Site icon Vistara News

Ravi Teja: ‘ಟೈಗರ್ ನಾಗೇಶ್ವರ್ ರಾವ್’ ಮೊದಲ ಹಾಡು ರಿಲೀಸ್; ನೂಪುರ್ ಸನೋನ್ ಜತೆ ರವಿತೇಜ ಮಾಸ್ ಸ್ಟೆಪ್‌!

Ravi Teja tiger nageswara rao

ಬೆಂಗಳೂರು: ತೆಲುಗಿನ ಮಾಸ್ ಮಹಾರಾಜ ರವಿತೇಜ ನಟನೆಯ ಬಹುನಿರೀಕ್ಷಿತ ʻಟೈಗರ್ ನಾಗೇಶ್ವರ್ ರಾವ್ʼ ಸಿನಿಮಾದ (tiger nageswara rao) ಮೊದಲ ಹಾಡು ರಿಲೀಸ್ ಆಗಿದೆ. ʻಏಕ್ ದಮ್ ಏಕ್ ದಮ್ʼ (Ek Dum Ek Dum) ಎಂಬ ಹಾಡು 5 ಭಾಷೆಯಲ್ಲಿ ಅನಾವರಣಗೊಂಡಿದೆ. ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ ಮತ್ತು ನೂಪುರ್ ಸನೋನ್ ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್‌ಗೆ ಹೆಜ್ಜೆ ಹಾಕಿದ್ದಾರೆ. ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ.

70ರ ಕಾಲಘಟ್ಟದ ಹೈದ್ರಾಬಾದ್ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: Ravi Teja: ’ಟೈಗರ್ ನಾಗೇಶ್ವರ್ ರಾವ್’ ಟೀಸರ್ ರಿಲೀಸ್; ಮಾಸ್ ಅವತಾರದಲ್ಲಿ ರವಿ ತೇಜ!

ಟೈಗರ್ ನಾಗೇಶ್ವರ್ ರಾವ್ ಅಕ್ಟೋಬರ್ 20ರಂದು ವಿಶ್ವಾದ್ಯಂತ ಬಾಕ್ಸಾಫೀಸ್ ಭೇಟೆಗಿಳಿಯಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗುತ್ತಿದೆ.

ಕಾರ್ತಿಕೇಯ-2, ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಜ್ ಅಗರ್ವಾಲ್ ಆರ್ಟ್ಸ್ ಬ್ಯಾನರ್‌ನಡಿ ಟೈಗರ್ ನಾಗೇಶ್ವರ್ ರಾವ್ ಚಿತ್ರ ನಿರ್ಮಿಸಿದ್ದಾರೆ. ವಂಶಿ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ.

Exit mobile version