Site icon Vistara News

Rishab Shetty: ರಿಷಬ್‌ ಶೆಟ್ಟಿ ಸಿನಿಮಾಗೆ 5 ವರ್ಷ; ಸ್ಪೆಷಲ್‌ ವಿಡಿಯೊ ಹಂಚಿಕೊಂಡ ಡಿವೈನ್‌ ಸ್ಟಾರ್‌!

sarakari hiriya prathamika shale cinema Poster

ಬೆಂಗಳೂರು: ʻಕಾಂತಾರʼ ಸಿನಿಮಾ ಮೂಲಕ ವಿಶ್ವಾದ್ಯಂತ ಖ್ಯಾತಿ ಪಡೆದ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ (Rishab Shetty) ಅವರ ‘ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡುʼ ಚಿತ್ರ (sarakari hiriya prathamika shale) ತೆರೆಗೆ ಬಂದು ಐದು ವರ್ಷಗಳು ಕಳೆದಿವೆ. ಆ ಬಗ್ಗೆ ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಗಡಿ ಭಾಗದಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ ಸಿಗುತ್ತಿಲ್ಲ ಎನ್ನುವ ಆರೋಪದ ಸಮಸ್ಯೆಗಳನ್ನು ಇಟ್ಟುಕೊಂಡು ರಿಷಬ್ ಶೆಟ್ಟಿ ಅವರು ‘ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡುʼ ಚಿತ್ರವನ್ನು ತೆರೆಗೆ ತಂದರು. ಅಷ್ಟೇ ಅಲ್ಲದೇ ಈ ಸಿನಿಮಾಗೆ ರಾಷ್ಟ್ರ ಪ್ರಶಸ್ತಿಯೂ ಬಂತು.

ರಿಷಬ್‌ ಶೆಟ್ಟಿ ಪೋಸ್ಟ್‌ನಲ್ಲಿ ʻʻಕನಸು ಕಂಡ ಭಾಷೆಯಲ್ಲಿ ಮಗುವಿಗೆ ಶಿಕ್ಷಣ ಸಿಗಬೇಕೆಂಬ ಆಶಯ, ಕನಸು ಕಂಡ ಕಥೆಯನ್ನು ಜಗಕ್ಕೆ ಹೇಳಬೇಕೆಂಬ ಆಕಾಂಕ್ಷೆ, ಇದೆರಡೂ ಒಂದಾಗಿ ಕನಸೊಂದು ಸಿನಿಮಾವಾಗಿ ತೆರೆ ಮೇಲೆ ಮೂಡಿದ ಆ ದಿನಕ್ಕಿಂದು ಐದು ವರ್ಷʼʼಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಆರಂಭದಲ್ಲಿ ಪೋಷಕ ಪಾತ್ರ ಮಾಡುತ್ತಿದ್ದ ಅವರು ನಂತರ ಹೀರೊ ಆದರು. ‘ರಿಕ್ಕಿ’ ಚಿತ್ರದಿಂದ ನಿರ್ದೇಶಕರಾದರು. ‘ಕಿರಿಕ್ ಪಾರ್ಟಿ’ ಅವರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿತು. 2018ರಲ್ಲಿ ರಿಲೀಸ್ ಆದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದ ಮೂಲಕ ನಿರ್ಮಾಪಕನಾಗಿ ದೊಡ್ಡ ಯಶಸ್ಸು ಕಂಡರು. ಇತ್ತೀಚೆಗೆ ರಿಲೀಸ್ ಆದ ‘ಕಾಂತಾರ’ ಸಿನಿಮಾ ರಿಷಬ್ ಖ್ಯಾತಿಯನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಕಾಸರಗೋಡು’ ಸಿನಿಮಾ ಮಾಡಿದಾಗಿನಿಂದಲೂ ರಿಷಬ್ ಶೆಟ್ಟಿಯವರು ಶಿಕ್ಷಣ ಕ್ಷೇತ್ರದಲ್ಲಿ ಕೈಲಾದ ಸೇವೆ ಮಾಡುತ್ತಲೇ ಇದ್ದಾರೆ. ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಆದರೆ ಅದ್ಯಾವುದೂ ಒಂದು ವ್ಯವಸ್ಥಿತ ರೀತಿಯಲ್ಲಿರಲಿಲ್ಲ. ಸಮಾಜ ಸೇವೆ ಅದರಲ್ಲಿಯೂ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ಕೊಡುವುದು ರಿಷಬ್​ಗೆ ಬಹಳ ಇಷ್ಟವಾಗುವ ಕೆಲಸ. ಈ ಬಗ್ಗೆ ರಿಷಬ್‌ ಅವರ ಜನುಮದಿನ ಪ್ರಗತಿ ಶೆಟ್ಟಿ ಹೇಳಿದ್ದು ಹೀಗೆ.

ಇದನ್ನೂ ಓದಿ: Rishab Shetty: ಮಗಳಿಗೆ ದೃಷ್ಟಿ ಬೀಳುತ್ತೆ ಶೆಟ್ರೆ ಅಂದ್ರು ಫ್ಯಾನ್ಸ್;‌ ರಾದ್ಯಾಳ ಕ್ಯೂಟ್‌ ಫೋಟೊಸ್‌ಗೆ ಮೆಚ್ಚುಗೆ!

ರಿಷಬ್‌ ಶೆಟ್ಟಿ ಪೋಸ್ಟ್‌

ʻʻನಾನು ರಿಷಬ್ ಬಹಳ ದಿನಗಳಿಂದ ಯೋಚಿಸುತ್ತಲೇ ಇದ್ದೆವು, ಟ್ರಸ್ಟ್ ಮಾಡಿ ಸಮಾಜಕ್ಕೆ ಉಪಯೋಗುವ ಕೆಲಸ ಮಾಡಬೇಕು ಎಂದು. ಹಾಗಾಗಿಯೇ ಯೋಚಿಸಿ ರಿಷಬ್ ಶೆಟ್ಟಿ ಫೌಂಡೇಶನ್ ಮಾಡಿದ್ದೇವೆ. ಇದಕ್ಕಿಂತಲೂ ಒಳ್ಳೆಯ ಉಡುಗೊರೆಯನ್ನು ರಿಷಬ್​ಗೆ ಕೊಡಲಾರೆ ಎನಿಸಿತು ಹಾಗಾಗಿ ಇದನ್ನು ಮಾಡಿದ್ದೇವೆ. ಮತ್ತು ಇದನ್ನು ಲಾಂಚ್ ಮಾಡಲು ಇದಕ್ಕಿಂತಲೂ ಒಳ್ಳೆಯ ದಿನವೂ ಸಿಗಲಾರದು. ನಮ್ಮ ಶಕ್ತಿ ಇದ್ದಷ್ಟು, ದೇವರು ಕೊಟ್ಟಷ್ಟು, ಸಮಾಜಕ್ಕೆ ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ನಮ್ಮ ಕೊಡುಗೆ ನೀಡುವ ಉದ್ದೇಶ ಹೊಂದಿದ್ದೇವೆʼʼಎಂದಿದ್ದರು ಪ್ರಗತಿ ಶೆಟ್ಟಿ.

ಪ್ರಿಕ್ವೆಲ್‌ ಆಗಿ ಬರಲಿದೆ ಕಾಂತಾರ 2

ಕಾಂತಾರ-1 ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಪೂರ್ವಭಾವಿ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ.

Exit mobile version