ಬೆಂಗಳೂರು: ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ (Actor Ambareesh) ಅವರ ಸ್ಮಾರಕ ಹಾಗೂ ರೇಸ್ ಕೋರ್ಸ್ ರಸ್ತೆಗೆ ಅಂಬಿ ಹೆಸರು ಉದ್ಘಾಟನೆಗೆ ಕ್ಷಣಗಣನೆ ಆರಂಭಗೊಂಡಿದೆ. ಇಂದು ಸಂಜೆ (ಮಾರ್ಚ್ 27) 5:30ಕ್ಕೆ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ರಸ್ತೆ ಎಂದು ನಾಮಕರಣ ಆಗಲಿದೆ. ಮೊದಲಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರೇಸ್ ಕೋರ್ಸ್ ರಸ್ತೆಯನ್ನು ಉದ್ಘಾಟನೆ ಮಾಡಲಿದ್ದಾರೆ. ತದನಂತರ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ. ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್, ಬಸವರಾಜ್ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
12 ಕೋಟಿ ರೂ. ವೆಚ್ಚದಲ್ಲಿ ವಿಶೇಷ ವಿನ್ಯಾಸದಲ್ಲಿ ನಿರ್ಮಾಣವಾಗಿದೆ ಅಂಬಿ ಸ್ಮಾರಕ. ಸ್ಮಾರಕ ಬಳಿ 32 ಅಡಿಯ ಅಂಬರೀಶ್ ಪ್ರತಿಮೆ ಸಹ ಉದ್ಘಾಟನೆ ಆಗಲಿದೆ. ಒಂದು ಎಕರೆ 37 ಗುಂಟೆ ಜಾಗದಲ್ಲಿ ಅಂಬಿ ಸ್ಮಾರಕ ನಿರ್ಮಾಣವಾಗಿದೆ. ಅಂಬರೀಶ್ ಸ್ಮಾರಕ ಸುತ್ತ ಹಸಿರು ಗಿಡಗಳನ್ನು ನೆಡಲಾಗಿದೆ. ಸ್ಮಾರಕ ಮಾತ್ರವಲ್ಲ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ಇಡುವುದಾಗಿ ಈ ಹಿಂದೆ ಬೊಮ್ಮಾಯಿ ಘೋಷಿಸಿದ್ದರು.
ಇದನ್ನೂ ಓದಿ: Actor Ambareesh: ನಾಳೆ ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ ಜತೆಗೆ ರೇಸ್ ಕೋರ್ಸ್ ರಸ್ತೆಗೆ ಅಂಬಿ ಹೆಸರು
ಅದರಂತೆ ಸಂಜೆ 5 ಗಂಟೆಗೆ ಶಿವಾಜಿನಗರ ಕ್ಷೇತ್ರಕ್ಕೆ ಒಳಪಡುವ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತಿದೆ. ಈ ಸಮಾರಂಭವನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರೇ ಉದ್ಘಾಟಿಸಲಿದ್ದಾರೆ. ಕೆಲವೇ ತಿಂಗಳಲ್ಲಿ ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೂ ಸರಕಾರ ಮುಂದಾಗಲಿದೆಯಂತೆ.