ಬೆಂಗಳೂರು: ಟಾಲಿವುಡ್ ಮಾಸ್ ಮಹಾರಾಜ ರವಿ ತೇಜ (Ravi Teja) ನಟಿಸುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ʻಟೈಗರ್ ನಾಗೇಶ್ವರ್ ರಾವ್ʼ ಫಸ್ಟ್ ಲುಕ್ ರಿಲೀಸ್ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ಮೇ 24ರಂದು ಪಂಚ ಭಾಷೆಯಲ್ಲಿ ಅನಾವರಣಗೊಳ್ಳುತ್ತಿರುವ ಫಸ್ಟ್ ಲುಕ್ ಕನ್ನಡ ಝಲಕ್ಗೆ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.
ಕರುನಾಡ ಚಕ್ರವರ್ತಿ ಶಿವಣ್ಣ ತಮ್ಮ ಮ್ಯಾಜಿಕಲ್ ವಾಯ್ಸ್ ಮೂಲಕ `ಟೈಗರ್ ನಾಗೇಶ್ವರ್ ರಾವ್’ ಪ್ರಪಂಚಕ್ಕೆ ಕೊಂಡೊಯ್ಯಲಿದ್ದಾರೆ. ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಈ ಸಿನಿಮಾವನ್ನು `ದಿ ಕಾಶ್ಮೀರಿ ಫೈಲ್ಸ್ʼ ಹಾಗೂ ʻಕಾರ್ತಿಕೇಯ-2ʼ ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ.
70ರ ಕಾಲಘಟ್ಟದ ಹೈದ್ರಾಬಾದ್ನ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಇದನ್ನೂ ಓದಿ: 15-16 ವಯಸ್ಸಿನ ಹುಡುಗಿಯರಿಗೆ ದಿ ಕೇರಳ ಸ್ಟೋರಿ ವಿಶೇಷ ಪ್ರದರ್ಶನ ಏರ್ಪಡಿಸಿ; ಅರವಿಂದ್ ಕ್ರೇಜಿವಾಲ್ಗೆ ಬಿಜೆಪಿ ಪತ್ರ
ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ.