Rishab Shetty: ಜನುಮದಿನದ ಸಂಭ್ರಮದಲ್ಲಿ ಡಿವೈನ್‌ ಸ್ಟಾರ್‌; ರಿಷಬ್‌ ಶೆಟ್ಟಿ ಮೀಟ್‌ ಆಗ್ಬೇಕಾ? ಶೆಟ್ರ ಸ್ಪೆಷಲ್‌ ಡೇ ತಯಾರಿ ಹೇಗಿದೆ? - Vistara News

South Cinema

Rishab Shetty: ಜನುಮದಿನದ ಸಂಭ್ರಮದಲ್ಲಿ ಡಿವೈನ್‌ ಸ್ಟಾರ್‌; ರಿಷಬ್‌ ಶೆಟ್ಟಿ ಮೀಟ್‌ ಆಗ್ಬೇಕಾ? ಶೆಟ್ರ ಸ್ಪೆಷಲ್‌ ಡೇ ತಯಾರಿ ಹೇಗಿದೆ?

Rishab Shetty: ಸಾವಿರಾರು ಮಂದಿ ರಿಷಬ್ ಶೆಟ್ಟಿ ಹುಟ್ಟುಹಬ್ಬದಲ್ಲಿ ಭಾಗಿಯಾಗುವ ಸಾಧ್ಯತೆ ಇದ್ದು ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ನಂದಿನಿ ಲಿಂಕ್ ಮೈದಾನದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ.

VISTARANEWS.COM


on

Rishab Shetty Birthday which is on July 7
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಜುಲೈ 7ರಂದು ರಿಷಬ್‌ ಶೆಟ್ಟಿ (Rishab Shetty) ಅವರ ಜನುಮದಿನ. 40ನೇ ವಸಂತಕ್ಕೆ ರಿಷಬ್‌ ಕಾಲಿಟ್ಟಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್​ನಲ್ಲಿ ರಿಷಬ್ ಶೆಟ್ಟಿ ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ. ಇದಕ್ಕಾಗಿ ಸಕಲ ತಯಾರಿಗಳೂ ನಡೆದಿವೆ. ಅಷ್ಟೇ ಅಲ್ಲದೇ ಈ ದಿನ ರಿಷಬ್‌ ಹೊಸ ಸಿನಿಮಾದ ಅಪ್‌ಡೇಟ್‌ ಹಂಚಿಕೊಳ್ಳುತ್ತಾರಾ ಎಂದು ಅವರ ಅಭಿಮಾನಿಗಳು ಕಾದಿದ್ದಾರೆ.

ಸಣ್ಣ ಪುಟ್ಟ ಪಾತ್ರಗಳನ್ನು ಮಾಡುತ್ತ ಚಿತ್ರರಂಗದಲ್ಲಿ ಅವಕಾಶಕ್ಕಾಗಿ ಕಾಯುತ್ತಿದ್ದರು. ನಟನೆಯ ಜತೆ ಡೈರೆಕ್ಷನ್ ಕೂಡ ಆಸಕ್ತಿಯಿದ್ದ ಕಾರಣ, 2016ರಲ್ಲಿ ಅವರು ‘ರಿಕ್ಕಿ’ ಸಿನಿಮಾ ನಿರ್ದೇಶನ ಮಾಡಿದರು. ಅದೇ ವರ್ಷ ರಿಲೀಸ್ ಆದ ರಿಷಬ್ ನಿರ್ದೇಶನದ ‘ಕಿರಿಕ್ ಪಾರ್ಟಿ’ ಸಿನಿಮಾ ಸೂಪರ್ ಹಿಟ್ ಆಯಿತು.

ಅಭಿಮಾನಿಗಳನ್ನು ಭೇಟಿಯಾಗಲಿದ್ದಾರೆ ಡಿವೈನ್‌ ಸ್ಟಾರ್‌

ನಗರದ ನಂದಿ ಲಿಂಕ್ಸ್ ಗ್ರೌಂಡ್​ನಲ್ಲಿ ಅವರ ಜನುಮದಿನ ಕಾರ್ಯಕ್ರಮ ಆಯೋಜಿಸಲಾಗಿದ್ದು ಲಕ್ಷಾಂತರ ಅಭಿಮಾನಿಗಳು ಅವರಿಗೆ ಅಂದು ಶುಭಾಶಯ ಕೋರಲಿದ್ದಾರೆ. ಈ ಹಿಂದೆ ತಮ್ಮ ಜನುಮ ದಿನದ ಸಂಭ್ರಮದ ಕುರಿತು ಅವರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಂಡಿದ್ದರು. ಅದರಲ್ಲಿ ತಮ್ಮ ಅಭಿಮಾನಿಗಳೆಲ್ಲರಿಗೂ ಸ್ವಾಗತ ಕೋರಿದ್ದರು. ʻʻಕೆರಾಡಿ ಎಂಬ ಊರಲ್ಲಿ ಹುಟ್ಟಿ ಸಿನಿಮಾದ ಕನಸು ಕಂಡಿರುವ ನನ್ನ ಮೇಲೆ ಅಪಾರ ಪ್ರೀತಿ ತೋರಿಸಿದ್ದೀರಿ. ಕಾಂತಾರ ಬಿಡುಗಡೆಗೊಂಡ ಬಳಿಕ ನನ್ನನ್ನು ಭೇಟಿಯಾಗಲು ನನ್ನ ಮನೆ ಬಳಿಗೆ ಬಂದ್ದೀರಿ. ನಾನು ಹೋದಲ್ಲೆಲ್ಲ ನನ್ನನ್ನು ಮಾತನಾಡಿಸಲೆಂದು ಕಾದಿದ್ದೀರಿ. ನಿಮ್ಮನ್ನು ಭೇಟಿಯಾಗುವ ಸಮಯ ಬಂದಿದೆ. ಇದೇ ಜುಲೈ 7ರಂದು ಬೆಂಗಳೂರಿನ ನಂದಿ ಲಿಂಕ್ ಗ್ರೌಂಡ್​ನಲ್ಲಿ ನನ್ನ ಬರ್ತ್​ಡೇ ಕಾರ್ಯಕ್ರಮ ಆಯೋಜಿಸಿದ್ದೇನೆ. ಸಂಜೆ ಮೂರು ಗಂಟೆಗೆ ಬನ್ನಿ. ಪರಸ್ಪರ ಭೇಟಿಯಾಗೋಣ ಎಂದುʼʼ ಅವರು ವಿಡಿಯೊದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Rishab Shetty : ಜುಲೈ 7ರಂದು ಅಭಿಮಾನಿಗಳ ಜತೆ ಜನುಮದಿನ ಆಚರಿಸಲಿದ್ದಾರೆ ಡಿವೈನ್​ ಸ್ಟಾರ್​

ಹೇಗಿದೆ ತಯಾರಿ?

ಕಾರ್ಯಕ್ರಮ ಆಯೋಜನೆಯ ಮುಂದಾಳತ್ವವವನ್ನು ರಿಷಬ್​ ಶೆಟ್ಟಿಯ ಆತ್ಮೀಯ ಗೆಳೆಯ ಪ್ರಮೋದ್ ಶೆಟ್ಟಿ ವಹಿಸಿಕೊಂಡಿದ್ದು, ರಿಷಬ್ ಹುಟ್ಟುಹಬ್ಬದ ಪ್ರಯುಕ್ತ ವಿಶೇಷ ಕಾರ್ಯಗಳ ಜತೆಗೆ ಬಂದವರಿಗೆ ಊಟದ ವ್ಯವಸ್ಥೆಯನ್ನು ಸಹ ಮಾಡಿಸಲಾಗಿದೆ. ಸಾವಿರಾರು ಮಂದಿ ರಿಷಬ್ ಶೆಟ್ಟಿ ಹುಟ್ಟುಹಬ್ಬದಲ್ಲಿ ಭಾಗಿಯಾಗುವ ಸಾಧ್ಯತೆ ಇದ್ದು ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ನಂದಿನಿ ಲಿಂಕ್ ಮೈದಾನದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ.

ಕುಂದಾರಪುರದ ಕೆರಾಡಿ ಗ್ರಾಮದಲ್ಲಿ 1983ರಲ್ಲಿ ರಿಷಬ್​ ಶೆಟ್ಟಿ ಜನಿಸಿದ್ದಾರೆ. ಬಾಲ್ಯದಿಂದಲೇ ಸಿನಿಮಾ ಆಸಕ್ತಿ ಬೆಳೆಸಿಕೊಂಡಿದ್ದ ಅವರು ಕನ್ನಡದ ಸಿನಿಮಾ ದಿಗ್ಗಜರ ಚಲನಚಿತ್ರಗಳನ್ನು ನೋಡಿದ್ದರು. ಸಿನಿಮಾಕ್ಕಾಗಿಯೇ ಬೆಂಗಳೂರಿಗೆ ಬಂದಿದ್ದ ಅವರು ತಮ್ಮ ಸಾಧನೆಗಾಗಿ ನಾನಾ ಕೆಲಸಗಳನ್ನು ಮಾಡಿದ್ದರು. ಆರಂಭದಲ್ಲಿ ಸಾಕಷ್ಟು ನಿರಾಸೆ ಎದುರಿಸಿದ್ದ ಅವರು ಸಣ್ಣ ಪುಟ್ಟ ಪಾತ್ರಗಳಿಗೆ ತೃಪ್ತಿಪಡಬೇಕಾಗಿತ್ತು. ರಿಕ್ಕಿ ಸಿನಿಮಾ ಮಾಡಿ ಗುರುತಿಸಿಕೊಂಡಿದ್ದರೂ ಖ್ಯಾತಿ ಗಳಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ʻಉಳಿದವರು ಕಂಡಂತೆʼ ಸಿನಿಮಾ ಮೂಲಕ ಅವರು ಹೆಚ್ಚು ಮಂದಿಗೆ ಪರಿಚಿತರಾದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾ ಮೂಲಕ ಅವರು ಸಿನಿಮಾ ಕ್ಷೇತ್ರದಲ್ಲಿ ಹೆಸರು ಮಾಡಿದರು. ʻಬೆಲ್​ಬಾಟಂʼ ಸಿನಿಮಾದ ಮೂಲಕ ನಟನೆಗೂ ಸೈ ಎನಿಸಿಕೊಂಡರು.

ಇದನ್ನೂ ಓದಿ: Rishab Shetty : ಆಗಸ್ಟ್‌ನಲ್ಲಿ ಸಿಹಿ ಸುದ್ದಿ ಕೊಡಲಿದ್ಯಾ ಕಾಂತಾರ-2? ರಿಷಬ್‌ ಶೆಟ್ಟಿ ಕುರಿತ ಹೊಸ ಅಪ್‌ಡೇಟ್‌

ಬದುಕು ಬದಲಿಸಿದ ಕಾಂತಾರ

ತಾವು ಹುಟ್ಟಿದ ಮಣ್ಣಿನ ಕತೆಯೊಂದನ್ನು ಹುಡುಕಿ ತೆಗೆದು ಕಾಂತಾರ ಸಿನಿಮಾ ಮಾಡಿದ ಬಳಿಕ ಅವರ ಪೂರ್ಣ ಸಾಮರ್ಥ್ಯ ಜಗತ್ತಿಗೆ ಪರಿಚಯವಾಯಿತು. ಸಿನಿಮಾ ಬ್ಲಾಕ್​ಬಸ್ಟರ್​ ಹಿಟ್​ ಆಗುವ ಮೂಲಕ ರಿಷಬ್​ ಶೆಟ್ಟಿ ಎಂಬ ಕೆರಾಡಿ ಪ್ರತಿಭೆ ಜಗದ್ವಿಖ್ಯಾತಿ ಪಡೆಯಿತು. ಬಳಿಕ ಡಿವೈನ್​ ಸ್ಟಾರ್​ ಎಂಬ ಹೆಸರಿನಿಂದ ಕರೆಸಿಕೊಳ್ಳುತ್ತಿರುವ ಅವರು ಕಾಂತಾರ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಅವರೀಗ ಎಲ್ಲೇ ಹೋದರೂ ಅಭಿಮಾನಿಗಳು ಅವರನ್ನು ಸುತ್ತುವರಿಯುತ್ತಾರೆ. ಆದರೆ ಪ್ರತಿ ಬಾರಿಯೂ ಅವರನ್ನು ಭೇಟಿಯಾಗಲು ಅವರಿಗೆ ಸಾಧ್ಯವಾಗುವುದಿಲ್ಲ. ಹೀಗಾಗಿ ಜನುಮದಿನದಂದು ಅವರೆಲ್ಲರ ಹಾರೈಕೆಗಳನ್ನು ಪಡೆಯಲು ಮುಂದಾಗಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Pushpa 2: ಪದವಿ ಪ್ರದಾನ ವೇಳೆ ‘ಪುಷ್ಪ 2’ ಹುಕ್ ಸ್ಟೆಪ್ ಹಾಕಿದ ವಿದ್ಯಾರ್ಥಿ: ವಿಡಿಯೊ ವೈರಲ್‌

Pushpa 2: ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ.

VISTARANEWS.COM


on

Pushpa 2 Allu Arjun fan recreates hook step on graduation day
Koo

ಬೆಂಗಳೂರು: ಟೀಸರ್ ಮೂಲಕ ನಿರೀಕ್ಷೆ ದುಪ್ಪಟ್ಟು ಮಾಡಿರುವ ʻಪುಷ್ಪ 2ʼ (Pushpa 2) ಸಿನಿಮಾದ ಮೊದಲ ಹಾಡು ಕಾರ್ಮಿಕರ ದಿನದ ಅಂಗವಾಗಿ ಬಿಡುಗಡೆ ಮಾಡಲಾಗಿತ್ತು. ‘ಪುಷ್ಪ 2’ ಚಿತ್ರದ ಮೊದಲ ಸಿಂಗಲ್ ‘ಪುಷ್ಪ ಪುಷ್ಪ’ ಬಿಡುಗಡೆ ಆದ ತಕ್ಷಣದಿಂದಲೇ ಟ್ರೆಂಡ್‌ ಆಗಿತ್ತು. ಅಲ್ಲು ಅರ್ಜುನ್‌ ಅವರ ಸ್ಟೈಲಿಶ್ ಸ್ಟೆಪ್ಸ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದರು. ಇದೀಗ ಈ ಸ್ಟೆಪ್ಸ್‌ವನ್ನು ಪದವಿ ವಿದ್ಯಾರ್ಥಿವೊಬ್ಬ ಪದವಿ ಪ್ರದಾನ ಮಾಡುವ ದಿನ ವೇದಿಕೆಯಲ್ಲಿ ‘ಪುಷ್ಪ ಪುಷ್ಪ’ ಸಾಂಗ್‌ ಸ್ಟೆಪ್ಸ್‌ ಹಾಕಿದ್ದಾನೆ. ವೇದಿಕೆ ಮೇಲೆ ಡ್ಯಾನ್ಸ್ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಪದವಿ ಪ್ರದಾನ ವೇಳೆ ವಿದ್ಯಾರ್ಥಿ ಹಾಕಿದ ಸ್ಟೆಪ್ಸ್‌ ಕಂಡು ಉಳಿದ ವಿದ್ಯಾರ್ಥಿಗಳು ಶಿಳ್ಳೆ ಹೊಡದಿರುವುದು ಕಾಣಬಹುದು. ಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ಒದಗಿಸಿದ್ದಾರೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು, ನಕಾಶ್ ಅಜೀಜ್, ದೀಪಕ್ ಬ್ಲೂ ಧ್ವನಿಯಾಗಿದ್ದಾರೆ. ಕನ್ನಡ ಹಾಡಿಗೆ ವರದರಾಜು ಚಿಕ್ಕಬಳ್ಳಾಪುರ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ. ಪುಷ್ಪನಿಗೆ ಸುಕುಮಾರ್ ಆಕ್ಷನ್ ಕಟ್ ಹೇಳಿದ್ದು, ಅಲ್ಲು ಅರ್ಜುನ್ ಜಭರ್ದಸ್ತ್ ಆಗಿ ಕುಣಿದು ಕುಪ್ಪಳಿಸಿದ್ದಾರೆ. ಅಲ್ಲು ಹೊಸ ಸ್ಟೈಲ್ ತಗ್ಗೋದೇ ಇಲ್ಲ ಎಂಬ ಡೈಲಾಗ್ ಫ್ಯಾನ್ಸ್ ಗೆ ಕಿಕ್ ಕೊಡ್ತಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್ ನಲ್ಲಿ ಚಿತ್ರ ನಿರ್ಮಾಣ ಮಾಡಿದೆ.

ಇದನ್ನೂ ಓದಿ: Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

ಇದು ಪ್ಯಾನ್​ ಇಂಡಿಯಾ ಸಿನಿಮಾ. ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳ, ಬೆಂಗಾಲಿ ಭಾಷೆಗಳಲ್ಲಿ ‘ಪುಷ್ಪ 2’ ಬಿಡುಗಡೆ ಆಗಲಿದೆ. ಈಗ ಈ ಎಲ್ಲ ಭಾಷೆಗಳಲ್ಲೂ ‘ಪುಷ್ಪ ಪುಷ್ಪ..’ ಹಾಡನ್ನು ಬಿಡುಗಡೆ ಮಾಡಲಾಗಿದೆ. ಆಸ್ಕರ್​ ಪ್ರಶಸ್ತಿ ಪುರಸ್ಕೃತ ಚಂದ್ರಬೋಸ್​ ಅವರು ತೆಲುಗಿನಲ್ಲಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಕನ್ನಡ ವರ್ಷನ್​ಗೆ ವರದರಾಜ್​ ಚಿಕ್ಕಬಳ್ಳಾಪುರ ಅವರ ಸಾಹಿತ್ಯವಿದೆ. ಅಲ್ಲು ಅರ್ಜುನ್ ಗೆ ಜೊತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್ , ಡಾಲಿ ಧನಂಜಯ್ ಸೇರಿದಂತೆ ಹಲವರು ತಾರಾ ಬಳಗದಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಾತ್ರವಲ್ಲದೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಪುಷ್ಪ 2: ದಿ ರೂಲ್ ಆಗಸ್ಟ್ 15 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ತೆಲುಗಿನ ಜತೆ ಕನ್ನಡ, ತಮಿಳು, ಹಿಂದಿ ಮುಂತಾದ ಭಾಷೆಗಳಲ್ಲೂ ಹಾಡುಗಳು ಸಿದ್ಧವಾಗುತ್ತಿವೆ. ಈ ಎಲ್ಲ ಭಾಷೆಯ ಆಡಿಯೊ ಹಕ್ಕುಗಳನ್ನು ಟಿ-ಸಿರೀಸ್​ ಸಂಸ್ಥೆ ಪಡೆದುಕೊಂಡಿದೆ. ದೇವಿ ಶ್ರೀ ಪ್ರಸಾದ್​ ಅವರು ‘ಪುಷ್ಪ 2’ ಸಿನಿಮಾಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. 2021ರಲ್ಲಿ ಬಿಡುಗಡೆ ಆದ ‘ಪುಷ್ಪ 1’ ಸಿನಿಮಾದ ಎಲ್ಲ ಹಾಡುಗಳು ಸೂಪರ್​ ಹಿಟ್​ ಆಗಿದ್ದವು.

ಇದನ್ನೂ ಓದಿ: Pushpa 2: ಬರೋಬ್ಬರಿ 60 ಕೋಟಿ ರೂ.ಗೆ ‘ಪುಷ್ಪ 2’ ಆಡಿಯೊ ಹಕ್ಕು ಮಾರಾಟ?

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಟಾಲಿವುಡ್

Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

Lok Sabha Elections 2024: ಅಲ್ಲು ಅರ್ಜುನ್ ಮತದಾನ ಮಾಡಲು ಒಬ್ಬರೇ ಆಗಮಿಸಿದರೆ, ಜ್ಯೂನಿಯರ್‌ ಎನ್‌ಟಿಆರ್‌ ಅವರ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಅವರ ತಾಯಿ ಶಾಲಿನಿ ನಂದಮೂರಿ ಜತೆಗಿದ್ದರು. ಜತೆಗೆ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖಾ ಮತ್ತು ಪುತ್ರಿ ಸುಶ್ಮಿತಾ ಅವರೊಂದಿಗೆ ಮತ ಚಲಾಯಿಸಲು ಆಗಮಿಸಿದ್ದರು.ಬಾಹುಬಲಿ ನಿರ್ದೇಶಕ ರಾಜಮೌಳಿ ಅವರು ವೋಟ್ ಮಾಡಿದ್ದಾರೆ.

VISTARANEWS.COM


on

Lok Sabha Elections 2024 Jr NTR, Allu Arjun, Chiranjeevi cast votes
Koo

ಹೈದರಾಬಾದ್‌: ಲೋಕಸಭೆಗೆ ಇಂದು 4ನೇ ಹಂತದ ಮತದಾನ ನಡೆಯಲಿದೆ. ಎರಡು ತೆಲುಗು ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಒಟ್ಟು 9 ರಾಜ್ಯಗಳು, 1 ಕೇಂದ್ರಾಡಳಿತ ಪ್ರದೇಶದ 96 ಸ್ಥಾನಗಳಿಗೆ ಮತದಾನ ನಡೆಯಲಿದೆ. ನಟ ಅಲ್ಲು ಅರ್ಜುನ್ (Allu Arjun) ಮತ್ತು ನಟ ಜ್ಯೂನಿಯರ್‌ ಎನ್‌ಟಿಆರ್‌ ( NTR Jr), ಇಂದು (ಮೇ.13) ಬೆಳಗ್ಗೆ ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ತೆಲಂಗಾಣದಲ್ಲಿ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭಗೊಂಡಿದ್ದು, ಜುಬಿಲಿ ಹಿಲ್ಸ್‌ನಲ್ಲಿ ಮೊದಲ ಮತದಾರರ ಗುಂಪಿನಲ್ಲಿ ಇಬ್ಬರು ಸೇರಿದ್ದಾರೆ. ಜತೆಗೆ ಮೆಗಾಸ್ಟಾರ್ ಚಿರಂಜೀವಿ ಪತ್ನಿ ಸುರೇಖಾ ಮತ್ತು ಪುತ್ರಿ ಸುಶ್ಮಿತಾ ಅವರೊಂದಿಗೆ ಮತ ಚಲಾಯಿಸಲು ಆಗಮಿಸಿದ್ದರು.

‘ಪುಷ್ಪಾ’ ಸ್ಟಾರ್ ಅಲ್ಲು ಅರ್ಜುನ್ ಬಿಳಿ ಟೀ ಶರ್ಟ್ ಮತ್ತು ಕಪ್ಪು ಜೀನ್ಸ್‌ನಲ್ಲಿ ಕಾಣಿಸಿಕೊಂಡರೆ, ಆರ್‌ಆರ್‌ಆರ್ ಸ್ಟಾರ್ ಜ್ಯೂನಿಯರ್‌ ಎನ್‌ಟಿಆರ್‌ ನೀಲಿ ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಕಂಡು ಬಂದರು.

ಅಲ್ಲು ಅರ್ಜುನ್ ಮತದಾನ ಮಾಡಲು ಒಬ್ಬರೇ ಆಗಮಿಸಿದರೆ, ಜ್ಯೂನಿಯರ್‌ ಎನ್‌ಟಿಆರ್‌ ಅವರ ಪತ್ನಿ ಲಕ್ಷ್ಮಿ ಪ್ರಣತಿ ಮತ್ತು ಅವರ ತಾಯಿ ಶಾಲಿನಿ ನಂದಮೂರಿ ಜತೆಗಿದ್ದರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತಮ್ಮ ಮತಗಟ್ಟೆಗಳಲ್ಲಿ ಇಬ್ಬರು ನಟರು ಸರದಿಯಲ್ಲಿ ನಿಂತಿರುವ ವೀಡಿಯೊಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಬಾಹುಬಲಿ ನಿರ್ದೇಶಕ ರಾಜಮೌಳಿ ಅವರು ವೋಟ್ ಮಾಡಿದ್ದಾರೆ. ದೇಶಕ್ಕೆ ನಾವು ಜವಾಬ್ದಾರಿಯುಳ್ಳವರು, ನಾವು ಕೇರ್ ಮಾಡುತ್ತೇವೆ ಎನ್ನುವುದನ್ನು ತೋರಿಸಿ. ಬಂದು ವೋಟ್ ಮಾಡಿ ಎಂದು ಅವರು ವೋಟ್ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮತದಾನಕ್ಕೆ ಕರೆ ಕೊಟ್ಟರು. ತ್ರಿಬಲ್ ಆರ್ ಸ್ಟಾರ್ ಸಂಗೀತ ನಿರ್ದೇಶಕ ಕೀರವಾಣಿ ಅವರೂ ಕೂಡಾ ವೋಟ್ ಮಾಡಿದ್ದಾರೆ. ಅವರು ವೋಟ್ ಮಾಡಿ ಬಂದು ಮನೆಯತ್ತ ಹೋಗುವುದು ಕಂಡುಬಂದಿದೆ.

ಇದನ್ನೂ ಓದಿ: Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

ಮತ ಚಲಾಯಿಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅಲ್ಲು ಅರ್ಜುನ್, ʻನಾನು ಯಾವುದೇ ಪಕ್ಷಕ್ಕೆ ಸೇರಿಲ್ಲʼ ಎಂದು ಸ್ಪಷ್ಟಪಡಿಸಿದರು. “ದಯವಿಟ್ಟು ನಿಮ್ಮ ಮತಗಳನ್ನು ಚಲಾಯಿಸಿ. ಇದು ಅತ್ಯಂತ ಜವಾಬ್ದಾರಿಯುತ ದಿನ” ಎಂದು ಅವರು ಹೇಳಿದರು. ʻʻನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ, ನನಗೆ ಆತ್ಮೀಯರಾಗಿರುವ ಎಲ್ಲರಿಗೂ ಬೆಂಬಲ ನೀಡುತ್ತೇನೆ. ನನ್ನ ಚಿಕ್ಕಪ್ಪ, ನನ್ನ ಸ್ನೇಹಿತ, ನನ್ನ ಮಾವ ಎಲ್ಲರೂ ರಾಜಕೀಯದಲ್ಲಿದ್ದಾರೆʼʼಎಂದರು.

ಯಾವ ರಾಜ್ಯಗಳ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ನಾಲ್ಕನೇ ಹಂತದಲ್ಲಿ ಆಂಧ್ರಪ್ರದೇಶದ 25, ಬಿಹಾರ 5, ಜಮ್ಮು-ಕಾಶ್ಮೀರ 1, ಜಾರ್ಖಂಡ್ 4, ಮಧ್ಯಪ್ರದೇಶ 8, ಮಹಾರಾಷ್ಟ್ರ 11, ಒಡಿಶಾ 4, ತೆಲಂಗಾಣ 17, ಉತ್ತರ ಪ್ರದೇಶ 13 ಹಾಗೂ ಪಶ್ಚಿಮ ಬಂಗಾಳದ 8 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 13 ರಂದು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಆಂಧ್ರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ

ಆಂಧ್ರಪ್ರದೇಶದಲ್ಲಿ ಸೋಮವಾರ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಆಂಧ್ರಪ್ರದೇಶದ 175 ವಿಧಾನಸಭೆ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಸತತ ಎರಡನೇ ಬಾರಿಗೆ ಸಿಎಂ ಗಾದಿಗೇರಲು ವೈ.ಎಸ್.‌ ಜಗನ್‌ಮೋಹನ್‌ ರೆಡ್ಡಿ ಇನ್ನಿಲ್ಲದ ಪ್ರಯತ್ನ ನಡೆಸಿದ್ದಾರೆ. ಮತ್ತೆ ಅಧಿಕಾರಕ್ಕೇರಲು ಟಿಡಿಪಿಯೂ ಸಜ್ಜಾಗಿದ್ದು, ಚುನಾವಣೆ ರಣಕಣವು ತೀವ್ರ ಜಿದ್ದಾಜಿದ್ದಿನಿಂದ ಕೂಡಿದೆ.ಹಿಂದಿನ ಮೂರು ಹಂತದ ಚುನಾವಣೆಗಳಲ್ಲಿ 2019ರ ಸಾರ್ವತ್ರಿಕ ಚುನಾವಣೆಗಿಂತ ಕಡಿಮೆ ಮತದಾನವಾಗಿದೆ.

ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು

ಮೊಹುವಾ ಮೊಯಿತ್ರಾ: ಕೃಷ್ಣನಗರ ಕ್ಷೇತ್ರ
ಪಶ್ಚಿಮ ಬಂಗಾಳದ ಕೃಷ್ಣನಗರದಿಂದ ಸ್ಪರ್ಧೆ. ಟಿಎಂಸಿ ಅಭ್ಯರ್ಥಿ. ಸಂಸತ್ ನಲ್ಲಿ ಪ್ರಶ್ನೆಗಾಗಿ ಹಣ ಆರೋಪ ಹೊತ್ತಿರುವ ಸಂಸದೆ.

ಅಮೃತ ರಾಯ್: ಕೃಷ್ಣನಗರ ಕ್ಷೇತ್ರ
ಪಶ್ಚಿಮಬಂಗಾಳದ ಕೃಷ್ಣನಗರದ ಬಿಜೆಪಿ ಅಭ್ಯರ್ಥಿ. ರಾಜ ವಂಶಸ್ಥೆ, ಮೊಹುವಾ ಮೊಯಿತ್ರಾ ವಿರುದ್ಧ ಸ್ಪರ್ಧೆ.

ಅಧಿರ್ ರಂಜನ್ ಚೌಧರಿ : ಬೆಹರಾಮಪುರ್ ಕ್ಷೇತ್ರ
ಪಶ್ಚಿಮ ಬಂಗಾಳದ ಬೆಹರಾಂಪುರ ಕ್ಷೇತ್ರದಿಂದ ಸ್ಪರ್ಧೆ. ಕಾಂಗ್ರೆಸ್ ಅಭ್ಯರ್ಥಿ

ಯೂಸುಫ್ ಪಠಾಣ್ : ಬೆಹರಾಮಪುರ್ ಕ್ಷೇತ್ರ
ಮಾಜಿ ಕ್ರಿಕೆಟಿಗ ಯೂಸುಫ್ ಬೆಹರಾಂಪುರ ಕ್ಷೇತ್ರದಿಂದ ಟಿ ಎಂ ಸಿ ಅಭ್ಯರ್ಥಿ. ಅಧಿರ್ ರಂಜನ್ ಚೌಧರಿ ವಿರುದ್ಧ ಸ್ಪರ್ಧೆ

ಅಖಿಲೇಶ್ ಯಾದವ್: ಕನೌಜ್ ಕ್ಷೇತ್ರ
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರ ಪ್ರದೇಶದ ಕನೌಜ್ ಕ್ಷೇತ್ರದಿಂದ ಸ್ಪರ್ಧೆ. ಈ ಕ್ಷೇತ್ರದಲ್ಲಿ ಸದ್ಯ ಬಿಜೆಪಿಯಿಂದ ಸುಬ್ರತಾ ಪಾಠಕ್ ಸಂಸದರಾಗಿದ್ದಾರೆ. 2019 ರ ಚುನಾವಣೆಯಲ್ಲಿ ಯಾದವ್, ಪತ್ನಿ ಡಿಂಪಲ್ ಅವರನ್ನು ಸೋಲಿಸುವ ಮೂಲಕ ಪಾಠಕ್ ಗೆಲುವು ಸಾಧಿಸಿದ್ದರು

ಗಿರಿರಾಜ್ ಸಿಂಗ್: ಬೇಗುಸರಾಯ್‌ ಕ್ಷೇತ್ರ
ಬಿಹಾರದ ಬೇಗುಸರಾಯ್‌ ಕ್ಷೇತ್ರದಿಂದ ಸ್ಪರ್ಧೆ. ಬಿಜೆಪಿಯ ಉಸ್ತುವಾರಿ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್. 2019ರ ಚುನಾವಣೆಯಲ್ಲಿ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯಾ ಕುಮಾರ್ ವಿರುದ್ಧ ಸಿಂಗ್ ವಿಜಯಶಾಲಿಯಾಗಿದ್ದರು

ವೈ.ಎಸ್. ಶರ್ಮಿಳಾ: ಕಡಪ ಕ್ಷೇತ್ರ
ಆಂಧ್ರದ ಮಾಜಿ ಸಿಎಂ ವೈಎಸ್ಆರ್ ಅವರ ಪುತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ, ತಮ್ಮ ಸೋದರ ಸಂಬಂಧಿ, ಎರಡು ಬಾರಿ ಹಾಲಿ ಸಂಸದ ವೈಎಸ್ ಅವಿನಾಶ್ ರೆಡ್ಡಿ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಶರ್ಮಿಳಾ ಸಹೋದರ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ಅಸಾದುದ್ದೀನ್ ಓವೈಸಿ: ಹೈದರಾಬಾದ್
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಈ ಕ್ಷೇತ್ರದಿಂದ ಸ್ಪರ್ಧೆ

ಮಾಧವಿ ಲತಾ: ಹೈದರಾಬಾದ್
ಅಸಾದುದ್ದೀನ್ ಓವೈಸಿ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿ. ಹಿಂದುತ್ವದ ಫೈರ್ ಬ್ರಾಂಡ್ ಎಂದೇ ಖ್ಯಾತಿ ಪಡೆದಿರುವ ಮಾಧವಿ ಲತಾ‌

ಅರ್ಜುನ್ ಮುಂಡ : ಖುಂತಿ ಕ್ಷೇತ್ರ
ಮೂರು ಬಾರಿ ಜಾರ್ಖಂಡ್‌ನಲ್ಲಿ ಮುಖ್ಯಮಂತ್ರಿ ಹಾಗೂ ಕೇಂದ್ರದಲ್ಲಿ ಪ್ರಸ್ತುತ ಸಚಿವರಾಗಿ ಕಾರ್ಯ ನಿರ್ವಹಿಸಿತ್ತಿರುವ ಅರ್ಜುನ್ ಮುಂಡ ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಬಂಡಿ ಸಂಜಯ್ ಕುಮಾರ್: ಕರೀಂನಗರ ಕ್ಷೇತ್ರ
ಮಾಜಿ ಬಿಜೆಪಿ ರಾಜ್ಯಧ್ಯಕ್ಷ ಹಾಗೂ ಹಾಲಿ ಸಂಸದ ಬಂಡಿ ಸಂಜಯ್ ಕುಮಾರ್ ಕರೀಂನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಶತ್ರುಘ್ನ ಸಿನ್ಹಾ: ಅಸನ್ಸೋಲ್ ಕ್ಷೇತ್ರ
ಪಶ್ಚಿಮ ಬಂಗಾಳ ಅಸನ್ನೋಲ್ ಕ್ಷೇತ್ರದಿಂದ ಬಾಲಿವುಡ್ ನಟ ಹಾಗೂ ರಾಜಕಾರಣಿ, ಬಿಹಾರ್ ಬಾಬು ಎಂದೇ ಪ್ರಸಿದ್ದಿಯಾಗಿರುವ ಶತ್ರುಘ್ನ ಸಿನ್ಹಾ ಸ್ಪರ್ಧೆ. ಟಿ ಎಂ ಸಿ ಪಕ್ಷದ ಅಭ್ಯರ್ಥಿ

ಕಿಶನ್ ರೆಡ್ಡಿ : ಸಿಕಂದರಾಬಾದ್ ಕ್ಷೇತ್ರ
ಪ್ರಸ್ತುತ ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಸ್ಪರ್ಧೆಸುತ್ತಿರುವ ಕ್ಷೇತ್ರ

Continue Reading

ಮಾಲಿವುಡ್

Turbo Trailer Out: ಮಮ್ಮುಟ್ಟಿ ನಟನೆಯ ‘ಟರ್ಬೋ’ ಟ್ರೈಲರ್‌ ಔಟ್‌: ರಾಜ್‌ ಬಿ ಶೆಟ್ಟಿ ಖದರ್‌ಗೆ ಫ್ಯಾನ್ಸ್‌ ಫಿದಾ!

Turbo Trailer Out: ಭೀಷ್ಮ ಪರ್ವಂ (2022) ನಂತರ ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಅವರ ಮೊದಲ ಪೂರ್ಣ ಪ್ರಮಾಣದ ಮಾಸ್ ಎಂಟರ್‌ಟೈನರ್ ಸಿನಿಮಾ ಇದು. ಇಲ್ಲಿ ರಾಜ್‌ .ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟ್ರೈಲರ್ ನೋಡಿ ಕನ್ನಡ ಸಿನಿರಸಿಕರು ಮೆಚ್ಚಿಕೊಂಡಿದ್ದಾರೆ. ಮೇ 23ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ.

VISTARANEWS.COM


on

Turbo Trailer Out mammoottys raj b shetty looks menacing
Koo

ಬೆಂಗಳೂರು: ಮಮ್ಮುಟ್ಟಿ (Mammootty) ಅವರು ಈ ಹಿಂದೆ ಘೋಷಿಸಿದ ಮೂರು ಸಿನಿಮಾಗಳ ಬಿಡುಗಡೆಗಳಲ್ಲಿ ʻಟರ್ಬೋʼ (Turbo Trailer Out) ಕೂಡ ಒಂದು. ರಾಜ್ ಬಿ ಶೆಟ್ಟಿ (Raj B Shetty) ಮತ್ತು ತೆಲುಗು ನಟ ಸುನೀಲ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದ ಟ್ರೈಲರ್‌ ರಿಲೀಸ್ ಆಗಿದ್ದು ಗಮನ ಸೆಳೆದಿದೆ. ರಾಜ್ ಅವರು ಪವರ್​ಫುಲ್ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ. ಇಲ್ಲಿ ರಾಜ್‌ ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟ್ರೈಲರ್ ನೋಡಿ ಕನ್ನಡ ಸಿನಿರಸಿಕರು ಮೆಚ್ಚಿಕೊಂಡಿದ್ದಾರೆ. ಮೇ 23ರಂದು ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗುತ್ತಿದೆ.

ಭೀಷ್ಮ ಪರ್ವಂ (2022) ನಂತರ ಮಲಯಾಳಂ ಸೂಪರ್‌ಸ್ಟಾರ್ ಮಮ್ಮುಟ್ಟಿ ಅವರ ಮೊದಲ ಪೂರ್ಣ ಪ್ರಮಾಣದ ಮಾಸ್ ಎಂಟರ್‌ಟೈನರ್ ಸಿನಿಮಾ ಇದು. 133 ಸೆಕೆಂಡ್​ಗಳ ಟ್ರೈಲರ್‌ನಲ್ಲಿ ಆರಂಭದಲ್ಲಿ ಜೋಸ್​ನ​ (ಮಮ್ಮುಟಿ) ಪರಿಚಯ ಮಾಡಿಕೊಡುವ ಪ್ರಯತ್ನ ನಡೆದಿದೆ. ಟ್ರೈಲರ್‌ನಲ್ಲಿ ಭರ್ಜರಿ ಆ್ಯಕ್ಷನ್ ತೋರಿಸಲಾಗಿದೆ. ಇದರ ಜತೆಗೆ ಕಾಮಿಡಿ ಕೂಡ ಇದೆ. ಟ್ರೈಲರ್‌ನಲ್ಲಿ ರಾಜ್ ಬಿ ಶೆಟ್ಟಿ ಅವರು ಕೂಡ ಕಾಣಿಸುತ್ತಾರೆ. ರಾಜ್​ ಬಿ ಶೆಟ್ಟಿ ಎಂಟ್ರಿ ಸಖತ್ ಆಗಿದೆ. ರಾಜ್‌ ಬಿ ಶೆಟ್ಟಿ ಮಲಯಾಳಂನಲ್ಲೂ ಅವರೇ ಡಬ್ ಮಾಡಿದ್ದಾರೆ.

ಇದನ್ನೂ ಓದಿ: Palanku Movie: 17 ವರ್ಷ ಪೂರೈಸಿದ ಮಮ್ಮುಟ್ಟಿ ಅಭಿನಯದ ʻಪಲುಂಕುʼ ಸಿನಿಮಾ, ಇದರ ಕತೆ ಹೃದಯಸ್ಪರ್ಶಿ

ಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ. ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಇದು ಆ್ಯಕ್ಷನ್ ಕಾಮಿಡಿ ಎಂದು ಹೇಳಲಾಗುತ್ತದೆ. ಸಿನಿಮಾದಲ್ಲಿ ಮಮ್ಮುಟ್ಟಿಗೆ ನಾಯಕಿಯಾಗಿ ನಟಿ ಜ್ಯೋತಿಕಾ ಕಾಣಿಸಿಕೊಂಡಿದ್ದು, ಒಂದು ದಶಕದ ಬಳಿಕ ಮಲಯಾಳಂ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ.

‘ಒಂದು ಮೊಟ್ಟೆಯ ಕಥೆ’ ಸಿನಿಮಾ ಮೂಲಕ ಕನ್ನಡ ಸಿನಿರಸಿಕರ ಮುಂದೆ ರಾಜ್. ಶೆಟ್ಟಿ ಬಂದಿದ್ದರು. ಬಳಿಕ ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆದರೆ ‘ಗರುಡಗಮನ ವೃಷಭವಾಹನ’ ಸಿನಿಮಾ ದೊಡ್ಡ ಬ್ರೇಕ್ ಕೊಟ್ಟಿತ್ತು. ತಾವೇ ನಿರ್ದೇಶಿಸಿ ನಟಿಸಿದ್ದ ಚಿತ್ರದಲ್ಲಿ ಶಿವ ಆಗಿ ಅಬ್ಬರಿಸಿದ್ದರು. ಸದ್ಯ ‘ಟರ್ಬೋ’ ಚಿತ್ರದಲ್ಲೂ ವೆಟ್ರಿವೇಲ್ ಷಣ್ಮುಗಂ ಎನ್ನುವ ಖಡಕ್ ಪಾತ್ರದಲ್ಲಿ ದರ್ಬಾರ್ ನಡೆಸಿದ್ದಾರೆ.

ಇದೊಂದು ಆಕ್ಷನ್ ಕಾಮಿಡಿ ಎಂಟರ್‌ಟೈನರ್ ಆಗಿದ್ದು ಮೇ 23ಕ್ಕೆ ತೆರೆಗೆ ಬರಲಿದೆ. ಆಟೋ ಬಿಲ್ಲ ಆಗಿ ತೆಲುಗು ನಟ ಸುನೀಲ್ ಕೂಡ ಕಾಣಿಸಿಕೊಂಡಿದ್ದಾರೆ. ಅಂಜನಾ ಜಯಪ್ರಕಾಶ್, ಕಬೀರ್ ದುಹಾನ್ ಸಿಂಗ್, ಸಿದ್ದಿಕಿ ಸೇರಿದಂತೆ ದೊಡ್ಡ ತಾರಾಗಣ ‘ಟರ್ಬೋ’ ಚಿತ್ರದಲ್ಲಿದೆ. ವಿಷ್ಣು ಶರ್ಮಾ ಛಾಯಾಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಚಿತ್ರಕ್ಕಿದೆ.

Continue Reading

ಸ್ಯಾಂಡಲ್ ವುಡ್

Kannada New Movie: `ಕುಂಟೆಬಿಲ್ಲೆ’ ಸಿನಿಮಾದ ಮುಹೂರ್ತ: ಶುಭಕೋರಿದ ಗಣ್ಯರು

Kannada New Movie: ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರಾ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ʻನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ʻಕುಂಟೆಬಿಲ್ಲೆ‌ʼ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆʼ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

VISTARANEWS.COM


on

Kannada New Movie meghashri starrer kuntebille goes on floor
Koo

ಬೆಂಗಳೂರು: ಈ ಮೊದಲು `ದಕ್ಷ ಯಜ್ಞ’, ತರ್ಲೆ ವಿಲೇಜ್’, ಋತುಮತಿ ಚಿತ್ರಗಳನ್ನು (Kannada New Movie) ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ‌.ಎಸ್. ಅವರು `ಕುಂಟೆಬಿಲ್ಲೆ’ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ. ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಡುತ್ತಿದ್ದಾರೆ‌. ಹತ್ತಕ್ಕೂ ಹೆಚ್ಚು (kuntebille goes on floor) ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರಾ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ.
ʻನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ʻಕುಂಟೆಬಿಲ್ಲೆ‌ʼ. ಅದೇ ಟೈಟಲ್ ಇಟ್ಟುಕೊಂಡು ಪ್ರೀತಿ, ನೋವು, ಕಾಮ ಎಲ್ಲವನ್ನೂ ಕಟ್ಟಿಕೊಡಲಿದ್ದೇವೆʼ ಎಂದು ನಿರ್ದೇಶಕ ಸಿದ್ದೇಗೌಡ ತಿಳಿಸಿದರು. ನಿರ್ಮಾಪಕ ಎಸ್.ಬಿ. ಶಿವು ಮಾತನಾಡಿ, ʻಜೀವಿತ ಕ್ರಿಯೇಷನ್‌ನಿಂದ ಒಳ್ಳೆಯ ಸಿನಿಮಾ ಮಾಡಿದ್ದೇವೆ. ಯದು ಹೊಸ ಪ್ರತಿಭೆ ಆಗಿದ್ದು ಅವರನ್ನೇ ನಾಯಕರನ್ನಾಗಿ ಮಾಡಿಕೊಂಡಿದ್ದೇವೆʼ ಎಂದರು. ಮತ್ತೊಬ್ಬ ನಿರ್ಮಾಪಕ ಕುಮಾರ್ ಗೌಡ ಮಾತನಾಡಿ,
ʻನಿರ್ಮಾಣ ಕ್ಷೇತ್ರ ನನಗೆ ಹೊಸದು. 30 ವರ್ಷದ ಹಿಂದೆ ನಾನೊಬ್ಬ ಕಲಾವಿದ ಆಗಬೇಕು ಎಂದು ಬೆಂಗಳೂರಿಗೆ ಹೋಗಿದ್ದವನು‌. ಆದರೆ ಅದು ಸಾಧ್ಯವಾಗಿರಲಿಲ್ಲ‌. ಈಗ ಅದನ್ನು ನನ್ನ ಮಗನ ಮೂಲಕ ಈಡೇರಿಸಿಕೊಳ್ಳುತ್ತಿದ್ದೇನೆ. ನನ್ನ ಮಗನಿಗೆ ರಂಗಭೂಮಿ ಕಡೆಗೆ ಆಸಕ್ತಿ ಇತ್ತು . ಇದೀಗ ವಿದ್ಯಾಭ್ಯಾಸ ಮುಗಿಸಿ ನಟನೆ ಕಡೆಗೆ ಬರುತ್ತಿದ್ದಾನೆ. ಈಗ ನಾನೇ ಮುಂದೆ ನಿಂತು ನಿರ್ದೇಶಕ ಸಿದ್ದೇಗೌಡ ಅವರ ಗರಡಿಗೆ ಬಿಟ್ಟಿದ್ದೇವೆ. ನನ್ನ ಮಗನಿಗೆ ಹೊಂದುವಂತ ಒಳ್ಳೆಯ ಕತೆ ಇದೆ. ಸಿನಿಮಾ ಚೆನ್ನಾಗಿ ಮೂಡಿಬರಲಿದೆʼ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು‌.

ಇದನ್ನೂ ಓದಿ: Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

ಮೇಘಶ್ರೀ ಮಾತಿಗಿಳಿದು, ʻʻಟೈಟಲ್ ನಷ್ಟೇ ಸ್ಕ್ರಿಪ್ಟ್ ಕೂಡ ಚೆನ್ನಾಗಿದೆ. ಕನ್ನಡದಲ್ಲಿ ಈ ರೀತಿಯ ಸ್ಟೋರಿ ಕೇಳಿರಲಿಲ್ಲ. ಒಳ್ಳೆಯ ತಂಡ ಸಿಕ್ಕಿದ್ದು, ನಾನು ಹಳ್ಳಿಯೊಂದರ ಶ್ರೀಮಂತ ಕುಟುಂಬದ ಹುಡುಗಿಯ ಪಾತ್ರ ಮಾಡಲಿದ್ದೇನೆ ಎಂದರು.
ನಾಯಕ ಯದು ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ಅವಕಾಶ ಕೊಟ್ಟಿದ್ದಾರೆ‌. ಆ ನಿಟ್ಟಿನಲ್ಲಿ ಪಾತ್ರ ಮಾಡುವೆʼʼ ಎಂದರು.

ಹಿರಿಯ ನಟ ಶಂಕರ್ ಅಶ್ವಥ್ ಮಾತನಾಡಿ, ʻʻಅಕ್ಷಯ ತೃತೀಯ ದಿನದಂದು ಯಾವುದೇ ಒಳ್ಳೆಯ ಕೆಲಸ ಮಾಡಿದರೂ ಒಳ್ಳೆಯದಾಗುತ್ತದೆ ಎನ್ನುವ ನಂಬಿಕೆ ಇದೆ‌. ಅದೇ ರೀತಿ ಈ ಚಿತ್ರಕ್ಕೂ ಒಳ್ಳೆಯದಾಗಲಿ. ನನ್ನದು ನಾಯಕಿಯ ತಂದೆ ಪಾತ್ರ‌. ಒಂದು ಗ್ರಾಮೀಣ ಆಟ ಜೀವನದಲ್ಲಿ ಎಷ್ಟು ಮುಖ್ಯ ಆಗುತ್ತದೆ ಎನ್ನುವುದನ್ನು ಚಿತ್ರದಲ್ಲಿ ಹೇಳಿದ್ದಾರೆ‌. ವಿಭಿನ್ನ ಮತ್ತು ಕುತೂಹಲಕಾರಿ ಚಿತ್ರ ಇದಾಗಿರಲಿದೆʼʼ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು.

ಸಂಭಾಷಣೆ ಬರೆದಿರುವ ಮಧು ಮಾತನಾಡಿ ʻʻನಾನು ಪ್ರತಿ ಸಿನಿಮಾಗೆ ಬರೆಯುವಾಗಲೂ ಹೊಸದಾಗಿಯೇ ಬರೆಯುತ್ತೇನೆ. ಈ ಚಿತ್ರದ ಕಥೆ ಚೆನ್ನಾಗಿದೆ. ಅದಕ್ಕೆ ತಕ್ಕಂತೆ ಸಂಭಾಷಣೆ ಬರೆದಿದ್ದೇನೆ. ಹಳ್ಳಿಯ ನೈಜ ಘಟನೆಗಳು ಇಲ್ಲಿ ಇವೆʼʼ ಎಂದು ತಿಳಿಸಿದರು. ಒಂದು ಗ್ರಾಮೀಣ ಆಟ ಜೀವನದಲ್ಲಿ ಎಷ್ಟು ಮುಖ್ಯ ಆಗುತ್ತದೆ ಎನ್ನುವುದು ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ. ವಿಭಿನ್ನ ಮತ್ತು ಕುತೂಹಲಕಾರಿ ಚಿತ್ರ ಇದಾಗಿರಲಿದೆ ಎನ್ನುವ ವಿಶ್ವಾಸ ಚಿತ್ರತಂಡದ್ದು.

Continue Reading
Advertisement
IPL 2024
ಪ್ರಮುಖ ಸುದ್ದಿ3 hours ago

IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

Prajwal Revanna Case
ಕರ್ನಾಟಕ3 hours ago

Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Hoarding
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಹೋರ್ಡಿಂಗ್ ಕುಸಿತ ಬೆಂಗಳೂರಿಗರಿಗೂ ಎಚ್ಚರಿಕೆಯ ಗಂಟೆ

Sushil Kumar Modi
ಪ್ರಮುಖ ಸುದ್ದಿ3 hours ago

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

Tejasvi Surya
ದೇಶ3 hours ago

Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

IPL 2024
ಪ್ರಮುಖ ಸುದ್ದಿ4 hours ago

IPL 2024 : ಮಳೆಯಿಂದಾಗಿ ಪಂದ್ಯ ರದ್ದು, ಕೆಕೆಆರ್​ಗೆ ಮೊದಲೆರಡಲ್ಲೊಂದು ಸ್ಥಾನ ಫಿಕ್ಸ್​

Vidyarthi Vidyarthiniyare Movie
ಕರ್ನಾಟಕ4 hours ago

Vidyarthi Vidyarthiniyare Movie: ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಟ್ರೈಲರ್ ಔಟ್; ಧುಮ್ಮಿಕ್ಕಿದ ಹರೆಯದ ತೊರೆ!

Road Accident Head on collision between bikes One person died on the spot
ಉತ್ತರ ಕನ್ನಡ4 hours ago

Road Accident: ಬೈಕ್‌ಗಳ ನಡುವೆ ಡಿಕ್ಕಿ; ಒಬ್ಬ ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

Lok Sabha Election
ದೇಶ5 hours ago

Lok Sabha Election: 28 ವರ್ಷಗಳಲ್ಲೇ ಶ್ರೀನಗರದಲ್ಲಿ ಅಧಿಕ ಮತದಾನ; 370ನೇ ವಿಧಿ ರದ್ದು ಎಫೆಕ್ಟ್?

Award Ceremony
ಬೆಂಗಳೂರು5 hours ago

Award Ceremony: ಬೆಂಗಳೂರಿನಲ್ಲಿ ಮೇ 19ರಂದು ಕಾದಂಬರಿ ಸಾರ್ವಭೌಮ ಅ.ನ.ಕೃ. ಪ್ರಶಸ್ತಿ ಪ್ರದಾನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

HD Revanna Bail Revanna will not leave the country condition imposed by the court
ಕ್ರೈಂ8 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

Prajwal Revanna case HD Revanna finally gets bail What was the argument like
ಕ್ರೈಂ8 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ8 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ9 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ9 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ16 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ20 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ22 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ1 day ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಟ್ರೆಂಡಿಂಗ್‌