Site icon Vistara News

Rashmika Mandanna | ಆಸ್ಪತ್ರೆಗೆ ಭೇಟಿ ನೀಡಿದ ರಶ್ಮಿಕಾ: ವೈದ್ಯರು ಹೇಳಿದ್ದೇನು?

Rashmika Mandanna

ಬೆಂಗಳೂರು: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ (Rashmika Mandanna) ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮೊಣಕಾಲಿನ ನೋವಿನ ಸಮಸ್ಯೆಗಳಿಂದ ಬಳಲುತ್ತಿದ್ದು, ಚಿಕಿತ್ಸೆಗೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪೋಟೊ ಹಂಚಿಕೊಳ್ಳುವ ಮೂಲಕ ಹೈದಾಬಾದ್​​ನಲ್ಲಿನ ಪ್ರಮುಖ ಆರ್ಥೋ ಸ್ಪೆಷಲಿಸ್ಟ್‌ ಗುರುವಾ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.

ರಶ್ಮಿಕಾ ಮಂದಣ್ಣ ಹಲವಾರು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕೆಲ ತಿಂಗಳಿಂದ ಸತತ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಕೊಡಗಿನ ಬೆಡಗಿ ಮೊಣಕಾಲಿನ ಸಮಸ್ಯೆಗೆ ಒಳಗಾಗಿದ್ದಾರೆ. ಹೀಗಾಗಿ ಆರ್ಥೋ ಸ್ಪೆಷಲಿಸ್ಟ್ ಗುರುವಾ ರೆಡ್ಡಿ ಅವರನ್ನು ಭೇಟಿಯಾಗಿ ಚಿಕಿತ್ಸೆ ಪಡೆದರು. ಈ ವೇಳೆ ನಟಿಯ ಜತೆಗೆ ತೆಗೆದ ಫೋಟೊವನ್ನು ವೈದ್ಯರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ | Rashmika Mandanna | ಆಶಿಕಿ-3 ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರಾ ರಶ್ಮಿಕಾ?

ವೈದ್ಯ ಗುರುವಾ ರೆಡ್ಡಿ ಪೋಸ್ಟ್‌ ಹಂಚಿಕೊಂಡು ʻʻಸಾಮಿ.. ಸಾಮಿ ಎಂದು ಮೊಣಕಾಲಿನ ಮೇಲೆ ಭಾರ ಹಾಕಿ ಸ್ಪೆಪ್ಸ್‌ ಹಾಕಿದ್ದೀರಿ. ಈಗ ನೋವು ಬಂದಿದೆ. ಮೊಣಕಾಲು ನೋವಿನಿಂದ ನನ್ನ ಬಳಿಗೆ ಬಂದಿದ್ದೀರಿʼʼ ಎಂದು ಹೇಳಿಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ತಮಿಳಿನ ʻವರಿಸುʼ ಚಿತ್ರದಲ್ಲಿ ದಳಪತಿ ವಿಜಯ್ ಜತೆ ನಾಯಕಿಯಾಗಿ ನಟಿಸಲಿದ್ದಾರೆ. ವಂಶಿ ಪೈಡಿಪಲ್ಲಿ ನಿರ್ದೇಶನದ ಹೊಣೆ ಹೊತ್ತಿದ್ದರೆ, ವೆಂಕಟೇಶ್ವರ ಕ್ರಿಯೇಷನ್ಸ್‌ನ ಬ್ಯಾನರ್ ಅಡಿ ಚಿತ್ರ ನಿರ್ಮಾಣವಾಗುತ್ತಿದೆ. ರಶ್ಮಿಕಾ ಬಾಲಿವುಡ್‌ನಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ಅವರೊಂದಿಗೆ ʻಮಿಷನ್ ಮಜ್ನುʼ ಚಿತ್ರದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್‌ನ ʻಆಶಿಕಿ 3′ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈಗ ಗುಡ್​ ಬೈ (Goodbye Movie) ಚಿತ್ರದ ಮೂಲಕ ಬಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದು, ಅಕ್ಟೋಬರ್ 7 ರಂದು ವಿಶ್ವದ ಹಲವು ಕಡೆಗಳಲ್ಲಿ ಬಿಡುಗಡೆಗೆ ಸಿದ್ಧವಾಗಿದೆ.

ಇದನ್ನೂ ಓದಿ | Rashmika Mandanna | ಹೊಸ ಫೋಟೊಸ್‌ ಹಂಚಿಕೊಂಡ ರಶ್ಮಿಕಾ: ಈ ಬಾರಿ ಟ್ಯಾಟೂ ಹೈಲೈಟ್‌

Exit mobile version