೆ, ಇಂಟರ್​​ನೆಟ್​​ನಲ್ಲಿ ನಾನು ಟೀಕಿಸಲ್ಪಡುತ್ತಿರುವ, ನಿಂದನೆ ಪಡೆಯುತ್ತಿರುವ ರೀತಿ ನಿಜಕ್ಕೂ ನನಗೆ ನೋವು ತರುತ್ತಿದೆ. ನಾನು ಹೇಳದ ವಿಷಯಗಳು, ಮಾತುಗಳಿಗೆ ನನ್ನ ವಿರುದ್ಧ ದ್ವೇಷ ಕಾರುವುದನ್ನು ನೋಡಿದಾಗ ಹೃದಯವೇ ಒಡೆದು ಹೋದಂತೆ ಆಗುತ್ತದೆ. ನಾನು ಸಂದರ್ಶನ, ಮಾಧ್ಯಮಗಳ ಎದುರು ಆಡುವ ಮಾತುಗಳೆಲ್ಲ ನನಗೇ ಮುಳ್ಳಾಗುತ್ತಿವೆ. ನನ್ನ ಮಾತುಗಳನ್ನು ತಿರುಚಿ, ಅಪಪ್ರಚಾರ ಮಾಡಲಾಗುತ್ತದೆ. ನನಗಷ್ಟೇ ಅಲ್ಲ, ನನ್ನ ಸ್ನೇಹಿತರು, ಸಂಬಂಧಿಗಳಿಗೂ ಇದರಿಂದ ತೊಂದರೆಯಾಗುತ್ತಿದೆ. ನಾನು ನನ್ನನ್ನು ಇನ್ನಷ್ಟು ಸುಧಾರಣೆ ಮಾಡಿಕೊಳ್ಳುವಂಥ ಟೀಕೆ-ವಿಮರ್ಶೆಗಳನ್ನು ಖಂಡಿತ ಸ್ವಾಗತಿಸಿ, ಒಪ್ಪಿಕೊಳ್ಳುತ್ತೇನೆ. ಆದರೆ ಈಗ ಆಗುತ್ತಿರುವುದು ಅದಲ್ಲ, ಇಷ್ಟೆಲ್ಲ ದ್ವೇಷ-ನಕಾರಾತ್ಮಕತೆಯನ್ನು ನಾನು ಹೇಗೆ ತಡೆದುಕೊಳ್ಳಲಿ? ತುಂಬ ದಿನಗಳಿಂದಲೂ ನಾನು ಇಂಥ ಕಮೆಂಟ್​ಗಳು, ವ್ಯಂಗ್ಯ, ದ್ವೇಷಗಳನ್ನು ಸಹಿಸಿಕೊಳ್ಳುತ್ತಲೇ ಬಂದೆ.

ಇನ್ನೊಂದೆಡೆ ನನ್ನನ್ನು ಅಪಾರವಾಗಿ ಪ್ರೀತಿಸುವವರೂ ಇದ್ದಾರೆ. ಅವರ ಪ್ರೀತಿ, ನಂಬಿಕೆ, ಸಹಕಾರದಿಂದಲೇ ನಾನು ಇಂದು ಈ ಮಟ್ಟಕ್ಕೆ ನಾನು ಬೆಳೆದೆ. ನಾನು ನನ್ನ ಸುತ್ತಲೂ ಇರುವವರನ್ನು ಪ್ರೀತಿಸುತ್ತೇನೆ. ನಾನು ಯಾರೊಂದಿಗೆ ಕೆಲಸ ಮಾಡಿದ್ದೇನೋ, ಅವರನ್ನೂ ಪ್ರೀತಿಸುತ್ತೇನೆ. ನಾನು ನನ್ನ ಕೆಲಸ ಮುಂದುವರಿಸುತ್ತೇನೆ. ನಿಮ್ಮೆಲ್ಲರ ಸಂತೋಷವೇ ನನ್ನ ಸಂತೋಷ. ನಾವೆಲ್ಲರೂ ನಮ್ಮ ಕೈಲಾದಷ್ಟು ಪರಿಶ್ರಮ ವಹಿಸುತ್ತಲೇ ಇದ್ದೇವೆ. ದಯವಿಟ್ಟು ಎಲ್ಲರಲ್ಲೂ ದಯೆ ಇರಲಿ, ಧನ್ಯವಾದ..’

ಇಷ್ಟು ಸುದೀರ್ಘ ಪೋಸ್ಟ್ ಹಾಕಿಕೊಂಡಿರುವ ರಶ್ಮಿಕಾಗೆ ಹಲವರು ಧೈರ್ಯ ತುಂಬಿ ಕಮೆಂಟ್​ ಮಾಡಿದ್ದಾರೆ. ಬೇಸರ ಪಟ್ಟುಕೊಳ್ಳಬೇಡಿ, ನೀವು ಪ್ರೀತಿಗೆ ಅರ್ಹರು, ಸಕಾರಾತ್ಮಕವಾಗಿ ಚಿಂತಿಸಿ ಎಂದು ಹಲವು ಸೆಲೆಬ್ರಿಟಿಗಳೇ ರಶ್ಮಿಕಾ ಪೋಸ್ಟ್​ಗೆ ಕಮೆಂಟ್​ ಹಾಕಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Bollywood Divorce Case: ವಿಚ್ಛೇದನದ ಬಳಿಕ ಪತ್ನಿಗೆ ದುಬಾರಿ ʼಜೀವನಾಂಶʼ ನೀಡಿದ ಬಾಲಿವುಡ್ ಸ್ಟಾರ್‌ಗಳಿವರು!

Bollywood Divorce Case: ಮದುವೆ ಎನ್ನುವುದು ಮಧುರವಾದ ಬಂಧ, ಸತಿ-ಪತಿಯರಿಬ್ಬರೂ ಸುಖವಾಗಿ ಬಾಳಿ ಬದುಕಿದರೆ ಜೀವನವೇ ಸ್ವರ್ಗ.ಆದರೆ ಈಗ ಮದುವೆಯಾಗಿ ಮೂರೇ ನಿಮಿಷಕ್ಕೆ ವಿಚ್ಛೇದನ ನೀಡುವವರು ಇದ್ದಾರೆ. ವಿಚ್ಛೇದನದ ಪಾರ್ಟಿಯನ್ನು ಆಚರಿಸುವವರು ಇದ್ದಾರೆ. ಇನ್ನು ಸಿನಿಮಾ ರಂಗದಲ್ಲಂತೂ ಇದನ್ನು ಕೇಳುವುದೇ ಬೇಡ. ಮದುವೆಯಾದ ಸಂಗಾತಿಯೊಂದಿಗೆ ದೀರ್ಘಕಾಲದವರೆಗೆ ಸಂಬಂಧದಲ್ಲಿದ್ದ ಸಿನಿಮಾ ತಾರೆಯರು ಬೆರಳೆಣಿಕೆಯಷ್ಟು ಮಾತ್ರ ಎನ್ನಬಹುದೇನೋ. ಬಾಲಿವುಡ್ ಸಿನಿಮಾ ತಾರೆಯರಲ್ಲಿ ಹಲವರು ಮದುವೆ ಆಗಿ ಸ್ವಲ್ಪ ದಿನದಲ್ಲೇ ವಿಚ್ಛೇದನ ಪಡೆದು ಪತ್ನಿಗೆ ಅತಿ ಹೆಚ್ಚು ಜೀವನಾಂಶ ನೀಡುವ ಮೂಲಕ ಮನೆಮಾತಾಗಿದ್ದಾರೆ. ಅಂತಹ ಬಾಲಿವುಡ್ ಸಿನಿಮಾ ತಾರೆಯರ ಬಗ್ಗೆ ಇಲ್ಲಿದೆ ನೋಡಿ ಮಾಹಿತಿ.

VISTARANEWS.COM


on

Bollywood Divorce Case
Koo

ಮುಂಬೈ: ಈಗಿನ ಕಾಲದಲ್ಲಿ ಲವ್, ಬ್ರೇಕ್ ಅಪ್, ಮದುವ , ವಿಚ್ಛೇದನ ಎಲ್ಲಾ ಕಾಮನ್ ಆಗಿ ಬಿಟ್ಟಿದೆ. ಲವ್ ಮಾಡಿ ಮದುವೆಯಾಗಿ ನಂತರ ಕೆಲವೇ ದಿನಗಳಲ್ಲಿ ವಿಚ್ಛೇದನ ನೀಡುವುದು ಸೆಲೆಬ್ರಿಟಿಗಳಲ್ಲಿ ಸಾಮಾನ್ಯ. ಆದರೆ ಈಗ ಸಾಮಾನ್ಯ ಜನರೂ ಇದೇ ನಿಯಮವನ್ನು ಅನುಸರಿಸುತ್ತಿದ್ದಾರೆ! ಮದುವೆಯಾದ ಸಂಗಾತಿಯೊಂದಿಗೆ ದೀರ್ಘಕಾಲದವರೆಗೆ ಸಂಬಂಧದಲ್ಲಿದ್ದ ಸಿನಿಮಾ ತಾರೆಯರು ಬೆರಳೆಣಿಕೆಯಷ್ಟು ಮಾತ್ರ! ಬಾಲಿವುಡ್ (Bollywood Divorce Case) ಸಿನಿಮಾ ತಾರೆಯರಲ್ಲಿ ಹಲವರು ಮದುವೆ ಆಗಿ ಸ್ವಲ್ಪ ದಿನದಲ್ಲೇ ವಿಚ್ಛೇದನ ಪಡೆದು ಪತ್ನಿಗೆ ಅತಿ ಹೆಚ್ಚು ಜೀವನಾಂಶ ನೀಡುವ ಮೂಲಕ ಸುದ್ದಿಯಾಗಿದ್ದಾರೆ. ಅಂತಹ ಬಾಲಿವುಡ್ ಸಿನಿಮಾ ತಾರೆಯರ ಬಗ್ಗೆ ಇಲ್ಲಿದೆ ಕುತೂಹಲಕರ ಮಾಹಿತಿ.

Bollywood Divorce Case
Bollywood Divorce Case

ಹೃತಿಕ್ ರೋಷನ್- ಸುಸ್ಸೇನ್ ಖಾನ್

ಬಾಲಿವುಡ್‌ನ ʼಗ್ರೀಕ್ ದೇವರುʼ ಎಂದೇ ಕರೆಯಲ್ಪಡುವ ಹೃತಿಕ್ ರೋಷನ್ 2000ರಲ್ಲಿ ಪ್ರಸಿದ್ಧ ಇಂಟಿರಿಯರ್ ಡಿಸೈನರ್ ಸುಸ್ಸೇನ್ ಖಾನ್ ಅವರನ್ನು ವಿವಾಹವಾದರು. ಹೊರಗಿನವರಿಗೆ ಸುಂದರವಾಗಿ ಕಾಣುತ್ತಿದ್ದ ಇವರ ವೈವಾಹಿಕ ಜೀವನವು 2014ರಲ್ಲಿ ಕೊನೆಗೊಂಡಿತು. ಇವರ ವಿಚ್ಛೇದನ ಒಪ್ಪಂದವು ಬಾಲಿವುಡ್ ಇತಿಹಾಸದಲ್ಲೇ ಅತ್ಯಂತ ದುಬಾರಿಯಾಗಿತ್ತು. ಯಾಕೆಂದರೆ ಹೃತಿಕ್ ರೋಷನ್‌ ಅವರು ಸುಸ್ಸೇನ್‌ಗೆ ಸುಮಾರು 380 ಕೋಟಿ ರೂ. ಜೀವನಾಂಶ ಪಾವತಿಸಿದ್ದಾರೆ ಎಂದು ವರದಿಯಾಗಿದೆ.

Bollywood Divorce Case
Bollywood Divorce Case

ಕರಿಷ್ಮಾ ಕಪೂರ್ ಮತ್ತು ಸಂಜಯ್ ಕಪೂರ್

ಕಪೂರ್ ಕುಟುಂಬದ ವಂಶಸ್ಥರಾದ ಕರಿಷ್ಮಾ ಕಪೂರ್ 2003ರಲ್ಲಿ ಉದ್ಯಮಿ ಸಂಜಯ್ ಕಪೂರ್ ಅವರನ್ನು ವಿವಾಹವಾದರು. ಇವರ ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಎದುರಾದ ಹಿನ್ನಲೆಯಲ್ಲಿ ಇವರು 2014ರಲ್ಲಿ ಬೇರೆಬೇರೆಯಾದರು. ಕರಿಷ್ಮಾ ಅವರಿಗೆ ಸಂಜಯ್ ಜೀವನಾಂಶವಾಗಿ 14 ಕೋಟಿ ರೂ. ಬಾಂಡ್, ಮುಂಬೈನಲ್ಲಿ ಐಷಾರಾಮಿ ಮನೆ ಮತ್ತು ಅವರ ಮಕ್ಕಳ ಜೀವನಕ್ಕಾಗಿ ಹಣವನ್ನು ಪಾವತಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

Bollywood Divorce Case
Bollywood Divorce Case

ಸೈಫ್ ಅಲಿ ಖಾನ್ ಮತ್ತು ಅಮೃತಾ ಸಿಂಗ್

ನಟ ಸೈಫ್ ಅಲಿ ಖಾನ್ 1991ರಲ್ಲಿ ನಟಿ ಅಮೃತಾ ಸಿಂಗ್ ಅವರನ್ನು ವಿವಾಹವಾದರು. ಈ ದಂಪತಿಗೆ ಸಾರಾ ಮತ್ತು ಇಬ್ರಾಹಿಂ ಎಂಬ ಇಬ್ಬರು ಮಕ್ಕಳಿದ್ದರು. ಹದಿಮೂರು ವರ್ಷಗಳ ದಾಂಪತ್ಯದ ನಂತರ, ಅವರು 2004ರಲ್ಲಿ ವಿಚ್ಛೇದನ ಪಡೆದರು. ಸೈಫ್ ಅಮೃತಾಗೆ ಜೀವನಾಂಶವಾಗಿ 5 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೇ ಹೆಚ್ಚುವರಿಯಾಗಿ, ತಮ್ಮ ಮಗ ಪ್ರೌಢಾವಸ್ಥೆಗೆ ತಲುಪುವವರೆಗೆ ತಿಂಗಳಿಗೆ 1 ಲಕ್ಷ ರೂ.ಗಳನ್ನು ಪಾವತಿಸಲು ಅವರು ಬದ್ಧರಾಗಿದ್ದಾರೆ.

Bollywood Divorce Case
Bollywood Divorce Case

ಅಮೀರ್ ಖಾನ್ ಮತ್ತು ರೀನಾ ದತ್ತಾ

ಅಮೀರ್ ಖಾನ್ 1986ರಲ್ಲಿ ರೀನಾ ದತ್ತಾ ಅವರನ್ನು ವಿವಾಹವಾದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದರು. 2002ರಲ್ಲಿ ಅವರ ವಿವಾಹವು ಕೊನೆಗೊಂಡಿದೆ. ವಿಚ್ಛೇದನ ನಂತರ ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸಲು ರೀನಾಗೆ ಸುಮಾರು 50 ಕೋಟಿ ರೂ.ಗಳನ್ನು ನೀಡಿರುವುದಾಗಿ ಅಮೀರ್ ಖಾನ್ ಖಚಿತಪಡಿಸಿದ್ದಾರೆ.

Bollywood Divorce Case
Bollywood Divorce Case

ಫರ್ಹಾನ್ ಅಖ್ತರ್ ಮತ್ತು ಅಧುನಾ ಭಬಾನಿ

ಬಹುಮುಖ ಪ್ರತಿಭೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಫರ್ಹಾನ್ ಅಖ್ತರ್ 2000ರಲ್ಲಿ ಸೆಲೆಬ್ರಿಟಿ ಹೇರ್ಸ್ಟೈಲಿಸ್ಟ್ ಅಧುನಾ ಭಬಾನಿ ಅವರನ್ನು ವಿವಾಹವಾದರು. ಹದಿನಾರು ವರ್ಷಗಳ ದಾಂಪತ್ಯದ ನಂತರ, ಅವರು 2016ರಲ್ಲಿ ವಿಚ್ಛೇದನ ಪಡೆದಿದ್ದಾರೆ. ಹಾಗೇ ಪತ್ನಿಗೆ ದುಬಾರಿ ಜೀವನಾಂಶದ ಜೊತೆಗೆ ಬಂಗಲೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳ ಖರ್ಚುವೆಚ್ಚದ ಜವಾಬ್ದಾರಿಯನ್ನು ತಾವೇ ತೆಗೆದುಕೊಂಡಿದ್ದಾರೆ.

Bollywood Divorce Case
Bollywood Divorce Case

ಸಂಜಯ್ ದತ್ ಮತ್ತು ರಿಯಾ ಪಿಳ್ಳೈ

ರೂಪದರ್ಶಿ ರಿಯಾ ಪಿಳ್ಳೈ ಅವರೊಂದಿಗಿನ ಸಂಜಯ್ ದತ್ ಅವರ ಎರಡನೇ ಮದುವೆಯಾದರು. 2008ರಲ್ಲಿ ಇವರ ವೈವಾಹಿಕ ಜೀವನ ವಿಚ್ಛೇದನದಲ್ಲಿ ಕೊನೆಗೊಂಡಿತು ಸಂಜಯ್ ರಿಯಾಗೆ ದುಬಾರಿ ಜೀವನಾಂಶವನ್ನು ಪಾವತಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಅದರಲ್ಲಿ ಮುಂಬೈನಲ್ಲಿ ಸಮುದ್ರದ ಕಡೆಗೆ ಮುಖವಿದ್ದ ಎರಡು ಐಷಾರಾಮಿ ಅಪಾರ್ಟ್ಮೆಂಟ್‍ಗಳು ಮತ್ತು ಒಂದು ಕಾರನ್ನು ನೀಡಲಾಗಿದೆ.

ಇದನ್ನೂ ಓದಿ: 20 ದೇಶಗಳಿಗೆ ಮಣ್ಣಿನ ಪಾತ್ರೆಗಳ ರಫ್ತು; ವರ್ಷಕ್ಕೆ 5 ಕೋಟಿ ರೂ. ಗಳಿಸುತ್ತಿದೆ ಈ ಕುಟುಂಬ!

Bollywood Divorce Case
Bollywood Divorce Case

ಅರ್ಬಾಜ್ ಖಾನ್ ಮತ್ತು ಮಲೈಕಾ ಅರೋರಾ

ನಟ-ನಿರ್ಮಾಪಕ ಮತ್ತು ಸಲ್ಮಾನ್ ಖಾನ್ ಅವರ ಕಿರಿಯ ಸಹೋದರ ಅರ್ಬಾಜ್ ಖಾನ್ ನಟಿ ಮತ್ತು ರೂಪದರ್ಶಿ ಮಲೈಕಾ ಅರೋರಾ ಅವರನ್ನು 1998ರಲ್ಲಿ ವಿವಾಹವಾದರು. ಸ್ಟೈಲಿಶ್ ನೋಟಗಳಿಗೆ ಹೆಸರುವಾಸಿಯಾದ ದಂಪತಿಗಳು 2016ರಲ್ಲಿ ತಮ್ಮ ವಿಚ್ಛೇದನವನ್ನು ಘೋಷಿಸಿದರು ಮತ್ತು 2017ರಲ್ಲಿ ಅಧಿಕೃತವಾಗಿ ವಿಚ್ಛೇದನವನ್ನು ಪಡೆದುಕೊಂಡರು. ಈ ಒಪ್ಪಂದದಲ್ಲಿ ಅರ್ಬಾಜ್ ಮಲೈಕಾಗೆ ಸುಮಾರು 10-15 ಕೋಟಿ ರೂ.ಗಳ ದುಬಾರಿ ಜೀವನಾಂಶವನ್ನು ನೀಡಿದ್ದಾರೆ ಮತ್ತು ಅವರ ಮಗ ಅರ್ಹಾನ್ ಅವರ ಸಂಪೂರ್ಣ ಖರ್ಚುವೆಚ್ಚವನ್ನು ನೋಡಿಕೊಳ್ಳುವುದಾಗಿ ವರದಿಯಾಗಿದೆ.

Continue Reading

ಸ್ಯಾಂಡಲ್ ವುಡ್

Kannada New Movie: ಭಾರಿ ಮೊತ್ತಕ್ಕೆ ಮಾರಾಟವಾಯ್ತು ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾ ಆಡಿಯೊ ಹಕ್ಕು

Kannada New Movie: ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

VISTARANEWS.COM


on

Kannada New Movie Audio rights of Niveditha Shivarajkumar produced movie sold for huge amount
Koo

ಬೆಂಗಳೂರು: ಕನ್ನಡದ ಬಹುನಿರೀಕ್ಷಿತ ಸಿನಿಮಾ ʻಫೈರ್ ಫ್ಲೈʼ (Kannada New Movie) ಬಹಳ ವಿಶೇಷವಾಗಿದೆ. ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ಎಂಬ ಕಾರಣದ ಜತೆಗೆ ಹೆಸರಾಂತ ತಾರೆಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ನವ ನಾಯಕ ಮತ್ತು ನಿರ್ದೇಶಕ ವಂಶಿ ಸಾರಥ್ಯದಲ್ಲಿ ಮೂಡಿ ಬರ್ತಿರುವ ʻಫೈರ್ ಫ್ಲೈʼ ಸಿನಿಮಾದ ಆಡಿಯೊ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ.

ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ʻಫೈರ್ ಫ್ಲೈʼ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ಒದಗಿಸಿದ್ದಾರೆ. ಶೀಘ್ರದಲ್ಲಿಯೇ ಚರಣ್ ಟ್ಯೂನ್ ಹಾಕಿರುವ ಹಾಡುಗಳ ಹಬ್ಬ ಆನಂದ್ ಆಡಿಯೊ ಯೂಟ್ಯೂಬ್ ನಲ್ಲಿ ಶುರುವಾಗಲಿದೆ. ಆನಂದ್ ಆಡಿಯೋ ಸಂಸ್ಥೆ ಒಂದೊಳ್ಳೆ ಮೊತ್ತಕ್ಕೆ ಫೈರ್ ಫ್ಲೈ ಆಡಿಯೋ ಹಕ್ಕನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ.

‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ಅವರು ಹೀರೋ ಆಗಿ ಅಭಿನಯಿಸುತ್ತಿದ್ದಾರೆ. ಅಲ್ಲದೇ, ಅವರೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ‘ಹ್ಯಾಟ್ರಿಕ್​ ಹೀರೋ’ ಶಿವರಾಜ್​ಕುಮಾರ್​ ಅವರ ಪುತ್ರಿ ನಿವೇದಿತಾ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಮೂಲಕ ವಂಶಿ ಅವರು ಸ್ವತಂತ್ರ ನಿರ್ದೇಶಕರಾಗಿ ಹಾಗೂ ಪೂರ್ಣಪ್ರಮಾಣದ ಹೀರೋ ಆಗಿ ಪ್ರೇಕ್ಷಕರರ ಮುಂದೆ ಬರಲಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಈ ಚಿತ್ರಕ್ಕೆ ಜಯ್ ರಾಮ್ ಅವರು ಸಹ-ನಿರ್ದೇಶಕನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ಈ ಸಿನಿಮಾಗಿದೆ. ಬೆಳಕಿನ ಹಬ್ಬ ದೀಪಾವಳಿಗೆ ಫೈರ್ ಫ್ಲೈ ಸಿನಿಮಾ ಥಿಯೇಟರ್ ಬೆಳಗಲಿದೆ.

Continue Reading

ಕರ್ನಾಟಕ

‌Actor Darshan: ನಟ ದರ್ಶನ್‌ಗೆ ಸದ್ಯಕ್ಕಿಲ್ಲ ಮನೆಯೂಟದ ಭಾಗ್ಯ; ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಾಪಸ್!

‌Actor Darshan: ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಇದರಿಂದ ಸದ್ಯಕ್ಕೆ ನಟ ದರ್ಶನ್‌ಗೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ.

VISTARANEWS.COM


on

‌Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಸದ್ಯಕ್ಕೆ ಮನೆಯೂಟ ತಿನ್ನುವ ಭಾಗ್ಯ ಸಿಗುವಂತಿಲ್ಲ. ಯಾಕೆಂದರೆ, ಮನೆಯೂಟ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್‌ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ದರ್ಶನ್‌ (‌Actor Darshan) ಪರ ವಕೀಲರು ವಾಪಸ್‌ ಪಡೆದಿದ್ದಾರೆ.

ಅರ್ಜಿ ವಾಪಸ್ ಪಡೆಯಲು ದರ್ಶನ್ ಪರ ವಕೀಲರಿಂದ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಮನೆಯೂಟ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಮ್ಯಾಜಿಸ್ಟ್ರೇಟ್ ಕೋರ್ಟ್‌ನಿಂದ ಅನುಮತಿ ಪಡೆಯಲು ಹೈಕೋರ್ಟ್‌ ಸೂಚಿಸಿತ್ತು. ಹೀಗಾಗಿ ಜುಲೈ 25ರಂದು ವಿಚಾರಣೆ ನಡೆಸಿದ್ದ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ, ಇದೀಗ ತಾಂತ್ರಿಕ ಕಾರಣದಿಂದ ನಟ ದರ್ಶನ್‌ ಪರ ವಕೀಲರು ಅರ್ಜಿಯನ್ನು ವಾಪಸ್‌ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021ರ ಸೆಕ್ಷನ್ 728ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ. ಅಲ್ಲದೆ ಜೈಲು ಅಧಿಕಾರಿಗಳು ನೀಡಿರುವ ವರದಿಯಲ್ಲಿ ಮನೆಯೂಟದ ಅವಶ್ಯಕತೆ ಕಾಣಿಸುತ್ತಿಲ್ಲ. ಜತೆಗೆ ಮನೆ ಊಟದ ಅವಶ್ಯಕತೆ ಸಂಬಂಧ ಪೂರಕವಾದ ವೈದ್ಯಕೀಯ ಪ್ರಮಾಣಪತ್ರಗಳು ಇಲ್ಲ-ಈ ಮೂರು ಅಂಶಗಳ ಆಧಾರದ ಮೇಲೆ ಇತ್ತೀಚೆಗೆ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಅರ್ಜಿ ವಜಾಮಾಡಿತ್ತು.

ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ಪ್ರಶ್ನಿಸಲು ಹೊಸದಾಗಿ ಅರ್ಜಿ ಸಲ್ಲಿಸಬೇಕಿದೆ. ಹೀಗಾಗಿ ಅರ್ಜಿ ಹಿಂಪಡೆಯಲು ಅನುಮತಿ ನೀಡುವಂತೆ ಹೈಕೋರ್ಟ್‌ಗೆ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ‌ ಮನವಿ ಮಾಡಿದ್ದಾರೆ. ಹೀಗಾಗಿ
ಹೊಸದಾಗಿ ಅರ್ಜಿ ಸಲ್ಲಿಸಲು ನ್ಯಾ. ಹೇಮಂತ್ ಚಂದನ ಗೌಡರ್ ಅವರಿದ್ದ ಹೈಕೋರ್ಟ್ ಪೀಠ ಅವಕಾಶ ನೀಡಿದೆ.

BJP Padayatra: ಮುಡಾ ಹಗರಣ ಖಂಡಿಸಿ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ

ಜುಲೈ 22ರಂದು ದರ್ಶನ್ ಪರ ವಕೀಲ ವಕೀಲ ರಾಘವೇಂದ್ರ ವಾದ ಮಂಡಿಸಿ, ದರ್ಶನ್‌ಗೆ ಜೈಲು ಊಟ ಜೀರ್ಣವಾಗುತ್ತಿಲ್ಲ, ಅತಿಸಾರವಾಗುತ್ತಿದೆ. ಹೀಗಾಗಿ ಖಾಸಗಿ ಊಟ, ಹಾಸಿಗೆ ಕೆಳಲಾಗುತ್ತಿದೆ. ವಿಚಾರಣಾಧೀನ ಕೈದಿಗೆ ಮನೆಯೂಟ ಪಡೆಯಲು ಅವಕಾಶವಿದೆ. ತನಿಖೆ ಪೂರ್ಣವಾಗದ ಸಂದರ್ಭದಲ್ಲಿ ಮನೆ ಊಟ ನೀಡಲು ಅವಕಾಶವಿದೆ. ಕರ್ನಾಟಕ ಕಾರಾಗೃಹ ಕಾಯ್ದೆ ಪ್ರಕಾರ ಸಿವಿಲ್ ಕೈದಿ ಹಾಗೂ ವಿಚಾರಣಾಧೀನ ಕೈದಿಗೆ ಸ್ವಂತ ಹಣದಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿದೆ. ಅಧಿಕಾರಿಗಳೇ ರೇಷನ್ ನೀಡಬೇಕು. ಸೆಂಟ್ರಲ್ ಕಿಚನ್‌ನಲ್ಲಿ ಅಡುಗೆ ಮಾಡಿಕೊಳ್ಳಲು ಅವಕಾಶವಿದೆ ಎಂದು ಮನವಿ ಸಲ್ಲಿಸಿದ್ದರು. ಆದರೆ, ಮನೆಯೂಟಕ್ಕೆ ಕೋರ್ಟ್‌ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ದರ್ಶನ್‌ ಪರ ವಕೀಲರು ಮುಂದಾಗಿದ್ದಾರೆ.

ದರ್ಶನ್‌ಗಾಗಿ ದೇವರ ಪ್ರಸಾದ ತಂದ ವಿಜಯಲಕ್ಷ್ಮಿ

Actor Darshan Jail And Gave vijayalakshmi Prasada To Husband
Actor Darshan Jail And Gave vijayalakshmi Prasada To Husband

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದು ಗೊತ್ತೇ ಇದೆ. ವಿಜಯಲಕ್ಷ್ಮೀ ಅವರು ಇತ್ತೀಚೆಗೆ ಕೊಲ್ಲೂರಿಗೆ ತೆರಳಿದ್ದರು. ಮೂಕಾಂಬಿಕಾ ದೇವಿಯ ಎದುರು ವಿಶೇಷ ಪೂಜೆಯನ್ನು ಅವರು ಮಾಡಿಸಿದ್ದರು. ಪೂಜೆಯ ಸಂದರ್ಭದಲ್ಲಿ ತೆಗೆದುಕೊಂಡು ಬಂದ ಪ್ರಸಾದವನ್ನು ಜೈಲಿಗೆ ತಂದಿದ್ದಾರೆ ವಿಜಯಲಕ್ಷ್ಮಿ.

ದರ್ಶನ್ ಅವರು ಹೊರಗೆ ಬರಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಕೇಸ್ ತುಂಬಾನೇ ಗಂಭೀರ ಆಗಿದೆ. ಎಲ್ಲರ ಕಣ್ಣು ಈ ಕೇಸ್​ಮೇಲೆ ಇದೆ. ಅಲ್ಲದೆ, ಇನ್ನು ಈ ಕೇಸ್​ನಲ್ಲಿ ಚಾರ್ಜ್​ಶೀಟ್ ಸಲ್ಲಿಕೆ ಆಗಿಲ್ಲ. ಈ ಎಲ್ಲಾ ಕಾರಣದಿಂದ ಅವರಿಗೆ ಜಾಮೀನಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಶೀಘ್ರವೇ ಪೊಲೀಸರು ಕೋರ್ಟ್​ ಎದುರು ಚಾರ್ಜ್​ಶೀಟ್ ಸಲ್ಲಿಕೆ ಮಾಡಲಿದ್ದಾರೆ.

Continue Reading

ಕಾಲಿವುಡ್

Arjun Sarja: ಸ್ಟೈಲಿಶ್ ಅವತಾರದಲ್ಲಿ ಅರ್ಜುನ್ ಸರ್ಜಾ: ‘ವಿಡಮುಯಾರ್ಚಿ’ಲುಕ್‌ ಔಟ್‌!

Arjun Sarja: ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಅಜಿತ್ ಕುಮಾರ್, ತ್ರಿಶಾ ಮತ್ತು ಆಕ್ಷನ್ ಕಿಂಗ್ ಅರ್ಜುನ್ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಈಗ ಮತ್ತೊಮ್ಮೆ ಈ ಮೂರೂ ಪ್ರೇಕ್ಷಕರ ಮನಸೂರೆಗೊಳ್ಳಲಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Arjun Sarja Vidaamuyarchi Heats Up Character Poster
Koo

ಬೆಂಗಳೂರು: ಅಜಿತ್ ಕುಮಾರ್ ನಟಿಸುತ್ತಿರುವ ‘ವಿಡಮುಯಾರ್ಚಿ’ ಕಾಲಿವುಡ್ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ. ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ನಡಿ ಬಹಳ ಅದ್ಧೂರಿಯಾಗಿ ಈ ಚಿತ್ರ ಮೂಡಿ ಬರುತ್ತಿದೆ. ಅದರಲ್ಲಿಯೂ ಅಜಿತ್ ಡೇಂಜರಸ್ ಸ್ಟಂಟ್ ವಿಡಿಯೋ ವೈರಲ್ ಆದ್ಮೇಲಂತೂ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿದೆ. ಇದೀಗ ಮಿಡಮುಯಾರ್ಚಿ ಸಿನಿಮಾದಲ್ಲಿ ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೆ ಬ್ರೇಕ್ ಬಿದ್ದಿದೆ.

ತಮ್ಮ ವೈವಿಧ್ಯಮಯ ಪಾತ್ರಗಳ ಮೂಲಕ ದಕ್ಷಿಣ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಅರ್ಜುನ್, ‘ವಿಡಮುಯಾರ್ಚಿ’ ಮೂಲಕ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಆಕ್ಷನ್ ಕಿಂಗ್ ರಸ್ತೆಯ ಮೇಲೆ ಸ್ಟೈಲಿಶ್ ಆಗಿ ನಿಂತಿದ್ದಾರೆ. ಹಿನ್ನಲೆಯಲ್ಲಿ ಅಜಿತ್ ಅವರ ಸಿಲೂಯೆಟ್ ನಿಗೂಢತೆ ಮತ್ತು ನಿರೀಕ್ಷೆಯ ಭಾವವನ್ನು ಹುಟ್ಟುಹಾಕುತ್ತದೆ. ‘ಪ್ರಯತ್ನಗಳು ಎಂದಿಗೂ ವಿಫಲವಾಗುವುದಿಲ್ಲ’ ಎಂಬ ಕುತೂಹಲ ಕೆರಳಿಸುವ ಅಡಿಬರಹವು ಚಿತ್ರದ ಸುತ್ತಲಿನ ಕುತೂಹಲವನ್ನು ಹೆಚ್ಚಿಸಿದೆ.

ಅಜಿತ್ ಅವರ ವೃತ್ತಿಜೀವನದಲ್ಲಿ, ಬ್ಲಾಕ್ಬಸ್ಟರ್ ಚಲನಚಿತ್ರಗಳಲ್ಲಿ ಒಂದಾದ ‘ಮಂಗತ’ ಅಜಿತ್ ಕುಮಾರ್, ತ್ರಿಶಾ ಮತ್ತು ಆಕ್ಷನ್ ಕಿಂಗ್ ಅರ್ಜುನ್ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಈಗ ಮತ್ತೊಮ್ಮೆ ಈ ಮೂರೂ ಪ್ರೇಕ್ಷಕರ ಮನಸೂರೆಗೊಳ್ಳಲಿದೆ. ಅಲ್ಲದೆ, ಆರವ್, ರೆಜಿನಾ ಕಸ್ಸಂದ್ರ, ನಿಖಿಲ್ ಮತ್ತು ಇತರರು ಈ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಇದನ್ನೂ ಓದಿ: Actor Dhanush: ಮೂರೇ ದಿನಕ್ಕೆ 50 ಕೋಟಿ ರೂ. ಕಲೆಕ್ಷನ್‌ ಮಾಡಿದ ಧನುಷ್‌ ನಟನೆಯ ʻ50ʼನೇ ಸಿನಿಮಾ!

ಮಾಗಿಲ್ ತಿರುಮೇನಿ ನಿರ್ದೇಶನದ ಈ ಚಿತ್ರಕ್ಕೆಡ ಕಾಲಿವುಡ್ ಮ್ಯೂಸಿಕಲ್ ರಾಕ್ ಸ್ಟಾರ್ ಅನಿರುದ್ಧ್ ಈಗಾಗಲೇ ಚಾರ್ಟ್ ಬಸ್ಟರ್ ಆಲ್ಬಂ ಅನ್ನು ಸಿದ್ಧಪಡಿಸುತ್ತಿದ್ದಾರೆ. ಓಂ ಪ್ರಕಾಶ್ ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಎನ್.ಬಿ.ಶ್ರೀಕಾಂತ್ ಸಂಕಲನಕಾರರಾಗಿ ಮತ್ತು ಮಿಲನ್ ಕಲಾ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅಂದಹಾಗೆ, ಈ ಚಿತ್ರಕ್ಕೆ ಸುಂದರ್ ಸಾಹಸ ಸಂಯೋಜನೆ ಮಾಡುತ್ತಿದ್ದರೆ, ಅನು ವರ್ಧನ್ ಕಾಸ್ಟ್ಯೂಮ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಸುಬ್ರಮಣಿಯನ್ ನಾರಾಯಣನ್ ಕಾರ್ಯಕಾರಿ ನಿರ್ಮಾಪಕರಾಗಿ, ಜೆ.ಗಿರಿನಾಥನ್ ಮತ್ತು ಕೆ.ಜಯಶೀಲನ್ ನಿರ್ಮಾಣ ಕಾರ್ಯನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದಾರೆ.

ಅಜಿತ್ ಕುಮಾರ್ ಅಭಿನಯದ ‘ವಿಡಮುಯಾರ್ಚಿ’ ಚಿತ್ರದ ಸ್ಯಾಟಲೈಟ್ ಹಕ್ಕುಗಳನ್ನು ಸನ್ ಟಿವಿ ಪಡೆದುಕೊಂಡಿದ್ದರೆ, OTT ಹಕ್ಕುಗಳನ್ನು ನೆಟ್‌ಫ್ಲಿಕ್ಸ್ ಪಡೆದುಕೊಂಡಿದೆ. ಈ ಚಿತ್ರವನ್ನು ಅಕ್ಟೋಬರ್ 31 ರಂದು ಬಿಡುಗಡೆ ಮಾಡಲು ನಿರ್ಮಾಪಕರು ಯೋಜಿಸಿದ್ದಾರೆ.

Continue Reading
Advertisement
NEET-UG
ಪ್ರಮುಖ ಸುದ್ದಿ3 hours ago

NEET-UG : ಆಗಸ್ಟ್ 14ರಿಂದ ನೀಟ್-ಯುಜಿ ಕೌನ್ಸೆಲಿಂಗ್ ಆರಂಭ

ವೈರಲ್ ನ್ಯೂಸ್4 hours ago

Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Paris Olympics 2024
ಕ್ರೀಡೆ4 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಬೆಳ್ಳಿ ಪದಕ ಗೆದ್ದ ಈಜುಪಟುವಿಗೆ ಕೊರೊನಾ ಸೋಂಕು!

Asia Cup cricket
ಪ್ರಮುಖ ಸುದ್ದಿ4 hours ago

Asia Cup Cricket : ಭಾರತದಲ್ಲಿ ನಡೆಯಲಿದೆ 2025ರ ಏಷ್ಯಾ ಕಪ್ ಕ್ರಿಕೆಟ್​, ಇಲ್ಲಿದೆ ಪೂರ್ಣ ವಿವರ

Viral video
ವೈರಲ್ ನ್ಯೂಸ್4 hours ago

Viral Video: ಕಾರಿನಲ್ಲೇ ಸೆಕ್ಸ್‌.. ಡಿವೈಡರ್‌ಗೆ ಡಿಕ್ಕಿ; ನಗ್ನ ಸ್ಥಿತಿಯಲ್ಲಿದ್ದ ಇಬ್ಬರು ಯುವಕರು, ಯುವತಿಯನ್ನು ಕಂಡು ಜನ ಶಾಕ್‌-ವಿಡಿಯೋ ಇದೆ

Rohan Bopanna
ಕ್ರೀಡೆ5 hours ago

Rohan Bopanna : ಅಂತಾರಾಷ್ಟ್ರೀಯ ಟೆನಿಸ್​ಗೆ ವಿದಾಯ ಘೋಷಿಸಿದ ಕನ್ನಡಿಗ ರೋಹನ್ ಬೋಪಣ್ಣ

CM Siddaramaiah demands to Pm for drop the Nirmala Sitharaman from the cabinet
ಕರ್ನಾಟಕ5 hours ago

CM Siddaramaiah: ಬಜೆಟ್ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್; ಸಂಪುಟದಿಂದ ಕೈಬಿಡಲು ಸಿಎಂ ಒತ್ತಾಯ

Parliament session
ದೇಶ5 hours ago

Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

Minister Lakshmi Hebbalkar reviewed the flood situation and provided individual financial assistance to the victims
ಕರ್ನಾಟಕ5 hours ago

Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Union Minister Pralhad Joshi statement on tomato price
ಕರ್ನಾಟಕ5 hours ago

Pralhad Joshi: ಟೊಮೆಟೊ ಬೆಲೆ ಸ್ಥಿರತೆಗೆ ಕ್ರಮ; ಕೆಜಿಗೆ 60 ರೂ. ನಿಗದಿ: ಪ್ರಲ್ಹಾದ್‌ ಜೋಶಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ10 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ11 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ14 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ1 day ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ1 day ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌