Site icon Vistara News

Actor Upendra: ಮಾತನಾಡುವಾಗ ʼಬುದ್ಧಿವಂತʼನ ಎಡವಟ್ಟು; ಉಪೇಂದ್ರ ಮೇಲೆ ಕೇಸ್‌ ಬಿತ್ತು! ದೂರಲ್ಲೇನಿದೆ?

Real Star Upendra

ಬೆಂಗಳೂರು: ನಟ, ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ (Actor Upendra) ಅವರು ವಿಡಿಯೊ ಲೈವ್‌ನಲ್ಲಿ ಮಾತನಾಡುವಾಗ ಗಾದೆ ಮಾತೊಂದನ್ನು ಉಲ್ಲೇಖಿಸಿ ದಲಿತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಆಕ್ರೋಶ ಕೇಳಿ ಬಂದಿದೆ. ಅಷ್ಟೇ ಅಲ್ಲದೇ ನಟ ಉಪೇಂದ್ರ (Real Star Upendra) ಮೇಲೆ ಎಫ್ ಐ ಆರ್ (FIR case On Upendra) ದಾಖಲು (Upendra Uses Derogatory Proverb) ಮಾಡಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂಧನ್ ಕೆ ಎಸ್ ಎಂಬುವವರಿಂದ ದೂರು ಸಲ್ಲಿಕೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದ್ದಂತೆ (updra contravercy) ನಟ ಉಪೇಂದ್ರ ಅವರು ಕ್ಷಮೆಯಾಚಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮದೂಸೂಧನ್ ದೂರು ನಿಡಿದ್ದೇನು?

“ನಟ ಉಪೇಂದ್ರ ಸಾಮಾಜಿಕ ಜಾಲತಾಣದ ಕಾರ್ಯಕ್ರಮದ ನೇರ ಪ್ರಸಾರದಲ್ಲಿ ʻಊರೆಂದರೆ ಹೊಲಗೇರಿ ಇರುತ್ತೆʼ ಎಂಬ ಪದ ಉಪಯೋಗಿಸಿ ಮಾತನಾಡಿದ್ದು, ಇದರಿಂದ ದಲಿತ ಸಮಾಜದಲ್ಲಿನ ಜಾತಿ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ನಟ ಉಪೇಂದ್ರ ಅವರ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಜೀವನದಲ್ಲಿ ಒಬ್ಬ ನಟನಾಗಿ ರಾಜ್ಯಾದ್ಯಂತ ಹೆಸರು ಮಾಡಿರುವ ಉಪೇಂದ್ರ ಎಲ್ಲರಿಗೂ ಮಾದರಿಯಾಗಿ ನಡೆದುಕೊಳ್ಳಬೇಕಾಗಿತ್ತು. ಈ ನಟನನ್ನು ಅನುಕರಣೆ ಮಾಡುವವರು ಸಹ ಇದನ್ನು ಮುಂದುವರಿಸಿದ್ದಲ್ಲಿ ಸಾರ್ವಜನಿಕ ಸ್ವಾಸ್ಥ್ಯ ಹಾಳಾಗುವ ಸಾಧ್ಯತೆ ಇರುತ್ತದೆʼʼ ಎಂದು ಸಿ ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲು ದೂರು ದಾಖಲಿಸಲಾಗಿದೆ.

ಇದನ್ನೂ ಓದಿ: Actor Upendra: ರಿಯಲ್‌ ಸ್ಟಾರ್‌ ಉಪೇಂದ್ರ ʻUI’ ಸಿನಿಮಾದಿಂದ ಬಿಗ್‌ ಅಪ್‌ಡೇಟ್‌!

ಕ್ಷಮೆ ಕೇಳಿದ ಉಪೇಂದ್ರ (Actor Upendra)

ಆಗಸ್ಟ್‌ 12ರಂದು ಉಪೇಂದ್ರ ಅವರು ತಮ್ಮ ಅಭಿಮಾನಿಗಳ ಜತೆ ಪ್ರಜಾಕೀಯ ಮುನ್ನೆಲೆಗೆ ಬಂದು 6 ವರ್ಷವಾದ ಪ್ರಯುಕ್ತ ಸಂವಾದ ನಡೆಸಿದ್ದರು. ಈ ವೇಳೆ ಮಾತಿನ ಭರದಲ್ಲಿ ʼಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ..ʼ ಎಂದು ಹೇಳಿದ್ದರು. ಇದೀಗ ಇದೇ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಲ್ಲದೆ, ಜಾತಿ ಜಗಳ ಬಿಟ್ಟು ಒಂದಾಗಬೇಕು ಎನ್ನುವ ಉಪೇಂದ್ರ ಈ ರೀತಿ ಹೇಳಿದ್ದು ಸರಿಯಲ್ಲ ಎಂದು ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: Kabzaa Movie: ಅಮೆಜಾನ್ ಪ್ರೈಮ್‌ನಲ್ಲಿ ಉಪೇಂದ್ರ, ಸುದೀಪ್, ಶಿವಣ್ಣ ಅಭಿನಯದ ಕಬ್ಜ ಸಿನಿಮಾ ಸ್ಟ್ರೀಮಿಂಗ್

ಉಪೇಂದ್ರ ಕ್ಷಮೆ

ಉಪೇಂದ್ರ ಪೋಸ್ಟ್‌ನಲ್ಲಿ ʻʻಫೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು, ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೊವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ.. ಮತ್ತು ಈ ಮಾತಿಗೆ ಕ್ಷಮೆಯಿರಲಿʼʼ ಎಂದು ಬರೆದುಕೊಂಡಿದ್ದಾರೆ.

Exit mobile version