Site icon Vistara News

Rishab Shetty: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

Rishab Shetty Award at Dadasaheb Phalke International Film Festival

ಬೆಂಗಳೂರು: ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ (Rishab Shetty) ಅವರಿಗೆ ದಾದಾಸಾಹೇಬ್ ಫಾಲ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ (Dadasaheb Phalke International Film Festival) ಭಾಜನರಾಗಿದ್ದಾರೆ. ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ. ದಾದಾಸಾಹೇಬ್ ಫಾಲ್ಕೆ ಟ್ರಸ್ಟ್‌ನಿಂದ ಕೊಡುವ ಪ್ರಶಸ್ತಿ ಇದಾಗಿದೆ. ಫೆಬ್ರವರಿ 20ರಂದು ಮುಂಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. 2019ರಲ್ಲಿ ಕೆಜಿಎಫ್ ಚಿತ್ರಕ್ಕಾಗಿ ರಾಕಿಂಗ್‌ ಸ್ಟಾರ್‌ ಯಶ್‌ ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದರು.

ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿ ತಾಜ್‌ ಲ್ಯಾಂಡ್‌ ಎಂಡ್ ಹೋಟೆಲ್‌ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ (Kantara Movie ) ವಿಶ್ವಾದ್ಯಂತ 400 ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್‌ ಮಾಡಿದೆ. ಕಾಂತಾರ ಚಿತ್ರದ ಮೂಲಕ ಪ್ಯಾನ್-ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದರು ರಿಷಬ್‌. ಸದ್ಯ ಕಾಂತಾರ-2 ಪ್ರಿಕ್ವೆಲ್‌ ಸಿನಿಮಾ ಮಾಡಲು ಮುಂದಾಗಿದ್ದಾರೆ.

ಇದನ್ನೂ ಓದಿ: Rishab Shetty: ಹರಿಯುವ ನೀರು, ಮಗುವಿನ ನಗುವಿನ ಧ್ವನಿ, ಬೇಕಾದವರೊಂದಿಗೆ ಕಳೆಯುವ ಕ್ಷಣಗಳು… ಫೋಟೊ ಹಂಚಿಕೊಂಡ ರಕ್ಷಿತ್‌

ಇದನ್ನೂ ಓದಿ: Rishab Shetty | ದುಬೈನಲ್ಲಿ ಎಂಜಾಯ್‌ ಮಾಡುತ್ತಿರುವ ರಿಷಬ್‌ ಶೆಟ್ಟಿ ಫ್ಯಾಮಿಲಿ: ವಿಡಿಯೊ ಇಲ್ಲಿದೆ!

ಪ್ರಿಕ್ವೆಲ್‌ ಆಗಿ ಬರಲಿದೆ ಕಾಂತಾರ 2

ಕಾಂತಾರ-1 ಸಿಕ್ವೆಲ್‌ ಆಗಿದ್ದರೆ, ಕಾಂತಾರ-2 ಪ್ರಿಕ್ವೆಲ್‌ (Prequel film) ಆಗಿ ಮೂಡಿಬರಲಿದೆ. ಕಾಂತಾರ-2 ಸಿನಿಮಾ ಕಾಂತಾರಕ್ಕಿಂತ ಮೊದಲಿನ ಕತೆಯಾಗಿದ್ದು, ಇದು ಗ್ರಾಮಸ್ಥರು, ದೇವತೆ ಮತ್ತು ತೊಂದರೆಗೊಳಗಾದ ರಾಜನ ನಡುವಿನ ಸಂಬಂಧವನ್ನು ಅನ್ವೇಷಿಸುತ್ತದೆ. ರಾಜನು ಗ್ರಾಮಸ್ಥರನ್ನು ಮತ್ತು ತನ್ನ ಸುತ್ತಲಿನ ಭೂಮಿಯನ್ನು ರಕ್ಷಿಸಲು ದೇವತೆಯೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತಾನೆ. ʻಮನುಷ್ಯ ಮತ್ತು ಪ್ರಕೃತಿಯ ಕದನʼ ಚಿತ್ರದ ತಿರುಳು ಇದಾಗಿದೆ. ಕಾಂತಾರ-2, 2024ರಲ್ಲಿ ಥಿಯೇಟರ್‌ಗೆ ಬರಲಿದೆ ಎಂದು ರಿಷಬ್‌ ಖಚಿತಪಡಿಸಿದ್ದಾರೆ.

Exit mobile version