ಬೆಂಗಳೂರು: ತೆಲುಗಿನ ಮಾಸ್ ಮಹಾರಾಜ ರವಿ ತೇಜ (Ravi Teja) ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟೈಗರ್ ಇನ್ವೆಷನ್ ಎಂಬ ಟೈಟಲ್‌ನಡಿ ಅನಾವರಣಗೊಂಡಿರುವ ಝಲಕ್ ನಲ್ಲಿ, ಮದ್ರಾಸ್ ಸೆಂಟರ್ ಜೈಲಿನಿಂದ ಎಸ್ಕೇಪ್ ಆಗಿರುವ ಸ್ಟುವರ್ಟ್ ಪುರಂ ಕಳ್ಳನಿಗಾಗಿ ಹುಡುಗಾಟ ನಡೆಸುತ್ತಿರುವ ದೃಶ್ಯಗಳ ಮೂಲಕ ಟೀಸರ್ ತೆರೆದುಕೊಳ್ಳುತ್ತದೆ.
ಮುರಳಿ ಶರ್ಮಾ ಹಾಗೂ ಅನುಪಮ್ ಖೇರ್ ಗುಪ್ತಚರ ಇಲಾಖೆಯ ಅಧಿಕಾರಿಗಳಾಗಿ ನಟಿಸಿದ್ದಾರೆ. ನಾಗೇಶ್ವರ್ ರಾವ್ ಕುಖ್ಯಾತ ಕಳ್ಳ ಯಾಕೆ ಆಗುತ್ತಾನೆ ಎನ್ನುವುದನ್ನು ಮುರಳಿ ಶರ್ಮಾ ವಿವರಿಸಿದ್ದಾರೆ. ಸಖತ್ ಮಾಸ್ ಅವತಾರದಲ್ಲಿ ರವಿತೇಜ ದರ್ಶನ ಕೊಟ್ಟಿದ್ದಾರೆ. ಹಿಂದಿನ ಸಿನಿಮಾಗಳಿಂತ ಈ ಚಿತ್ರದಲ್ಲಿ ಮಾಸ್ ಮಹಾರಾಜ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.
70ರ ಕಾಲಘಟ್ಟದ ಹೈದರಾಬಾದ್ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.
ಇದನ್ನೂ ಓದಿ: Ravi Teja: ’ಟೈಗರ್ ನಾಗೇಶ್ವರ್ ರಾವ್’ ಪರಿಚಯಿಸಿದ ಶಿವಣ್ಣ ; ರಾಜಮಂಡ್ರಿಯ ಹ್ಯಾವ್ಲಾಕ್ ಸೇತುವೆ ಮೇಲೆ ಫಸ್ಟ್ ಲುಕ್ ಲಾಂಚ್
ಇದನ್ನೂ ಓದಿ: Anupam Kher: ’ಟೈಗರ್ ನಾಗೇಶ್ವರ್ ರಾವ್’ ಪ್ರಪಂಚಕ್ಕೆ ಅನುಪಮ್ ಖೇರ್ ಎಂಟ್ರಿ!
ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದು, ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ.