ಬೆಂಗಳೂರು; ‘ಕಾಂತಾರ’ ಸ್ಟಾರ್ ರಿಷಬ್ ಶೆಟ್ಟಿ ಇತ್ತೀಚೆಗೆ 9ನೇ ಸೇವಾ, ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ವೇಳೆ ಬೆಂಗಳೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಪ್ರಸಾರ ಮತ್ತು ಮಾಹಿತಿ ಸಚಿವಾಲಯವು ಆಯೋಜಿಸಿದ 9ನೇ ಸೇವಾ ಸುಶಾಸನ್ ಗರೀಬ್ ಕಲ್ಯಾಣ್ ರಾಷ್ಟ್ರೀಯ ಸಮಾವೇಶಕ್ಕೆ ಪ್ಯಾನಲಿಸ್ಟ್ ಆಗಿ ರಿಷಬ್ ಶೆಟ್ಟಿ (Rishab Shetty ) ಅವರನ್ನು ಆಹ್ವಾನಿಸಲಾಗಿತ್ತು. ಈ ವೇಳೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಟ ರಿಷಬ್ ಮಾತನಾಡಿ ʻʻಪ್ರೇಕ್ಷಕರನ್ನು ಸಮರ್ಥವಾಗಿ ತಲುಪುವುದು ಒಂದು ಸವಾಲಿನ ವಿಷಯ ನಮಗೆ ಸರ್ಕಾರದಿಂದ ಬೆಂಬಲ ದೊರೆಯುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಫಿಲ್ಮ ಸಿಟಿ ಸ್ಥಾಪಿಸುವುದು ಅಗತ್ಯ ಎಂದರುʼʼ ಎಂದರು.
ಘಟಿಕೋತ್ಸವದಲ್ಲಿ ಓಯೋ ರೂಮ್ಸ್ ಸಂಸ್ಥಾಪಕ ಮತ್ತು ಸಿಇಒ ರಿತೇಶ್ ಅಗರ್ವಾಲ್, ಸಂಗೀತಗಾರ ಅಮಾನ್ ಅಲಿ ಬಂಗಾರ್, ಮಾಜಿ ಹಾಕಿ ಆಟಗಾರ ವೀರೇನ್ ರಸ್ಕಿನ್ಹಾ ಸಿಎಎಕ್ಸ್‌ಪರ್ಟ್ ಸಹ-ಸಂಸ್ಥಾಪಕ ಯಶೋಧರ ಬಜೋರಿಯಾ ಮತ್ತು ಬಾಕ್ಸರ್ ಅಖಿಲ್ ಕುಮಾರ್ ಗರೀಬ್ ಕಲ್ಯಾಣ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
‘ಕೆರಾಡಿ ಸ್ಟುಡಿಯೋಸ್’ ಎಂಬ ಹೊಸ ವೇದಿಕೆ
ಸಿನಿಮಾಗಳ ಪ್ರಚಾರ ಹಾಗೂ ಅದಕ್ಕೆ ಸಂಬಂಧಿಸಿದ ಇತರ ಸೇವೆಗಳನ್ನು ನೀಡಲು ಹೊಸ ವೇದಿಕೆ ಕಟ್ಟಿದ್ದಾರೆ ರಿಷಬ್ ಶೆಟ್ಟಿ. ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬ ಆಶಯದೊಂದಿಗೆ ರಿಷಬ್ ಸೋಷಿಯಲ್ ಮೀಡಿಯಾ ಮೂಲಕ ಹೊಸ ಅಪ್‌ಡೇಟ್ ಹಂಚಿಕೊಂಡಿದ್ದರು.
ರಿಷಬ್ ಈ ಬಗ್ಗೆ ಪೋಸ್ಟ್ ಮಾಡಿ ʻʻಒಂದು ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ ತಂಡ ಹೊಸ ಹೆಜ್ಜೆ ಇರಿಸುತ್ತಿದೆ, ‘ಕೆರಾಡಿ ಸ್ಟುಡಿಯೋಸ್ (Kerady Studios) ಎಂಬ ವೇದಿಕೆಯ ಮೂಲಕ ಚಿತ್ರಗಳ ಮಾರ್ಕೆಟಿಂಗ್, ಪ್ರಚಾರ ಮತ್ತು ಇತರ ಸೇವೆಗಳನ್ನು ಪ್ರಾರಂಭಿಸದ್ದೇವೆ. ಇದು ಉತ್ತಮ ಚಿತ್ರಗಳು ಮತ್ತು ಪ್ರೇಕ್ಷಕರ ನಡುವೆ ಸೇತುವೆ ಆಗಬೇಕೆಂಬುದೇ ನಮ್ಮ ಆಶಯʼʼ ಎಂದು ವಿವರಿಸಿದ್ದರು.
ರಿಷಬ್ ಶೆಟ್ಟಿ ನಟನಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಆರಂಭದಲ್ಲಿ ಪೋಷಕ ಪಾತ್ರ ಮಾಡುತ್ತಿದ್ದ ಅವರು ನಂತರ ಹೀರೊ ಆದರು. ‘ರಿಕ್ಕಿ’ ಚಿತ್ರದಿಂದ ನಿರ್ದೇಶಕರಾದರು. ‘ಕಿರಿಕ್ ಪಾರ್ಟಿ’ ಅವರಿಗೆ ದೊಡ್ಡ ಯಶಸ್ಸು ತಂದುಕೊಟ್ಟಿತು. 2018ರಲ್ಲಿ ರಿಲೀಸ್ ಆದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದ ಮೂಲಕ ನಿರ್ಮಾಪಕನಾಗಿ ದೊಡ್ಡ ಯಶಸ್ಸು ಕಂಡರು. ಇತ್ತೀಚೆಗೆ ರಿಲೀಸ್ ಆದ ‘ಕಾಂತಾರ’ ಸಿನಿಮಾ ರಿಷಬ್ ಖ್ಯಾತಿಯನ್ನು ಜಾಗತಿಕ ಮಟ್ಟದಲ್ಲಿ ಹೆಚ್ಚಿಸಿದೆ.
ಇದನ್ನೂ ಓದಿ: Rishab Shetty : ಹೊಸ ಹೆಜ್ಜೆ, ಹೊಸ ಕನಸು, ಹೊಸ ಪ್ರಯತ್ನಕ್ಕೆ ಮುಂದಾದ ರಿಷಬ್ ಶೆಟ್ಟಿ; ಏನದು?
ಪ್ರಿಕ್ವೆಲ್ ಆಗಿ ಬರಲಿದೆ ಕಾಂತಾರ 2
ಕಾಂತಾರ-1 ಸಿಕ್ವೆಲ್ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಪೂರ್ವಭಾವಿ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್ ಖಚಿತಪಡಿಸಿದ್ದಾರೆ.